Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ - Vistara News

ಕ್ರೈಂ

Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ

Police Firing: ರಾಬರಿ‌ ಕೇಸ್‌ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ರೌಡಿ ಶೀಟರ್‌ ಸಂಜಯ್ ಕೊಪ್ಪದ ಹಲ್ಲೆಗೆ ಯತ್ನಿಸಿದ್ದ. ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಸಂಜಯ್ ಮೇಲೆ ಪಿಎಸ್‌ಐ ಸಂಗಮೇಶ್ ಶಿವಯೋಗಿ ಗುಂಡು ಹಾರಿಸಿದ್ದಾರೆ.

VISTARANEWS.COM


on

police firing gadag
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ (Assault Case) ಎಸ್ಕೇಪ್ ಆಗಲು ಯತ್ನಿಸಿದ ರೌಡಿ ಶೀಟರ್ (Rowdy Sheeter) ಮೇಲೆ ಪೊಲೀಸರು ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಘಟನೆ ನಡೆದಿದೆ.

ರಾಬರಿ‌ ಕೇಸ್‌ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ರೌಡಿ ಶೀಟರ್‌ ಸಂಜಯ್ ಕೊಪ್ಪದ ಹಲ್ಲೆಗೆ ಯತ್ನಿಸಿದ್ದ. ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಸಂಜಯ್ ಮೇಲೆ ಪಿಎಸ್‌ಐ ಸಂಗಮೇಶ್ ಶಿವಯೋಗಿ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಕೈ, ಕಾಲಿಗೆ ಗಾಯಗಳಾಗಿವೆ. ಸಂಜಯ್ ವಿರುದ್ಧ ರಾಬರಿ, ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿವೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್ ಹಾಗೂ ಪಿಸಿ ಪ್ರಕಾಶ್‌ಗೆ ಜಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಲೆ ಆರೋಪಿಯ ಕಾಲಿಗೆ ಫೈರ್‌ ಮಾಡಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅರ್ಚಕ ಬಂಧನ

ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

Sexual Abuse: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಮನೆಗೆ ಹಿಂದಿರುಗುತ್ತಿದ್ದಾಗ ಮೊಯೀದ್‌ ಖಾನ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ ಖಾನ್‌ ಸಂತ್ರಸ್ತೆಗೆ ಟೋಸ್ಟ್ ನೀಡುವ ಮೂಲಕ ತನ್ನ ಅಂಗಡಿಗೆ ಕರೆದೊಯ್ದಿದ್ದ. ನಂತರ ಮೋಯಿದ್‌ ಖಾನ್‌ ಮತ್ತು ರಾಜ ಖಾನ್‌ ಇಬ್ಬರೂ ಅಂಗಡಿಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಬಳಿಕ ಇದನ್ನು ವಿಡಿಯೊ ರೆಕಾರ್ಡ್‌ ಮಾಡಿಕೊಂಡು ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿ ಆದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

VISTARANEWS.COM


on

Sexual Abuse
Koo


ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಮಾಜವಾದಿ ಪಕ್ಷದ ಮುಖಂಡ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜು ಖಾನ್ ಕೆಲವು ತಿಂಗಳ ಹಿಂದೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Abuse) ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಅಪ್ರಾಪ್ತ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಅವರು ಆ ಘೋರ ಅಪರಾಧವನ್ನು ವಿಡಿಯೊ ಮಾಡಿ ಆ ಅಶ್ಲೀಲ ವಿಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ, ಅವರು 2 ತಿಂಗಳಿಗೂ ಹೆಚ್ಚು ಕಾಲ ಅವಳನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು ಎನ್ನಲಾಗಿದೆ. ಕೊನೆಗೆ ಆಕೆಯ ಆರೋಗ್ಯ ಹದಗೆಟ್ಟು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವಳು ಗರ್ಭಿಣಿಯಾದ ವಿಚಾರ ಬೆಳಕಿಗೆ ಬರುವ ಮೂಲಕ ಕುಟುಂಬಕ್ಕೆ ಆಕೆಯ ಮೇಲೆ ನಡೆಯುತ್ತಿರುವ ಅಪರಾಧದ ಬಗ್ಗೆ ತಿಳಿದು ಬಂದಿದೆ.

ಆದರೆ ಈ ಬಗ್ಗೆ ಭದರ್ಸಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೇ 2012ರಿಂದ ಈ ಪೊಲೀಸ್ ಠಾಣೆಯು ಆರೋಪಿ ಎಸ್ಪಿ ನಾಯಕ ಮೊಯೀದ್ ಖಾನ್ ಅವರ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಲಾಗಿದೆ. ವರದಿಗಳ ಪ್ರಕಾರ ಅಯೋಧ್ಯೆಯ ಪುರ ಕಲಂದರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜುಲೈ 30, 2024 ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಎಸ್ಪಿ ನಾಯಕ ಮೊಯೀದ್ ಖಾನ್ ಮತ್ತು ಅವರ ಸೇವಕ ರಾಜು ಅವರನ್ನು ಬಂಧಿಸಿದ್ದಾರೆ.

ವರದಿ ಪ್ರಕಾರ ಆರೋಪಿ ಎಸ್ಪಿ ನಾಯಕ ಖಾನ್ ಭದರ್ಸಾ ಹೊರ ಠಾಣೆ ಬಳಿ ಬೇಕರಿ ಅಂಗಡಿಯನ್ನು ಹೊಂದಿದ್ದಾರೆ. ಸಂತ್ರಸ್ತೆ ಕಾರ್ಮಿಕ ಕುಟುಂಬ ಮತ್ತು ಒಬಿಸಿ ಸಮುದಾಯಕ್ಕೆ ಸೇರಿದ್ದು, ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಾಳೆ. ಅಪ್ರಾಪ್ತ ಬಾಲಕಿಯ ಮನೆಗೆ ಹಿಂದಿರುಗುತ್ತಿದ್ದಾಗ, ಮೊಯೀದ್‍ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ ಖಾನ್‌ ಸಂತ್ರಸ್ತೆಗೆ ಟೋಸ್ಟ್ ನೀಡುವ ಮೂಲಕ ತನ್ನ ಅಂಗಡಿಗೆ ಕರೆದೊಯ್ದನು. ಅವಳು ಈ ಹಿಂದೆಯೂ ಅಂಗಡಿಗೆ ಹೋಗುತ್ತಿದ್ದರಿಂದ, ಅವಳು ಅವನನ್ನು ನಂಬಿ ಅಲ್ಲಿಗೆ ಹೋದಳು.

ಇಬ್ಬರೂ ಆರೋಪಿಗಳು ಅಂಗಡಿಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಇಡೀ ಘಟನೆಯ ಅಶ್ಲೀಲ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ, ಅವರು 2 ತಿಂಗಳಿಗೂ ಹೆಚ್ಚು ಕಾಲ ಅಪ್ರಾಪ್ತೆಯ ಮೇಲೆ ಲೈಂಗಿಕ ಶೋಷಣೆ ಮುಂದುವರಿಸಿದರು. ನಿರಂತರ ಲೈಂಗಿಕ ಶೋಷಣೆಯ ಪರಿಣಾಮವಾಗಿ, ಸಂತ್ರಸ್ತೆ ಗರ್ಭಿಣಿಯಾದಳು. ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದಾಗ, ಅವಳ ತಾಯಿಗೆ ಅನುಮಾನ ಬಂತು. ನಂತರ ಅವಳು ಇಡೀ ಘಟನೆಯನ್ನು ತನ್ನ ತಾಯಿಗೆ ವಿವರಿಸಿದಳು, ನಂತರ ಅವಳು ಈ ವಿಷಯದಲ್ಲಿ ಪೊಲೀಸ್ ದೂರು ದಾಖಲಿಸಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಹಿಂದೂ ಸಂಘಟನೆಗಳು ಬಾಲಕಿಯ ಬೆಂಬಲಕ್ಕೆ ಬಂದರು. ಬಿಜೆಪಿ ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ನಿಷಾದ್ ಪಕ್ಷದ ಸದಸ್ಯರು ಸಹ ಪೊಲೀಸ್ ಠಾಣೆಗೆ ಬಂದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಖಾನ್ ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಅವರ ಆಪ್ತರಾಗಿದ್ದು, ಭದರ್ಸಾ ಪ್ರದೇಶದ ಪಕ್ಷದ ನಗರ ಅಧ್ಯಕ್ಷರಾಗಿದ್ದಾರೆ. ವರದಿಗಳ ಪ್ರಕಾರ, ಖಾನ್ ಅವರ ನಿಯಂತ್ರಣದಲ್ಲಿ ಭದರ್ಸಾ ಪೊಲೀಸ್ ಠಾಣೆ ಹಾಗೂ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ. ಹಾಗಾಗಿ ದೂರು ದಾಖಲಿಸಿದ ನಂತರ, ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ನಿರಂತರ ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಅಲ್ಲದೇ ಅವರು ಬಡ ಕುಟುಂಬಕ್ಕೆ ಸೇರಿದ್ದರಿಂದ ಇದರ ಲಾಭ ಪಡೆದು ಆ ಜನರು ತನ್ನ ಮಗಳ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ಥೆಯ ತಾಯಿ ಗೋಳಾಡಿದ್ದಾರೆ.

ಇದನ್ನೂ ಓದಿ: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

ಇದೀಗ ಎಸ್ಪಿ ನಾಯಕ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜ ಖಾನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಏತನ್ಮಧ್ಯೆ, ಖಾನ್ ಅವರ ಬೇಕರಿ ಅಂಗಡಿಯಲ್ಲಿ ಸರಿಯಾದ ದಾಖಲೆಗಳಿವೆಯೇ ಅಥವಾ ಇಲ್ಲವೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Continue Reading

ಚಿಕ್ಕಬಳ್ಳಾಪುರ

Road Accident : ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್‌ ಸವಾರರು

Road Accident : ಚಿಕ್ಕಬಳ್ಳಾಪುರದಲ್ಲಿ ಲಾರಿ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಯುವಕರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯಪುರದಲ್ಲೂ ಟಂಟಂ ಹಾಗೂ ಬೈಕ್‌ ಮಧ್ಯೆ ಡಿಕ್ಕಿಯಾಗಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ಚಿಕ್ಕಬಳ್ಳಾಪುರ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.

ಚಿಂತಾಮಣಿ ತಾಲೂಕಿನ ಭುವನ್ (30) ಹಾಗೂ ಭಾನು ಪ್ರಕಾಶ್ (30) ಮೃತ ದುರ್ದೈವಿಗಳು. ಹೊಸಕೋಟೆ ಪಿಲ್ಲಗುಂಪೆ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ವಾಪಸ್‌ ಮನೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್‌ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಟಂಟಂ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ

ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿ ಟಂಟಂ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಬೈಕ್, ಟಂಟಂ ಸಂಪೂರ್ಣವಾಗಿ ಜಖಂಗೊಂಡಿದೆ. ವಿಜಯಪುರ ಸಂಚಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

ಕುಡಿತಕ್ಕೆ ಬಲಿಯಾದ ಬೊಲೆರೋ ಚಾಲಕ

ಸರ್ಕಾರಿ ಬಸ್ ಹಾಗೂ ಬೊಲೆರೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ವಿಜಯಪುರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ಎನ್ಎಚ್ 52 ರಲ್ಲಿ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಸ್‌ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿಯಿಂದ ಎರ್ಟಿಗಾ ಕಾರಿಗೂ ಗುದ್ದಿದೆ. ಸದ್ಯ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಬೊಲೆರೋ ವಾಹನದ ಚಾಲಕ ಮಧ್ಯದ ಅಮಲಿನಲ್ಲಿ ವೇಗವಾಗಿ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇನ್ನೂ ಅಪಘಾತದ ಕಾರಣ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತಕ್ಕೀಡಾದ ವಾಹನಗಳ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

Bengaluru News : ಓದು-ಬರಹ ಅಂತ ಇರಬೇಕಾದ ಬಾಲಕಿ ಪ್ರೀತಿಗೆ (Love) ಬಿದ್ದಿದ್ದಳು. ಪ್ರೀತಿ ಎಂಬ ಮಾಯೆಗೆ ಸಿಲುಕಿ ಪೋಷಕರ ವಿರೋಧದ ನಡುವೆಯು ಮದುವೆಯಾಗಿದ್ದಳು. ಆದರೆ ಕೇವಲ ಒಂದೆರಡು ವರ್ಷಗಳ ಅಂತರದಲ್ಲೇ ಪತಿ ಕಿರುಕುಳಕ್ಕೆ (Husband harassment) ಬೇಸತ್ತು ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾಳೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಯಸ್ಸಲ್ಲದ ವಯಸ್ಸಲ್ಲಿ ಲವ್ ಮಾಡಿ ಮದುವೆಯಾದ (Love marriage) ಬಾಲಕಿಯೊಬ್ಬಳು ಇದೀಗ ಸಾವಿನ ಕಾದ ತಟ್ಟಿದ್ದಾಳೆ. ಬಾಲಕಿ ಜೀವನದಲ್ಲಿ ಪ್ರೀತಿ ಎಂಬ ಎರಡಕ್ಷರ ಬಿರುಗಾಳಿಯಂತೆ ಅಪ್ಪಳಿಸಿತ್ತು. 15ನೇ ವರ್ಷಕ್ಕೆ ಮದುವೆಯಾದವಳು, 17ನೇ ವರ್ಷಕ್ಕೆ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ.

ಪತಿ ಕಿರುಕುಳಕ್ಕೆ ಬೇಸತ್ತು (Husband harassment) ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ಯುವಕನನ್ನು ಪ್ರೀತಿಸಿದ್ದ 17 ವರ್ಷದ ಬಾಲಕಿ, ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದಳು.

ವಿವಾಹ ಬಳಿಕ ದಂಪತಿಗೆ ಒಂದು ಮಗು ಜನನವಾಗಿತ್ತು. ಆದರೆ ಇತ್ತೀಚೆಗೆ ಪತಿ- ಪತ್ನಿಗೆ ಕಿರುಕುಳ ನೀಡುವುದು ಹೆಚ್ಚಾಗಿತ್ತು. ಇದೇ ವಿಚಾರಕ್ಕೆ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸದ್ಯ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Ismail Haniyeh: ಇಸ್ರೇಲ್‌ ಮೇಲೆ ನಡೆಯುತ್ತಾ ಭಾರೀ ಏರ್‌ಸ್ಟ್ರೈಕ್‌? ಹನಿಯೆಹ್‌ ಹತ್ಯೆ ಪ್ರತೀಕಾರಕ್ಕೆ ಇರಾನ್‌ ಸಜ್ಜು

ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗದ ಜೆಎಂಐಟಿ ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವೇಶ್ವರ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮನೋಜ್ (22) ಮೃತ ದುರ್ದೈವಿ.

ಚೆನ್ನರಾಯಪಟ್ಟಣ ಮೂಲದ ಮನೋಜ್ ಹಾಸ್ಟೆಲ್‌ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದ. ಎಂಬಿಬಿಎಸ್‌ ಓದಲು ಆಗುತ್ತಿಲ್ಲ, ಒತ್ತಡ ಆಗುತ್ತಿದೆ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನೋಜ್ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಜತೆಗೆ ಪೋಷಕರಿಗೆ ಕ್ಷಮೆ ಕೇಳಿದ್ದಾನೆ. ಡೆತ್ ನೋಟ್ ಬರೆದಿಟ್ಟು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಎಎಸ್‌ಪಿ ಕುಮಾರಸ್ವಾಮಿ ಹಾಗೂ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಅವರಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Yashashree Shinde Murder: ಮುಂಬಯಿಯ ಯಶಶ್ರೀ ಶಿಂಧೆಯನ್ನು ಕರ್ನಾಟಕದ ದಾವೂದ್ ಶೇಖ್ ಕೊಂದಿದ್ದು ಹೇಗೆ? ಆಘಾತಕಾರಿ ಮಾಹಿತಿ

Yashashree Shinde Murder: ತನ್ನೊಂದಿಗೆ ಕರ್ನಾಟಕಕ್ಕೆ ಓಡಿಬಂದು ಮದುವೆಯಾಗುವಂತೆ ದಾವೂದ್‌ ಶೇಖ್, ಯಶಸ್ರೀಯನ್ನು ಸದಾ ಒತ್ತಾಯಿಸುತ್ತಿದ್ದ. ಆದರೆ ಆಕೆ ಆತನೊಂದಿಗೆ ಹೋಗಲು ಸಿದ್ಧಳಿರಲಿಲ್ಲ. ಹಲವಾರು ಸಲ ಆತನ ನಂಬರ್‌ ಅನ್ನು ಆಕೆ ಬ್ಲಾಕ್‌ ಮಾಡಿದ್ದಳು.

VISTARANEWS.COM


on

Hindu Girl Murder
Koo

ಮುಂಬಯಿ: ಮುಂಬಯಿಯ ಉರಾನ್‌ನ 20 ವರ್ಷದ ಯಶಶ್ರೀ ಶಿಂಧೆಯನ್ನು (yashashree shinde Murder) ಕೊಲೆ ಮಾಡಿದ 23 ವರ್ಷದ ಕೊಲೆಪಾತಕಿ ದಾವೂದ್ ಶೇಖ್ (Dawood Sheik), ಸಂತ್ರಸ್ತೆಯನ್ನು ಕರ್ನಾಟಕಕ್ಕೆ ಕರೆದೊಯ್ದು ಮದುವೆಯಾಗಲು ಬಯಸಿದ್ದ ಎಂಬುದು ಇದೀಗ ಗೊತ್ತಾಗಿದೆ. ಆಕೆ ನಿರಾಕರಿಸಿದ್ದರಿಂದ ಇರಿದು ಕೊಲೆ ಮಾಡಿದ್ದಾನೆ.

ತನ್ನೊಂದಿಗೆ ಕರ್ನಾಟಕಕ್ಕೆ ಓಡಿಬಂದು ಮದುವೆಯಾಗುವಂತೆ ದಾವೂದ್‌ ಶೇಖ್, ಯಶಸ್ರೀಯನ್ನು ಸದಾ ಒತ್ತಾಯಿಸುತ್ತಿದ್ದ. ಆದರೆ ಆಕೆ ಆತನೊಂದಿಗೆ ಹೋಗಲು ಸಿದ್ಧಳಿರಲಿಲ್ಲ. ಹಲವಾರು ಸಲ ಆತನ ನಂಬರ್‌ ಅನ್ನು ಆಕೆ ಬ್ಲಾಕ್‌ ಮಾಡಿದ್ದಳು. ಹೀಗಾಗಿ ಕುಪಿತಗೊಂಡು ಜುಲೈ 25ರಂದು ಮಧ್ಯಾಹ್ನ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಡಿಸಿಪಿ (ಅಪರಾಧ) ಅಮಿತ್ ಕಾಳೆ ಹೇಳಿದ್ದಾರೆ.

ಸಂತ್ರಸ್ತೆಯ ಕುಟುಂಬವು 2019ರಲ್ಲಿಯೇ ತಮ್ಮ ಮಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಶೇಖ್ ವಿರುದ್ಧ ದೂರು ದಾಖಲಿಸಿತ್ತು. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಶೇಖ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಒಂದೂವರೆ ತಿಂಗಳು ಜೈಲಿನಲ್ಲಿ ಕಳೆದಿದ್ದ. ಜಾಮೀನು ಪಡೆದ ನಂತರ ಶೇಖ್ 2019ರಲ್ಲಿ ಉರಾನ್‌ನಲ್ಲಿ ಸ್ವಲ್ಪ ಸಮಯ ಕಳೆದಿದ್ದ. COVID-19 ಸಾಂಕ್ರಾಮಿಕದ ಸಮಯದಲ್ಲಿ ಕರ್ನಾಟಕಕ್ಕೆ ಮರಳಿದ್ದ. ಇಲ್ಲಿ ಗುರುತು ಬದಲಿಸಿಕೊಂಡು ಚಾಲಕನಾಗಿ ಕೆಲಸ ಮಾಡಿದ್ದ.

ಅದರ ನಡುವೆ ನಿರಂತರವಾಗಿ ಹುಡುಗಿಯೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸಿದ್ದ. ಯಶಶ್ರೀ ತನ್ನ ಫೋನ್‌ ನಂಬರ್‌ ಬ್ಲಾಕ್‌ ಮಾಡಿದ್ದಳು. ಬಳಿಕ ಆಕೆಯನ್ನು ಸಂಪರ್ಕಿಸಲು ತನ್ನ ಸಂಬಂಧಿ ಮೋಶಿನ್‌ನ ಮೊಬೈಲ್ ಅನ್ನು ಬಳಸಿದ್ದ.

ತನ್ನೊಂದಿಗೆ ಬರಲು ನಿರಾಕರಿಸಿದರೆ ಬಾಲಕಿಯನ್ನು ಕೊಲ್ಲುವ ಉದ್ದೇಶದಿಂದಲೇ ಶೇಖ್ ಜುಲೈ 23ರಂದು ಉರಾನ್‌ಗೆ ಮರಳಿದ್ದ. ತನ್ನನ್ನು ಭೇಟಿಯಾಗಬೇಕೆಂದು ಯಶಶ್ರೀಯನ್ನು ಒತ್ತಾಯಿಸಿದ್ದ. ಬೇಲಾಪುರದಲ್ಲಿ ಕೆಲಸ ಮಾಡುತ್ತಿದ್ದ ಯಶಶ್ರೀ, ಅರ್ಧ ದಿನ ರಜೆ ತೆಗೆದುಕೊಂಡು ಜುಲೈ 24ರಂದು ಮಧ್ಯಾಹ್ನ ಜೂಯಿ ನಗರ ರೈಲು ನಿಲ್ದಾಣದಲ್ಲಿ ಆತನನ್ನು ಭೇಟಿಯಾಗಿದ್ದಳು. ಜುಲೈ 25ರ ಬೆಳಿಗ್ಗೆ ತನ್ನನ್ನು ಮತ್ತೆ ಭೇಟಿಯಾಗುವಂತೆ ಶೇಖ್ ಆಕೆಯ ಮೇಲೆ ಒತ್ತಡ ಹೇರುತ್ತಲೇ ಇದ್ದ. ಅಂದು ಆತ ಫೇಸ್‌ಬುಕ್‌ನಲ್ಲಿ ಫೋಟೋವನ್ನು ಕೂಡ ಅಪ್‌ಲೋಡ್ ಮಾಡಿದ್ದ. ಅದನ್ನು ಅಳಿಸುವಂತೆ ಯಶಶ್ರೀ ವಿನಂತಿಸಿದ್ದಳು. ಆಕೆ ಮತ್ತೆ ಭೇಟಿಯಾದರೆ ಮಾತ್ರ ಫೋಟೋ ಅಳಿಸುವುದಾಗಿ, ಇಲ್ಲವಾದರೆ ವೈರಲ್‌ ಮಾಡುವುದಾಗಿ ಆತ ಬ್ಲ್ಯಾಕ್‌ಮೇಲ್‌ ಮಾಡಿದ್ದ. ನಂತರ ಭೇಟಿಯಾಗಲು ಆಕೆ ಒಪ್ಪಿದಾಗ ಆತ ಫೋಟೋ ಡಿಲೀಟ್ ಮಾಡಿದ್ದ.

ಜುಲೈ 25ರಂದು ಯಶಶ್ರೀ ಮತ್ತೆ ಅವನನ್ನು ಭೇಟಿಯಾದಳು. ತನ್ನೊಂದಿಗೆ ಕರ್ನಾಟಕಕ್ಕೆ ಬರುವಂತೆ ಶೇಖ್ ಆಕೆಯನ್ನು ಒತ್ತಾಯಿಸಿದ್ದ. ಆಕೆ ತನ್ನೊಂದಿಗೆ ಬರಲು ನಿರಾಕರಿಸಿದಾಗ ಶೇಖ್‌ ಸಿಟ್ಟಿಗೆದ್ದು ಕರ್ನಾಟಕದಿಂದ ತಂದಿದ್ದ ಚಾಕುವನ್ನು ಬಳಸಿ ಆಕೆಯನ್ನು ಹಲವಾರು ಬಾರಿ ಇರಿದು ಪರಾರಿಯಾಗಿದ್ದ. ಯಶಶ್ರೀ ಆ ಸಂದರ್ಭದಲ್ಲಿ ಸಹಾಯಕ್ಕಾಗಿ ತನ್ನ ಸ್ನೇಹಿತೆಯೊಬ್ಬಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಳು. ಆದರೆ ನೆಟ್‌ವರ್ಕ್‌ ಸಿಗದೆ ಹೋದುದರಿಂದ ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಚೂರಿಯಿಂದ ಇರಿದ ಬಳಿಕ ಶೇಖ್ ತನ್ನ ಸ್ನೇಹಿತನೊಬ್ಬನ ಬಳಿ ಹಣ ಕೇಳಿದ್ದು, ಪನ್ವೇಲ್ ರೈಲು ನಿಲ್ದಾಣದ ಬಳಿಯ ಎಟಿಎಂನಿಂದ ಹಣವನ್ನು ಡ್ರಾ ಮಾಡಿದ್ದ. ನಂತರ ಕಳಂಬೋಳಿ ವೃತ್ತಕ್ಕೆ ಆಗಮಿಸಿ ಬಸ್ಸಿನಲ್ಲಿ ಕರ್ನಾಟಕದ ಗುಲ್ಬರ್ಗಕ್ಕೆ ತೆರಳಿದ್ದ. ಜುಲೈ 30ರಂದು ಗುಲ್ಬರ್ಗ ಜಿಲ್ಲೆಯ ಶಹಾಪುರ ಬೆಟ್ಟ ಪ್ರದೇಶದಲ್ಲಿ ಶೇಖ್‌ನನ್ನು ಬಂಧಿಸಲಾಗಿತ್ತು. ಶೇಖ್‌ನನ್ನು ಪನ್ವೇಲ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಲ್ಲಿ ಆತನನ್ನು ಆಗಸ್ಟ್ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಜಾಮೀನು ರಹಿತ ವಾರಂಟ್

ಏತನ್ಮಧ್ಯೆ, ಪನ್ವೇಲ್ ನ್ಯಾಯಾಲಯವು 2019ರ ಪ್ರಕರಣದಲ್ಲಿ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆಯಡಿಯಲ್ಲಿ ಶೇಖ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಎಂದು ತಿಳಿದುಬಂದಿದೆ. ಶೇಖ್ ಒಂದೂವರೆ ತಿಂಗಳು ಜೈಲಿನಲ್ಲಿ ಕಳೆದಿದ್ದ. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಆದರೆ ಪನ್ವೇಲ್ ನ್ಯಾಯಾಲಯವು ಜುಲೈ 20, 2024ರಂದು ಅವನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಜುಲೈ 20ರಂದು ಪೊಲೀಸರು ಶೇಖ್‌ನನ್ನು ಏಕೆ ಬಂಧಿಸಲಿಲ್ಲ ಎಂದು ಕೇಳಿದಾಗ, ಆ ಬೆಳವಣಿಗೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಡಿಸಿಪಿ ಕಾಳೆ ಹೇಳಿದ್ದಾರೆ.

ಇದನ್ನೂ ಓದಿ: Hindu Girl Murder: ಯುವತಿ ಬರ್ಬರ ಕೊಲೆ ಪ್ರಕರಣ; ಹಂತಕ ದಾವೂದ್‌ ಶೇಖ್‌ ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯ ಪತ್ತೆ

Continue Reading
Advertisement
muda scam cm siddaramaiah
ಪ್ರಮುಖ ಸುದ್ದಿ5 mins ago

MUDA Scam: ಸಿಎಂಗೆ ಕಳಿಸಿದ ರಾಜ್ಯಪಾಲರ ನೋಟೀಸ್‌ ತಿರಸ್ಕರಿಸಿದ ಕ್ಯಾಬಿನೆಟ್‌, ಕಾನೂನು ಹೋರಾಟಕ್ಕೆ ನಿರ್ಣಯ

Wayanad Landslide
ದೇಶ28 mins ago

Wayanad Landslide: ವಯನಾಡಿನ ದುರಂತ ಕಥೆ: ಬದುಕಿಗಾಗಿ ಸೌದಿಗೆ ತೆರಳಿದವ ಉಳಿದ; ಕುಟುಂಬವಿಡೀ ಮಣ್ಣು ಪಾಲಾಯ್ತು

Viral Video
Latest32 mins ago

Viral Video: ಮೆಟ್ರೊದೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು! ವಿಡಿಯೊ ನೋಡಿ

Sexual Abuse
Latest45 mins ago

Sexual Abuse: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

Wayanad Landslide
ದೇಶ48 mins ago

Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

Paris Olympics:
ಕ್ರೀಡೆ54 mins ago

Paris Olympics: ಕಂಚಿನ ಪದಕ ಗೆದ್ದ ರೈಲ್ವೆ ಟಿಕೆಟ್ ಕಲೆಕ್ಟರ್ ಸ್ವಪ್ನಿಲ್‌ ಕುಸಾಲೆ

Condom Cause Cancer
Latest54 mins ago

Condom Cause Cancer: ಕಾಂಡೋಮ್, ಲೂಬ್ರಿಕೆಂಟ್‍ ಬಳಸಿದರೂ ಕ್ಯಾನ್ಸರ್‌! ಅಧ್ಯಯನ ವರದಿಯಲ್ಲಿ ಆಘಾತಕಾರಿ ಸಂಗತಿ

Supreme Court SC ST Quota
ಪ್ರಮುಖ ಸುದ್ದಿ1 hour ago

Supreme Court Sc St Quota: ಎಸ್‌ಸಿ ಎಸ್‌ಟಿ ಒಳಮೀಸಲು; ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕೇಂದ್ರದಿಂದ ರಾಜ್ಯ ಸರ್ಕಾರದ ಅಂಗಳಕ್ಕೆ ಬಂದ ಚೆಂಡು

karnataka Rain
ಮಳೆ1 hour ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌