ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್ ಟೇಕ್ ಆಫ್ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.
ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್ ಹತ್ತಲು ಬೋರ್ಡಿಂಗ್ ಕ್ಲೋಸ್ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್ ಆಫ್ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.
ಬುಕ್ ಮಾಡಿದ್ದ ಲುಫ್ತಾನ್ಸಾ ಫ್ಲೈಟ್ ಹತ್ತದ ಪ್ರಜ್ವಲ್ ರೇವಣ್ಣ!
ಲುಫ್ತಾನ್ಸಾ ಏರ್‌ಲೈನ್ಸ್ ಫ್ಲೈಟ್ LH764 ರಲ್ಲಿ ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್ ಅನ್ನು ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದರು. ಈ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಸಹ ಇದ್ದವು. ಆದರೆ, ಎಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ಕಳ್ಳಾಟ ಆಡಲು ಶುರು ಮಾಡಿದರೋ, ಅದೀಗ ಎಸ್‌ಐಟಿ ತಂಡವನ್ನು ಗರಂ ಆಗಿಸಿದೆ. ಒಂದು ಕಡೆ ಕಾನೂನಿಗೆ ತಲೆಬಾಗುತ್ತೇನೆ ಎಂದು ಪ್ರಜ್ವಲ್ ಅಪ್ಪ ಎಚ್.ಡಿ. ರೇವಣ್ಣ ಹೇಳುತ್ತಾರೆ. ಆದರೆ, ಇನ್ನೊಂದು ಕಡೆ ಕಾನೂನಿಗೆ ಡೋಂಟ್ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್ ಕೂಡಾ ಜಾರಿ ಮಾಡಲಾಗಿದೆ.
ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದೇ ವಾಪಸ್ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿತ್ತು.
ಹೌದು, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಜರ್ಮನಿಯಲ್ಲಿರುವ ಪ್ರಜ್ವಲ್, ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಪ್ರಜ್ವಲ್ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ಬುಧವಾರ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್ ಆಗಲಿದ್ದು, ಅವರಿಗಾಗಿ ಸೀಟ್ ನಂಬರ್ 6ಜಿ ಬುಕ್ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು.
ಹರಿಯಾಣದ ಅಕಲ್ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್ ಬುಕ್ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್ ಟೇಕಾಫ್ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು. ಆದರೆ, ಟಿಕೆಟ್ ಬುಕ್ ಮಾಡಿದ್ದ ಪ್ರಜ್ವಲ್ ಮಾತ್ರ ಇತ್ತ ಸುಳಿಯಲೇ ಇಲ್ಲ.
ಇದನ್ನೂ ಓದಿ | HD Revanna Released: ರಿಲೀಸ್ ಬಳಿಕ ರೇವಣ್ಣ ಫಸ್ಟ್ ರಿಯಾಕ್ಷನ್; ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ
ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್ ಔಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು.
ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎಂದೇ ಭಾವಿಸಲಾಗಿತ್ತು.