ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ನಿವಾಸದಲ್ಲೇ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆದಿರುವ ಬಗ್ಗೆ ದೂರು ನೀಡಲಾಗಿರುವ ಹಿನ್ನೆಲೆಯಲ್ಲಿ, ಸಂಸದರ ನಿವಾಸದ ಗೇಟ್‌ಗೆ ನಿನ್ನೆ ಬೀಗ ಜಡಿಯಲಾಗಿದೆ. ಇನ್ನೊಂದು ಕಡೆ ಲುಕೌಟ್ ನೋಟೀಸ್ (Lokkout notice) ಹೊರಡಿಸಿದರೂ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna) ತಲೆ ಮರೆಸಿಕೊಂಡಿದ್ದಾರೆ. ಭವಾನಿ ರೇವಣ್ಣ (Bhavani Revanna) ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್ ಮಾಡಿದೆ.
ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದ ದೂರು ನೀಡಿದ್ದ ಮಹಿಳೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. CID ಪೊಲೀಸರ ಮುಂದೆ, ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡಲಾಗಿದೆ. ಹೀಗಾಗಿ ಸಾಕ್ಷಿ ನಾಶದ ಆತಂಕದ ಹಿನ್ನೆಲೆಯಲ್ಲಿ ಸಂಸದರ ನಿವಾಸದ ಆವರಣಕ್ಕೆ ಪ್ರವೇಶ ನಿರ್ಬಂಧಿಸಿ ಗೇಟಿಗೆ ಬೀಗ ಹಾಕಲಾಗಿದೆ. SIT ತಂಡ ತನಿಖೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸರು ಬೀಗ ಹಾಕಿದ್ದಾರೆ.
ಸಂಸದರ ನಿವಾಸಕ್ಕೂ ಬೀಗ ಬಿದ್ದಿದ್ದು, ಬೀಗದ ಕೀ ಯಾರ ಬಳಿ ಇದೆ ಎಂಬುದು ನಿಗೂಢವಾಗಿದೆ. ಇಂದು ಸಂತ್ರಸ್ತೆ ಜೊತೆ SIT ತಂಡ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಆದರೆ ಕಳೆದೊಂದು ವಾರದಿಂದ ಸಂಸದರ ನಿವಾಸಕ್ಕೆ ಬೀಗ ಬಿದ್ದಿದ್ದು, ಮೇಟಿ ಕುಟುಂಬವೂ ಕಣ್ಮರೆಯಾಗಿದೆ. ಸ್ಥಳ ಮಹಜರಿಗೆ ಸಂಸದರ ಕಚೇರಿ ಬೀಗದ ಕೀ ಯಾರ ಬಳಿ ಇದೆ ಎಂಬುದು ಗೊತ್ತಾಗಿಲ್ಲ.
ರೇವಣ್ಣಗೂ ಲುಕ್‌ಔಟ್ ನೋಟೀಸ್
ಪ್ರಕರಣದ ಪ್ರಮುಖ ಆರೋಪಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಅನ್ನು ಜಾರಿ ಮಾಡಿದ್ದಾರೆ.
ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್ ಕೇಸ್ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.
ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದೆ.
ಭವಾನಿಗೂ ಬುಲಾವ್
ಅಪ್ಪ ಮಗನ ಬಳಿಕ ಭವಾನಿ ರೇವಣ್ಣಗೂ ಎಸ್ಐಟಿ ನೊಟೀಸ್ ಕಳಿಸಿದೆ. ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಕಿಡ್ನಾಪ್ ಪ್ರಕರಣ ಸಂಬಂಧ ಭವಾನಿ ರೇವಣ್ಣಗೆ ಎಸ್ಐಟಿ ನೊಟೀಸ್ ಕಳಿಸಿದ್ದು, ಇಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಎಂಬಾತನ ಬಂಧನ ಆಗಿದೆ.
ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.