Site icon Vistara News

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

physical abuse mandya

ಮಂಡ್ಯ: ಅಪ್ರಾಪ್ತ ವಯಸ್ಸಿನ ಮಗಳನ್ನು ಅಪ್ಪನೇ ಗರ್ಭಿಣಿ (Physical abuse) ಮಾಡಿರುವ ಆರೋಪ ಮಂಡ್ಯ (Mandya news) ಗುತ್ತಲಿನ ಮುನೀರ್‌ ಎಂಬಾತನ ಮೇಲೆ ಬಂದಿದೆ. ಈ ಕೃತ್ಯದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮುನೀರ್‌ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಡ್ಯ ನಗರದ ಗುತ್ತಲಿನಲ್ಲಿ ಈ ಘಟನೆ ನಡೆದಿದೆ. ಮುನೀರ್ ತನ್ನ ಅಪ್ರಾಪ್ತ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ್ದಾನೆ. ಗರ್ಭಿಣಿಯಾದ ಬಾಲಕಿ ನಿನ್ನೆ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಇದನ್ನು ಕೇಳಿ ಕೆರಳಿ ಕೆಂಡವಾದ ಗ್ರಾಮಸ್ಥರು ಮುನೀರ್‌ಗೆ ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಮುನೀರ್‌ನನ್ನು ಪ್ರಶ್ನಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರ ತಿಳಿದ ಮಂಡ್ಯ ಈಸ್ಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರ ಕೈಯಿಂದ ಆರೋಪಿ ಮುನೀರ್‌ನನ್ನು ಬಿಡಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಮಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

ಇಸ್ಪೀಟ್‌ ಅಡ್ಡೆ ಮೇಲೆ ದಾಳಿ; 11 ಜನ ಆರೋಪಿಗಳ ಬಂಧನ

ಶಿರಾ: ಇಸ್ಪೀಟ್‌ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, 11 ಆರೋಪಿಗಳನ್ನು ಬಂಧಿಸಿ, 1,06,180 ರೂ. ನಗದು, 13 ಮೊಬೈಲ್ ಹಾಗೂ 7 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮಾಗೋಡು ಕೆರೆ ಬಳಿಯ ದೊಡ್ಡನಹಳ್ಳಿ ಗ್ರಾಮದ ಸಮೀಪದಲ್ಲಿ ಭಾನುವಾರ (Gambling Case) ಈ ಘಟನೆ ನಡೆದಿದೆ.

ಖಚಿತ ಮಾಹಿತಿಯ ಮೇರೆಗೆ ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ, ಇಸ್ಪೀಟ್‌ ಜೂಜಾಟದಲ್ಲಿ ತೊಡಗಿದ್ದ 11 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 1,06,180 ರೂ. ನಗದು, 13 ಮೊಬೈಲ್‌ಗಳು ಹಾಗೂ ಏಳು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಹಾಗೂ ಸಿಬ್ಬಂದಿ ನಡೆಸಿದ ಈ ದಾಳಿಗೆ ಶಿರಾ ತಾಲೂಕಿನ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Exit mobile version