ದಿಸ್‌ಪುರ್: ಅಸ್ಸಾಂನ ಧಿಂಗ್ (Assam’s Dhing)ನಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ ಮೂವರು ಆರೋಪಿಗಳ ಪೈಕಿ ಓರ್ವ ಶನಿವಾರ ಬೆಳಿಗ್ಗೆ ಕೆರೆಗೆ ಹಾರಿ ಸಾವನ್ನಪ್ಪಿದ್ದಾನೆ. ಪೊಲೀಸ್ ತಂಡವು ಆತನ ಕೈಗೆ ಕೋಳ ತೊಡಿಸಿ ಕೃತ್ಯ ಎಸಗಿದ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾಗ ಕೆರೆಗೆ ಹಾರಿ ಸತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
ʼʼಶುಕ್ರವಾರ (ಆಗಸ್ಟ್ 23) ಬಂಧಿಸಲ್ಪಟ್ಟ ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಕೊಳಕ್ಕೆ ಹಾರಿ ಸಾವನ್ನಪ್ಪಿದ್ದಾನೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
#WATCH | The body of the prime accused of the Dhing gang rape incident in Assam's Nagaon district, Tafazul Islam recovered from a pond. The police had earlier arrested him in connection with the case.
— ANI (@ANI) August 24, 2024
"When a police team took him last night to the spot for investigation where… pic.twitter.com/ow29EJ37j7
ಘಟನೆಯ ಹಿನ್ನೆಲೆ
ಅಸ್ಸಾಂನ ನಾಗಾಂವ್ ಜಿಲ್ಲೆಯ ಧಿಂಗ್‌ನಲ್ಲಿ ಗುರುವಾರ (ಆಗಸ್ಟ್ 22) 14 ವರ್ಷದ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಕೊಳದ ಬಳಿಯ ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಸ್ಥಳೀಯರು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಈ ಘೋರ ಕೃತ್ಯ ಬೆಳಕಿಗೆ ಬಂದಿತ್ತು. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು ಎಂದು ಬಳಿಕ ಪೊಲೀಸರು ಮಾಹಿತಿ ನೀಡಿದ್ದರು.
ಪೊಲೀಸರು ಹೇಳಿದ್ದೇನು?
ಇಂದು ಮುಂಜಾನೆ 3.30ರ ಸುಮಾರಿಗೆ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆರೋಪಿಯನ್ನು ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಆತ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ” ತಫಾಜುಲ್ ಇಸ್ಲಾಂ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಕೊಳಕ್ಕೆ ಹಾರಿದ್ದಾನೆ. ತಕ್ಷಣವೇ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತಾದರೂ ಕಾಪಾಡಲು ಸಾಧ್ಯವಾಗಲಿಲ್ಲ. ಸುಮಾರು ಎರಡು ಗಂಟೆಗಳ ನಂತರ ಆತನ ಶವ ಪತ್ತೆಯಾಯ್ತು” ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಆರೋಪಿಗಳ ಪೈಕಿ ಇಬ್ಬರನ್ನು ಈಗಾಗಲೇ ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಮೂರನೆಯವನಿಗಾಗಿ ಬಲೆ ಬೀಸಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ: Sexual Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!
ಶಾಲೆಗಳಲ್ಲಿ ಫೇಕ್ ಕ್ಯಾಂಪ್ ಆಯೋಜಿಸಿ ಅತ್ಯಾಚಾರ; ಆರೋಪಿ ಆತ್ಮಹತ್ಯೆ
ಚೆನ್ನೈ: ತಮಿಳುನಾಡಿನಲ್ಲಿ ನಕಲಿ ಎನ್‌ಸಿಸಿ ಕ್ಯಾಂಪ್(Fake NCC camp) ಆಯೋಜಿಸಿ ಬಾಲಕಿ ಮೇಲೆ ಅತ್ಯಾಚಾರ(Sexual assault) ಮತ್ತು ಇತರ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ಎಸಗುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಶುಕ್ರವಾರ (ಆಗಸ್ಟ್ 23) ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮಿಳುನಾಡಿನ ಬಾರ್ಗರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಿವರಾಮನ್ ಎಂಬಾತ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್ ತಮಿಳರ್ ಕಚ್ಚಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಶಿವರಾಮನ್ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ದಾಖಲಾಗಿತ್ತು. ಆ. 19ರಂದು ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ ಅದಕ್ಕೂ ಮುನ್ನ ಆತ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಅತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಶುಕ್ರವಾರ ಆತ ಕೊನೆಯುಸಿರೆಳೆದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.