ಬೆಂಗಳೂರು: ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್ 20 ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.
ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ಪವಿತ್ರಾಗೌಡಗೆ ಜೈಲಿನಲ್ಲೂ ಡಿ ಬ್ಯಾರಕ್ ಕೊಠಡಿ ನೀಡಲಾಗಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್‌ಗೆ ಶಿಫ್ಟ್ ಆಗಿದ್ದಾರೆ. ನಿನ್ನೇ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ಹತ್ತು ಗಂಟೆಯ ಬಳಿಕ ನೀಡಲಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ದೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲೂ ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್‌ನಲ್ಲಿ ವಾಕಿಂಗ್ ಕೂಡ ಮಾಡಿದ್ದಾರೆ. ಜೈಲಿನ ಸಿಬ್ಬಂದಿ ನೀಡಿದ ಕಾಪಿಯನ್ನು ಪವಿತ್ರಾ ಕುಡಿದಿದ್ದಾರೆ. ಕಾಫಿ ಕುಡಿದು ಬಳಿಕ ನ್ಯೂಸ್ ಪೇಪರ್ ಓದಿದ್ದರು ಪವಿತ್ರಾ.
ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಳ ಸಮಪಾಲು- ಸಮಬಾಳು ಪಾಲಿಸಿ! ದರ್ಶನ್ ಪತ್ನಿ ಬಳಿ ಇರುವುದೆಲ್ಲ ಇವಳಿಗೂ ಬೇಕಿತ್ತು!
ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ ಜೈಲು ಸಿಬ್ಬಂದಿ. ಇಂದು ಡಿ-ಗ್ಯಾಂಗ್ ಪಟಾಲಂ. ಜೈಲೂಟ ಸವಿಯಲಿದೆ. ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ಕುಟುಂಬಸ್ಥರು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪವಿತ್ರಾ ಗೌಡ ಮಗಳು ಮತ್ತು ತಾಯಿ ಭೇಟಿಯಾಗುವ ಸಾಧ್ಯತೆ ಇದೆ.
ಇನ್ನು ನಿನ್ನೆ ಕೋರ್ಟ್ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್ ವ್ಯಾನ್ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್ ವ್ಯಾನ್ನ ಪಕ್ಕದಲ್ಲಿ ನಿಂತು ಮಾತನಾಡಿದರು.