ಮಂಗಳೂರು: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್ (Lodge) ಒಂದಕ್ಕೆ ಪೊಲೀಸರು ದಾಳಿ (Police Raid) ನಡೆಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ. ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ (ನಡೆಯುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.
ನೆಹರು ನಗರದಲ್ಲಿರುವ ಲಾಡ್ಜ್‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ- ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ತಡ ರಾತ್ರಿ ಇನೋವಾ ಕಾರಿನಲ್ಲಿ ಬಂದ ತಂಡವೊಂದಕ್ಕೆ ರೂಂ ನೀಡಿರುವುದೇ ದಾಳಿಗೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನೋವಾದಲ್ಲಿ ಬಂದ ವ್ಯಕ್ತಿಗಳ ಬಳಿ ಸರಿಯಾದ ದಾಖಲಾತಿ ಪಡೆದುಕೊಳ್ಳದೆ ರೂಂ ನೀಡಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪ ಮಾಡುತ್ತಿದ್ದಾರೆ. ಇನ್ನೊವಾದಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ಜೋಡಿ ಇತ್ತು ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ.
ಪುತ್ತೂರಿನ ಹೊರವಲಯವಾದ ನೆಹರು ನಗರದಲ್ಲಿರುವ ಈ ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪೋಲೀಸರು ರೇಡ್ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಪುತ್ತೂರು ನಗರ ಠಾಣೆ ಎಎಸ್ಐ ಅಂಜನೇಯ ರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಲಾಡ್ಜ್‌ಗೆ ತೆರಳಿ ತನಿಖೆ ನಡೆಸಿದೆ. ಈ ವೇಳೆ ಅವರು ರೂಂ ನೀಡುವಾಗ ಪಡೆದುಕೊಳ್ಳುವ ದಾಖಲಾತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ತನಿಖೆಯ ವೇಳೆ ಲಾಡ್ಜ್‌ನವರು ಯಾವುದೇ ಅಕ್ರಮ ನಡೆಸಿದ್ದು ಕಂಡು ಬಂದಿಲ್ಲ. ಹೀಗಾಗಿ ಪೊಲೀಸರು ವಿಚಾರಣೆ ನಡೆಸಿ ವಾಪಸ್ಸು ಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆಎಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಎನ್ನಲಾಗಿದೆ. ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.
ಸುಮಾರು ಹದಿನೈದು ಜನರ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಫಾಲೋವರ್ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಎಚ್ಚರಿಸಿದೆ. ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಸದ್ಯ ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಲ್ಲೆ ನಡೆಸಿದವರನ್ನು ಪೊಲೀಸರು ಶೋಧಿಸುತ್ತಿದ್ದಾರೆ. ವಿಡಿಯೋವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.
ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ; ಮತ್ತೊಂದು ದೇಗುಲ, ಮನೆಗೆ ಬೆಂಕಿ