Site icon Vistara News

Self Harming: ಐಶ್ವರ್ಯ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಪಿಪಿ ನೇಮಕ, ತಡೆಯಾಜ್ಞೆ ತಂದ ಪ್ರಕರಣಕ್ಕೆ ಮರುಜೀವ

self harming Aishwarya case

ಬೆಂಗಳೂರು: ಹೈಕೋರ್ಟ್‌ನಿಂದ (High Court) ತನಿಖೆಗೆ ತಡೆಯಾಜ್ಞೆ (Stay order) ತರಲಾದ ಮಹಿಳೆ ಆತ್ಮಹತ್ಯೆ (Self Harming) ಪ್ರಕರಣದಲ್ಲಿ ನೂತನ ಪಬ್ಲಿಕ್‌ ಪ್ರಾಸಿಕ್ಯೂಟರ್‌ (Public Prosecutor) ನೇಮಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಬಿಇ ಪದವೀಧರೆ, ವಿವಾಹಿತೆ ಐಶ್ವರ್ಯ ಆತ್ಮಹತ್ಯೆ (Aishwarya Self harming Case) ಪ್ರಕರಣದಲ್ಲಿ ಸರ್ಕಾರದ ಪರ ಹೈಕೋರ್ಟ್‌ಗೆ ಹಿರಿಯ ವಕೀಲ ಶ್ಯಾಮ್ ಸುಂದರ್ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಜ್ಯ ಸರ್ಕಾರ ನೇಮಿಸಿದೆ.

2023ರ ಅಕ್ಟೋಬರ್ 26ರಂದು ಐಶ್ವರ್ಯ ಗೋವಿಂದರಾಜ ನಗರದ ತಮ್ಮ ತಂದೆಯ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ವರದಕ್ಷಿಣೆ ಕಿರುಕುಳ ಆರೋಪದಡಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಡೆತ್‌ ನೋಟ್‌ನಲ್ಲಿ ತನ್ನ ಸಾವಿಗೆ ಕಾರಣರೆಂದು ಅತ್ತೆ, ಮಾವ, ಸೋದರತ್ತೆ, ಸೋದರ ಮಾವ ಸೇರಿ ಒಂಬತ್ತು ಜನರ ಹೆಸರನ್ನು ಐಶ್ವರ್ಯ ಬರೆದಿಟ್ಟಿದ್ದರು. ಚಾರಿತ್ರ್ಯವಧೆ ಮಾಡಿ ಕಿರುಕುಳ ನೀಡಿದ್ದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದರು.

ಮಾವ ಗಿರಿಯಪ್ಪ, ಅತ್ತೆ ಸೀತಮ್ಮ, ಪತಿ ರಾಜೇಶ್, ನಾದಿನಿ ತಸ್ಮೇ, ಸೋದರತ್ತೆ ಗೀತಾ, ಸೋದರ ಮಾವ ರವೀಂದ್ರನಾಥ್, ಸೋದರ ಅತ್ತೆ ಮಗಳು ಲಿಪಿ, ಚಿಕ್ಕಮ್ಮ ಶಾಲಿನಿ ಓಂಪ್ರಕಾಶ್, ಚಿಕ್ಕಪ್ಪ ಓಂಪ್ರಕಾಶ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಒಂಬತ್ತು ಆರೋಪಿಗಳು ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದರು. ಆತ್ಮಹತ್ಯೆ ಪ್ರಕರಣದ ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದರು.

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ತಂದೆಯ ಬಂಧನ

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇರೆಗೆ ವಿಕೃಕಾಮಿ ತಂದೆಯೊಬ್ಬನನ್ನು ಮೂಡುಬಿದಿರೆ ಪೋಲಿಸರು ಬಂಧಿಸಿದ್ದಾರೆ.

55 ವರ್ಷ ಪ್ರಾಯದ ಕೂಲಿ ಕಾರ್ಮಿಕ ಬಂಧಿತನಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿ ಮೂಲತಃ ಕಾರ್ಕಳದವನಾಗಿದ್ದು ದಶಕಗಳ ಹಿಂದೆ ಮೂಡುಬಿದಿರೆ ತಾಲೂಕಿನ ಗ್ರಾಮವೊಂದರ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ನೆಲೆಸಿದ್ದ.

ಇದನ್ನೂ ಓದಿ: Murder Case: ಇನ್ಶೂರೆನ್ಸ್‌ ಹಣಕ್ಕಾಗಿ ದಂಪತಿಯ ಖತರ್ನಾಕ್ ಪ್ಲಾನ್, ತನ್ನನ್ನೇ ಹೋಲುವ ವ್ಯಕ್ತಿಯ ಕೊಲೆ ಮಾಡಿ ಡ್ರಾಮಾ!

Exit mobile version