Site icon Vistara News

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Police Firing

ಹಾಸನ: ಹಾಸನದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿ ಮೇಲೆ ಫೈರಿಂಗ್‌ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿ (Police Firing).

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೂಕನಬೆಟ್ಟದ ಬಳಿ ಘಟನೆ ನಡೆದಿದೆ. ಭಾನುವಾರ ಮುಂಜಾನೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಂದ ಫೈರಿಂಗ್ ನಡೆದಿದೆ.

ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ಪ್ರಕರಣದಲ್ಲಿ ಭಾಗಿಯಗಿರುವ ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ. ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದ. ಡ್ರ್ಯಾಗನ್‌ನಿಂದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಸ್ವಯಂ ರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

ಚನ್ನರಾಯಪಟ್ಟಣ ಹಾಗೂ ಹಿರೀಸಾವೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಸದ್ಯ ಗಾಯಗೊಂಡ ಆರೋಪಿ ಸತೀಶ್‌ನನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ. ಆರೋಪಿಯಿಂದ ದಾಳಿಗೊಳಗಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜು ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಸಕ್ಕರೆನಾಡು ಮಂಡ್ಯದಲ್ಲಿಯೂ ಫೈರಿಂಗ್‌

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಧಾರವಾಡ: ಪ್ರೇಮಿಗಳಿಗೆ ಕಂಟಕವಾದ ಪಾಲಕರು

ಧಾರವಾಡ: ಪ್ರೇಮಿಗಳ ಪಾಲಿಗೆ ಅವರ ಪಾಲಕರೇ ಕಂಟಕವಾಗಿದ್ದು, ನವ ದಂಪತಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಧಾರವಾಡದ ಯುವಕ ಹಾವೇರಿ ಯುವತಿ ನಡುವಿನ ಲವ್‌ ಸ್ಟೋರಿ ಇದೀಗ ಪೊಲೀಸ್‌ ಸ್ಟೇಶನ್‌ವರೆಗೂ ಬಂದಿದೆ.

ಧಾರವಾಡದ ಶಂಭು ಹಾಗೂ ಹಾವೇರಿಯ ಶಾಲಿನಿ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದರೆ ಇವರ ಮದುವೆಗೆ ಮನೆಯವರು ಒಪ್ಪಿಕೊಂಡಿರಲಿಲ್ಲ. ಹೀಗಾಗಿ ಪೋಷಕರ ವಿರೋಧದ ನಡುವೆಯೇ ಮದುವೆ ಆಗಿದ್ದರು. ಮದುವೆಗೂ ಶಾಲಿನಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.

ಬೇರೆ ಬೇರೆ ಜಾತಿ ಆಗಿದ್ದಕ್ಕೆ ಶಾಲಿನಿ ಮನೆಯವರು ಮದುವೆಯನ್ನು ವಿರೋಧಿಸಿದ್ದರು. ಆಕೆಗೆ ಬೇರೆ ಯುವಕನ ಜತೆಗೆ ಮದುವೆ ಮಾಡಲು ಮುಂದಾಗಿದ್ದರು. ಇದೀಗ ದಂಪತಿ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ರಕ್ಷಣೆ ಕೊಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಶಾಲಿನಿಯ ಪೋಷಕರಿಂದ ನವ ಕೊಲೆ ಬೆದರಿಕೆ ಬಂದಿದೆ ಎಂದು ದೂರು ನೀಡಲಾಗಿದೆ.

ಇದನ್ನೂ ಓದಿ: Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Exit mobile version