Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌! - Vistara News

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Prajwal Revanna Case: ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಎಚ್‌.ಡಿ. ರೇವಣ್ಣ ನ್ಯಾಯಾದೀಶರ ಮುಂದೆ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

VISTARANEWS.COM


on

Prajwal Revanna Case HD Revanna sent to 7 day judicial custody
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Congress leader Celebration: ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ಕಾಂಗ್ರೆಸ್‌ ಮುಖಂಡ; ವಿಡಿಯೊ ವೈರಲ್‌

Congress leader Celebration: ಬಾಗಲಕೋಟೆ ತಾಲೂಕಿನ ಹವೇಲಿ ಗ್ರಾಮದಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ್ದಾರೆ.

VISTARANEWS.COM


on

Congress leader Celebration
Koo

ಬಾಗಲಕೋಟೆ: ಕಾಂಗ್ರೆಸ್‌ ಮುಖಂಡನೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿರುವ ಘಟನೆ (Congress leader Celebration) ಬಾಗಲಕೋಟೆ ತಾಲೂಕಿನ ಹವೇಲಿ ಗ್ರಾಮದಲ್ಲಿ ನಡೆದಿದೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸಾಂಗ್ ಹಾಕಿ ಕಾಂಗ್ರೆಸ್‌ ಮುಖಂಡ ಕೇಕ್ ಕಟ್ ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹಳೆ ಹವೇಲಿ ಗ್ರಾಮದ ಕೈ ಮುಖಂಡ ರಮೇಶ್ ರಾಠೋಡ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ತಲ್ವಾರ್‌ನಿಂದ ಕೇಕ್ ಕತ್ತರಿಸಿದ ಮುಖಂಡನಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ. ಈ ವಿಡಿಯೊವನ್ನು ಇನ್ಸ್ಟಾಗ್ರಾಮ್‌ನಲ್ಲಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಲೈಸೆನ್ಸ್ ಇಲ್ಲದೇ ಮಾರಕಾಸ್ತ್ರ ಹೊಂದುವುದು, ಸಾರ್ವಜನಿಕವಾಗಿ ಮಾರಕಾಸ್ತ್ರ ಬಳಿಸುವುದು ಕಾನೂನು ಪ್ರಕಾರ ಅಪರಾಧ. ಹೀಗಾಗಿ ಕೈ ಮುಂಖಡನ ಬಗ್ಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Lok Sabha Election 2024

ಮೈಸೂರು: 2024ರ ಲೋಕಸಭಾ ಚುನಾವಣೆಯ (Lok Sabha Election 2024) 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾದ ಬೆನ್ನಲ್ಲೇ ಬಿಡುಗಡೆಯಾದ ಎಕ್ಸಿಟ್‌ ಪೋಲ್‌ಗಳ ಫಲಿತಾಂಶದಲ್ಲಿ ಬಹುತೇಕವು ಕೇಂದ್ರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ, ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಲಾಗಿದೆ. ಈ ನಡುವೆ ಮೈಸೂರಿನಲ್ಲಿ ಶ್ವಾನವೊಂದು ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ತಿಳಿಸಿದೆ.

ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ (ಜೂನ್‌ 4) ಜನರು ಕಾತರಿಂದ ಕಾಯುತ್ತಿದ್ದಾರೆ. ಇದಕ್ಕೂ ಮೊದಲು ನಗರದ ಕೆ.ಟಿ. ಸ್ಟ್ರೀಟ್‌ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿದೆ. ಶ್ವಾನದ ಭವಿಷ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ | MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವಿಟ್ಟಾಗ ಶ್ವಾನ ಮೋದಿ ಅವರ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಬಿಜೆಪಿ ಮೈತ್ರಕೂಟ ಮತ್ತೊಮ್ಮೆ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಎಂ. ಲಕ್ಷ್ಮಣ್ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರ ತೋರಿಸಿದಾಗ ಶ್ವಾನ ಯದುವೀರ್ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬುವುದನ್ನು ಸೂಚಿಸಿದೆ.

Continue Reading

ಕ್ರೈಂ

Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Accident Case : ಭಾರಿ ಮಳೆಗೆ ಮುರಿದು ಬಿದ್ದ ಕಂಬವನ್ನು ಜೋಡಣೆ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಒದ್ದಾಡಿದ್ದರೆ, ಇತ್ತ ಭೀಕ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Accident Case
Koo

ಯಾದಗಿರಿ/ವಿಜಯಪುರ: ಭಾರಿ ಮಳೆಗೆ ವಿದ್ಯುತ್‌ ಕಂಬ ಮುರಿದು (Accident Case) ಬಿದ್ದಿತ್ತು. ಕಂಬ ಜೋಡಣೆ ಮಾಡುವಾಗ ಎಡವಟ್ಟಾಗಿದ್ದು, ಕಂಬ ಏರಿ ರಿಪೇರಿ ಕೆಲಸ ಮಾಡುವಾಗ ಕಾರ್ಮಿಕನಿಗೆ ದಿಢೀರ್‌ ವಿದ್ಯುತ್ ಪ್ರವಹಿಸಿ ಒದ್ದಾಡಿದ್ದಾನೆ. ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕ ರಾಯಪ್ಪ ಎಂಬಾತನನ್ನು ಸ್ಥಳೀಯರು ರಕ್ಷಿಸಿ ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಲೈನ್ ಬಂದ್ ಮಾಡಿ ಕೆಲಸ ಮಾಡುತ್ತಿದ್ದಾಗ ಏಕಾಎಕಿ ವಿದ್ಯುತ್‌ ಹರಿದಿದೆ. ಕಾರ್ಮಿಕ ರಾಯಪ್ಪ ನಿಯಂತ್ರಣ ತಪ್ಪಿದ್ದು ಕಂಬದಲ್ಲಿ ನೇತಾಡಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ನಂತರ ವಿದ್ಯುತ್ ಬಂದ್ ಮಾಡಿಸಿ ಸ್ಥಳೀಯರೇ ವಿದ್ಯುತ್‌ ಕಂಬ ಏರಿ ಕಾರ್ಮಿಕನ‌ನ್ನು ರಕ್ಷಣೆ ಮಾಡಿದ್ದಾರೆ. ಕೆಂಭಾವಿ ವಿಭಾಗದ ಜೆಸ್ಕಾಂ ‌ಸಿಬ್ಬಂದಿ ಬೇಜವಾಬ್ದಾರಿತನ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾಕ್ಕೆ ಇಬ್ಬರು ಬಲಿ

ವಿಜಯಪುರ ಜಿಲ್ಲೆಯ ತಿಕೋಟ ಬಳಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತದಲ್ಲಿ ರಾಮು ರಾಥೋಡ್ ಹಾಗೂ ಕಿಟ್ಟು ಎಂಬುವವರು ಮೃತಪಟ್ಟಿದ್ದಾರೆ. ಮೃತರಿಬ್ಬರು ತೊರವಿ ತಾಂಡಾ ನಿವಾಸಿಗಳೆಂದು ತಿಳಿದುಬಂದಿದೆ. ರತ್ನಾಪುರ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯನಗರದಲ್ಲಿ ಹ್ಯಾಂಡ್‌ ಬ್ರೇಕ್‌ ಹಾಕುವುದು ಮರೆತ ಚಾಲಕ

ವಿಜಯನಗರದ ಹೊಸಪೇಟೆಯ ಹೊರವಲಯದಲ್ಲಿ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ಲಾರಿ ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿತ್ತು. ಚಾಲಕ ಟೀ ಕುಡಿಯಲು ಲಾರಿ ನಿಲ್ಲಿಸಿದ್ದ ಆದರೆ ಹ್ಯಾಂಡ್ ಬ್ರೇಕ್ ಹಾಕುವುದನ್ನು ಮೆರೆತು ಹೊರಟು ಹೋಗಿದ್ದ. ಈ ವೇಳೆ ಇದ್ದಕ್ಕಿದ್ದಂತೆ ಲಾರಿ ತನ್ನಿಂದ ತಾನೇ ಮುಂದೆ ಹೋಗಿದೆ. ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿದ ಲಾರಿ, ರಸ್ತೆಯ ಬಲಭಾಗಕ್ಕೆ ಹೋಗಿ ನಿಂತಿದೆ. ಅದೃಷ್ಟವಶಾತ್ ಯಾವುದೇ ವಾಹನಗಳಿಗೆ ಗುದ್ದಿಲ್ಲ, ಯಾರಿಗೂ ಸಮಸ್ಯೆಯೂ ಆಗಿಲ್ಲ. ಹೊಸಪೇಟೆಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯಪುರದಲ್ಲಿ ಟ್ರಕ್‌ ಪಲ್ಟಿ

ವಿಜಯಪುರದ ಸಾರವಾಡ ಬಳಿ ಬೃಹತ್ ಟ್ರಕ್ ಪಲ್ಟಿಯಾಗಿದೆ. ತಂಪು ಪಾನೀಯ ತುಂಬಿದ್ದ ಪ್ಲಾಸ್ಟಿಕ್ ಬಾಟಲಿಗಳ ಲೋಡ್ ಕೊಂಡೊಯ್ಯುತ್ತಿದ್ದಾಗ ಚಾಲಕ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ. ಟ್ರಕ್‌ನಡಿ ಸಿಲುಕಿದ್ದ ಚಾಲಕನನ್ನು ಸತತ ಒಂದು ತಾಸು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ. ರಕ್ಷಣೆ ನಂತರ ಗಾಯಾಳು ಚಾಲಕನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋವಾದಿಂದ ಹೈದ್ರಾಬಾದ್ ತೆರಳುತ್ತಿದ್ದಾಗ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

Valmiki Corporation Scam: 87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ ರೂ. ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಸಚಿವ ನಾಗೇಂದ್ರ ಮತ್ತು ಅಧಿಕಾರಿಗಳು ಈವರೆಗೆ ಸುಮಾರು 68 ಕೋಟಿ ವಾಪಸ್‌ ಆಗಿದೆ ಎಂದು ಹೇಳಿದ್ದರು.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು. ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.

87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ. ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಫಿಕ್ಸ್ ಎನ್ನಲಾಗಿದೆ.

ಸಚಿವ ಬಿ‌ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿ ಪಟ್ಟು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಬಿ‌.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟುಹಿಡಿದಿದೆ. ಸಚಿವರ ರಾಜೀನಾಮೆ ಪಡೆಯಲು ಜೂನ್ 6ರವರೆಗೂ ಗಡುವು ನೀಡಿರುವ ಬಿಜೆಪಿ, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಬೃಹತ್‌ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ | MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

ಮತ್ತೊಂದೆಡೆ ಬಿಜೆಪಿ ಕಾಲದ ಹಗರಣಗಳನ್ನು ಪ್ರಸ್ತಾಪ ಮಾಡಲು ನಾಗೇಂದ್ರ ಮುಂದಾಗಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಸಿಬಿಐ ಎಂಟ್ರಿ ತಪ್ಪಿಸಲು ಹೊಸ ದಾಳ ಪ್ರಯೋಗಕ್ಕೆ ನಾಗೇಂದ್ರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾಲದಲ್ಲಿ ಮಂಡ್ಯ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣ ಕುರಿತು ಪ್ರಸ್ತಾಪ ಮಾಡಲು ಸಚಿವ ಪ್ಲ್ಯಾನ್‌ ಮಾಡಿದ್ದಾರೆ.

Continue Reading

ಚಾಮರಾಜನಗರ

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Murder Case : ಅತ್ತಿಗೆ ಮೇಲೆ ಕಣ್ಣು ಹಾಕಿದ ಕಾಮುಕನೊಬ್ಬ ತನ್ನ ಸ್ವಂತ ಅಣ್ಣನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಣ್ಣನ ಹೆಂಡತಿಗೆ ಅನೈತಿಕ ಸಂಬಂಧ ಹೊಂದುವಂತೆ ನಿತ್ಯ ಪೀಡಿಸುತ್ತಿದ್ದ ಎನ್ನಲಾಗಿದೆ.

VISTARANEWS.COM


on

By

Murder Case
ಮೃತ ದುರ್ದೈವಿ
Koo

ಚಾಮರಾಜನಗರ: ಪಾಪಿ ತಮ್ಮನೊಬ್ಬ ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು (Murder Case) ಕೊಂದಿದ್ದಾನೆ. ಚಾಮರಾಜನಗರದ (chamarajanagara News) ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚೌಡಹಳ್ಳಿ ಗ್ರಾಮದ ಪ್ರಸಾದ್ (45) ಕೊಲೆಯಾದ ದುರ್ದೈವಿ. ಪ್ರಸಾದ್‌ ಸಹೋದರ ಕುಮಾರ್ (39) ಎಂಬಾತನಿಂದ ಈ ಕೃತ್ಯ ನಡೆದಿದೆ.

ಆರೋಪಿ ಕುಮಾರ್‌ನ ಕಾಮುಕತ್ವ ಎಷ್ಟರ ಮಟ್ಟಿಗೆ ಇತ್ತೆಂದರೆ, ಅತ್ತಿಗೆಗೆ ತನ್ನ ಜತೆ ಅನೈತಿಕ ಸಂಬಂಧ ಹೊಂದುವಂತೆ ಕಾಮುಕ ಮೈದುನ ನಿತ್ಯ ಪೀಡಿಸುತ್ತಿದ್ದನಂತೆ. ಇದೇ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಶನಿವಾರ ರಾತ್ರಿ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ನಿನ್ನ ಹೆಂಡತಿ ಬೇರೆಯವರ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದಿದ್ದಾನೆ.

ಇದರಿಂದ ಸಿಟ್ಟಾದ ಪ್ರಸಾದ್‌ ತಮ್ಮ ಕುಮಾರ್‌ಗೆ ಹೊಡೆಯಲು ಹೋಗಿದ್ದಾರೆ. ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಕುಮಾರ್‌ ಸಿಟ್ಟಿನಲ್ಲಿ ಅಣ್ಣ ಪ್ರಸಾದ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಕುಮಾರ್‌ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

ಬೆಳಗಾವಿ: ವಿವಾದಾತ್ಮಕ ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (Family Fighting) ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಜಮೀನಿನಲ್ಲೇ ಎರಡು ಗುಂಪುಗಳು ಕುಡುಗೋಲು, ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಬಡಿದಾಟದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ 7 ಜನರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿ 7 ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಕೃಷಿಯಲ್ಲಿ ತೊಡಗಿದ್ದ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಕಾಕತಿ ನಿವಾಸಿ ಸಿದ್ದರಾಯಿ ತುಂಬರಿ ಎಂಬಾತ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅನಿಲ್ ಮುಂಗಾರಿಗೆ ಸೇರಿದ ಜಮೀನು ಲಪಟಾಯಿಸಲು ಸಿದ್ದರಾಯಿ ತುಂಬರಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗಿದೆ.

ಕೋರ್ಟ್‌ ವಿಚಾರಣೆಯಲ್ಲಿರುವ ಜಮೀನು ಬಿಟ್ಟುಕೊಡುವಂತೆ ಸಿದ್ದರಾಯಿ ತುಂಬರಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಒಪ್ಪದಾಗ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾನೆ. ಸದ್ಯ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Amul Milk
ದೇಶ2 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ3 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ4 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ4 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ5 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20245 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ5 hours ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ5 hours ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ5 hours ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ5 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌