ಗದಗ: ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿ, ಕೊರೊನಾ (corona virus) ಕಾಲದಲ್ಲಿ ಪತಿಯನ್ನೂ ಕಳೆದುಕೊಂಡಿರುವ ಮುಸ್ಲಿಂ ಮಹಿಳೆಗೆ ಕೆಲವು ಮುಸ್ಲಿಂ ಪುಂಡರು ಲೈಂಗಿಕ ಕಿರುಕುಳ (Physical Abuse) ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮಹಿಳೆಯ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೂ ದುಷ್ಕರ್ಮಿಗಳು ಕಿರುಕುಳ ನೀಡಿದ್ದು, ಹಲ್ಲೆ (Assault case) ನಡೆಸಿದ್ದಾರೆ. ದೂರು ನೀಡಿದರೂ ಪೊಲೀಸರು ಕ್ಯಾರೇ ಎಂದಿಲ್ಲ.
ಗದಗ ಬೆಟಗೇರಿಯ ಆಶ್ರಯ ಕಾಲೋನಿ ನಿವಾಸಿಯಾದ ಸೈನಜಾ ಬೇಗಂ ಎಂಬಾಕೆ ಕಿರುಕುಳಕ್ಕೆ ಒಳಗಾದ ಮಹಿಳೆ. ನಾಲ್ಕು ಜನ ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಸೈನಜಾ ಬೇಗಂ, ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಮೂರು ವರ್ಷಗಳ ಹಿಂದೆ ಕೊರೊನಾದಿಂದ ಪತಿ ನಿಧನ ಹೊಂದಿದ್ದರು.
ಇತ್ತೀಚೆಗೆ ಲಿಯಾಕತ್, ಅಲ್ತಾಫ್, ಸೈಯದ್ ಸೇರಿದಂತೆ ಹಲವರು ಈಕೆಗೆ ಕಿರುಕುಳ ನೀಡುತ್ತಿದ್ದು, ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಸೈನಾಜ್‌ನ ಮಗ ಸದ್ದಾಂನ ಮೇಲೆ ಲಿಯಾಕತ್ ಗ್ಯಾಂಗ್ ತೀವ್ರವಾಗಿ ಹಲ್ಲೆ ಮಾಡಿದೆ. ನಿನ್ನೆ ರಾತ್ರಿ ಕೂಡ ತಾಯಿ ಸೈನಾಜ್, ಪುತ್ರ ಸದ್ದಾಂ ಮೇಲೆ ಆರೋಪಿ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
“ನಮಗೆ ಸೂಕ್ತವಾದ ರಕ್ಷಣೆ ನೀಡಬೇಕುʼʼ ಎಂದು ಮಹಿಳೆ ಒತ್ತಾಯಿಸಿದ್ದಾರೆ. ತಾಯಿ, ಮಕ್ಕಳ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆ ಕುರಿತು ಬೆಟಗೇರಿ ಪೊಲೀಸ್ ಠಾಣೆಗೆ ಲಿಯಾಕತ್, ಅಲ್ತಾಫ್ ಎಂಬವರ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ನೀಡಿದರೂ ಪೊಲೀಸರು ಮಾತ್ರ ಈ ಕುರಿತು ಕ್ಯಾರೇ ಎಂದಿಲ್ಲ. ಜೊತೆಗೆ ದೂರು ನೀಡಿದರೆ ನಿನ್ನ ಮತ್ತು ಮಕ್ಕಳನ್ನು ಒಳಗೆ ಹಾಕುತ್ತೇವೆ ಎಂದು ಪೊಲೀಸರು ಕೂಡ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರ ವಿರುದ್ಧವೂ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ
ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.
ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.
ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.
ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.
ಇದನ್ನು ಗಮನಿಸಿ ಸ್ಕೆಚ್ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ