ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಲೈಂಗಿಕ ದೌರ್ಜನ್ಯ (Physical abuse) ಹಗರಣಕ್ಕೆ ಸಂಬಂಧಿಸಿ ತೀವ್ರ ಕಾರ್ಯಾಚರಣೆಗೆ ಇಳಿದಿರುವ ವಿಶೇಷ ತನಿಖಾ ತಂಡ (SIT) ತಂದೆ- ಮಗ ಇಬ್ಬರ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್‌ಗಳಿಗೆ (Farm house) ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.
ಇಂದು ಬೆಳ್ಳಂಬೆಳಿಗ್ಗೆ ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ಐದು ಜನರ ತಂಡದಿಂದ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆದಿದೆ. ಮುಂಜಾನೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿರುವ ಬಗ್ಗೆ ಮಾಹಿತಿ ಇದೆ.
ನಿನ್ನೆ ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಹೀಗೆ ಒಟ್ಟು ಮೂರು ಕಡೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಎಸ್‌ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗುತ್ತಲೇ ಹಾಸನಕ್ಕೆ ಬಂದಿರುವ ಪೊಲೀಸರ ಎರಡು ತಂಡ, ಪಡುವಲಹಿಪ್ಪೆ ಸೇರಿ ಎರಡು ಕಡೆ ಸ್ಥಳ ಪರಿಶೀಲನೆ ನಡೆಸಿದೆ. ಇಂದು ಹೊಳೆನರಸೀಪುರದ ರೇವಣ್ಣ ನಿವಾಸ ಹಾಗು ಹಾಸನದ ಪ್ರಜ್ವಲ್ ನಿವಾಸದಲ್ಲೂ ಪರಿಶೀಲನೆ ನಡೆಸಿ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ.
ಕೃತ್ಯ ನಡೆದಿದೆ ಎನ್ನಲಾಗುತ್ತಿರುವ ಹಲವು ಸ್ಥಳಗಳಲ್ಲಿ ಎಸ್‌ಐಟಿ ತನಿಖೆ ನಡೆಸಬೇಕಿದೆ. ಹೀಗಾಗಿ ಹಾಸನದ ಆರ್‌ಸಿ ರಸ್ತೆಯ ಸಂಸದರ ನಿವಾಸ ಹಾಗು ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆಯ ತೋಟದ ಮನೆಯನ್ನು ಎಸ್ಐಟಿ ವಶಕ್ಕೆ ಪಡೆಯುವ ಸಂಭವ ಇದೆ.
ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್ ಎಫ್‌ಐಆರ್, ಇದರಲ್ಲಿ ಬಂಧನ ಖಚಿತ!
ಬೆಂಗಳೂರು: ಹಗರಣದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ದೂರಿನಲ್ಲಿ ಬಿಗಿಯಾದ ಸೆಕ್ಷನ್‌ಗಳನ್ನು ದಾಖಲಿಸಲಾಗಿದ್ದು, ಇದರಡಿ ಪ್ರಜ್ವಲ್ ಅವರ ಬಂಧನ ಖಚಿತವಾಗಿದೆ. ಮೈಸೂರಿನಲ್ಲೂ (Mysore news) ಇನ್ನೊಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದೆ. ಇಲ್ಲಿಗೆ ಒಟ್ಟು ಮೂರು ದೂರುಗಳಾಗಿವೆ.
ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಎಫ್ಐಆರ್ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದೆ. ಎರಡನೇ ಎಫ್ಐಆರ್‌ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು ಹೆಚ್ಚು ಬಿಗಿಯಾಗಿದ್ದು, ತನಿಖೆಗೆ ಹಾಸನ ಸಂಸದರ ಬಂಧನವನ್ನು ಅನಿವಾರ್ಯವಾಗಿಸಿವೆ. IPC 376(2)N, 506 ,354a1, 354b, 354c ಸೆಕ್ಷನ್‌ಗಳು ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿವೆ. 376(2)n ಸೆಕ್ಷನ್ ಮಹಿಳೆ ಮೇಲೆ ಬೆದರಿಸಿ ನಿರಂತರ ಅತ್ಯಾಚಾರ ನಡೆಸುವುದನ್ನು ದಾಖಲಿಸುತ್ತಿದ್ದು, ಇದು ಸಾಬೀತಾದರೆ ಕನಿಷ್ಠ ಹತ್ತು ವರ್ಷ ಜೈಲು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ.
ಸೆಕ್ಷನ್ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು, 354a1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು- ಇದಕ್ಕೆ ಗರಿಷ್ಠ ಮೂರು ವರ್ಷಗಳ ಶಿಕ್ಷೆ, 354b ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು- ಗರಿಷ್ಠ ಮೂರು ವರ್ಷ ಶಿಕ್ಷೆ, 354c ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಖಾಸಗಿ ವಿಷಯವನ್ನು ರೆಕಾರ್ಡ್ ಮಾಡುವುದು ಮತ್ತು ನೋಡುವುದು- ಗರಿಷ್ಠ ಏಳು ವರ್ಷ ಶಿಕ್ಷೆ ಇವುಗಳಿವೆ.
ಎರಡನೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಮಾತ್ರ ಆರೋಪಿಯಾಗಿದ್ದಾರೆ. ಮೊದಲ ದೂರಿನಲ್ಲಿ ಎಚ್‌ಡಿ ರೇವಣ್ಣ ಕೂಡ ಆರೋಪಿಯಾಗಿದ್ದರು. ಎಚ್‌ಡಿ ರೇವಣ್ಣ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬಂದ ಕೂಡಲೇ ಬಂಧನ ಮಾಡಲು ಎಸ್‌ಐಟಿ ಸಜ್ಜಾಗಿದೆ. ಈಗಾಗಲೇ ಆರೋಪಿಗೆ ಲುಕ್‌ಔಟ್ ನೊಟೀಸ್ ಹೊರಡಿಸಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂಧನ ಬಹುತೇಕ ಖಚಿತವಾಗಿದೆ.
ಮೈಸೂರಿನಲ್ಲೂ ದೂರು
ಪ್ರಜ್ವಲ್ ರೇವಣ್ಣ (Prajwal Revanna Case) ಮೇಲೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಕೆ.ಆರ್.ನಗರ ತಾಲೂಕಿನಲ್ಲಿ ಘಟನೆ ನಡೆದಿದೆ. “ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು. ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ (Bhavani Revanna) ಅಪಹರಣ ಮಾಡಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.
ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್ ಎಫ್‌ಐಆರ್, ಇದರಲ್ಲಿ ಬಂಧನ ಖಚಿತ!