ಕುಮಟಾ: ಕುಮಟಾ ಪಟ್ಟಣದ ಮಸೀದಿಯೊಂದರ ಮೌಲಾನ ಖುರಾನ್ ಓದಲು ಮಸೀದಿಗೆ ಬರುತ್ತಿದ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ (Assault Case) ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳದ ಮೌಲಾನಾ ಅಬ್ಬುಸ್ ಸಮದ್ ಜಿಯಾಯಿ (25) ಎಂಬುವವನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ (Pocso Case) ದಾಖಲಾಗಿದೆ. ಅಲ್ಲದೆ, ಆರೋಪಿಯನ್ನು (Maulana arrested) ಬಂಧಿಸಲಾಗಿದೆ.
ಸೆ.23ರ ರಾತ್ರಿ 8 ಗಂಟೆ ಸುಮಾರಿಗೆ ಖುರಾನ್ ಓದಲು ಬಂದ ಬಾಲಕನ ಬಟ್ಟೆ ಕಳಚಿ, ಗುಪ್ತಾಂಗ ಸ್ಪರ್ಶಿಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕನ ತಂದೆ ನೀಡಿದ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಕೆಲವು ದಿನಗಳ ಹಿಂದೆಯೂ ಸಹ ಇದೇ ರೀತಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಬಾಲಕನ ತಂದೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಕುಮಟಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ಬಳಿಕ ಆರೋಪಿಯನ್ನು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ. ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಇದನ್ನೂ ಓದಿ: Auto Drivers : ಡಬಲ್ ಮೀಟರ್ ಕೇಳಿದ, ಕರೆದ ಕಡೆ ಬಾರದ ಆಟೋ ಡ್ರೈವರ್ಸ್ ಮೇಲೆ 670 ಕೇಸ್!
ಧರ್ಮಗುರುಗಳ ಸ್ಥಾನದಲ್ಲಿರುವ ಮೌಲಾನ ಖುರಾನ್ ಅಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳ ಮೇಲೆ ಈ ರೀತಿಯ ಲೈಂಗಿಕ ದೌರ್ಜನ್ಯ ಎಸಗಿದರೆ, ಮಸೀದಿ ಹಾಗೂ ಧರ್ಮಗುರುಗಳ ಮೇಲೆ ಅಪವಿಶ್ವಾಸ ಮೂಡುವಂತಾಗುತ್ತದೆ. ಇಂಥ ಮೌಲಾನಾಗೆ ತಕ್ಕ ಶಾಸ್ತಿ ಮಾಡಬೇಕೆಂದು ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಟಿ ಎಂದವನಿಗೆ ಚಪ್ಪಲಿಯಿಂದ ಹೊಡೆದಳು!
ಬೆಂಗಳೂರು: ಆಂಟಿ ಎಂದಿದ್ದಕ್ಕೆ ಮಹಿಳೆಯೊಬ್ಬರು ಸಿಟ್ಟಾಗಿ ಸೆಕ್ಯೂರಿಟಿ ಗಾರ್ಡ್‌ಗೆ ಚಪ್ಪಲಿಯಿಂದ (Assault Case) ಹೊಡೆದಿದ್ದಾರೆ. ಬೆಂಗಳೂರಿನ (Bengaluru News) ಮಲ್ಲೇಶ್ವರಂನಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಎಂಬಾಕೆ ಸೆಕ್ಯುರಿಟಿ ಗಾರ್ಡ್ ಕೃಷ್ಣಯ್ಯ (64) ಎಂಬುವವರಿಗೆ ಹಲ್ಲೆ ನಡೆಸಿದ್ದಾರೆ.
ಕೃಷ್ಣಯ್ಯ ಅವರು ರಾಜಾಜಿನಗರದಲ್ಲಿರುವ ಪೊಲೈಟ್ ಎಂಬ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಸೆಪ್ಟೆಂಬರ್ 19ರಂದು ಎಲ್ಲ ಬ್ಯಾಂಕ್‌ನ ಎಟಿಎಂಗೆ ಹಣ ಹಾಕುವಾಗ ಕೃಷಯ್ಯ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದರು. ಅಂದು ಮಲ್ಲೇಶ್ವರಂನ ಐಸಿಐಸಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಹಾಕುತ್ತಿದ್ದಾಗ ಅಡ್ಡ ನಿಂತಿದ್ದ ಅಶ್ವಿನಿಗೆ ʻಆಂಟಿ ಸ್ವಲ್ಪ ಪಕ್ಕಕ್ಕೆ ಬನ್ನಿʼ ಎಂದಿದ್ದಾರೆ. ಇಷ್ಟಕ್ಕೆ ಸಿಟ್ಟಾದ ಮಹಿಳೆ ʻನನ್ನ ಆಂಟಿ ಅಂತೀಯಾʼ ಎಂದು ಅವಾಚ್ಯ ಶಬ್ಧದಿಂದ ಸೆಕ್ಯುರಿಟಿ ಗಾರ್ಡ್ ಕೃಷ್ಣಯ್ಯರಿಗೆ ನಿಂಧಿಸಿದ್ದಾರೆ.
ಮಾತ್ರವಲ್ಲದೆ ಕಪಾಳಕ್ಕೆ ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿ, ದಾಂಧಲೆ ಮಾಡಿದ್ದಾಳೆ. ಜತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆಯನ್ನು ಹಾಕಿದ್ದಾರೆ. ಈ ಮಧ್ಯೆ ಸಾರ್ವಜನಿಕರು ಮಧ್ಯ ಪ್ರವೇಶಿ ಗಲಾಟೆಯನ್ನು ಬಿಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: Bandipur National Park: ಬಂಡಿಪುರಕ್ಕೂ ಜಲಕ್ಷಾಮ; 31 ಕೆರೆಗಳು ಖಾಲಿ ಖಾಲಿ!
ಮಹಿಳೆ ವಿರುದ್ಧ ಎಫ್‌ಐಆರ್ ದಾಖಲು
ಅಶ್ವಿನಿ ವಿರುದ್ಧ ಸಂತ್ರಸ್ತ ಕೃಷ್ಣಯ್ಯ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಐಫ್‌ಐಆರ್ ದಾಖಲಾಗಿದೆ. ಅಶ್ವಿನಿ ವಿರುದ್ದ IPC 506. 504. 324. 355 ಅಡಿ ಕೇಸ್ ದಾಖಲಾಗಿದೆ. ಪೊಲೀಸರು ಪ್ರತ್ಯಕ್ಷದರ್ಶಿಗಳ ಹೇಳಿಕೆ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.