Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು! - Vistara News

ಕ್ರೈಂ

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case: ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

VISTARANEWS.COM


on

Prajwal Revanna case Revanna bail plea to be heard on Monday Advocate Nagesh argument was as follows
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ಇಂದೂ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ವಾದ ಮಂಡಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಈ ವೇಳೆ ವಾದ ಮಂಡನೆಗೆ ಜಯ್ನಾ ಕೊಠಾರಿ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ

ಈ ವೇಳೆ ವಾದ ಮುಂದುವರಿಸಿದ ನಾಗೇಶ್‌, ಪ್ರಕರಣದಲ್ಲಿ ಹಾಕಿದ ಸೆಕ್ಷನ್‌ಗಳ ಬಗ್ಗೆ ಉಲ್ಲೇಖಿದರು. ಸಂತ್ರಸ್ತೆ ಎಲ್ಲಿದ್ದಾರೆ, ಸಂತ್ರಸ್ತೆಗೆ ಏನಾದರೂ ಗಾಯವಾಗಿದೆಯಾ? ಸಂತ್ರಸ್ತೆಯ ಪರಿಸ್ಥಿತಿಯ ಬಗ್ಗೆ ಎಸ್‌ಐಟಿ ಮಾತನಾಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾಗದ ಕಾರಣ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿತ್ತು. ಮಹಿಳೆಯ ಸುರಕ್ಷತೆ ಸಂಬಂಧ ನಿರೀಕ್ಷಣಾ ಜಾಮೀನು ನಿರಾಕರಣೆ ಮಾಡಲಾಗಿತ್ತು. 364(a), 365 ಅಡಿ ಕೇಸ್ ದಾಖಲಿಸುವ ಅಗತ್ಯವೇ ಇರಲಿಲ್ಲ ಎಂದು ವಕೀಲರಾದ ನಾಗೇಶ್‌ ಅವರು ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವಿಮಾನ ಹೈಜಾಕ್ ಪ್ರಕರಣದ ಉಲ್ಲೇಖ

ಈ ವೇಳೆ ವಿಮಾನ ಹೈಜಾಕ್ ಪ್ರಕರಣವನ್ನು ಉಲ್ಲೆಖಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಈ ಹಿಂದೆ ವಿಮಾನ ಹೈಜಾಕ್ ಮಾಡಿ ಉಗ್ರನ ಬಿಡುಗಡೆಗೆ ಕೋರಿದ್ದರು. ವಿಮಾನ ಹೈಜಾಕ್ ಸಮಯದಲ್ಲಿ ಜಸ್ವಂತ್ ಸಿಂಗ್ ಮಂತ್ರಿ ಆಗಿದ್ದರು. ಆಗ ಉಗ್ರರನ್ನು ಬಿಟ್ಟು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬಿಡಿಸಿದ್ದರು. ಇದಾದ ಬಳಿಕವೇ ಸೆಕ್ಷನ್ 364(a) ಸೇರಿಸಲಾಯಿತು. ಇಲ್ಲಿ ಇಂತಹ ಘಟನೆ ನಡೆದಿಲ್ಲವಾದರೂ ಸೆಕ್ಷನ್ 364(a) ಸೇರಿಸಲಾಗಿದೆ. ನಮ್ಮ ಕಕ್ಷಿದಾರ ರೇವಣ್ಣ ವಿರುದ್ಧ 364(a) ದಾಖಲು ಮಾಡಿದ್ದಾರೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ 21 ವರ್ಷದ ಮಗ ದೂರು ನೀಡಿದ್ದಾನೆ ಎಂದು ವಾದ ಮಂಡಿಸಿದರು.

ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ?

ಮಹಿಳೆಯನ್ನು ಅಪಹರಿಸಿ ವಿದೇಶಕ್ಕೆ ಕರೆದೊಯ್ದರೆ ಈ ಸೆಕ್ಷನ್‌ಗಳು ಅಪ್ಲೇ ಆಗುತ್ತವೆ. ಪ್ರಕರಣದಲ್ಲಿ ರೇವಣ್ಣ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಸಾರಾಂಶ ಉಲ್ಲೇಖಿಸಿದ ನಾಗೇಶ್‌, ದೂರುದಾರ ಮಗನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದಾರೆಂದು ಹೇಳಿದ್ದಾರೆ. ದೂರುದಾರನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ದೂರಿನಲ್ಲಿ ಇರುವ ಸತೀಶ್ ಬಾಬು ಹೇಳಿಕೆಯನ್ನು ಗಮನಿಸೋಣ. ಅದರಲ್ಲಿ “ನಿನ್ನ ತಾಯಿ ಮೇಲೆ ಪೊಲೀಸ್ ಕೇಸ್ ಆಗುತ್ತದೆ. ರೇವಣ್ಣ ಕರೆದಿದ್ದಾರೆಂದು ಹೇಳಿ ಕರೆದುಕೊಂಡು ಹೋದರು” ಎಂದು ಆರೋಪ ಮಾಡಲಾಗಿದೆ. ಹಾಗಾದರೆ, ಸಿಎಂ ಹೇಳಿದ್ದಾರೆ ಎಂದು ಕರೆದೊಯ್ದರೆ ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ? ರೇವಣ್ಣ ಸಾಹೇಬರು ಹೇಳಿದ್ದಾರೆ ಎಂದು ಕರೆದೊಯ್ದರೆ ಅದು ಅಪಹರಣವೇ? ಇದರಲ್ಲಿ ಮೋಸವಿದೆಯೇ? ಬಲ ಪ್ರಯೋಗವಿದೆಯೇ? ಹೀಗಾಗಿ ಇಲ್ಲಿ ಅಪಹರಣದ ಯಾವುದೇ ಅಂಶಗಳು ಅನ್ವಯವಾಗುವುದಿಲ್ಲ ಎಂದು ವಾದ ಮಂಡಿಸಿದರು.

ಪೊಲೀಸರು ಹಲ್ಲಿಲ್ಲದ ಹಾವುಗಳು

ಈ ಪ್ರಕರಣದಲ್ಲಿ ಅಪಹರಣಕ್ಕೊಳಗಾದವರೇ ಆಕ್ಷೇಪಣೆ ಸಲ್ಲಿಸಬೇಕು. ಬೇರೆ ಯಾರೂ ಆಕ್ಷೇಪಣೆ ಸಲ್ಲಿಸಲಾಗುವುದಿಲ್ಲ. 365 ಅಕ್ರಮ ಬಂಧನ‌ ಸೆಕ್ಷನ್ ಕೂಡ ಅನ್ವಯ ಆಗುವುದಿಲ್ಲ. ಇಲ್ಲಿ ಏನು ಡಿಮ್ಯಾಂಡ್ ಇದೆ? ಅಪಹರಣವೂ ಇಲ್ಲ,‌ ಅಕ್ರಮ ಬಂಧನವೂ ಇಲ್ಲ. ನಾಳೆ‌ ಯಾರಿಂದಲಾದರೂ ಹೇಳಿಕೆ ಪಡೆದು ಸಾಕ್ಷ್ಯ ಸೃಷ್ಟಿಸಬಹುದು. ಏಕೆಂದರೆ ಪೊಲೀಸರು ಹಲ್ಲಿಲ್ಲದ ಹಾವುಗಳು. ಪೊಲೀಸರಿಗೆ ಸೆಕ್ಷನ್ 161 ಹೇಳಿಕೆ ಎಂಬ ಅಸ್ತ್ರ ಇದೆ. ಇನ್ನು ಎಚ್.ಡಿ.ರೇವಣ್ಣ ರಾಜಕೀಯ ಪಕ್ಷದಲ್ಲಿದ್ದಾರೆ ಎಂದು ನಾಗೇಶ್‌ ವಾದಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಪ್ರಚೋದನೆಯಿಂದ ಕೂಡಿದ ಕೇಸ್‌ ಇದು

ಏಪ್ರಿಲ್ 29ರಂದು ಕಿಡ್ನ್ಯಾಪ್ ಆಗುತ್ತೆ, 4 ದಿನ ಬಿಟ್ಟು ಎಫ್‌ಐಆರ್‌ ದಾಖಲು ಮಾಡಲಾಗುತ್ತದೆ. ಏ.29ಕ್ಕೆ ಘಟನೆ ನಡೆದಿದೆ ಎಂದು ಉಲ್ಲೇಖಿಸಿದ್ದು, ಮೇ 2ರಂದು ಕೇಸ್ ದಾಖಲು ಮಾಡಲಾಗಿದೆ. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ‌ಕೇಸ್ ದಾಖಲಾಗಿತ್ತು. ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇತ್ತು. ನಂತರ ಪೊಲೀಸರು 41A ಅಡಿ ನೋಟಿಸ್ ಜಾರಿ ಮಾಡಿದ್ದಾರೆ. ಮೇ 3ರಂದು ನೋಟಿಸ್ ನೀಡಿ ಮೇ 4ರಂದು ವಿಚಾರಣೆಗೆ ಬರಲು ಹೇಳಿದ್ದಾರೆ. ರೇವಣ್ಣ ವಿರುದ್ಧ ದಾಖಲಾದ ಕೇಸ್ ಪ್ರಚೋದನೆಯಿಂದ ಆಗಿದೆ. ಪ್ರಚೋದನೆಯಿಂದ ಕೇಸ್ ಹಾಕಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ರೇವಣ್ಣಗೆ ಜಾಮೀನು ನೀಡಬೇಕೆಂದು ಸಿ.ವಿ.ನಾಗೇಶ್ ಬಲವಾಗಿ ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ ಏನು ಹೇಳಿದೆ?

ತನಿಖೆಗೆ ಸಹಕರಿಸುತ್ತಿಲ್ಲ ಅಂತಾರೆ, ಯಾವ ರೀತಿ ಸಹಕರಿಸಬೇಕು. ಎಚ್.ಡಿ. ರೇವಣ್ಣ ಅವರ ತನಿಖೆ ಬಹುತೇಕ ಮುಗಿದಿದೆ. ಸುಪ್ರೀಂ ಕೋರ್ಟ್ ಒಂದು ಪ್ರಕರಣದಲ್ಲಿ ಆದೇಶವನ್ನು ನೀಡಿದೆ. ಕಸ್ಟಡಿಯಲ್ಲಿದ್ದಾಗ ತನಿಖೆ ಮುಗಿದಿದ್ದರೆ ಬೇಲ್ ನೀಡಬಹುದೆಂದು ಹೇಳಿದೆ. ರೇವಣ್ಣರನ್ನು ಕಸ್ಟಡಿಗೆ ತೆಗೆದುಕೊಂಡು ಹೇಳಿಕೆ ಪಡೆದಿದ್ದಾರೆ. ಎಸ್‌ಐಟಿ ಏನೆಲ್ಲ ಸಾಕ್ಷಿ ಸಂಗ್ರಹಿಸಿದೆ ಎಂದು ಹೇಳಬೇಕು.

ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಯಾವುದನ್ನು ನಂಬಬೇಕು?

ಕಿಡ್ನ್ಯಾಪ್ ಸಂತ್ರಸ್ತೆಗೆ ಏನಾದರೂ ಗಾಯಗಳಾಗಿವೆಯಾ? ಕಿಡ್ನ್ಯಾಪ್ ಸಂತ್ರಸ್ತೆಗೆ ಯಾವುದೇ ಚಿಕಿತ್ಸೆಯನ್ನು ಕೊಡಿಸಿಲ್ಲ. ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆಯೂ ಹಾಜರುಪಡಿಸಿಲ್ಲ. 164 ಅಡಿಯಲ್ಲಿ ಹೇಳಿಕೆಯೂ ದಾಖಲಿಸಿಲ್ಲ. ಇಷ್ಟು ದಿನವಾದ್ರು ಯಾಕೆ 164 ಸ್ಟೇಟ್ಮೆಂಟ್ ಮಾಡಿಸಿಲ್ಲ. ಎಸ್‌ಐಟಿಯವರು ಕಳೆದ 6 ದಿನಗಳಿಂದ ಏನ್ ಮಾಡುತ್ತಿದ್ದಾರೆ? ಸಂತ್ರಸ್ತೆ ಪತ್ತೆಯಾದ ಸ್ಥಳದ ಕಂದಾಯ ದಾಖಲೆ ಪಡೆಯಬೇಕಂತಾರೆ. ಮುಂದಿನ ತನಿಖೆ ನಡೆಸಲಾಗುವುದು ಎಂದು ಹೇಳುತ್ತಾರೆ, ಇದರರ್ಥವೇನು? ಸಂತ್ರಸ್ತೆ ಕೂಡಿಹಾಕಿದ್ದ ಸ್ಥಳ ಪರಿಶೀಲಿಸಬೇಕು ಎಂದು ಹೇಳುತ್ತಾರೆ. ಹಾಗಾದರೆ ಇವರು ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಸಂತ್ರಸ್ತೆಯನ್ನು ಕರೆದೊಯ್ದ ವಾಹನ ಪತ್ತೆ ಹಚ್ಚಬೇಕು ಎಂದು ಹೇಳುತ್ತಾರೆ. ವಾಹನ ಸೀಜ್ ಮಾಡಬೇಕಿದೆ ಎಂದು ಕೂಡ ಹೇಳಿದ್ದಾರೆ. ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಗಾಡಿ ಸೀಜ್ ಬಗ್ಗೆ ತಿಳಿಸಿದ್ದಾರೆ. ಇವರು ಎಷ್ಟು ವಾಹನಗಳನ್ನು ಸೀಜ್ ಮಾಡಬೇಕು? ಆರೋಪಿ ಕೃತ್ಯಕ್ಕೆ ಬಳಸಿದ ಬೈಕ್, ಮೊಬೈಲ್ ಸೀಜ್ ಆಗಿದೆ ಎಂದು ಎಸ್‌ಐಟಿಯವರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಒಂದು ಕಡೆ ಸೀಜ್ ಮಾಡಬೇಕು ಎಂದು ಹೇಳಿಕೆ ಕೊಡುತ್ತಾರೆ. ಮತ್ತೊಂದು ಕಡೆ ವಾಹನ ಸೀಜ್ ಮಾಡಿರುವುದಾಗಿ ಅವರು ಹೇಳುತ್ತಾರೆ. ಯಾವುದನ್ನು ನಂಬಬೇಕು ಎಂದು ಹಿರಿಯ ವಕೀಲ ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಈ ವಿಷಯದಲ್ಲಿ ರೇವಣ್ಣ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೂ ಒಂದು ಮಿತಿ ಇರಬೇಕು. ತನಿಖಾಧಿಕಾರಿಗಳು ನಾಲ್ಕು ದಿನಗಳಿಂದ ಏನು ಮಾಡುತ್ತಿದ್ದಾರೆ. ಎಸ್‌ಐಟಿಯವರು ಸ್ಥಳ ಮಹಜರು ಮಾಡಬೇಕು ಎಂದು ಹೇಳುತ್ತಾರೆ. ಆರೋಪಿ ಸತೀಶ್ ಬಾಬಣ್ಣ ಸಂತ್ರಸ್ತೆಯನ್ನು ಕರೆದೊಯ್ದ ಸ್ಥಳ, ಸಂತ್ರಸ್ತೆಯನ್ನ ಕೂಡಿಹಾಕಿದ ಸ್ಥಳ ಮಹಜರು ಮಾಡಬೇಕಂತಾರೆ. ಹಾಗಾದರೆ ಸ್ಥಳೀಯ ಪೊಲೀಸರು ಏನು ಮಾಡುತ್ತಾರೆ? ಸ್ಥಳೀಯ ಪೊಲೀಸರಿಂದ ಒಂದು ಸಲ ಸ್ಥಳ ಮಹಜರು, ಎಸ್‌ಐಟಿ ಒಂದು ಸಲ ಸ್ಥಳ ಮಹಜರು ಮಾಡಬೇಕಾ? ಎಸ್ಐಟಿ ಯಾವ ಕಾರಣಕ್ಕೆ ಪೊಲೀಸ್ ಕಸ್ಟಡಿಗೆ ಕೇಳಿತ್ತು ಎಂದು ರಿಮ್ಯಾಂಡ್ ಅರ್ಜಿಯನ್ನು ವಕೀಲ ಸಿ.ವಿ.ನಾಗೇಶ್ ಓದಿ ಹೇಳಿದರು. ಪೊಲೀಸರು ನೀಡಿದ್ದ ಕಾರಣಗಳನ್ನು ಇದೇ ವೇಳೆ ಪ್ರಶ್ನಿಸಿದರು.

ಸಂತ್ರಸ್ತೆಯಿಂದ‌ 164 ಹೇಳಿಕೆ‌ ದಾಖಲಿಸಬೇಕಿದೆ ಎಂದು ಎಸ್ಐಟಿ ಹೇಳಿದೆ. ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ ಇಷ್ಟು ದಿನ ಏನು ಮಾಡುತ್ತಲಿದೆ? ಎಂದು ನಾಗೇಶ್‌ ಪ್ರಶ್ನೆ ಮಾಡಿದರು.

ಇಡೀ ಪ್ರಕರಣದ ಟೈಂ ಲೈನ್‌ ಹೇಳಿದ ಜಯ್ನಾ ಕೊಠಾರಿ

ಆಗ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ಎಚ್‌.ಡಿ. ರೇವಣ್ಣಗೆ ಜಾಮೀನು ನೀಡಲು ಎಸ್‌ಪಿಪಿಯಿಂದ ಆಕ್ಷೇಪವಿದೆ. ಸಂತ್ರಸ್ತೆ ಪುತ್ರನಿಗೆ ಮೊದಲು ಸಂತ್ರಸ್ತೆ ವಿಡಿಯೊ ಬಗ್ಗೆ ತಿಳಿಯುತ್ತದೆ. ಸಾಕಷ್ಟು ಮಹಿಳೆಯರೊಂದಿಗಿರುವ ಅಶ್ಲೀಲ ವಿಡಿಯೊಗಳೂ ಕಾಣುತ್ತದೆ. ಅದಾದ ಬಳಿಕ ‌ಮಹಿಳಾ ‌ಆಯೋಗಕ್ಕೆ ದೂರು ನೀಡುತ್ತಾರೆ. ಹೊಳೆನರಸೀಪುರ ಠಾಣೆಯಲ್ಲಿ ಒಂದು ‌ಪ್ರಕರಣ ದಾಖಲಾಗುತ್ತದೆ. ಬಳಿಕ ಸರ್ಕಾರದಿಂದ ಎಸ್‌ಐಟಿ ರಚನೆಯಾಗಿದೆ ಎಂದು ಇಡೀ ಪ್ರಕರಣದ ಟೈಂ ಲೈನ್‌ ಅನ್ನು ಹೇಳಿದರು.

ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ

ಸಂತ್ರಸ್ತೆ ಆರೋಪಿ ಮನೆಯಲ್ಲಿ 6 ವರ್ಷದಿಂದ ಕೆಲಸ ಮಾಡುತ್ತಿದ್ದರು. ಏಪ್ರಿಲ್ 28ರ ರಾತ್ರಿ ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ. ಅದಾದ ಬಳಿಕ ಆಕೆ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ಪುತ್ರ ಹಲವರಿಗೆ ಕರೆ ಮಾಡಿ ತಾಯಿ ಬಗ್ಗೆ ಮಾಹಿತಿ ಕೇಳಿದ್ದಾರೆ. ಬಳಿಕ‌ ತನ್ನ ತಾಯಿ‌ ‌ತೊಂದರೆಯಲ್ಲಿದ್ದಾಳೆಂದು ದೂರು ನೀಡಿದ್ದಾರೆ. ಅಶ್ಲೀಲ‌ ವಿಡಿಯೋಗಳಲ್ಲಿ ಸಂತ್ರಸ್ತೆ ಗುರುತು ಸಿಗುವಂತೆ ರೆಕಾರ್ಡ್ ಆಗಿದೆ. ಬಳಿಕ ತನಿಖೆ ಕೈಗೊಂಡ ಬಳಿಕ ಎಸ್‌ಐಟಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿ 40 ಕಿ.ಮೀ. ದೂರದಲ್ಲಿ ಕೂಡಿ ಹಾಕಲಾಗಿತ್ತು. ಸಂತ್ರಸ್ತೆಯನ್ನು ಕೂಡಿಹಾಕಿದ್ದ ಸ್ಥಳ ಆರೋಪಿ ಸಂಬಂಧಿಗೆ ಸೇರಿದ್ದಾಗಿದೆ. ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು

ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಲಾಗಿದೆ. ಸಾಕ್ಷಿಗಳ ಹೇಳಿಕೆಯಲ್ಲೂ ರೇವಣ್ಣ ಹೆಸರು ಉಲ್ಲೇಖವಾಗಿದೆ. ಇದು ಸ್ಪಷ್ಟವಾಗಿ ಕಿಡ್ನ್ಯಾಪ್, ಒತ್ತೆಯಾಳಾಗಿಟ್ಟುಕೊಂಡ ಪ್ರಕರಣವಾಗಿದೆ. ಸಂತ್ರಸ್ತೆಯ ಪುತ್ರ ನೀಡಿರುವ ದೂರಿನಲ್ಲಿ ಹೇಳಿರೋದು ಸತ್ಯ. ಎಚ್.ಡಿ.ರೇವಣ್ಣ ವಿರುದ್ಧ ಸೆಕ್ಷನ್ 364(a) ಅನ್ವಯವಾಗುತ್ತದೆ. 364(a) ಅಡಿಯಲ್ಲಿ ದಾಖಲಾಗಿರೋ ಕೆಲ‌ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಹೀಗಾಗಿ ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಕರಣದ ತೀವ್ರತೆಯೂ ಜಾಸ್ತಿ ಇದೆ. ಆರೋಪಿಯ ತಪ್ಪು ಕಂಡುಬಂದಾಗ ಬಹುತೇಕ ಈ ಸೆಕ್ಷನ್‌ಗಳನ್ನೇ ಹಾಕಲಾಗುತ್ತದೆ ಎಂದು ಜಯಾ ಕೊಠಾರಿ ಹೇಳಿದರು.

ರೇವಣ್ಣ ನಾಪತ್ತೆಯಾದರೆ? ಸಂತ್ರಸ್ತೆಯರ ಕಿಡ್ನ್ಯಾಪ್‌ ಮಾಡಿಸಿದರೆ?

ಆರೋಪಿಯ ಪುತ್ರ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದಾರೆ. ಆರೋಪಿ ಪುತ್ರನ ಪತ್ತೆಗೆ ಬ್ಲೂಕಾರ್ನರ್ ನೋಟಿಸ್ ನೀಡಲಾಗಿದೆ. ಆದರೂ ಇಲ್ಲಿಯವರೆಗೆ ಆರೋಪಿ ಪುತ್ರ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಈವರೆಗೆ ವಾಪಸ್ ಕೂಡ ಬಂದಿಲ್ಲ. ಈ ಆರೋಪಿಯೂ ನಾಪತ್ತೆಯಾದರೆ ಏನು ಮಾಡುವುದು? ಅದಲ್ಲದೆ, ಆರೋಪಿ‌ ರೇವಣ್ಣ ತುಂಬಾನೇ ಪ್ರಭಾವಿಯಾಗಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಿದ್ರೆ ಸಾಕ್ಷ್ಯ ಹಾಳು‌ ಮಾಡುತ್ತಾರೆ. ಜಾಮೀನು‌ ನೀಡಿದರೆ ಸಂತ್ರಸ್ತೆ ಜೀವಕ್ಕೆ ಯಾರು ಗ್ಯಾರಂಟಿ ನೀಡ್ತಾರೆ? ಜಾಮೀನು ಪಡೆದು ಬೇರೆ ಮಹಿಳೆಯರನ್ನು ಕಿಡ್ನ್ಯಾಪ್‌ ಮಾಡಬಹುದು ಎಂದು ಜಯಾ ಕೊಠಾರಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ತನ್ನ ತಾಯಿಯನ್ನು ಕಾಪಾಡುವಂತೆ ಸಂತ್ರಸ್ತೆ ಮಗ ದೂರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗೆ ಜಾಮೀನು ನೀಡಬಾರದು. ಎಚ್.ಡಿ.ರೇವಣ್ಣ ವಿರುದ್ದ ಎರುಡು ಎಫ್ಐಆರ್ ದಾಖಲಾಗಿವೆ. ರೇವಣ್ಣ ವಿರುದ್ಧ ಲೈಂಗಿಕ‌ ದೌರ್ಜನ್ಯವೆಸಗಿರುವ ಆರೋಪವೂ ಇದೆ. ಲೈಂಗಿಕ‌ ದೌರ್ಜನ್ಯವೆಸಗುವ ಆರೋಪಿಗಳಿಗೆ ಸಂದೇಶ ರವಾನೆಯಾಗಬೇಕು. ಹೀಗಾಗಿ ಆರೋಪಿಗೆ ಜಾಮೀನು ನೀಡಬಾರದು. ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಹೀಗಾಗಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಯಾ ಕೊಠಾರಿ ಮನವಿ ಮಾಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಸೋಮವಾರ ವರದಿ ಸಲ್ಲಿಸಲು ಸೂಚಿಸಿದ್ದಲ್ಲದೆ, ಮತ್ತೆ ಸಮಯ ವ್ಯರ್ಥ ಮಾಡದಂತೆ ಸೂಚಿಸಿ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

VISTARANEWS.COM


on

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದ ವೇಳೆ ಭಾರಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರವಿಶಂಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ್ದರು. ಎಚ್‌ಎಎಲ್‌ ನಿಂದ ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಮೋದಿ ತೆರಳಿದ್ದರು. ಇದೇ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೋದಿ ತೆರಳುವ ಮಾರ್ಗದಿಂದ 50 ಮೀಟರ್‌ ದೂರದಲ್ಲಿ ಈ ಜಿಲೆಟಿನ್‌ ಕಡ್ಡಿಗಳು ಸಿಕ್ಕಿವೆ. ಮೋದಿ ಆಗಮನದ ವೇಳೆ ಭಾರಿ ಅವಘಡಕ್ಕೆ ಸಂಚು ರೂಪಿಸಲಾಗಿತ್ತೇ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಪ್ರಧಾನಮಂತ್ರಿ ಪ್ರಯಾಣಿಸುವ ಮಾರ್ಗದಲ್ಲಿ ಸ್ಫೋಟಿಸಲು ಇಡಲಾಗಿತ್ತೇ? ಘಟನೆ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೋರಮಂಗಲ ಠಾಣೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ವಿವಿಧ ಪ್ರದೇಶಗಳಲ್ಲಿ ಸ್ಫೋಟದ ಬೆದರಿಕೆ ನೀಡಿದ್ದಾರೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕರೆ ಬಂದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. HAL ಪ್ರದೇಶದಲ್ಲಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading

ಕ್ರೈಂ

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರಬೀಳ್ತಿದ್ದಂತೆ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದ್ರೀಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಮಿಸ್‌‌ ಆಗಿ ಆಪ್ತನ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟೌಟ್‌‌ ಮಾಡಿದ್ದಾರೆ.

Continue Reading

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading
Advertisement
ಪ್ರಮುಖ ಸುದ್ದಿ4 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest4 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest2 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest2 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest3 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌