Orissa High Court: 'ದಿನಕ್ಕೆ ಹಲವು ಬಾರಿ ನಮಾಜ್‌ ಮಾಡ್ತಾನೆʼ- ಅಪ್ರಾಪ್ತೆ ಹತ್ಯಾಚಾರ ಎಸಗಿದವನ ಗಲ್ಲು ಶಿಕ್ಷೆ ರದ್ದುಪಡಿಸಿದ ಕೋರ್ಟ್‌ - Vistara News

ಕ್ರೈಂ

Orissa High Court: ‘ದಿನಕ್ಕೆ ಹಲವು ಬಾರಿ ನಮಾಜ್‌ ಮಾಡ್ತಾನೆʼ- ಅಪ್ರಾಪ್ತೆ ಹತ್ಯಾಚಾರ ಎಸಗಿದವನ ಗಲ್ಲು ಶಿಕ್ಷೆ ರದ್ದುಪಡಿಸಿದ ಕೋರ್ಟ್‌

Orissa High Court: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

VISTARANEWS.COM


on

Orissa High Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭುವನೇಶ್ವರ: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿ (Sheikh Asif Ali)ಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ (Orissa High Court) ತೀರ್ಪು ನೀಡಿದೆ.

ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ನ್ಯಾಯಮೂರ್ತಿ ಎಸ್.ಕೆ.ಸಾಹೂ ಮತ್ತು ನ್ಯಾಯಮೂರ್ತಿ ಆರ್.ಕೆ.ಪಟ್ನಾಯಕ್ ಅವರನ್ನೊಳಗೊಂಡ ನ್ಯಾಯಪೀಠವು, ಶೇಖ್ ಆಸಿಫ್ ಅಲಿ ವಿರುದ್ಧ ಮರಣ ದಂಡನೆ ವಿಧಿಸಬಹುದಾದ ಪ್ರಬಲ ಸಾಕ್ಷಿಗಳಿಲ್ಲ ಎಂದು ತಿಳಿಸಿದೆ. ಈ ಪ್ರಕರಣವು ಸಾಂದರ್ಭಿಕ ಪುರಾವೆಗಳನ್ನು ಆಧರಿಸಿದೆ ಮತ್ತು ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

ಘಟನೆಯ ಹಿನ್ನೆಲೆ

ಇದು ಸುಮಾರು 10 ವರ್ಷಗಳ ಹಿಂದಿನ ಘಟನೆ. 2014ರ ಆಗಸ್ಟ್‌ 21ರಂದು ಆರು ವರ್ಷದ ಸಂತ್ರಸ್ತೆ ತನ್ನ ಅಪ್ರಾಪ್ತ ವಯಸ್ಸಿನ ಕಸಿನ್‌ ಜತೆ ಅಪರಾಹ್ನ 2 ಗಂಟೆ ಸುಮಾರಿಗೆ ಚಾಕೋಲೆಟ್‌ ಖರೀದಿಸಲು ಅಂಗಡಿಗೆ ತೆರಳಿದ್ದಳು. 3 ಗಂಟೆಯಾದರೂ ಬಾಲಕಿ ಹಿಂದಿರುಗದ ಕಾರಣ ಮನೆಯವರಿಗೆ ಗಾಬರಿ ಅಕ್ಕ ಪಕ್ಕದ ಮನೆಯವರಿಗೆ ಸುದ್ದಿ ತಿಳಿಸಿದರು. ಹೀಗೆ ಅವರೆಲ್ಲ ಸೇರಿ ಬಾಲಕಿಯನ್ನು ಹುಡುಕತೊಡಗಿದರು.

ಅನೇಕ ತಾಸಿನ ಹುಡುಕಾಟದ ಬಳಿಕ ಆರು ವರ್ಷದ ಬಾಲಕಿ ನಗ್ನಾವಸ್ಥೆಯಲ್ಲಿ, ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಶೇಖ್ ಖೈರುದ್ದೀನ್‌ ಎಂಬಾತನ ಮನೆಯ ಸಮೀಪ ಕಂಡು ಬಂದಿದ್ದಳು. ಕೂಡಲೇ ಆಕೆಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸುವಂತೆ ಸಲಹೆ ನೀಡಿದರು. ಆದರೆ ಅಷ್ಟರಲ್ಲಿ ಬಾಲಕಿ ಅಸುನೀಗಿದ್ದಳು.

ಶೇಕ್‌ ಆಸಿಫ್‌ ಅಲಿ ಮತ್ತು ಶೇಕ್‌ ಅಕಿಲ್‌ ಅಲಿ ಬಾಲಕಿಯನ್ನು ಬಲವಂತದಿಂದ ಕರೆದೊಯ್ದಿರುವುದನ್ನು ನೋಡಿರುವುದಾಗಿ ಆಕೆಯ ಜತೆಗಿದ್ದ ಕಸಿನ್‌ ತಿಳಿಸಿದ್ದಳು. ಹೀಗಾಗಿ ಸಂತ್ರಸ್ತೆಯ ಕುಟುಂಬ ನೀಡಿದ ದೂರಿನಂತೆ ಈ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302, 376-ಡಿ ಮತ್ತು 376-ಎ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮರಣೋತ್ತರ ವರದಿ ಮತ್ತು ವಿಚಾರಣೆ ವೇಳೆ, ಆರೋಪಿಗಳು ಬಾಲಕಿಯ ಬಾಯಿಯನ್ನು ಮುಚ್ಚಿಕೊಂಡು ಅವಳನ್ನು ಕರೆದೊಯ್ದು, ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿದ್ದಾರೆ ಎಂದು ತಿಳಿದು ಬಂದಿತ್ತು. ಬಳಿಕ ವಿಚಾರಣಾ ನ್ಯಾಯಾಲಯವು ಐಪಿಸಿ ಮತ್ತು ಪೋಕ್ಸೊ ಸೆಕ್ಷನ್‌ ಅಡಿಯಲ್ಲಿ ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದ್ದರೂ, ಒರಿಸ್ಸಾ ಹೈಕೋರ್ಟ್ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶೇಖ್ ಅಕಿಲ್ ಅಲಿಯನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಶೇಖ್ ಆಸಿಫ್ ಅಲಿ ಪ್ರಕರಣದಲ್ಲಿ ತೀರ್ಪು ನೀಡಿ “ಶೇಖ್ ಆಸಿಫ್ ಅಲಿ ವಿರುದ್ಧ ಐಪಿಸಿಯ ಸೆಕ್ಷನ್ 376-ಡಿ ಅಡಿಯಲ್ಲಿ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಆದರೆ ಐಪಿಸಿಯ ಸೆಕ್ಷನ್ 302, 376-ಎ ಮತ್ತು ಪಿಒಸಿಯ ಸೆಕ್ಷನ್ 6ರ ಅಡಿಯಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದೆʼʼ ಎಂದು ಹೇಳಿತ್ತು. ಇದೀಗ ಪೂರಕ ಸಾಕ್ಷ್ಯಾಧಾರಗಳ ಕೊರತೆಯಿಂದ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ.

ಇದನ್ನೂ ಓದಿ: Physical Abuse : ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನಿಸಿದ ಕಾಮುಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Actor Darshan: ನಟ ದರ್ಶನ್‌ ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

Continue Reading

ಕ್ರೈಂ

Self Harming: ಕೆರೆಗೆ ಹಾರಿ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳ ಸಾವು, ತಾಯಿ ಪಾರು

Self Harming: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದರೆ, ತಾಯಿಯನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

Self Harming
Koo

ಉಡುಪಿ: ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿರುವುದು (Self Harming) ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಮಕ್ಕಳು ಮೃತಪಟ್ಟಿದ್ದರೆ, ತಾಯಿಯನ್ನು ರಕ್ಷಣೆ ಮಾಡಲಾಗಿದೆ.

ಧನರಾಜ್ (13) ಮತ್ತು ಛಾಯ (7) ಮೃತಪಟ್ಟ ಮಕ್ಕಳು. ತಾಯಿ ಶೀಲಾ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ | Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

Road Accident

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ಶಾಲಾ ವಾಹನ ಹರಿದು 4 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಶಾಲೆಗೆ ಹೋಗಬೇಕಿದ್ದ ಪುಟ್ಟ ಕಂದಮ್ಮ, ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ ದುರಂತ ಸಾವು ಕಂಡಿದೆ. ಸಂಗಪ್ಪ ಹೊಸೂರ್ ಎಂಬುವವರ ಪುತ್ರ ಅಭಿನಂದನ್ ಹೊಸೂರ್ (4) ಮೃತ ಬಾಲಕ.

ಶಾಲಾ ವಾಹನ ಹರಿದು ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ

Road Accident

ಮಂಡ್ಯ: ಶನಿವಾರ ಒಂದೇ ದಿನ ಹಲವೆಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದೆ. ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಡಿವೈಡರ್ ದಾಟಿ ಸರ್ವಿಸ್ ರಸ್ತೆಯ ಹಳ್ಳಕ್ಕೆ ಉರುಳಿದ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‌ ವೇಗವಾಗಿ ಬಂದು ನೋಡನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಹತ್ತಿದೆ. ಬಳಿಕ ಸರ್ವಿಸ್ ರಸ್ತೆಗೆ ಬಂದು ಹಳ್ಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಡ್ಯ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಣ್ಣ-ಪುಟ್ಟ ಗಾಯಗೊಂಡವರು ಬೇರೆ ಬಸ್‌ ಮುಖಾಂತರ ತೆರಳಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿಘಾಟ್ ಶನಿವಾರ ಸರಣಿ ಅಪಘಾತ ನಡೆದಿದೆ. ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ ಬಿದ್ದಿದೆ. ಹೀಗಾಗಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದಿಂದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಬಸ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

Continue Reading

ಕ್ರೈಂ

Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Assault Case: ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

VISTARANEWS.COM


on

assault case bjp worker
Koo

ಮಂಗಳೂರು: ಬಿಜೆಪಿ ಕಾರ್ಯಕರ್ತನೊಬ್ಬ (BJP Worker) ಬಟ್ಟೆ ಅಂಗಡಿಗೆ ನುಗ್ಗಿ ವಿವಾಹಿತ ಮಹಿಳೆ (Married Woman) ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕೃತ್ಯ ನಡೆದಿದೆ. ಬಿಜೆಪಿ ಕಾರ್ಯಕರ್ತ, ಹೂವಿನ ವ್ಯಾಪಾರಿ ನವೀನ್ ಕನ್ಯಾಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

ಮಹಿಳೆಯ ಕಪಾಳಕ್ಕೆ ಹೊಡೆಯುವುದು ಸೇರಿ ಇತರೆಡೆ ಮಾರಣಾಂತಿಕ ಹಲ್ಲೆಯನ್ನು ನವೀನ್ ಕನ್ಯಾಡಿ ಮಾಡಿದ್ದಾನೆ. ಹಲ್ಲೆಗೊಳಗಾದ ಮಹಿಳೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡುವ ದೃಶ್ಯ ಅಂಗಡಿಯ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಬೆಳ್ತಂಗಡಿ ಪೊಲೀಸರಿಂದ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ!

ಬೆಂಗಳೂರು: ಇಂದು ಮಾಡಿದ ತಪ್ಪಿನ ಶಿಕ್ಷೆ ಮುಂದಿನ ಜನ್ಮದಲ್ಲಿ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದರೆ ಅದು ಸುಳ್ಳು, ಇಂದು ಮಾಡಿದ ತಪ್ಪಿಗೆ ಶಿಕ್ಷೆ ಇದೇ ಕಾಲದಲ್ಲಿ ಸಿಗುತ್ತದೆ. ಆದರೆ ಕೆಲವರಿಗೆ ತಡವಾಗಿ ಸಿಕ್ಕರೆ, ಕೆಲವರಿಗೆ ಅಂದೇ ಸಿಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಳ್ಳನೊಬ್ಬ ಮಹಿಳೆಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video )ಆಗಿದೆ.

ಈ ವಿಡಿಯೊವನ್ನು @Desam_officialz ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು ‘ಇದು ಭೂಮಿಯ ಮೇಲೆ ದೇವರ ತಕ್ಷಣದ ತೀರ್ಪು. ದೇವರು ಕರುಣೆ ತೋರಲಿ’ ಎಂದು ಬರೆದಿದ್ದಾರೆ. ಈ ವಿಡಿಯೊದಲ್ಲಿ ಕಳ್ಳ ಮಹಿಳೆಯಿಂದ ಕದ್ದ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ತಪ್ಪಿಸಿಕೊಳ್ಳಲು ಜೋರಾಗಿ ಓಡುತ್ತಾ ರಸ್ತೆ ದಾಟುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಕಾರೊಂದು ಆತನಿಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಆತ ಹಾರಿ ಹೋಗಿ ತುಂಬಾ ದೂರ ರಸ್ತೆಯ ಮೇಲೆ ಬಿದ್ದಿದ್ದಾನೆ. ಆದರೆ ಕಾರು ತನ್ನ ವೇಗವನ್ನು ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಆತನ ಮೆಲೆ ಹರಿದು ನಂತರ ನಿಂತಿದೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಘಟನೆ ನಡೆದ ಸ್ಥಳ ಮತ್ತು ದಿನಾಂಕ ತಿಳಿದುಬಂದಿಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದು ದೇವರ ತೀರ್ಪು ಎಂದು ಹೇಳಿದರೆ. ಕೆಲವರು ‘ಬಡವರ ವಿಷಯದಲ್ಲಿ ದೇವರು ತಕ್ಷಣ ತೀರ್ಪುಗಳನ್ನು ನೀಡುತ್ತಾನೆ? ಆದರೆ ಶ್ರೀಮಂತರು ಮತ್ತು ಶಕ್ತಿವಂತರಿಗೆ ಏಕೆ ದೇವರು ತಕ್ಷಣದ ತೀರ್ಪುಗಳನ್ನು ನೀಡುತ್ತಿಲ್ಲ? ಪ್ರತಿದಿನ ಇಂತಹ ಲಕ್ಷಾಂತರ ದರೋಡೆಗಳು, ರಸ್ತೆಗಳಲ್ಲಿ ಕೊಲೆಗಳು ನಡೆಯುತ್ತಿವೆ, ಯಾವುದೇ ತಕ್ಷಣದ ತೀರ್ಪುಗಳನ್ನು ನೋಡಿಲ್ಲ, ಏಕೆ? ಎಂದು ಪ್ರಶ್ನಿಸಿದ್ದಾರೆ.

ಸೆಪ್ಟೆಂಬರ್ 2023 ರಲ್ಲಿ ಗುಜರಾತ್‌ ನಲ್ಲಿಯೂ ಇಂತಹದ್ದೇ ಒಂದು ಘಟನೆ ನಡೆದಿತ್ತು. ಗುಜರಾತ್‌ನ ಮೊದಸಾದಲ್ಲಿ ಶೋರೂಂನಿಂದ ಕದಿಯಲು ಪ್ರಯತ್ನಿಸುತ್ತಿದ್ದ ಕಳ್ಳನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಈ ಘಟನೆಯು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Continue Reading

ಪ್ರಮುಖ ಸುದ್ದಿ

Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Arvind Kejriwal: ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

VISTARANEWS.COM


on

Arvind Kejriwal
Koo

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್‌ (Dehli avenue Court) ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ (Delhi Excise policy) ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.

ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಕಾಯ್ದಿರಿಸಿದ್ದರು. ಕೇಜ್ರಿವಾಲ್ ತನಿಖೆಗೆ ಸಹಕಾರ ನೀಡುತ್ತಿಲ್ಲ, ಸರಿಯಾದ ಉತ್ತರಗಳನ್ನು ಕೊಡುತ್ತಿಲ್ಲ ಎಂದು ಸಿಬಿಐ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿದೆ.

2021-22 ರ ದೆಹಲಿಯ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭದ ಪ್ರಮಾಣವನ್ನು ಶೇಕಡಾ 5 ರಿಂದ 12 ಕ್ಕೆ ಹೆಚ್ಚಿಸಿರುವ ಬಗ್ಗೆ ಯಾವುದೇ ಸಮರ್ಥನೆ ಅಥವಾ ಸತ್ಯವಾದ ವಿವರಣೆ ನೀಡಿಲ್ಲ ಎಂದು ಸಿಬಿಐ ಆರೋಪಿಸಿದೆ. ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ದಕ್ಷಿಣ ಭಾರತದ ಪ್ರಮುಖರು ದೆಹಲಿಯಲ್ಲಿ ಮೊಕ್ಕಾಂ ಹೂಡಿದಾಗ, ಪರಿಷ್ಕೃತ ಅಬಕಾರಿ ನೀತಿಗೆ ಕ್ಯಾಬಿನೆಟ್ ಅನುಮೋದನೆಯನ್ನು ಒಂದೇ ದಿನದಲ್ಲಿ ತರಾತುರಿಯಲ್ಲಿ ಚಲಾವಣೆ ಮಾಡುವ ಮೂಲಕ ಏಕೆ ಪಡೆಯಲಾಯಿತು ಎಂಬುದನ್ನು ವಿವರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದಿದೆ. ಕೇಜ್ರಿವಾಲ್ ಅವರು ಪ್ರಕರಣದ ಆರೋಪಿಗಳಾದ ಮಾಗುಂಟ ಶ್ರೀನಿವಾಸಲು ರೆಡ್ಡಿ, ಅರ್ಜುನ್ ಪಾಂಡೆ ಮತ್ತು ಮೂತ ಗೌತಮ್ ಅವರನ್ನು ಭೇಟಿಯಾದ ಬಗ್ಗೆ ಸರಿಯಾದ ವಿವರಣೆಯನ್ನು ಕೊಟ್ಟಿಲ್ಲ ಎಂದು ಸಿಬಿಐ ಹೇಳಿದೆ.

ಕೇಜ್ರಿವಾಲ್ ಪ್ರಮುಖ ರಾಜಕಾರಣಿ ಮತ್ತು ದೆಹಲಿಯ ಮುಖ್ಯಮಂತ್ರಿಯಾಗಿರುವುದರಿಂದ, ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ, ಕಸ್ಟಡಿ ವಿಚಾರಣೆಯ ಸಮಯದಲ್ಲಿ ಅವರು ಈಗಾಗಲೇ ಬಹಿರಂಗಪಡಿಸಿದ ಸಾಕ್ಷಿಗಳು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು. ಇನ್ನೂ ಪರಿಶೀಲಿಸಬೇಕಾದವರು, ಮತ್ತಷ್ಟು ಸಂಗ್ರಹಿಸಬೇಕಾದ ಪುರಾವೆಗಳನ್ನು ಹಾಳು ಮಾಡಿ ಮತ್ತು ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗಬಹುದು ಎಂದು ಸಿಬಿಐ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದೆ.

2021-22ರ ದೆಹಲಿ ಮದ್ಯ ನೀತಿಯನ್ನು ರೂಪಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೊದಲು ಬಂಧಿಸಿತ್ತು. ಕೇಜ್ರಿವಾಲ್ ಅವರು ಎಎಪಿಯ ಸಂಚಾಲಕರಾಗಿದ್ದರಿಂದ ಗೋವಾದಲ್ಲಿ ಪಕ್ಷದ ಪ್ರಚಾರಕ್ಕೆ ಹಣ ನೀಡಲು ಮದ್ಯ ಮಾರಾಟಗಾರರಿಂದ ಪಡೆದ ಹಣವನ್ನು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ. ಕೇಜ್ರಿವಾಲ್ ಮತ್ತು ಇತರ ಪ್ರಮುಖ ಆಮ್ ಆದ್ಮಿ ಪಾರ್ಟಿ ನಾಯಕರಿಗೆ ಕೇಂದ್ರ ಸರ್ಕಾರ ತನ್ನ ಏಜೆನ್ಸಿಗಳನ್ನು ಬಳಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿ: Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Continue Reading
Advertisement
Rohit Sharma
ಪ್ರಮುಖ ಸುದ್ದಿ51 mins ago

Rohit Sharma : ಕೊಹ್ಲಿ ಹಾದಿ ತುಳಿದ ರೋಹಿತ್​, ಟಿ20 ಐ ಕ್ರಿಕೆಟ್​​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ನಾಯಕ

Virat Kohli
ಪ್ರಮುಖ ಸುದ್ದಿ3 hours ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ4 hours ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ4 hours ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ4 hours ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ4 hours ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ5 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ5 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Hardik Pandya
ಪ್ರಮುಖ ಸುದ್ದಿ6 hours ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ6 hours ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ16 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌