Rajasthan murder: ಮಹಾರಾಷ್ಟ್ರ, ಗುಜರಾತ್‌ನಲ್ಲೂ ಕನ್ಹಯ್ಯ ಲಾಲ್‌ ಮಾದರಿ ಹತ್ಯೆ? ಎನ್‌ಐಎ ಸಂಶಯ - Vistara News

ಕ್ರೈಂ

Rajasthan murder: ಮಹಾರಾಷ್ಟ್ರ, ಗುಜರಾತ್‌ನಲ್ಲೂ ಕನ್ಹಯ್ಯ ಲಾಲ್‌ ಮಾದರಿ ಹತ್ಯೆ? ಎನ್‌ಐಎ ಸಂಶಯ

ರಾಜಸ್ಥಾನದ ಉದಯಪುರದಲ್ಲಿ ನಡೆದಿರುವ ಕನ್ಹಯ್ಯ ಲಾಲ್‌ ಕೊಲೆ ಒಂಟಿ ಘಟನೆಯಲ್ಲ, ಇಂತಹುದೇ ಘಟನೆಗಳು ಮಹಾರಾಷ್ಟ್ರ, ಗುಜರಾತ್‌ನಲ್ಲೂ ನಡೆದಿವೆ. ಅವುಗಳ ನಡುವೆ ಏನಾದರೂ ಸಂಬಂಧವಿದೆಯಾ? ಎನ್‌ಐಎ ಇದರ ಬಗ್ಗೆ ತನಿಖೆ ನಡೆಸುತ್ತಿದೆ.

VISTARANEWS.COM


on

NIA investigation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನೂಪುರ್‌ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್‌ ಅವರನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿದ ವಿದ್ಯಮಾನ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದು ವಿಶ್ವ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ಇದೇ ಮಾದರಿಯ ಹತ್ಯೆಗಳು ಮಹಾರಾಷ್ಟ್ರ, ಗುಜರಾತ್‌ನಲ್ಲೂ ನಡೆದಿವೆ. ಅದು ಹೆಚ್ಚು ಸುದ್ದಿಯಾಗಿಲ್ಲ. ಈ ಎಲ್ಲ ಕೃತ್ಯಗಳ ಹಿಂದೆ ಒಂದೇ ಉದ್ದೇಶವಿದ್ದು ಒಂದಕ್ಕೊಂದು ಸಂಬಂಧ ಇರಬಹುದು ಎಂದು ರಾಷ್ಟ್ರೀಯ ತನಿಖಾ ದಳ ಶಂಕಿಸಿದೆ.

ಟೇಲರ್‌ ಆಗಿದ್ದ ಕನ್ಹಯ್ಯ ಲಾಲ್‌ ಅವರನ್ನು ಕೊಲೆ ಮಾಡಿದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಗೌಸ್‌ ಮಹಮ್ಮದ್‌ ಪಾಕಿಸ್ತಾನದ ಜತೆ ಲಿಂಕ್‌ ಇರುವುದನ್ನು ಈಗಾಗಲೇ ಎನ್‌ಐಎ ಪತ್ತೆ ಹಚ್ಚಿದೆ. ಪಾಕಿಸ್ತಾನದ ಉಗ್ರ ಸಂಘಟನೆಗಳ ಕೈವಾಡ ಇದರಲ್ಲಿ ಇರುವ ಬಗ್ಗೆ ಸಂಶಯವಿದೆ. ಇಂಥಹುದೇ ತಂಡಗಳ ದೇಶದ ನಾನಾ ಕಡೆ ಕಾರ್ಯಾಚರಿಸುತ್ತಿರಬಹುದು ಎಂದು ಎನ್‌ಐಎ ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ನೂಪುರ್‌ ಹೇಳಿಕೆಗೆ ಸಂಬಂಧಪಟ್ಟೇ ಕೆಲವು ಕೊಲೆಗಳು ಸಂಭವಿಸಿವೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಉಮೇಶ್‌ ಕೊಲ್ಹೆ ಎಂಬ ವೈದ್ಯರನ್ನು ಜೂನ್‌ 21ರಂದು ಕೊಲೆ ಮಾಡಲಾಗಿತ್ತು. ಅವರು ನೂಪುರ್‌ ಶರ್ಮ ಹೇಳಿಕೆಯನ್ನು ಬೆಂಬಲಿಸಿದ್ದೇ ಕೊಲೆಗೆ ಕಾರಣವಾಗಿತ್ತು. ಈ ಕೃತ್ಯದಲ್ಲಿ ಅಬ್ದುಲ್‌, ಶೋಯಿಬ್‌, ಮುದಸ್ಸಿರ್‌ ಮತ್ತು ಶಾರುಖ್‌ ಎಂಬವರು ಭಾಗಿಗಳಾಗಿದ್ದು, ಎಲ್ಲರೂ ಬಂಧಿಸಲಾಗಿದೆ.

ಇನ್ನೊಂದು ಘಟನೆ ನಡೆದಿರುವುದು ಗುಜರಾತ್‌ನ ಧಂಡುಕಾದ ಮೊಧ್ವಾಲಾ ಎಂಬ ಪ್ರದೇಶದಲ್ಲಿ. ಜೂನ್ 25ರಂದು ಇಲ್ಲಿ 30 ವರ್ಷದ ಅಂಗಡಿ ಮಾಲೀಕ ಕಿಶನ್‌ ಭರ್ವಾಡ್‌ ಅವರನ್ನು ಗುಂಡಿಕ್ಕಿ ಸಾಯಿಸಲಾಗಿದೆ. ಶಬ್ಬೀರ್‌ ಮತ್ತು ಇಮ್ತಿಯಾಜ್‌ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಭಯೋತ್ಪಾದನಾ ನಿಗ್ರಹ ದಳ ಮತ್ತು ಎನ್‌ಐಎ ತನಿಖೆ ನಡೆಸುತ್ತಿವೆ. ಕಿಶನ್‌ ಭರ್ವಾಡ್‌ ಅವರು ಜನವರಿ ಆರರಂದು ಶ್ರೀ ಕೃಷ್ಣ ಮೊಹಮ್ಮದ್‌ ಪೈಗಂಬರ್‌ ಅವರಿಗಿಂತ ಶ್ರೇಷ್ಠ ಎಂದು ಪ್ರತಿಪಾದಿಸಿದ್ದರು. ಬಳಿಕ ಕ್ಷಮೆ ಯಾಚಿಸಿದ್ದರು.

ಮೂರು ಪ್ರಕರಣಗಳಲ್ಲಿ ಸಾಮ್ಯತೆ
ಈ ಮೂರೂ ಪ್ರಕರಣಗಳಿಗೆ ಸಾಮ್ಯತೆ ಇರುವುದನ್ನು ಎನ್‌ಐಎ ಕಂಡುಕೊಂಡಿದೆ. ಮೂರೂ ಪ್ರಕರಣಗಳಲ್ಲಿ ಆರೋಪಿಗಳನ್ನು ತಕ್ಷಣವೇ ಬಂಧಿಸಲಾಗಿದೆ. ಹಿಂದಿನ ಎರಡು ಪ್ರಕರಣಗಳಲ್ಲಿ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿಯೇ ಇಲ್ಲ.

ಮಹಾರಾಷ್ಟ್ರ ಮತ್ತು ಗುಜರಾತ್‌ನ ಕೊಲೆಗಳಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ| Rajasthan murder: ಕನ್ಹಯ್ಯ ಲಾಲ್‌ ಹಂತಕರಿಗೆ mumbai terror ಲಿಂಕ್‌? ಏನಿದು 2611?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Sexual Assault Case: ಲೈಂಗಿಕ ದೌರ್ಜನ್ಯ; ಕೋಕಕೋಲಾ ಕಂಪನಿ ಉತ್ತರಾಧಿಕಾರಿಗೆ 7,200 ಕೋಟಿ ರೂ. ದಂಡ!

ಲೈಂಗಿಕ ದೌರ್ಜನ್ಯ ಆರೋಪಿಯಾಗಿರುವ (Sexual Assault Case) ಕೋಕ-ಕೋಲಾ ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ ತನ್ನ ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ ಪಾವತಿಸಲು ಲಾಸ್ ಏಂಜಲೀಸ್ ನ್ಯಾಯ ಮಂಡಳಿ ತೀರ್ಪು ನೀಡಿದೆ. ಇತಿಹಾಸದಲ್ಲೇ ಇದು ಲೈಂಗಿಕ ಹಾನಿಗಾಗಿ ವಿಧಿಸಲಾದ ಇದುವರೆಗಿನ ಅತಿದೊಡ್ಡ ಪರಿಹಾರ ಮೊತ್ತವಾಗಿದೆ.

VISTARANEWS.COM


on

By

Sexual Assault Case
Koo

ಲಾಸ್ ಏಂಜಲೀಸ್: ಕೋಕ-ಕೋಲಾ (Coca-Cola) ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ (Alki David) ವಿರುದ್ಧ ಲೈಂಗಿಕ ದೌರ್ಜನ್ಯ (Sexual Assault Case) ಆರೋಪ ಸಾಬೀತಾಗಿದ್ದು, ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ (7,200 ಕೋಟಿ ರೂ.) ಪಾವತಿಸಲು ಲಾಸ್ ಏಂಜಲೀಸ್ (Los Angeles) ನ್ಯಾಯ ಮಂಡಳಿ ತೀರ್ಪು ನೀಡಿದೆ. ಇದು ಇತಿಹಾಸದಲ್ಲಿ ಲೈಂಗಿಕ ಹಾನಿಗಾಗಿ ವಿಧಿಸಲಾದ ಇದುವರೆಗಿನ ಅತಿದೊಡ್ಡ ಪರಿಹಾರ ಮೊತ್ತವಾಗಿದೆ ಎನ್ನಲಾಗಿದೆ.

ವಕೀಲರ ಪ್ರಕಾರ 2016- 2019ರ ನಡುವೆ ಮೂರು ವರ್ಷಗಳ ಕಾಲ ಜೇನ್ ಡೋ ಎಂಬ ಮಹಿಳೆ ಅಲ್ಕಿ ಡೇವಿಡ್ ಅವರಿಂದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾಗಿದ್ದರು. ಮಾಜಿ ನಿರ್ಮಾಣ ಸಹಾಯಕ ಮಹಿಮ್ ಖಾನ್ 2019ರಲ್ಲಿ ಡೇವಿಡ್ ವಿರುದ್ಧ ದೂರು ನೀಡಿದ್ದು, ಬಳಿಕ ಡೇವಿಡ್‌ಗೆ ಎಚ್ಚರಿಕೆಯನ್ನು ನೀಡಲಾಗಿತ್ತು. ಲೈಂಗಿಕ ದುರ್ವರ್ತನೆಯನ್ನು ಒಳಗೊಂಡ ಹಲವಾರು ಇತರ ಪ್ರಕರಣಗಳಲ್ಲಿ ಡೇವಿಡ್ ತಪ್ಪಿತಸ್ಥರೆಂದು ಕಂಡುಬಂದಿದೆ. ಕಂಪನಿಗಳು ಇವರ ವಿರುದ್ಧ ಸುಮಾರು 70 ಮಿಲಿಯನ್ ಡಾಲರ್‌ನಷ್ಟು ಮೊತ್ತದ ಹಾನಿಯನ್ನು ಪಾವತಿಸಲು ಒತ್ತಾಯಿಸಿವೆ.

ಜೇನ್ ಡೋ ಪ್ರಕರಣ

ಮೂವತ್ತು ವರ್ಷದ ಮಾಡೆಲ್ ಜೇನ್ ಡೋ ಅವರು ಹೊಲೊಗ್ರಾಮ್ ಯುಎಸ್‌ಎನಲ್ಲಿ ಡೇವಿಡ್‌ಗಾಗಿ ಕೆಲಸ ಮಾಡಿದ್ದರು. ಕೆಲಸದ ಆರಂಭದಿಂದಲೂ ಕಚೇರಿಯಲ್ಲಿ ಡೇವಿಡ್‌ನ ವರ್ತನೆಯ ಬಗ್ಗೆ ಜೇನ್ ಡೋ ಬಗ್ಗೆ ಅನುಮಾನವಿತ್ತು. ಯಾಕೆಂದರೆ ಡೇವಿಡ್ ತಮ್ಮ ಇಚ್ಛೆಗೆ ವಿರುದ್ಧವಾಗಿ ಚುಂಬಿಸಿದ್ದಾರೆ ಎಂದು ಮಹಿಳಾ ಸಹೋದ್ಯೋಗಿಯೊಬ್ಬರು ಡೋಗೆ ತಿಳಿಸಿದ್ದರು.

2016ರಲ್ಲಿ ಗ್ರೀಸ್‌ನಲ್ಲಿರುವ ಖಾಸಗಿ ದ್ವೀಪಕ್ಕೆ ವ್ಯಾಪಾರ ಪ್ರವಾಸದಲ್ಲಿದ್ದಾಗ ಡೋ ಗೆ ಡೇವಿಡ್ ಚುಂಬಿಸಲು ಪ್ರಯತ್ನಿಸಿದ್ದರು. ಅದನ್ನು ಡೋ ನಿರಾಕರಿಸಿದ್ದರು. ಬಳಿಕ ಡೇವಿಡ್‌ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: Accident Case : ವಿದ್ಯಾರ್ಥಿನಿಗೆ ಗುದ್ದಿದ ತುತುಕುಡಿ ಎಕ್ಸ್‌ಪ್ರೆಸ್‌ ರೈಲು; ಫುಟ್‌ಪಾತ್ ಏರಿ ಅಂಗಡಿಗೆ ನುಗ್ಗಿದ ಪಿಕಪ್ ವಾಹನ

ಆ ಬಳಿಕ ಆಕೆಯನ್ನು ವಜಾಗೊಳಿಸಲಾಯಿತು. 2018ರವರೆಗೆ ಡೇವಿಡ್‌ನೊಂದಿಗೆ ಸಂವಹನ ನಡೆಸಲಿಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ. ಅದರ ಅನಂತರ ಡೇವಿಡ್ ತನ್ನ ಗಾಂಜಾ ಉತ್ಪಾದನಾ ಸಂಸ್ಥೆಯಾದ ಸ್ವಿಸ್-ಎಕ್ಸ್‌ಗೆ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುವ ಪ್ರಸ್ತಾಪವನ್ನು ಮಾಡಿದರು. ಮಹಿಳೆ ಕೆಲಸವನ್ನು ಒಪ್ಪಿಕೊಂಡ ಅನಂತರ ತನ್ನ ಹೊಟೇಲ್‌ಗೆ ಆಕೆಯನ್ನು ಕರೆಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿತ್ತು. ಅಲ್ಲದೇ 2019ರಲ್ಲಿ ಸಣ್ಣ ಕೋಣೆಯಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ವಾರ್ಷಿಕ ಶ್ರೀಮಂತ ಪಟ್ಟಿಯ ಪ್ರಕಾರ ಡೇವಿಡ್ ಅವರ ಪ್ರಸ್ತುತ 3.7 ಶತಕೋಟಿ ಡಾಲರ್ ಸಂಪತ್ತಿನ ಮಾಲೀಕ ಎನ್ನಲಾಗಿದೆ.

Continue Reading

ಕರ್ನಾಟಕ

Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ದೂರು ಸಲ್ಲಿಸಿದ ವ್ಯಕ್ತಿ ವಿರುದ್ಧ ಎಫ್‌ಐಆರ್!

Suraj Revanna Case: ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಅವರ ವಿರುದ್ದ ಇದೀಗ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Suraj Revanna Case
Koo

ಹಾಸನ: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (unnatural sexual abuse) ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಡಿಜಿಪಿ, ಎಸ್‌ಪಿ, ಸಿಎಂ ಹಾಗೂ ಗೃಹ ಸಚಿವರಿಗೆ ದೂರು ಸಲ್ಲಿಕೆಯಾಗಿದೆ. ಮತ್ತೊಂದೆಡೆ ದೂರು ಸಲ್ಲಿಸಿದ ವ್ಯಕ್ತಿಯ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ.

ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ತ ಹೋಗಿದ್ದ. ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲ್ಯಾಕ್ ಮೇಲ್ ಮಾಡಿರೊದಾಗಿ ಆರೋಪಿಸಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು, ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ, ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಸಂತ್ರಸ್ತ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಶಿವಕುಮಾರ್‌ ಹೇಳಿದ್ದಾರೆ.

ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ, ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದರು. ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕೊ ಲೀಗಲ್ ಕೇಸ್ ಸೀಲ್ ಇರುವ ಆಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.

ಐದು ಕೋಟಿ ಬಳಿಕ ಮೂರು ಕೋಟಿ ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ. ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ ಬಗ್ಗೆ ದೂರು ಸಲ್ಲಿಸಲಾಗಿದೆ ಎಂದು ಸೂರಜ್‌ ಆಪ್ತ ಹೇಳಿದ್ದಾರೆ.

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ | Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ದೌರ್ಜನ್ಯಕ್ಕೆ ಒಳಗಾದ ಯುವಕನ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದ ಮೇಲೂ ಗಾಯವಾಗಿದೆ ಎಂದು ಆರೋಪಗಳು ಕೇಳಿಬಂದಿವೆ.

Continue Reading

ಬೆಂಗಳೂರು

Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

Prajwal Revanna Case: ಅರ್ಜಿಗೆ ರೇವಣ್ಣ ಸಲ್ಲಿಸಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case) ಸಂಬಂಧಿಸಿ ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಜಾಮೀನು ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಅರ್ಜಿ ಸಲ್ಲಿಸಿದೆ. ಆದರೆ, ಅರ್ಜಿಗೆ ರೇವಣ್ಣ ಸಲ್ಲಿಸಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಸಂತ್ರಸ್ತೆ ಅಪಹರಣ ಸಂಬಂಧ ಆಕೆಯ ಪುತ್ರ ನೀಡಿದ ದೂರಿನ ಮೇರೆಗೆ ಕೆ. ಆರ್‌ ನಗರ ಠಾಣೆಯಲ್ಲಿ ಎಚ್‌.ಡಿ. ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಇದರಲ್ಲಿ ಸತೀಶ್‌ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.

ಕೆ.ಆರ್‌.ನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ನಂತರ ಎರಡು ಎಫ್‌ಐಆರ್‌ ರದ್ದು ಮಾಡುವಂತೆ ರೇವಣ್ಣ ನ್ಯಾಯಾಲಯದ ಮೊರೆ ಹೋಗಿದ್ದರು.

ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ (Pavithra Gowda) ಇನ್ನು ಕೆಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ(UTP)ಕೈದಿ ನಂಬರ್ 6024 ಆಗಿದೆ. ಜೈಲು ಅಧಿಕಾರಿಗಳಿಂದ ವಿಚಾರಣಾಧೀನ ಬಂಧಿ ನಂಬರ್ ವಿತರಣೆ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ. ಹೈಪೈಯಾಗಿ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲು ಹಕ್ಕಿಯಾಗಿ ಸೆರೆವಾಸದಲ್ಲಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಎದ್ದಿರುವ ಅವರು ಸಿಬ್ಬಂದಿ ನೀಡಿದ ಕಾಫಿ ಕುಡಿದಿದ್ದಾರೆ. ಮಹಿಳಾ ವಿಭಾಗದ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ.

ಇದನ್ನೂ ಓದಿ: Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ ಜೈಲು ಸಿಬ್ಬಂದಿ. ಇಂದು ಡಿ-ಗ್ಯಾಂಗ್ ಪಟಾಲಂ. ಜೈಲೂಟ ಸವಿಯಲಿದೆ. ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ಕುಟುಂಬಸ್ಥರು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪವಿತ್ರಾ ಗೌಡ ಮಗಳು ಮತ್ತು ತಾಯಿ ಭೇಟಿಯಾಗುವ ಸಾಧ್ಯತೆ ಇದೆ.

ಇನ್ನು ನಿನ್ನೆ ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು.

Continue Reading

Latest

Blackmail: ನಗ್ನ ಫೋಟೊ ತೋರಿಸಿ ಬ್ಯಾಂಕ್‌ ಅಧಿಕಾರಿಯಿಂದ 4 ಕೋಟಿ ರೂ. ಸುಲಿಗೆ ಮಾಡಿದ ಮಹಿಳೆ!

Blackmail: ಹಣಕ್ಕಾಗಿ ಈಗ ಏನು ಬೇಕಾದರೂ ಮಾಡುವುದಕ್ಕೆ ಜನ ಸಿದ್ಧರಿರುತ್ತಾರೆ. ಇದರಿಂದ ಒಬ್ಬರ ಮಾನ ಮರ್ಯಾದೆ ಹಾಳಾಗುತ್ತೆ ಅನ್ನುವ ಮಾನವೀಯತೆ ಕೂಡ ಇಲ್ಲ. ಬ್ಯಾಂಕ್‌ನಲ್ಲಿ ಸಾಲಕ್ಕಾಗಿ ಬಂದ ಮಹಿಳೆ ಕೊನೆಗೆ ಬ್ಯಾಂಕ್ ಸಿಇಒನನ್ನೇ ಬ್ಲ್ಯಾಕ್‌ಮೇಲ್‌ ಮಾಡಿದ ಘಟನೆ ನಡೆದಿದೆ. 8 ಕೋಟಿ ರೂಪಾಯಿಯ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಜೊತೆಗಿರುವ ನಗ್ನ ಪೋಟೊಗಳನ್ನು ಸಂತ್ರಸ್ತನ ಕುಟುಂಬ ಮತ್ತು ಸಹದ್ಯೋಗಿಗಳಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿ ಸುಮಾರು 4 ಕೋಟಿ ರೂ. ಸುಲಿಗೆ ಮಾಡಿದ್ದಾಳೆ.

VISTARANEWS.COM


on

Fraud Case
Koo

ಮುಂಬೈ: ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒನ ನಗ್ನ ಚಿತ್ರ (Blackmail) ಬಹಿರಂಗಪಡಿಸುವುದಾಗಿ ಬೆದರಿಕೆ ಒಡ್ಡಿ 4 ಕೋಟಿ ರೂ. ಸುಲಿಗೆ ಮಾಡಿದ ಮಹಿಳೆಯನ್ನು (Women Arrest) ಪೊಲೀಸರು ಬಂಧಿಸಿದ್ದಾರೆ. ಥಾಣೆಯ 45 ವರ್ಷದ ಮಹಿಳೆಯ ವಿರುದ್ಧ ಮುಂಬೈ ನಿವಾಸಿಯಾದ 66 ವರ್ಷದ ನಿವೃತ್ತ ಬ್ಯಾಂಕ್ ಸಿಇಒ ದೂರು ದಾಖಲಿಸಿದ್ದಾರೆ.

2016ರಲ್ಲಿ ತನ್ನ ಬ್ಯಾಂಕಿನ ವಡಾಲಾ ಶಾಖೆಗೆ ಭೇಟಿ ನೀಡಿದಾಗ ಆರೋಪಿ ಮಹಿಳೆಯನ್ನು ಸಂತ್ರಸ್ತ ಮೊದಲ ಬಾರಿಗೆ ಭೇಟಿಯಾಗಿದ್ದರು. ಆರ್ಥಿಕ ತೊಂದರೆಗಳಿಂದಾಗಿ ತನಗೆ ಸಾಲದ ಅಗತ್ಯವಿದೆ ಎಂದು ಮಹಿಳೆ ಆರಂಭದಲ್ಲಿ ಇವರ ಭೇಟಿ ಮಾಡಿದ್ದಳು. ಆದರೆ ಸಾಲಕ್ಕಾಗಿ ಸಲ್ಲಿಸಿದ ದಾಖಲೆಗಳು ಸರಿಯಾಗಿಲ್ಲದ ಕಾರಣ 2017ರಲ್ಲಿ ಥಾಣೆಯ ಕೊಪ್ರಿಯ ಆನಂದ್ ನಗರ ಪ್ರದೇಶದಲ್ಲಿರುವ ಆಕೆಯ ಮನೆಗೆ ಸಮೀಕ್ಷೆ ನಡೆಸಲು ಹೋಗಲಾಗಿತ್ತು. ಅಲ್ಲಿ ಮಹಿಳೆ ಈ ಅಧಿಕಾರಿ ಜತೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದಳು. ನಂತರ ಮಾಸಿಕ 7300 ರೂ.ಗಳ ಇಎಂಐನೊಂದಿಗೆ 3 ಲಕ್ಷ ರೂ. ಸಾಲವನ್ನು ಮಂಜೂರು ಮಾಡಲಾಯಿತು.

ಆದರೆ ಒಂದು ತಿಂಗಳ ನಂತರ ಮಹಿಳೆ ಈ ಅಧಿಕಾರಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದಳು. 8 ಕೋಟಿ ರೂ. ಪಾವತಿಸದಿದ್ದರೆ ವಾಟ್ಸಾಪ್‌ನಲ್ಲಿ ಕಳುಹಿಸಿದ ನಗ್ನ ಪೋಟೊಗಳನ್ನು ಸಂತ್ರಸ್ತನ ಕುಟುಂಬ ಮತ್ತು ಸಹದ್ಯೋಗಿಗಳಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದಳು. ಆಕೆಯ ಒತ್ತಾಯಕ್ಕೆ ಮಣಿದ ನಿವೃತ್ತ ಸಿಇಒ 5 ಲಕ್ಷ ರೂ.ಗಳನ್ನು ಪಾವತಿಸಿದ್ದಾರೆ. 2017ರಿಂದ 2023ರ ನಡುವೆ ಒಟ್ಟು 4.39 ಕೋಟಿ ರೂಗಳನ್ನು 108 ಕಂತುಗಳಲ್ಲಿ ಪಾವತಿಸಿದ್ದು, ಈ ಹಣವನ್ನು ಫ್ಲ್ಯಾಟ್ ಮಾರಾಟ, ಪಿಎಫ್ ಹಣವನ್ನು ವಾಪಾಸು ಪಡೆಯುವ ಮೂಲಕ ಹಾಗೂ ವಿವಿಧ ಕಡೆ ಸಾಲ ಮಾಡಿ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: International Yoga Day: ಈ ರಾಜಕಾರಣಿಗಳ ಯೋಗಾಸನ ನೋಡಿ ನಕ್ಕು ಬಿಡಿ; ನಗುವುದೂ ಒಂದು ಯೋಗ!

ಇಷ್ಟು ಹಣ ಸಂತ್ರಸ್ತನಿಂದ ಸುಲಿಗೆ ಮಾಡಿದರೂ ಕೂಡ ಮಹಿಳೆ ಮತ್ತೆ ಹಣಕ್ಕಾಗಿ ಬೆದರಿಕೆ ಹಾಕಿದಾಗ ಮಹಿಳೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ಮಹಿಳೆಗೆ ಹಣ ನೀಡುವ ನೆಪದಲ್ಲಿ ಪೊಲೀಸರು ಆಕೆಯನ್ನು ಸೆರೆ ಹಿಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement
Kalki 2898 AD Final Trailer Released
ಕರ್ನಾಟಕ1 hour ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ2 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ2 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ2 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ3 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌