Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ - Vistara News

ಕ್ರೈಂ

Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

Physical Abuse : ಅಪ್ರಾಪ್ತೆಯೊಬ್ಬಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ (Black mail) ಮಾಡುತ್ತಿದ್ದ ಎಂಬ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದರು. ಇದೀಗ ಅಪ್ರಾಪ್ತೆಯ ತಾಯಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ‌

VISTARANEWS.COM


on

Physical Abuse
ಮೃತ ತಂದೆ ಮಹಾದೇವನಾಯಕ ಹಾಗೂ ಮಗಳು ಲೀಲಾವತಿ, ಚಿಕಿತ್ಸೆ ಪಡೆಯುತ್ತಿರುವ ತಾಯಿ ಗೌರಮ್ಮ, ಮೊಮ್ಮಗಳು ರಿಷಿತಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ (Physical Abuse) ಸಂಬಂಧಿಸಿದ್ದಂತೆ ಮೊನ್ನೆ ಶುಕ್ರವಾರ ತಂದೆ ಮಹಾದೇವನಾಯಕ (65) ಮೃತಪಟ್ಟಿದ್ದರು. ಇಂದು ಸೋಮವಾರ (ಜೂ.10) ಚಿಕಿತ್ಸೆ ಫಲಕಾರಿಯಾಗದೆ ಅವರ ಮಗಳು ಲೀಲಾವತಿ (45 ) ಮೃತಪಟ್ಟಿದ್ದಾರೆ. ಲೀಲಾವತಿಗೆ ಮೂರು ದಿನಗಳಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕ್ರಿಮಿ ನಾಶಕ ಸೇವಿಸಿದ ತೀವ್ರತೆಗೆ ಮೃತಪಟ್ಟಿದ್ದಾರೆ.

ಲೀಲಾವತಿ ಅವರ ಮಗಳು ರಿಷೀತಾಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಇದೇ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ತಂದೆ-ಮಗಳು ಮೃತಪಟ್ಟರೆ, ಅಜ್ಜಿ- ಮೊಮ್ಮಗಳ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸಂತ್ರಸ್ತೆಯ ದೂರು ಸ್ವೀಕರಿಸದ ಮೂವರು ಅಮಾನತು

ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ, ಇಬ್ಬರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್‌ನಗರ ಠಾಣೆ ಇನ್ಸ್‌ಪೆಕ್ಟರ್, ಎಎಸ್‌ಐ ಹಾಗೂ ಮುಖ್ಯಪೇದೆ ಅಮಾನತು ಮಾಡಲಾಗಿದೆ. ಸಂತ್ರಸ್ತೆಯ ಪೋಷಕರ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ಪಿ.ಪಿ.ಸಂತೋಷ್, ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಎಂಬುವವರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಆದೇಶಿಸಿದ್ದಾರೆ.

Physical Abuse
ಅಮಾನತುಗೊಂಡ ಅಧಿಕಾರಿಗಳು

ಅಪ್ರಾಪ್ತೆ ಕುಟುಂಬಸ್ಥರು ನೀಡಿದ ದೂರನ್ನು ಎಸ್.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಐಪಿಸಿ 370 ಸೆಕ್ಷನ್‌ನಡಿ ದಾಖಲು ಮಾಡಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಕೆಆರ್‌ನಗರ ತಾಲೂಕಿನ ಗ್ರಾಮವೊಂದರ ಲೋಕೇಶ್ ಎಂಬಾತ ಸಂತ್ರಸ್ತೆ ಬಾಲಕಿಯ ಖಾಸಗಿ ಫೋಟೋ, ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ.

ಈ ಸಂಬಂಧ ಸಂತ್ರಸ್ತೆಯ ಪೋಷಕರು ಕೆ.ಆರ್.ನಗರ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ದೂರು ದಾಖಲಿಸಿಕೊಳ್ಳದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ತಮಗೆ ನ್ಯಾಯ ಸಿಗುವ ಭರವಸೆ ಇಲ್ಲದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿತ್ತು. ಅದರಂತೆ ಕಳೆದ ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳಬೆಟ್ಟದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಘಟನೆಯಲ್ಲಿ ಬಾಲಕಿ ರಿಷಿತಾಳ ತಾತ ಮೃತಪಟ್ಟಿದ್ದರು. ಅಸ್ವಸ್ಥಗೊಂಡಿದ್ದ ಅಜ್ಜಿ, ತಾಯಿ, ಮೊಮ್ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ರಿಷಿತಾಳ ತಾಯಿ ಕೂಡ ಮೃತಪಟ್ಟಿದ್ದು, ಅಜ್ಜಿ, ಮೊಮ್ಮಗಳು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಬಾಲಕಿಯ ಡೆತ್‌ನೋಟ್‌ ಪತ್ತೆ

ಮಹಾದೇವನಾಯಕ ಹಾಗೂ ಗೌರಮ್ಮ ದಂಪತಿಯ ಮಗಳು ಲೀಲಾವತಿ ಹಾಗೂ ಈಕೆ ಮಗಳು ರಿಷಿತಾ ಈ ನಾಲ್ವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಕಾಮ ಕ್ರಿಮಿ ಲೋಕೇಶ್ ಕೊಟ್ಟ ಟಾರ್ಚರ್‌ಗೆ ಬೇಸತ್ತು ಇಡೀ ಕುಟುಂಬ ಕ್ರಿಮಿ ನಾಶಕ ಸೇವಿಸಿದ್ದರು. ಅಪ್ರಾಪ್ತೆ ಬರೆದಿಟ್ಟ ಡೆತ್‌ನೋಟ್ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

Physical abuse lokesh
ಆರೋಪಿ ಲೋಕೇಶ್‌

ಡೆತ್‌ನೋಟ್‌ನಲ್ಲಿ ಆರೋಪಿ ಲೋಕೇಶ್‌ ಕೊಟ್ಟ ಹಿಂಸೆಯನ್ನು ಎಳೆ ಎಳೆಯಾಗಿ ಬರೆದಿಟ್ಟಿದ್ದಾಳೆ. ಲೋಕೇಶ್ ಎಲ್ಲಾ ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಠಿಯಿಂದ ನೋಡುತ್ತಾನೆ. ನನ್ನನ್ನು ಸಹ ಲೋಕೇಶ್ ಕೆಟ್ಟ ದೃಷ್ಠಿಯಿಂದ ನೋಡಿದ್ದ. ನಮ್ಮ ಕುಟುಂಬದ ಮಾನ ಮರ್ಯಾದೆ ಕಳೆದು ಹಾಕಿದ್ದಾನೆ. ಲೋಕೇಶ್‌ನನ್ನು ಸುಮ್ಮನೆ ಬಿಡಬೇಡಿ, ಆತನನ್ನ ಸುಮ್ಮನೆ ಬಿಟ್ಟರೆ ನನ್ನಂತ ಎಷ್ಟೋ ಹೆಣ್ಣು ಮಕ್ಕಳ ಜೀವ ಹಾಳಾಗುತ್ತೆ ಎಂದು ತನಗೆ ಆದ ಅಪಮಾನ ಹಾಗೂ ಮಾನಸಿಕ ಹಿಂಸೆಯ ಕುರಿತು ಬರೆದಿಟ್ಟಿದ್ದಾಳೆ.

ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

ಈ ವಿಷಯ ತಿಳಿಯುತ್ತಿದ್ದ ಆಕ್ರೋಶಗೊಂಡ ಚಂದಗಾಲು ಗ್ರಾಮಸ್ಥರು ಮಹದೇವನಾಯಕರ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದರು. ಕೆ.ಆರ್.ನಗರ ಮುಖ್ಯರಸ್ತೆಯಲ್ಲಿ ಶವ ಇಟ್ಟು ಪ್ರತಿಭಟಿಸಿ, ಆರೋಪಿಗೆ ಉಗ್ರ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯ ವಹಿಸಿದ ಪೊಲೀಸರ ಮೇಲೂ ಕಠಿಣ ಕ್ರಮ ಆಗಬೇಕೆಂದರು. ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

Kidnap case : ವಂಚನೆ ಕೇಸ್‌ನಲ್ಲಿ ಅರೆಸ್ಟ್‌ ಆಗಿ ಜಾಮೀನಿನ ಮೇಲೆ ಹೊರ ಬಂದವನ್ನು ಖತರ್ನಾಕ್‌ ಗ್ಯಾಂಗ್‌ವೊಂದು ಸಿನಿಮಾ ಸ್ಟೈಲ್‌ನಲ್ಲಿ ಕಿಡ್ನ್ಯಾಪ್‌ ಮಾಡಿದೆ. ಬೆಂಗಳೂರಿನಲ್ಲಿ ಕಿಡ್ನ್ಯಾಪ್‌ ಮಾಡಿ ತೆಲಂಗಾಣದ ಫಾರ್ಮ್‌ ಹೌಸ್‌ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದೆ.

VISTARANEWS.COM


on

By

kidnap Case
Koo

ಬೆಂಗಳೂರು: ಕೋಟಿ ಕೋಟಿ ಹಣಕ್ಕಾಗಿ ಪ್ರಭಾವಿಗಳ ಹೆಸರು ಹೇಳಿ, ಬೆದರಿಕೆ ಹಾಕಿ ಅಪಹರಣ (Kidnap case) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತೆಲಂಗಾಣ ಮೂಲದ ಅಜ್ಮೀರ್ ರಾಜು ಎಂಬಾತನನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಆತನ ಮೇಲೆ ಹಲ್ಲೆ ನಡೆಸಿ ಆತನಿಂದ ದುಡ್ಡು ಕೀಳುವ ಪ್ರಯತ್ನ ಕೂಡ ನಡೆದಿತ್ತು ಎನ್ನಲಾಗಿದೆ.

ತೆಲಂಗಾಣ ನಿವಾಸಿಯಾಗಿರುವ ಅಜ್ಮೀರ್ ರಾಜು ದುಬೈನಲ್ಲಿ ಇರುವುದು. ಆನ್‌ಲೈನ್‌ನಲ್ಲಿ ಅನಾಯಸವಾಗಿ ದುಡ್ಡು ಮಾಡುವ ಬುದ್ಧಿವಂತ. ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿಸಿ ಅದನ್ನು ನಾನಾ ಕಾರಣದಿಂದ ರಿಟರ್ನ್ ಬಾರದ ರೀತಿ ನೋಡಿಕೊಂಡು ಜನರಿಗೆ ವಂಚನೆ ಮಾಡುತ್ತಿದ್ದ. ಆದರೆ ಆತನ ಟೈಂ ಕೆಟ್ಟಿತ್ತು, ಬೆಂಗಳೂರಿಗೆ ಬಂದ ಕೂಡಲೇ ಅರೆಸ್ಟ್‌ ಆಗಿದ್ದ.

ಕಳೆದ ವರ್ಷ ಐಪಿಎಲ್ ನೋಡಲು ಬಂದಿದ್ದ ಅಜ್ಮೀರ್‌ನನ್ನು ಪೊಲೀಸರು ಬಂಧಿಸಿದ್ದರು. ಸುಮಾರು ಮೂರು ತಿಂಗಳ ಬಳಿಕ ಜೈಲಿನಿಂದ ಹೊರ ಬಂದಿದ್ದ ಅಜ್ಮೀರ್‌ ರಾಜು, ಎಂಜಿ ರೋಡ್ ಬಳಿ ಇರುವ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ. ಈ ವೇಳೆ ಅಜ್ಮೀರ್‌ ರಾಜುಗೆ ಸಾತ್ವಿಕ್‌ ಎಂಬಾತ ಪರಿಚಯವಾಗಿದ್ದ.

ಇದನ್ನೂ ಓದಿ: Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

ಕಿಡ್ನ್ಯಾಪ್ ಆದ ದಿನ ತಡರಾತ್ರಿ ಊಟಕ್ಕೆಂದು ಸಾತ್ವಿಕ್‌ ಜತೆಗೆ ಬೈಕ್‌ನಲ್ಲಿ ಹೊರಹೋಗಿದ್ದ. ಊಟ ಸಿಗದ ಕಾರಣ ನೇರವಾಗಿ ಟ್ರಿನಿಟಿ ಸರ್ಕಲ್ ಬಳಿ ಇರುವ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ತಾವು ಹೋದಲೆಲ್ಲ ಒಂದು ಸ್ಕಾರ್ಪಿಯೋ ಹಿಂಬಾಲಿಸಿಕೊಂಡು ಬರುತ್ತಿರುವುದನ್ನು ಕಂಡು ಅನುಮಾನಗೊಂಡ ಅಜ್ಮೀರ್‌ ರಾಜು, ಕಾರು ಚಾಲಕನ ಬಳಿ ಕೇಳಿದ್ದಾನೆ.

ಆಗ ಕಾರಲಿದ್ದ ಆರೇಳು ಜನರು ಏಕಾಏಕಿ ಮುಗಿ ಬಿದ್ದು, ಅಜ್ಮೀರ್‌ನನ್ನು ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ನಂತರ ನೇರವಾಗಿ ತೆಲಂಗಾಣಕ್ಕೆ ಕರೆದೊಯ್ದು ಅಲ್ಲಿನ ಫಾರ್ಮ್ ಹೌಸ್‌ನಲ್ಲಿ ಕೂಡಿ ಹಾಕಿದ್ದಾರೆ. ಕಿಡ್ನ್ಯಾಪರ್ಸ್‌ ಐದು ಕೋಟಿಗೆ ಬೇಡಿಕೆ ಇಟ್ಟಿದ್ದಾರೆ. ಹಣವಿಲ್ಲ ಎಂದಾಗ ಬಿಟ್ ಕಾಯಿನ್‌ಗಳನ್ನು ಟ್ರಾನ್ಸ್‌ಫರ್‌ ಮಾಡು ಎಂದು ಪಟ್ಟು ಹಿಡಿದಿದ್ದಾರೆ. ಇಂಟರ್ ನ್ಯಾಷನಲ್ ಅಕೌಂಟ್‌ನಲ್ಲಿರುವ ಹಣವನ್ನೂ ವರ್ಗಾವಣೆ ಮಾಡುವಂತೆ ಕುತ್ತಿಗೆ ಮೇಲೆ ಚಾಕು ಇಟ್ಟಿದ್ದರಂತೆ.

ಇನ್ನು ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದರಂತೆ. ದೂರು ನೀಡಿದರೆ ನಮಗೆ ತೆಲಂಗಾಣ ಎಂಪಿ, ಎಂಎಲ್‌ಎ ಗೊತ್ತು. ಈ ಕೇಸ್ ನಿಲ್ಲದೆ ಇರುವ ಹಾಗೆ ಮಾಡಿ ನಿನ್ನ ಕೊಲೆ ಮಾಡುತ್ತೀವಿ ಎಂದು ಕೊಲೆ ಬೆದರಿಕೆಯನ್ನೂ ಹಾಕಿದ್ದರಂತೆ. ಸದ್ಯ ಅಜ್ಮೀರ್‌ ಸ್ನೇಹಿತ ಸಾತ್ವಿಕ್‌ ನೀಡಿದ ದೂರಿನ ಮೇರೆಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ.

VISTARANEWS.COM


on

Actor Darshan case Jaggesh reaction about this
Koo

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭವನ್ನು (Actor Darshan) ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌, ಜಗ್ಗೇಶ್‌ , ಸಾಧು ಕೋಕಿಲಾ ಸೇರದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ. ಒಟಿಟಿ ಎಂಬುದು ಒಳ್ಳೆಯ ಯೋಜನೆ. ಇದನ್ನು ಸರ್ಕಾರ ಮಾಡಿದ್ರೆ ಪ್ರಾಫಿಟ್‌ ತಂದು ಕೊಡುತ್ತದೆ. ಈಗಾಗಲೇ ಮಲ್ಟಿ ನ್ಯಾಷನಲ್ ಕಂಪನಿ ಮಾಡಿಕೊಂಡಿದೆ. ನಮ್ಮ ದುಡ್ಡು ಹೊರ ರಾಜ್ಯಕ್ಕೆ ಹೋಗ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

ಸಿನಿಮಾ ರಂಗದ ಇತ್ತೀಚಿನ ಬೆಳವಣಿಗೆ ಬಗ್ಗೆ ಜಗ್ಗೇಶ್‌ ಮಾತನಾಡಿ ಪರೋಕ್ಷವಾಗಿ ʻʻ ನಿರ್ಮಾಪಕರು ಸಿನಿಮಾ ನಾಯಕನ ಹಿಂದೆ ಹೋಗಿ ಸಿನಿಮಾ ಮಾಡಬೇಡಿ. ಕಥೆ ಹಿಂದೆ ಹೋಗಿ ಸಿನಿಮಾ ಮಾಡಿ. ಇವತ್ತು ನಾಯಕರ ಹಿಂದೆಯೇ ಹೋದಾಗಲೇ ನಿರ್ಮಾಪಕರಿಗೆ ಸಮಸ್ಯೆ ಆಗಿದೆ. ಹಿಂದೆ ಕಥೆ ಹಿಂದೆ ಹೋದಾಗ ನಿರ್ಮಾಪಕರು ಚನ್ನಾಗಿದ್ದರುʼʼಎಂದರು.

ಈ ವೇಳೆ ನಟ ಶಿವರಾಜ್‌ಕುಮಾರ್‌ ಕೂಡ ಭಾಗಿಯಾಗಿದ್ದರು. ಈ ವೇಳೆ ದರ್ಶನ್‌ (Actor Darshan) ಕುರಿತಾಗಿ ಮಾತನಾಡಿದರು. ಶಿವಣ್ಣ ಮಾತನಾಡಿ ʻʻಈ ವಿಚಾರದ ಬಗ್ಗೆ ಬೇಸರ ಆಗತ್ತೆ. ಅದೆಲ್ಲ ಹಣೆಬರಹ. ಹಣೆ ಬರಹ ಅನ್ನೋದು ಒಂದು ಇರುತ್ತೆ. ಏನೇ ಮಾತನಾಡಿದರೂ ಅದು ಸರಿನಾ ಎಂದು ಯೋಚನೆ ಮಾಡಬೇಕು. ನಾವು ಬಂದರೋದು ಎದುರಿಸಲೇ ಬೇಕು. ಈಗಾಗಲೇ ತನಿಖೆ ಆಗುತ್ತಿದೆ. ಯಾಕಪ್ಪ ಹೀಗೆ ಆಯ್ತು ಅಂತ ಬೇಜಾರ ಆಗುತ್ತೆ. ಎರಡೂ ಕುಟಂಬಗಳು ಬೇಜಾರಿನ ಲ್ಲಿದೆ. ನ್ಯಾಯ ಎಲ್ಲಿದೆ ಮುಂದೆ ಗೊತ್ತಾಗತ್ತೆʼʼಎಂದರು.

 ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

Continue Reading

ಬೆಂಗಳೂರು

Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

Leopard attack: ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆಯನ್ನು ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ ಮಾಡಿದೆ. ಇತ್ತ ಬೈಕ್‌ನಲ್ಲಿ ತೆರಳಿದ್ದ ತಾಯಿ-ಮಗನಿಗೆ ಟಾಟಾ ಎಸ್‌ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಾಯಿ ಮೃತಪಟ್ಟರೆ, ಮಗ ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

By

Leopard attack bike rider and cab driver
Koo

ಬೆಂಗಳೂರು/ಚಿಕ್ಕೋಡಿ: ಬೈಕ್ ಸವಾರ ಹಾಗೂ ಕಾರು ಚಾಲಕನ ಮೇಲೆ ಚಿರತೆಯೊಂದು (Leopard attack) ದಾಳಿ ಮಾಡಿದೆ. ನಿನ್ನೆ ಶನಿವಾರ ರಾತ್ರಿ 8:30ರ ಸುಮಾರಿಗೆ ಮಾಗಡಿ ರಸ್ತೆಯ ಸಾವನದುರ್ಗದ ಬಳಿ ನಡೆದಿದೆ. ಬೈಕ್‌ಗೆ ಹಾಗೂ ಕಾರಿಗೆ ಮುಖಾಮುಖಿಯಾದ ಚಿರತೆಯು ರಸ್ತೆ ಬದಿ ಬಿದ್ದಿತ್ತು.

ಚಿರತೆ ಸತ್ತು ಹೋಗಿದೆ ಎಂದು ತಿಳಿದ ಬೈಕ್ ಸವಾರ ಹತ್ತಿರ ತೆರಳಿ ಮುಟ್ಟಲು ಹೋಗಿದ್ದ. ಈ ವೇಳೆ ಸತ್ತಂತೆ ಬಿದ್ದಿದ್ದ ಚಿರತೆ ಏಕಾಏಕಿ ದಾಳಿ ಮಾಡಿದೆ. ಬೈಕ್ ಹಾಗೂ ಕ್ಯಾಬ್ ಚಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೈಕ್‌ಗೆ ಟಾಟಾ ಎಸ್‌ ಡಿಕ್ಕಿ-ಮಹಿಳೆ ಸಾವು

ಬೈಕ್ ಗೆ ಟಾಟಾ ಎಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಎಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಎಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್‌ ಸವಾರರು ರಸ್ತೆ ಅಪಘಾತದಲ್ಲಿ (Road Accident ) ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜರ್ನಾಧನ (25) ಮೃತ ದುರ್ದೈವಿ.

ತಡರಾತ್ರಿ 2.30ರ ಸಮಯಕ್ಕೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಜರ್ನಾಧನ ರಸ್ತೆ ಬದಿ ನಿಂತಿದ್ದ ಕಾಂಕ್ರೀಟ್ ಮಿಕ್ಸಿಂಟ್ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಹಾರಿ ಕೆಳಗೆ ಬಿದ್ದ ಜರ್ನಾಧನನ ತಲೆಗೆ ಗಂಭೀರ ಪೆಟ್ಟಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜನಾರ್ಧನನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಬೆಂಗಳೂರಿನ ಮುತ್ಯಾಲ ನಗರ ನಿವಾಸಿಯಾಗಿರುವ ಜರ್ನಾಧನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ ಹೊಡೆದಿದ್ದು, ಮಗನ ಕಣ್ಣೆದುರೇ ತಾಯಿ ಮೃತಪಟ್ಟಿದ್ದಾರೆ. ಅಪಘಾತ ಮಾಡಿ ಚಾಲಕ ನಾಪತ್ತೆಯಾಗಿದ್ದಾನೆ.

VISTARANEWS.COM


on

By

Road Accident
Koo

ಬೆಳಗಾವಿ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ (Road Accident) ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಏಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ. ತಾಯಿ ಮಗ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು

ಮೈಸೂರಿನಲ್ಲಿ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌

ಮೈಸೂರು: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಸಾರಿಗೆ ಬಸ್‌ವೊಂದು ಕಂದಕಕ್ಕೆ (Road Accident ) ಉರುಳಿದೆ. ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡಿನ ತಾಲೂಕಿನ ಮರಡಿಹುಂಡಿ ಗ್ರಾಮದ ಸಮೀಪ ಅಪಘಾತ ನಡೆದಿದೆ.

ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಬಸ್‌ ಮೈಸೂರಿಗೆ ತೆರಳುತ್ತಿತ್ತು. ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಪಲ್ಟಿ ಹೊಡೆದಿದೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವರುಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಕ್ಕೆ ಬಿದ್ದ ಬಸ್‌ ಅನ್ನು ತೆರವು ಮಾಡಲಾಗಿದೆ.

ಡಿವೈಡರ್‌ಗೆ ಕಾರು ಡಿಕ್ಕಿ ಇಬ್ಬರು ಸಾವು

ವಿಜಯನಗರ: ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ (Road Accident).

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bangalore–Mysore Expressway
ಕರ್ನಾಟಕ10 mins ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

karnataka Weather Forecast
ಮಳೆ10 mins ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Rain Effect
ಕೊಡಗು21 mins ago

Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Breakfast Tip
ಆರೋಗ್ಯ36 mins ago

Breakfast Tips: ಬೆಳಗಿನ ಉಪಾಹಾರಕ್ಕೆ ಈ 5 ಬಗೆಯ ಆಹಾರಗಳನ್ನು ಸೇವಿಸಬೇಡಿ!

Ravindra jadeja
ಪ್ರಮುಖ ಸುದ್ದಿ51 mins ago

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

IND vs SA Final
ಕ್ರೀಡೆ1 hour ago

IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

Kids Fashion: Bunny Ears Head Bands for Kids' Cute Look!
ಫ್ಯಾಷನ್1 hour ago

Kids Fashion: ಮಕ್ಕಳ ಕ್ಯೂಟ್‌ ಲುಕ್‌ಗೆ ಸಾಥ್‌ ನೀಡುವ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್!

T20 World Cup 2024
ಕ್ರಿಕೆಟ್1 hour ago

T20 World Cup 2024 : ಚಾಂಪಿಯನ್ ಭಾರತಕ್ಕೆ ಪಾಕಿಸ್ತಾನ ಆಟಗಾರರು ಶುಭ ಕೋರಿದ್ದು ಹೀಗೆ…

Samarjit Lankesh gowri movie kannada release date announce
ಸ್ಯಾಂಡಲ್ ವುಡ್1 hour ago

Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

kidnap Case
ಬೆಂಗಳೂರು1 hour ago

Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ10 mins ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು5 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌