Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ - Vistara News

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Actor Darshan: ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Actor Darshan case pavithra Gowda manager Arrest
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ 16ಜನ (Actor Darshan) ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ರೇಣುಕಾ ಸ್ವಾಮಿ ಮೇಲೆ ಮೊದಲು ಹಲ್ಲೆ ನಡೆಸಿದ್ದೇ ಪವಿತ್ರಾ ಗೌಡ ಎನ್ನಲಾಗಿದೆ. ಪವಿತ್ರಾಗೌಡ ನೋಡುತ್ತಿದ್ದಂತೆ ರೇಣುಕಾಸ್ವಾಮಿ ಪವಿತ್ರಾ ಕಾಲಿಗೆ ಬಿದ್ದು ತಪ್ಪಾಯ್ತು ಅಂತ ಕ್ಷಮೆ ಕೇಳಿದ್ದನಂತೆ. ಸದ್ಯ ಪವಿತ್ರಾ ಮನೆಯಲ್ಲಿ ಪೊಲೀಸರು ಆ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದ ಚಪ್ಪಲಿಯನ್ನ ಸೀಜ್ ಮಾಡಲಿದ್ದಾರೆ. ಪ್ರಕರಣದಲ್ಲಿ ಪವಿತ್ರಾ ಚಪ್ಪಲಿ ಕೂಡ ಮಹತ್ವದ ಸಾಕ್ಷ್ಯವಾಗಲಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಚಿಕ್ಕಬಳ್ಳಾಪುರ

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

Murder case : ಪೊಲೀಸ್‌ ಠಾಣೆ ಸಮೀಪವೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ (Murder Case) ನಡೆದಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಸಮೀಪವೇ ಈ ಕೃತ್ಯ ನಡೆದಿದೆ. ಶೇಖರ್ ಎಂಬಾತ ಕೊಲೆಯಾದವನು. ಶಿವಕುಮಾರ್ (35) ಕೊಲೆಗೈದ ಆರೋಪಿಯಾಗಿದ್ದಾನೆ.

ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಡುರಸ್ತೆಯಲ್ಲಿ ಶೇಖರ್‌ ಮೇಲೆ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆ ನಿವಾಸಿ ಶಿವಕುಮಾರ್ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೇಖರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಶಿವಕುಮಾರ್‌ ಪತ್ತೆಗೆ ಚಿಕ್ಕಬಳ್ಳಾಪುರ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

ಬೆಳಗಾವಿ: ಬೆಂಗಳೂರು ಹಾಗೂ ಮಂಡ್ಯದಲ್ಲಿ ಕೆಲ ತಿಂಗಳ ಹಿಂದೆ ಹೆಣ್ಣು ಭ್ರೂಣಹತ್ಯೆಯ ಬೃಹತ್‌ ಜಾಲವೊಂದು ಪತ್ತೆಯಾದ ಬೆನ್ನಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲೂ ನಕಲಿ ವೈದ್ಯನು ಭ್ರೂಣ ಹತ್ಯೆ (Foeticide) ಮಾಡಿರುವ ಪ್ರಕರಣವು ಬಯಲಾಗಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿದೆ. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಸಹಾಯಕನಾಗಿರುವ ರೋಹಿತ್ ಕುಪ್ಪಸಗೌಡರ್ ಎಂಬಾತನನ್ನು ಕರೆದುಕೊಂಡು ಹೋಗಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಕಲಿ ವೈದ್ಯನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿದೆ. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭ್ರೂಣಗಳನ್ನು ಹೂಳುತ್ತಿದ್ದ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆತ ತೋರಿಸಿದ ಜಾಗದಲ್ಲಿ ಶೋಧ ನಡೆಸಲಾಗುತ್ತಿದೆ.

ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ. ಈತನನ್ನು ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿರುವ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ. ರೋಹಿತ್‌ ತೋರಿಸಿದ ಜಾಗದಲ್ಲಿಯೇ ಒಂದು ಭ್ರೂಣ ಪತ್ತೆಯಾಗಿರುವ ಕಾರಣ ಇನ್ನಷ್ಟು ಭ್ರೂಣಗಳು ಇರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್‌ ಗಫಾರ್‌ ಲಾಡಖಾನ್‌ ಹಿಂದೆ ಯಾರಿದ್ದಾರೆ? ಜಾಲದಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ? ಫಾರ್ಮ್‌ಹೌಸ್‌ ಸೇರಿ ಇನ್ನೂ ಹಲವು ಪ್ರದೇಶಗಳಲ್ಲಿ ಭ್ರೂಣಗಳನ್ನು ಹೂಳಲಾಗಿದೆಯೇ ಎಂಬುದು ಸೇರಿ ಹತ್ತಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲೂ ಭ್ರೂಣ ಹತ್ಯೆ ಪ್ರಕರಣಗಳು ಬಯಲಾಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Darshan Arrested: ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Darshan Arrested vinish write special message for darshan fathers day
Koo

ಬೆಂಗಳೂರು: ತಂದೆ – ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರೂ (Darshan Arrested) ಆಘಾತದ ಸಿಡಿಲು ಬಡಿಯುವುದಂತೂ ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು.  ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.

ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದಿದ್ದ ದರ್ಶನ್‌ ಪುತ್ರ ವಿನೀಶ್

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದ.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದ.

ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ

ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ದೇಶ

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Illegal beef trade: ಅಕ್ರಮವಾಗಿ ಬೀಫ್‌ ವ್ಯಾಪಾರ ಮಾಡುತ್ತಿದ್ದ 11 ಮಂದಿ ಮುಸ್ಲಿಮರು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಗಳನ್ನು ಕೆಡವಿ ಹಾಕುವ ಮೂಲಕ ಮಧ್ಯ ಪ್ರದೇಶದ ಪೊಲೀಸರು ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕಠಿಣ ಕ್ರಮ ಕೈಗೊಂಡಿದ್ದಾರೆ. ದಾಳಿ ವೇಳೆ ಪತ್ತೆಯಾದ 150 ಹಸುಗಳನ್ನು ಗೋಶಾಲೆಗೆ ರವಾನಿಸಲಾಗಿದೆ.

VISTARANEWS.COM


on

Illegal beef trade
Koo

ಭೋಪಾಲ್‌: ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮಧ್ಯ ಪ್ರದೇಶ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಅಪರಾಧಿಗಳ ಅನಧಿಕೃತ ಕಟ್ಟಡ ನಿರ್ನಾಮ ಮಾಡಿ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದೀಗ ಅಂತಹದ್ದೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡು ದೇಶದ ಗಮನ ಸೆಳೆದಿದೆ. ಅಕ್ರಮವಾಗಿ ಬೀಫ್‌ ವ್ಯಾಪಾರ ಮಾಡುತ್ತಿದ್ದ (Illegal beef trade), 11 ಮಂದಿ ಮುಸ್ಲಿಮರು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಗಳನ್ನು ಕೆಡವಿ ಹಾಕಿದೆ.

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯ ಹೊಂದಿರುವ ಮಾಂಡ್ಲಾದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿನ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕ್ರಮದ ಭಾಗವಾಗಿ ಈ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ʼʼನೈನ್ಪುರದ ಭೈನ್ವಾಹಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ಮಾಂಸಕ್ಕಾಗಿ ಕೂಡಿಡಲಾಗಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಈ ಕ್ರಮ ಕೈಗೊಂಡಿದ್ದಾರೆʼʼ ಎಂದು ಮಾಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ಪಿಟಿಐಗೆ ತಿಳಿಸಿದ್ದಾರೆ. “ಪೊಲೀಸ್‌ ತಂಡ ದಾಳಿ ನಡೆಸಿದಾಗ ಆರೋಪಿಗಳ ಹಿತ್ತಿಲಿನಲ್ಲಿ ಮಾಂಸಕ್ಕಾಗಿ 150 ಹಸುಗಳನ್ನು ಕಟ್ಟಿ ಹಾಕಿರುವುದು ಕಂಡು ಬಂದಿತ್ತು. ಜತೆಗೆ ಎಲ್ಲ 11 ಆರೋಪಿಗಳ ಮನೆಗಳ ರೆಫ್ರಿಜರೇಟರ್ ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಣಿಗಳ ಕೊಬ್ಬು, ಜಾನುವಾರುಗಳ ಚರ್ಮ ಮತ್ತು ಮೂಳೆಗಳು ಸಹ ದಾಳಿ ವೇಳೆ ಕಂಡು ಬಂದಿದೆ. ಅವುಗಳನ್ನು ಕೋಣೆಯಲ್ಲಿ ತುಂಬಿಡಲಾಗಿತ್ತುʼʼ ಎಂದು ಅವರು ಹೇಳಿದ್ದಾರೆ.

ದೃಢಪಡಿಸಿದ ವೈದ್ಯರು

ʼʼದಾಳಿ ವೇಳೆ ಪತ್ತೆಯಾಗಿರುವುದು ಗೋಮಾಂಸ ಎನ್ನುವುದನ್ನು ಸ್ಥಳೀಯ ಸರ್ಕಾರಿ ಪಶುವೈದ್ಯರು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್ಎ ವಿಶ್ಲೇಷಣೆಗಾಗಿ ನಾವು ಮಾದರಿಗಳನ್ನು ಹೈದರಾಬಾದ್‌ಗೆ ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿದ್ದ ಕಾರಣ ಅವುಗಳನ್ನು ನೆಲಸಮಗೊಳಿಸಲಾಗಿದೆ” ಎಂದು ರಜತ್ ಸಕ್ಲೇಚಾ ವಿವರಿಸಿದ್ದಾರೆ.

10 ಆರೋಪಿಗಳಿಗಾಗಿ ಶೋಧ

ಹಸುಗಳು ಮತ್ತು ಗೋಮಾಂಸವನ್ನು ವಶಪಡಿಸಿಕೊಂಡ ನಂತರ ಶುಕ್ರವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡ ಉಳಿದ 10 ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಇದನ್ನೂ ಓದಿ: Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

ಗೋಶಾಲೆಗೆ ರವಾನೆ

“ದಾಳಿ ವೇಳೆ ಪತ್ತೆಯಾದ 150 ಹಸುಗಳನ್ನು ಗೋಶಾಲೆಗೆ ಕಳುಹಿಸಲಾಗಿದೆ. ಭೈನ್ಸ್ವಾಹಿ ಪ್ರದೇಶವು ಕೆಲವು ಸಮಯದಿಂದ ಹಸು ಕಳ್ಳ ಸಾಗಾಣಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ. ಮಧ್ಯ ಪ್ರದೇಶದಲ್ಲಿ ಗೋ ಹತ್ಯೆಯನ್ನು ನಿಷೇಧಿಸಲಾಗಿದ್ದು, ಇಂತಹ ಕೃತ್ಯ ಎಸಗಿದರೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಕಾನೂನು ಇದೆʼʼ ಎಂದು ಎಸ್‌ಪಿ ರಜತ್ ಸಕ್ಲೇಚಾ ಹೇಳಿದ್ದಾರೆ. ಅಪರಾಧಿಗಳ ಪೈಕಿ ಇಬ್ಬರ ಅಪರಾಧ ಹಿನ್ನೆಲೆಯನ್ನು ಸಂಗ್ರಹಿಸಲಾಗಿದೆ ಮತ್ತು ಉಳಿದ ವ್ಯಕ್ತಿಗಳ ಪೂರ್ವಾಪರಗಳ ಬಗ್ಗೆ ಕಂಡುಹಿಡಿಯುವ ಪ್ರಕ್ರಿಯೆ ನಡೆಯುತ್ತಿದೆ ಎಂದೂ ಅವರು ವಿವರಿಸಿದ್ದಾರೆ. ಎಲ್ಲ ಆರೋಪಿಗಳು ಮುಸ್ಲಿಮರು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Actor Darshan case pavithra Gowda manager Arrest
ಸ್ಯಾಂಡಲ್ ವುಡ್2 seconds ago

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Gold Rate Today
ಚಿನ್ನದ ದರ6 mins ago

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Tata Motors SUV Tata Nexon 7th Anniversary Benefit up to Rs 1 lakh for customers
ವಾಣಿಜ್ಯ17 mins ago

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

murder case
ಚಿಕ್ಕಬಳ್ಳಾಪುರ19 mins ago

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

David Wiese Retirement
ಕ್ರೀಡೆ39 mins ago

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

Money Guide
ಮನಿ-ಗೈಡ್46 mins ago

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

PMAY
ವಾಣಿಜ್ಯ47 mins ago

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

Bahaddur movie is re released on June 21
ಕರ್ನಾಟಕ48 mins ago

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Darshan Arrested renuka shed like hell more murders here
ಸ್ಯಾಂಡಲ್ ವುಡ್51 mins ago

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Foeticide
ಕರ್ನಾಟಕ58 mins ago

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ21 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌