Site icon Vistara News

Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

police firing hubli robber

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli News) ಮತ್ತೆ ಪೊಲೀಸ್ ರಿವಾಲ್ವರ್ ಸದ್ದು ಮಾಡಿದೆ. ತಪ್ಪಿಸಿಕೊಂಡು ಓಡಲು ಯತ್ನಿಸಿದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿ (Police Firing) ಬಂಧಿಸಿದ್ದಾರೆ.

ದರೋಡೆ ಪ್ರಕರಣದ (Robbery Case) ಆರೋಪಿ ಸೋನು ನಾಯಕ್ ಗುಂಡೇಟು ತಿಂದು ಗಾಯಗೊಂಡವನು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿದೆ. ಹುಬ್ಬಳ್ಳಿಯ ಎಂಟಿಎಸ್‌ ಕಾಲೊನಿ ಬಳಿ ಘಟನೆ ನಡೆದಿದೆ. ಕಳ್ಳತನ, ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೋನು ನಾಯಕ್ ಮೇಲೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಸ್ಥಳಕ್ಕೆ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ. ಗಾಯಾಳು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗದಗದಲ್ಲಿ ರೌಡಿಶೀಟರ್‌ಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ (Assault Case) ಎಸ್ಕೇಪ್ ಆಗಲು ಯತ್ನಿಸಿದ ರೌಡಿ ಶೀಟರ್ (Rowdy Sheeter) ಮೇಲೆ ಪೊಲೀಸರು ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಘಟನೆ ನಡೆದಿದೆ.

ರಾಬರಿ‌ ಕೇಸ್‌ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ರೌಡಿ ಶೀಟರ್‌ ಸಂಜಯ್ ಕೊಪ್ಪದ ಹಲ್ಲೆಗೆ ಯತ್ನಿಸಿದ್ದ. ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಸಂಜಯ್ ಮೇಲೆ ಪಿಎಸ್‌ಐ ಸಂಗಮೇಶ್ ಶಿವಯೋಗಿ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಕೈ, ಕಾಲಿಗೆ ಗಾಯಗಳಾಗಿವೆ. ಸಂಜಯ್ ವಿರುದ್ಧ ರಾಬರಿ, ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿವೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್ ಹಾಗೂ ಪಿಸಿ ಪ್ರಕಾಶ್‌ಗೆ ಜಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಲೆ ಆರೋಪಿಯ ಕಾಲಿಗೆ ಫೈರ್‌ ಮಾಡಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Exit mobile version