Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್ - Vistara News

ಕ್ರೈಂ

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

Prajwal Revanna Case: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು.

VISTARANEWS.COM


on

Prajwal Revanna case Three FIRs against Prajwal Wanted list in all three
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಪುರುಷತ್ವ ಪರೀಕ್ಷೆಯ (virilism test) ವರದಿಯು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಕೈ ಸೇರಿದ್ದು, ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಪದೇ ಪದೆ ಪುರುಷತ್ವ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಮುಜುಗರವಾಗುತ್ತಿದೆ ಎಂದು ಈ ಹಿಂದೆ ನ್ಯಾಯಾಲಯದ ಮುಂದೆ ಪ್ರಜ್ವಲ್‌ ಅಳಲು ತೋಡಿಕೊಂಡಿದ್ದರು. ಧ್ವನಿ ಪರೀಕ್ಷೆ ಹಾಗೂ ಇನ್ನಿತರ ಪರೀಕ್ಷೆಗಳ ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಈ ವರದಿಗಳು ಪೂರಕವಾಗಿದ್ದರೆ ಅವುಗಳು ಕೂಡ ಪ್ರಜ್ವಲ್‌ ವಿರುದ್ಧದ ಪ್ರಬಲ ಸಾಕ್ಷ್ಯಗಳಾಗಲಿವೆ.

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆನ್ನಲಾಗಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಈ ಅರ್ಜಿಗಳ ವಿಚಾರಣೆ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಗದಿಯಾಗಿದೆ.

ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌

ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

Pakistan:ತಾರುಶಾಹ್‌ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತೀರ ಹಣಕಾಸಿನ ಸಮಸ್ಯೆ ಯಿಂದಾಗಿ ಮಗುವಿನ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದೇ ಇರುವ ಕಾರಣ ಮಗುವನ್ನು ಮಣ್ಣುನಲ್ಲಿ ಹೂತಿರುವುದಾಗಿ ಒಪ್ಪಿಕೊಂಡಿದ್ದಾರೆ. ಇದೀಗ ತಯ್ಯಬ್‌ ವಿರುದ್ಧ ಪ್ರರಕರಣ ದಾಖಲಾಗಿದ್ದು, ಆತನ ಹೂತಿಟ್ಟ ಮಗುವಿನ ಶವವನ್ನು ಹೊರ ತೆಗೆದಿರುವ ಪೊಲೀಸರು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

VISTARANEWS.COM


on

Pakistan
Koo

ಇಸ್ಲಾಮಾಬಾದ್‌: ಚಿಕಿತ್ಸೆಗೆ ಹಣವಿಲ್ಲ ಎಂಬ ಕಾರಣಕ್ಕೆ ಹೆತ್ತ ತಂದೆಯೇ ತನ್ನ 15 ದಿನದ ಹಸುಳೆಯನ್ನು ಜೀವಂತ ಸಮಾಧಿ(Buried infant) ಮಾಡಿರುವ ಹೀನಾಯ ಕೃತ್ಯ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ಸಿಂಧ್‌ ಪ್ರಾಂತ್ಯದ ನೌಶಾಹ್ರೋ ಫಿರೋಜ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತಯ್ಯಬ್‌ ಎಂಬಾತ ಈ ಅಮಾನವೀಯ ಕೃತ್ಯ ಎಸಗಿದ್ದಾನೆ. ಈತ ತನ್ನ ಪುಟ್ಟ ಹೆಣ್ಣುಮಗುವನ್ನು ಮಣ್ಣಿನಲ್ಲಿ ಹೂತು ಕೊಲೆ ಮಾಡಿದ್ದಾನೆ.

ತಾರುಶಾಹ್‌ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತೀರ ಹಣಕಾಸಿನ ಸಮಸ್ಯೆ ಯಿಂದಾಗಿ ಮಗುವಿನ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದೇ ಇರುವ ಕಾರಣ ಮಗುವನ್ನು ಮಣ್ಣುನಲ್ಲಿ ಹೂತಿರುವುದಾಗಿ ಒಪ್ಪಿಕೊಂಡಿದ್ದಾರೆ. ಇದೀಗ ತಯ್ಯಬ್‌ ವಿರುದ್ಧ ಪ್ರರಕರಣ ದಾಖಲಾಗಿದ್ದು, ಆತನ ಹೂತಿಟ್ಟ ಮಗುವಿನ ಶವವನ್ನು ಹೊರ ತೆಗೆದಿರುವ ಪೊಲೀಸರು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಒಂದು ವರ್ಷದ ಹಿಂದೆ ರಾಜ್ಯದಲ್ಲೂ ಇಂತಹದ್ದೇ ಒಂದು ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ (Murder Case) ನಡೆದಿತ್ತು. ಪಾಪಿ ತಂದೆಯೋರ್ವ ಇಬ್ಬರು ಮಕ್ಕಳನ್ನು ಕೊಲೆಗೈದಿರುವ ಘಟನೆ ವರದಿಯಾಗಿತ್ತು. ಆದರ್ಶ್ (4) ಹಾಗೂ ಅಮೂಲ್ಯ (3) ಕೊಲೆಯಾಗಿರುವ ಮಕ್ಕಳು. ಪಾಪಿ ತಂದೆ ಮೋಹನ್‌ ಕುಮಾರ್‌ ಎಂಬಾತ, ಸುತ್ತಿಗೆಯಿಂದ ಹೊಡೆದು ಮಕ್ಕಳ ಹತ್ಯೆ ಮಾಡಿ ಪರಾರಿಯಾಗಿದ್ದ. ಪತ್ನಿಗೂ ಹಲ್ಲೆ ಮಾಡಿದ್ದ.

ಮೂಲತಃ ಗುಲ್ಬರ್ಗದವರಾಗಿರುವ ಮೋಹನ್ ಕುಮಾರ್ ಕುಟುಂಬ ಮರಳಗಾಲದ ವಿರುಪಾಕ್ಷ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಾಲಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಲಾಹೋರ್‌ನ ಡಿಫೆನ್ಸ್ ಬಿ ಪ್ರದೇಶದಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ, ದಂಪತಿ ವಿರುದ್ಧ 13 ವರ್ಷದ ಮನೆಕೆಲಸದ ಬಾಲಕಿ ವಿವಸ್ತ್ರಗೊಳಿಸಿ ದೈಹಿಕ ಚಿತ್ರಹಿಂಸೆ ಮತ್ತು ನಿಂದನೆ ಪ್ರಕರಣ ದಾಖಲಾಗಿದೆ. ಕಾರ್ಮಿಕನ ತಾಯಿ ನೀಡಿದ ದೂರಿನ ಮೇರೆಗೆ ಕಾನೂನು ಜಾರಿ ಅಧಿಕಾರಿಗಳು ಆರೋಪಿ ಹಸ್ಸಮ್ ವಿರುದ್ಧ ಪ್ರಥಮ ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹಾಸನ್ ನನ್ನು ಬಂಧಿಸಲಾಗಿದ್ದು, ಆತನ ಪತ್ನಿಯನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ವರದಿಯಾಗಿದೆ.

ಎಫ್‌ಐಆರ್‌ನ ಪ್ರಕಾರ, ಕಳ್ಳತನದ ಶಂಕೆಯ ಮೇರೆಗೆ ತೆಹ್ರೀಮ್ ಎಂಬ ಬಾಲಕಿಯನ್ನು ಬೆತ್ತಲೆಗೊಳಿಸಿ ನಿರಂತರ ದೈಹಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ತನ್ನ ಮಗಳ ಕೈ ಮತ್ತು ಮೂಗಿಗೆ ಗಂಭೀರ ಗಾಯಗಳಾಗಿವೆ ಎಂದು ಆಕೆಯ ತಾಯಿ ಎಫ್‌ಐಆರ್‌ನಲ್ಲಿ ದೂರಿದ್ದಾರೆ. ತೆಹ್ರೀಮ್ ವಿರುದ್ಧದ ಖಂಡನೀಯ ಕೃತ್ಯಗಳಿಗೆ ಕಾರಣರಾದವರನ್ನು ಶೀಘ್ರವಾಗಿ ನ್ಯಾಯಾಂಗಕ್ಕೆ ತರಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕ್ಯಾಂಟ್ ಭರವಸೆ ನೀಡಿದ್ದಾರೆ ಎಂದು ಎಆರ್‌ವೈ ನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

Continue Reading

ಕ್ರೈಂ

Murder Case: ‌ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

Murde rCase: ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು.

VISTARANEWS.COM


on

murder case hosakote
Koo

ಹೊಸಕೋಟೆ: ಹಳೆ ವೈಷಮ್ಯದ (Old vengeance) ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು (Gram Panchayat Member) ಬರ್ಬರವಾಗಿ (Hacked to death) ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಹೊಸಕೋಟೆ (Hosakote News) ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಅಪಾಕ್ ಅಮೀರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ. ಕಳೆದ ರಾತ್ರಿ ಅಟ್ಯಾಕ್ ಮಾಡಿ ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಅಪಾಕ್‌ ಅಮೀರ್‌ ಖಾನ್‌ ಗ್ರಾಮ ಪಂಚಾಯತಿ ಮುಂದೆ ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಗ್ರಾಮದ ಮೆಹಬೂಬ್ ಎಂಬಾತ ನುಗ್ಗಿ ಬಂದು ಕೊಚ್ಚಿ ಕೊಂದು ಹಾಕಿದ್ದಾನೆ.

ಕೊಲೆ ನಂತರ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

ತುಮಕೂರು: ತಾಯಿಯೊಬ್ಬಳು ರಸ್ತೆ ಬದಿಯಲ್ಲಿ ಮೂರು ತಿಂಗಳ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಪ್ರಕರಣ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ನೊಣವಿನಕೆರೆ ಪೊಲೀಸರಿಗೆ ಆಶಾ ಕಾರ್ಯಕರ್ತೆ ಕಲಾವತಿ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಮಗು ಕರೆದೊಯ್ಯಲಾಗಿದೆ. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಆರೋಗ್ಯವಾಗಿರುವ ಮಗು 4.5 ಕೆಜಿಯಷ್ಟು ತೂಕವಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಎಟಿಎಂಗಳ ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ (ATM theft) ಗ್ಯಾಂಗ್ ಬಗ್ಗೆ ಪೊಲೀಸರು ಇದೀಗ ತಲೆಕೆಡಿಸಿಕೊಂಡಿದ್ದಾರೆ. ಹರ್ಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ (Robbery Case) ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ನಿನ್ನೆ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇವರ ಖತರ್‌ನಾಕ್‌ ಬುದ್ಧಿ ಒಂದೆರಡಲ್ಲ. ಕಳ್ಳತನ ವೇಳೆ ಎಟಿಎಂನಲ್ಲಿರುವ ಸಿಸಿಟಿವಿ ಕ್ಯಾಮೆರಾ ಲೆನ್ಸ್‌ಗೆ ಕಪ್ಪು ಪೇಂಟ್‌ ಬಳಿಯುತ್ತಾರೆ. ಅಲ್ಲಿಗೆ ಅದೂ ಮಟಾಶ್.‌ ಬಳಿಕ ಗ್ಯಾಸ್ ಕಟರ್ ಬಳಸಿ ಎಟಿಎಂ ಓಪನ್ ಮಾಡಿ ಲಕ್ಷಾಂತರ ರೂಪಾಯಿ ಹಣ ದರೋಡೆ ಮಾಡುತ್ತಾರೆ. ಬೆಳ್ಳಂದೂರಿನಲ್ಲಿ ಜೂ. 6ರಂದು ಬೆಳಗಿನ ಜಾವ 3.30ಕ್ಕೆ ಕೃತ್ಯ ನಡೆಸಲಾಗಿದೆ. ಸದ್ಯ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ.

ಈ ಸಂಬಂಧ ಏಜೆನ್ಸಿ ಸಿಬ್ಬಂದಿ ಕಿರಣ್ ಎಂಬುವವರಿಂದ ದೂರು ದಾಖಲಾಗಿದೆ. ಬೆಳ್ಳಂದೂರು ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರತಿನಿತ್ಯ ರಾತ್ರಿ ವೇಳೆ ನಗರದ ಎಟಿಎಂಗಳ ಸುತ್ತಮುತ್ತಲೂ ಹೆಚ್ಚಾಗಿ ಗಸ್ತಿಗೆ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

Continue Reading

ಕ್ರೈಂ

Actor Darshan: 25 ದಿನಕ್ಕೆ ದರ್ಶನ್‌ ತೂಕ ಕಳೆದುಕೊಂಡಿದ್ದು ಇಷ್ಟೊಂದಾ?

Actor Darshan: ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು , ಹೊರಗಡೆ ಮೀನು, ಮಟನ್‌ ತಿಂದು ಕೊಂಡು ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.  ಹೀಗಾಗಿ ದರ್ಶನ್‌ ಅವರು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ.

VISTARANEWS.COM


on

Actor Darshan Lost KG In 25 Days
Koo

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ದರ್ಶನ್‌ (Actor Darshan: ) ಜೈಲು ಸೇರಿದ್ದಾರೆ. ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು , ಹೊರಗಡೆ ಮೀನು, ಮಟನ್‌ ತಿಂದು ಕೊಂಡು ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.  ಹೀಗಾಗಿ ದರ್ಶನ್‌ ಅವರು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ.

ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ ಆ ರೀತಿ ಇಲ್ಲ. ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು. ದರ್ಶನ್ ಅವರಿಗೆ ನಿತ್ಯ ಚಿಂತೆ ಕಾಡುತ್ತಿದೆ. ಯಾವಾಗ ಹೊರಗೆ ಬರುತ್ತೇನೋ ಎನ್ನುವ ಆತಂಕ ಮೂಡಿದೆ. ಹೀಗಾಗಿ ಅವರು ಜೈಲಿನಲ್ಲಿ ಸರಿಯಾಗಿ ಊಟ ಮಾಡುತ್ತಿಲ್ಲ. ಈ ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ ಸುದ್ದಿ ಕೇಳಿ ಆಘಾತವಾಗಿತ್ತು ಎಂದು ಬಿಕ್ಕಿ ಬಿಕ್ಕಿ ಅತ್ತ ನೀನಾಸಂ ರತ್ನಕ್ಕ!

ಇದನ್ನೂ ಓದಿ: Actor Darshan: ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಪವಿತ್ರ ಮುನಿಸು ತಣಿಸಲು ʼಕಂದಾಯ‌ʼ ಕಟ್ಟುತ್ತಿದ್ದ ದರ್ಶನ್
ದರ್ಶನ್‌ (Actor Darshan) ಹಾಗೂ ಪವಿತ್ರಾ (Pavithra Gowda) ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಕೊಲೆ ಪ್ರಕರಣಕ್ಕೂ ಮುಂಚೆ ದರ್ಶನ್‌ಗೆ ಪವಿತ್ರಾ ಗೌಡಳ ಮುನಿಸು ಹಲವು ಬಾರಿ ಆಪತ್ತು ತಂದು ಒಡ್ಡಿದೆ. ಪವಿತ್ರಾಗೌಡ ಮುನಿಸು ಶಮನ‌‌ ಮಾಡೋದೇ ಒಂದು ಚಾಲೇಂಜ್‌ ಆಗಿತ್ತು ದರ್ಶನ್‌ಗೆ. ಒಂದೊಂದು ಬಾರಿ ಕೋಪಿಸಿಕೊಂಡಾಗಲೂ ಒಂದೊಂದು ರೀತಿಯ ಪರಿಹಾರ ಕೊಡಬೇಕಿತ್ತು. ಲಕ್ಷ ,ಕೋಟಿ ಬೆಲೆ ಬಾಳುವ ವಸ್ತುಗಳೇ ಪವಿತ್ರಗೌಡ ಕೋಪ ಕಡಿಮೆಯಾಗಲು ಬೇಕಿತ್ತು.

ಕೆಲವೇ ದಿನಗಳ ಹಿಂದೆ ಒಂದು ಕಾರ್ ಕೂಡ ದರ್ಶನ್‌ ಅವರು ಪವಿತ್ರಾಗೆ ಗಿಫ್ಟ್‌ ಕೊಟ್ಟಿದ್ದರು ಎನ್ನಲಾಗಿದೆ. ಅನಂತರ‌ ಮತ್ತೊಂದು ಕಾರ್ ಗಿಫ್ಟ್ ಕೂಡ ಪವಿತ್ರಾ ಕೇಳಿದ್ದರಂತೆ. ದರ್ಶನ್ ದುಬೈ ಟ್ರಿಪ್ ಮುಗಿಸಿ ಬರುತ್ತಿದ್ದಂತೆ ಕೋಟಿ ಬೆಲೆಯ ಕಾರಿಗೆ ತೀವ್ರವಾದ ಬೇಡಿಕೆ ಇಟ್ಟಿದ್ದರು. ಕಾರು ಕೊಟ್ಟ ಬಳಿಕ ಇದೀಗ ಒಂದು ಪ್ರಾಣವೇ ಗಿಫ್ಟ್ ಕೊಟ್ಟಂತಾಗಿದೆ.

ದರ್ಶನ್‌ ಪವಿತ್ರಾ ಮುನಿಸು ಶಮನಕ್ಕೆ‌ ರೇಣುಕಾಸ್ವಾಮಿ ಕಿಡ್ನಾಪ್ ಅಸ್ತ್ರವಾಗಿತ್ತು ಎನ್ನಲಾಗಿದೆ. ಆರಂಭದಲ್ಲಿ‌ ಕಾರು ಕೊಡಿಸೋದಕ್ಕೆ ನಟ‌ ದರ್ಶನ್ ನಿರಾಕರಿಸಿದ್ದರು ಎಂಬ ಮಾಹಿಯೂ ಇದೆ. ಅಷ್ಟು ದೊಡ್ಡ ಮಟ್ಟದ ಹಣ ಸದ್ಯ ಇಲ್ಲವೆಂಬ ಕಾರಣ‌ ನೀಡಿ ಕಾರು ಕೊಡಿಸಲು ಬ್ರೇಕ್ ಕೂಡ ಹಾಕಕಿದ್ದರು. ಇದರಿಂದಾಗಿ ಕೋಪಗೊಂಡ ಪವಿತ್ರಾ ಬಹುತೇಕ ಒಂದು ತಿಂಗಳ ಕಾಲ ದರ್ಶನ್ ಬಳಿ ಮಾತು ಬಿಟ್ಟಿದ್ದಳು.

ಈ ಸಮಯದಲ್ಲಿಯೇ ರೇಣುಕಾಸ್ವಾಮಿ‌‌ ಮೆಸೇಜ್ ಅತಿರೇಕವಾಗಿತ್ತು. ಮಾತು ಬಿಟ್ಟಿದ್ದ ಕಾರಣ ದರ್ಶನ್‌‌ಗೆ ವಿಷಯ ತಿಳಿಸದ ಪವಿತ್ರಾ ಗೌಡ, ಈ ವಿಚಾರವನ್ನು ಪವನ್ ಬಳಿ ತಿಳಿಸಿದ್ದಳು. ಆದರೆ ಪವನ್‌ ಈ ವಿಚಾರವನ್ನು ದರ್ಶನ್‌ ಬಳಿ ನೇರವಾಗಿ ಹೇಳಿದ್ದ. ಆ ನಂತರ ನಡೆದದ್ದೇ ರೇಣುಕಾಸ್ವಾಮಿ ಕಿಡ್ನಾಪ್ ಮತ್ತು ಕೊಲೆ‌ ಪ್ರಕರಣ.

Continue Reading

ಕ್ರೈಂ

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

Child Abandon: ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

VISTARANEWS.COM


on

child abandon
Koo

ತುಮಕೂರು: ತಾಯಿಯೊಬ್ಬಳು (mother) ರಸ್ತೆ ಬದಿಯಲ್ಲಿ ಮೂರು ತಿಂಗಳ ಮಗುವನ್ನು ಅನಾಥವಾಗಿ (Child abandon) ಬಿಟ್ಟು ಹೋಗಿರುವ ಪ್ರಕರಣ ತುಮಕೂರು (Tumkur news) ಜಿಲ್ಲೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ನೊಣವಿನಕೆರೆ ಪೊಲೀಸರಿಗೆ ಆಶಾ ಕಾರ್ಯಕರ್ತೆ ಕಲಾವತಿ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಮಗು ಕರೆದೊಯ್ಯಲಾಗಿದೆ. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಆರೋಗ್ಯವಾಗಿರುವ ಮಗು 4.5 ಕೆಜಿಯಷ್ಟು ತೂಕವಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಎಟಿಎಂಗಳ ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ (ATM theft) ಗ್ಯಾಂಗ್ ಬಗ್ಗೆ ಪೊಲೀಸರು ಇದೀಗ ತಲೆಕೆಡಿಸಿಕೊಂಡಿದ್ದಾರೆ. ಹರ್ಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ (Robbery Case) ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ನಿನ್ನೆ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇವರ ಖತರ್‌ನಾಕ್‌ ಬುದ್ಧಿ ಒಂದೆರಡಲ್ಲ. ಕಳ್ಳತನ ವೇಳೆ ಎಟಿಎಂನಲ್ಲಿರುವ ಸಿಸಿಟಿವಿ ಕ್ಯಾಮೆರಾ ಲೆನ್ಸ್‌ಗೆ ಕಪ್ಪು ಪೇಂಟ್‌ ಬಳಿಯುತ್ತಾರೆ. ಅಲ್ಲಿಗೆ ಅದೂ ಮಟಾಶ್.‌ ಬಳಿಕ ಗ್ಯಾಸ್ ಕಟರ್ ಬಳಸಿ ಎಟಿಎಂ ಓಪನ್ ಮಾಡಿ ಲಕ್ಷಾಂತರ ರೂಪಾಯಿ ಹಣ ದರೋಡೆ ಮಾಡುತ್ತಾರೆ. ಬೆಳ್ಳಂದೂರಿನಲ್ಲಿ ಜೂ. 6ರಂದು ಬೆಳಗಿನ ಜಾವ 3.30ಕ್ಕೆ ಕೃತ್ಯ ನಡೆಸಲಾಗಿದೆ. ಸದ್ಯ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ.

ಈ ಸಂಬಂಧ ಏಜೆನ್ಸಿ ಸಿಬ್ಬಂದಿ ಕಿರಣ್ ಎಂಬುವವರಿಂದ ದೂರು ದಾಖಲಾಗಿದೆ. ಬೆಳ್ಳಂದೂರು ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರತಿನಿತ್ಯ ರಾತ್ರಿ ವೇಳೆ ನಗರದ ಎಟಿಎಂಗಳ ಸುತ್ತಮುತ್ತಲೂ ಹೆಚ್ಚಾಗಿ ಗಸ್ತಿಗೆ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ಕಾರಿನ ಮೇಲೆ ಕಾಡಾನೆ ದಾಳಿ, ಕುಟುಂಬ ಪಾರು

ಕೊಡಗು: ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild animal attack) ಉಪಟಳ ಹೆಚ್ಚಾಗುತ್ತಿದ್ದು, ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ (Elephant attack) ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿ ಮಾಡಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಸೆರೆಹಿಡಿಯದೆ ಸುಮ್ಮನಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

Continue Reading
Advertisement
Pakistan
ವಿದೇಶ5 mins ago

Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

Kalki 2898 AD box office collection weekend 2
ಟಾಲಿವುಡ್7 mins ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

Viral Video
Latest7 mins ago

Viral Video: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

murder case hosakote
ಕ್ರೈಂ8 mins ago

Murder Case: ‌ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

Viral Video
ಪ್ರಮುಖ ಸುದ್ದಿ12 mins ago

Viral Video : ಮೆಟ್ರೊದಲ್ಲಿ ಪರ್ಸ್ ಕದಿಯಲು ಮುಂದಾದ ಕಳ್ಳನಿಗೆ ಬಿತ್ತು ಗೂಸಾ! ವಿಡಿಯೊ ನೋಡಿ

Team India
ಪ್ರಮುಖ ಸುದ್ದಿ16 mins ago

Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

ರಾಹುಲ್‌ ಗಾಂಧಿ rahul gandhi ippb account 2 pm narendra modi
ಪ್ರಮುಖ ಸುದ್ದಿ32 mins ago

PM Narendra Modi: ಟಕಾಟಕ್‌ ಆಯ್ತು, ಈಗ ಮೋದಿ 3 ಸಾವಿರಕ್ಕಾಗಿ ಪೋಸ್ಟ್‌ ಆಫೀಸ್‌ ಮುಂದೆ ಮಹಿಳೆಯರ ಕ್ಯೂ!

Gautam Gambhir
ಪ್ರಮುಖ ಸುದ್ದಿ59 mins ago

Gautam Gambhir : ಗಂಭೀರ್ ಕೆಕೆಆರ್ ತೊರೆಯುವುದು ನಿಶ್ಚಿತ​; ಈಡನ್​ ಗಾರ್ಡನ್ಸ್​​ನಲ್ಲಿ ವಿದಾಯದ ಶೂಟಿಂಗ್

Actor Darshan Lost KG In 25 Days
ಕ್ರೈಂ1 hour ago

Actor Darshan: 25 ದಿನಕ್ಕೆ ದರ್ಶನ್‌ ತೂಕ ಕಳೆದುಕೊಂಡಿದ್ದು ಇಷ್ಟೊಂದಾ?

road accident vijayapura
ವಿಜಯಪುರ1 hour ago

Road Accident: ಬಸ್‌ ಹರಿದು ವ್ಯಕ್ತಿ ಸಾವು; ಮರಳೇಕಾಯಿ ತಿಂದು 8 ಮಕ್ಕಳು ಅಸ್ವಸ್ಥ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ15 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ17 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ18 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌