Site icon Vistara News

Prajwal Revanna Case: ವಕೀಲ ದೇವರಾಜೇಗೌಡ ಮತ್ತೊಂದು ದಿನ ಪೊಲೀಸ್‌ ಕಸ್ಟಡಿಗೆ!

Prajwal Revanna Case Lawyer DevarajeGowda sent to police custody for another day

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಮತ್ತೆ ಒಂದು ದಿನ ವಿಸ್ತರಣೆಯಾಗಿದೆ. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಇಂದು (ಮೇ 16) ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಮತ್ತೆ ಒಂದು ದಿನಕ್ಕೆ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್‌ ಅನುಮತಿ ನೀಡಿದೆ.

ಈ ಮೊದಲು ಮೂರು ದಿನಗಳ ಕಾಲ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್‌ (video viral) ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಅವರನ್ನು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನ ಮಾಡಲಾಗಿತ್ತು. ಈ ಸಂಬಂಧ ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಜೆಎಂಎಫ್‌ಸಿ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಹೀಗಾಗಿ ಒಂದು ದಿನ ಅವಧಿ ವಿಸ್ತರಣೆ ಮಾಡಿದ ಕೋರ್ಟ್‌, ಶುಕ್ರವಾರ (ಮೇ 17) ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಿ ಆದೇಶಿಸಿದೆ.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದಾರೆ.

ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧಿತರಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್‌.‌ಡಿ. ರೇವಣ್ಣ (HD Revanna) ಅವರು ತಮ್ಮ ಬೆಂಗಳೂರಿನ ಸ್ವಂತ ನಿವಾಸದಿಂದ ದೂರವೇ ಉಳಿದಿದ್ದಾರೆ. ಇದು ಜ್ಯೋತಿಷಿಗಳ ಸಲಹೆ ಇರಬಹುದೇ ಎಂಬ ಚರ್ಚೆ ಪ್ರಾರಂಭವಾಗಿದೆ.

ಇಲ್ಲಿನ ಬಸವನಗುಡಿಯಲ್ಲಿರುವ ನಿವಾಸದಿಂದ ದೂರ ಉಳಿಯುವಂತೆ ಎಚ್‌.ಡಿ. ರೇವಣ್ಣ ಅವರಿಗೆ ಜ್ಯೋತಿಷಿಗಳು ನೀಡಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಕಾರಣ, ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ ರೇವಣ್ಣ ಅವರು ಒಮ್ಮೆ ಮಾತ್ರ ಆ ನಿವಾಸಕ್ಕೆ ಭೇಟಿ ನೀಡಿದ್ದರು. ಅದೂ ಸಹ ಕೇವಲ ಎರಡೇ ನಿಮಿಷಗಳಲ್ಲಿ ಮನೆ ಪ್ರವೇಶಿಸಿ ಆಚೆ ಬಂದುಬಿಟ್ಟಿದ್ದರು.

ರೇವಣ್ಣ ಬಿಡುಗಡೆಯಾಗಿ ಇಂದಿಗೆ ಮೂರನೇ ದಿನವಾಗಿದೆ. ಆದರೆ, ಒಮ್ಮೆ ಭೇಟಿ ನೀಡಿದ ಬಳಿಕ ಮತ್ತೆ ಆ ಕಡೆ ಸುಳಿಯುತ್ತಿಲ್ಲ. ಈ ಘಟನೆ ಬಳಿಕ ಎಚ್.ಡಿ. ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ವಾಸ್ತವ್ಯ ಹೂಡುತ್ತಿದ್ದಾರೆ. ಹೀಗಾಗಿ ರೇವಣ್ಣ ಅವರ ನಿವಾಸದಲ್ಲಿ ಯಾರೂ ಇಲ್ಲದಂತಾಗಿದೆ. ವಾಸ್ತು ದೋಷ ಇದೆ ಎಂದು ರೇವಣ್ಣ ಅಂಜಿದರೇ? ಅಥವಾ ಜ್ಯೋತಿಷಿಗಳು ಏನಾದರೂ ಸಲಹೆ ನೀಡಿದ್ದಾರೆಯೇ? ಎಂಬಿತ್ಯಾದಿ ಚರ್ಚೆಗಳು ನಡೆಯುತ್ತಿವೆ.

ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Exit mobile version