Site icon Vistara News

Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ

police firing gadag

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ (Assault Case) ಎಸ್ಕೇಪ್ ಆಗಲು ಯತ್ನಿಸಿದ ರೌಡಿ ಶೀಟರ್ (Rowdy Sheeter) ಮೇಲೆ ಪೊಲೀಸರು ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಘಟನೆ ನಡೆದಿದೆ.

ರಾಬರಿ‌ ಕೇಸ್‌ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ರೌಡಿ ಶೀಟರ್‌ ಸಂಜಯ್ ಕೊಪ್ಪದ ಹಲ್ಲೆಗೆ ಯತ್ನಿಸಿದ್ದ. ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಸಂಜಯ್ ಮೇಲೆ ಪಿಎಸ್‌ಐ ಸಂಗಮೇಶ್ ಶಿವಯೋಗಿ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಕೈ, ಕಾಲಿಗೆ ಗಾಯಗಳಾಗಿವೆ. ಸಂಜಯ್ ವಿರುದ್ಧ ರಾಬರಿ, ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿವೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್ ಹಾಗೂ ಪಿಸಿ ಪ್ರಕಾಶ್‌ಗೆ ಜಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಲೆ ಆರೋಪಿಯ ಕಾಲಿಗೆ ಫೈರ್‌ ಮಾಡಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅರ್ಚಕ ಬಂಧನ

ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Exit mobile version