ಚಂಡೀಗಢ: ಪಂಜಾಬಿ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲಾ ಹತ್ಯೆ (Sidhu Moose Wala Murder) ಪ್ರಕರಣದಲ್ಲಿ ಬಂಧಿತನಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿಯನ್ನು ಕೋರ್ಟ್ 10 ದಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಸ್ಟಡಿಗೆ ನೀಡಲಾಗಿದೆ.
“ಸಿಧು ಮೂಸೆವಾಲಾ ಹತ್ಯೆ ಹಿಂದೆ ದೊಡ್ಡ ಪಿತೂರಿಯೇ ಇದೆ. ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳ ಪೂರೈಕೆಯಾಗುತ್ತಿದೆ. ಸಿಧು ಮೂಸೆವಾಲಾ ಅವರಂತಹವರು ಕೆಲವು ಟಾರ್ಗೆಟ್ ಅಷ್ಟೆ. ಹಾಗಾಗಿ, ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿಯನ್ನು ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ” ಎಂದು ಎನ್‌ಐಎ ತಿಳಿಸಿತು. ಆಗ ಪಟಿಯಾಲ ಹೌಸ್ ಕೋರ್ಟ್, 10 ದಿನ ಕಸ್ಟಡಿಗೆ ನೀಡಿತು.
ಸಿಧು ಮೂಸೆವಾಲಾ ಅವರನ್ನು ಮೇ 29ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಿರುವ ಎನ್‌ಐಎ ಅಧಿಕಾರಿಗಳು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಗೆ ಬಳಸಿದ AN-94 ರೈಫಲ್, AK-47ಕ್ಕಿಂತ ಅಪಾಯಕಾರಿ