Site icon Vistara News

Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾ’ಲೀಕ’ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

prajwal revanna case bedsheet

ಬೆಂಗಳೂರು: ಅತ್ಯಾಚಾರ (Physical Abuse) ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ (‌Prajwal Revanna Case) ಪ್ರಕರಣದಲ್ಲಿ ಎಸ್‌ಐಟಿ (SIT) ತನಿಖೆ ತೀವ್ರಗೊಳಿಸಿದ್ದು, ಪ್ರಜ್ವಲ್‌ ಮನೆಯಲ್ಲಿ ವಶಪಡಿಸಿಕೊಳ್ಳಲಾದ ʼಸಂಶಯಾಸ್ಪದʼ ಕಲೆಗಳುಳ್ಳ ಬೆಡ್‌ಶೀಟ್‌ ಬಗ್ಗೆ ಪ್ರಶ್ನಿಸಿದೆ. ಈ ಸಂದರ್ಭದಲ್ಲಿ ಆ ಕಲೆಗಳಿಗೂ ತನಗೂ ಸಂಬಂಧವೇ ಇಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಮೇ 29ರಂದು ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆಯನ್ನು ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್‌ ಆಗಮನಕ್ಕೂ ಒಂದು ದಿನ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆಯಲ್ಲಿ ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದೆ. ಶೋಧದ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿತ್ತು. ಈ ಬೆಡ್‌ಸ್ಪ್ರೆಡ್‌ ಅನ್ನು ಪ್ರಜ್ವಲ್‌ ಮುಂದೆ ಹಿಡಿದು ಪ್ರಶ್ನಿಸಿದಾಗ, ಸಕಾರಾತ್ಮಕ ಉತ್ತರ ದೊರೆತಿಲ್ಲ.

ಸಿಂಗಲ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಮೇಲ್ವಾಸು ಕಂಡುಬಂದಿದೆ. ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಡಿಜೈನ್ ಉಳ್ಳ ವಾಲ್ ಪೇಪರ್ ತುಂಡು ದೊರೆತಿದೆ. ಸದ್ಯ ಎಸ್ಐಟಿ ಅಧಿಕಾರಿಗಳು ಈ ಸೊತ್ತುಗಳನ್ನ ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ. ಜಪ್ತಿಪಡಿಸಿದ ವಸ್ತುಗಳನ್ನು ತಜ್ಞರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ನಡುವೆ, ಅಶ್ಲೀಲ ವಿಡಿಯೋ ಮಾಡಿಕೊಂಡಿರಬಹುದಾದ ಮೊಬೈಲ್‌ ಕೂಡ ಪ್ರಜ್ವಲ್‌ ಬಳಿ ದೊರೆತಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, ಅದು ಒಂದು ವರ್ಷದ ಹಿಂದೆಯೇ ನಾಪತ್ತೆಯಾಗಿದೆ. ಈ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ ಎಂದು ತಿಳಿಸಿದ್ದಾರೆ ಪ್ರಜ್ವಲ್.‌ ಈ ಬಗ್ಗೆಯೂ ಹೆಚ್ಚಿನ ತನಿಖೆ ನಡೆಯಬೇಕಿದೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ‌ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಮೊದಲ ಆರೋಪಿಯಾಗಿದ್ದು, ಜೈಲಿಗೆ ಹೋಗಿ ಈಗ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣದಲ್ಲಿ ಬೇಕಾಗಿರುವ ಭವಾನಿ ರೇವಣ್ಣ (Bhavani Revanna) ಇನ್ನೂ ಎಸ್‌ಐಟಿ ಕೈಗೆ ಸಿಕ್ಕಿಲ್ಲ.

ಪುರುಷತ್ವ ಪರೀಕ್ಷೆಗೆ ಕೋರ್ಟ್‌ ಸಮ್ಮತಿ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತನಿಖೆಗೆ ಅಸಹಕಾರ ನೀಡುತ್ತಿದ್ದರು. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Exit mobile version