ಪ್ರವೀಣ್ ನೆಟ್ಟಾರು ಹತ್ಯೆ‌ | ಬೆಳ್ಳಾರೆಯ ಇಬ್ಬರು ಎಸ್‌ಡಿಪಿಐ ಮುಖಂಡರ ಬಂಧನ - Vistara News

ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ‌ | ಬೆಳ್ಳಾರೆಯ ಇಬ್ಬರು ಎಸ್‌ಡಿಪಿಐ ಮುಖಂಡರ ಬಂಧನ

ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯ ಇಬ್ಬರು ಎಸ್‌ಡಿಪಿಐ ಮುಖಂಡರನ್ನು ಎನ್‌ಐಎ ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದೆ.

VISTARANEWS.COM


on

shafi iqbal
ಆರೋಪಿಗಳಾದ ಶಫಿ‌, ಇಕ್ಬಾಲ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಇವರು ಮೂವರೂ ಎಸ್‌ಡಿಪಿಐ ಮುಖಂಡರು ಎಂಬುದು ಗೊತ್ತಾಗಿದೆ.

ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, SDPI ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಬಂಧಿತರಾದವರು. ಇಂದು ಬೆಳಗ್ಗಿನ ಜಾವ ಬೆಳ್ಳಾರೆಯಲ್ಲಿರುವ ಇವರಿಬ್ಬರ ಮನೆಯಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು NIA ಉನ್ನತ ಮೂಲಗಳು ಮಾಹಿತಿ ನೀಡಿವೆ. ಒಟ್ಟು ಮೂವರನ್ನು ಇಂದು NIA ಬಂಧಿಸಿದೆ. ಸುಳ್ಯದ ಇಬ್ರಾಹಿಂ ಶಾ ಅನ್ನು ಕೂಡ ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ | ಬಂಧಿತ ಪಿಎಫ್‌ಐ ಮುಖಂಡರಿಗೆ ಪ್ರವೀಣ್‌ ನೆಟ್ಟಾರು ಹತ್ಯೆ ಲಿಂಕ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

Neha Murder Case: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಆರೋಪಿ ಫಯಾಜ್‌ನನ್ನು ಕರೆದೊಯ್ದು ಸಿಐಡಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಹುಬ್ಬಳ್ಳಿಯ ಬಿವಿಬಿ ಕಾಲೇಜಿಗೆ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರು ದಿನಗಳ‌ ಕಾಲ‌ ಕಸ್ಟಡಿಗೆ ನೀಡಿದ ಹಿನ್ನೆಲೆ ಆರೋಪಿಯನ್ನು ಧಾರವಾಡದ ಕಾರಾಗೃಹದಿಂದ ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿದೆ. ಈ ವೇಳೆ ಕಾಲೇಜು ಬಳಿ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು, ಆರೋಪಿ ಫಯಾಜ್‌ನನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸಿದರು.

ಧಾರವಾಡದ ಕಾರಾಗೃಹದಲ್ಲಿದ್ದ ಆರೋಪಿಯನ್ನು ವಿಚಾರಣೆಗಾಗಿ ಸಿಐಡಿ ಕಸ್ಟಡಿಗೆ ನೀಡಿ ಒಂದನೇ ಜೆಎಂಎಫ್‌ಸಿ‌‌‌ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕೊಲೆ‌ ನಡೆದ ಸ್ಥಳಕ್ಕೆ ಆರೋಪಿಯನ್ನು ಸಿಐಡಿ ಕರೆದೊಯ್ದು ಮಹಜರು ನಡೆಸಿದ್ದಾರೆ. ಭಾರೀ ಪೊಲೀಸ್ ಭದ್ರತೆ ಬಡುವೆ ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಆರೋಪಿಯಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದರು.

ಇದನ್ನೂ ಓದಿ | Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಹಜರು ನಡೆಸುವಾಗ ಎಬಿವಿಪಿ ಕಾರ್ಯಕರ್ತರು ಆಗಮಿಸಿ ಫಯಾಜ್‌ನನ್ನು ಗಲ್ಲಿಗೇರಿಸಬೇಕು ಎಂದು ಘೋಷಣೆ ಕೂಗಿದರು. ಈ ವೇಳೆ ಸ್ಥಳದಲ್ಲಿ ಘೋಷಣೆ ಕೂಗಬೇಡಿ ಎಂದು ಡಿಸಿಪಿ ರವೀಶ್, ಸಿಪಿಐ ದಯಾನಂದ ಸೂಚಿಸಿದರು. ಪೊಲೀಸರ ಮಾತಿಗೆ ಸ್ಪಂದಿಸದ ಎಬಿವಿಪಿ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟನೆ ನಡೆಸಲು ಮುಂದಾದರು. ನಂತರ ಅವರನ್ನು ಕ್ಯಾಂಪಸ್‌ನಿಂದ ಹೊರಕಳುಹಿಸಲಾಯಿತು.

ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್

Condemns Neha murder case Gangavathi bandh

ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ (Neha Murder Case) ಖಂಡಿಸಿ, ಇಲ್ಲಿನ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಬುಧವಾರ ಕರೆ ನೀಡಿದ್ದ ಗಂಗಾವತಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿರುವ ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ ವ್ಯಾಪಾರಿಗಳು ಬಂದ್‌ಗೆ ಸಹಕಾರ ನೀಡಿದರು. ಅತ್ಯವಶ್ಯಕ ಸೇವೆಗಳಾದ ಹಾಲಿನ ಕೇಂದ್ರ, ಆರೋಗ್ಯ ಸೇವೆ, ಮೆಡಿಕಲ್ ಶಾಪ್, ತರಕಾರಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಬಂದ್ ಕರೆ ನೀಡಿದ್ದ ಸಂಘಟನೆಯವರು, ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರಕ್ಕೆ ಅಡ್ಡಿಪಡಿಸದ ಹಿನ್ನೆಲೆ ಜನರ ಓಡಾಟ ಸಹಜವಾಗಿತ್ತು.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಬಹುತೇಕ ಅಂಗಡಿ-ಮುಂಗಟ್ಟು ಬಂದ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಳ್ಳಾರಿ ವಲಯದ ಐಜಿಪಿ ಆರ್.ಎಸ್. ಲೋಕೇಶ್‌ ಕುಮಾರ್, ಎಸ್ಪಿ ಯಶೋಧಾ ವಂಟೆಗೋಡೆ ಸ್ಥಳದಲ್ಲಿ ಬಿಡಾರ ಹೂಡಿದ್ದರು.

ಬೃಹತ್ ಮೆರವಣಿಗೆ

ಇದಕ್ಕೂ ಮೊದಲು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಎಪಿಎಂಸಿಯ ಮೊದಲ ಗೇಟ್‌ನಿಂದ ಮಹಾತ್ಮಗಾಂಧಿ ವೃತ್ತದವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಕನ್ನಡಪರ ಸಂಘಟನೆ, ವಿವಿಧ ಪಕ್ಷಗಳ ಮುಖಂಡರು, ಮಹಿಳಾ ಸಂಘಟನೆಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

ಈ ಸಂದರ್ಭದಲ್ಲಿ ಮಾಜಿ ಸಂಸದ ಎಸ್. ಶಿವರಾಮಗೌಡ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಜಿ. ವೀರಪ್ಪ, ಕಾಡಾದ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ರಾಘವೇಂದ್ರ ಶೆಟ್ಟಿ, ಶಂಕರೇಗೌಡ ಹೊಸಳ್ಳಿ, ಅಶ್ವಿನಿ ದೇಸಾಯಿ, ಮನೋಹರಸ್ವಾಮಿ, ಕವಿತಾ ಗುರುಮೂರ್ತಿ ಸೇರಿದಂತೆ ನಾನಾ ಸಮಾಜದ ಮುಖಂಡರು ಭಾಗಿಯಾಗಿದ್ದರು.

Continue Reading

ವೈರಲ್ ನ್ಯೂಸ್

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Viral News: ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದ ಚಂದ್ರಪ್ರಕಾಶ್ ಮಿಶ್ರಾನನ್ನು ಪತ್ನಿ ಮನೆಯವರು ಕೊಲೆ ಮಾಡಿದ್ದಾರೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚಿನ ದಿನಗಳಲ್ಲಿ ಸಣ್ಣ-ಪುಟ್ಟ ಕಾರಣಕ್ಕೂ ಜಗಳ ನಡೆಯುವುದು ಸಾಮಾನ್ಯ ಎಂಬಂತಾಗಿದೆ. ಮದುವೆ ಮನೆಯಲ್ಲಿ ನೆಚ್ಚಿನ ತಿಂಡಿ ಬಡಿಸಲಿಲ್ಲ, ಸರಿಯಾಗಿ ಉಪಚಾರ ಮಾಡಲಿಲ್ಲ ಎಂಬಿತ್ಯಾದಿ ಕಾರಣಕ್ಕೆ ಜಗಳ ನಡೆದು ಸಂಭ್ರಮದ ಮನೆ ಸ್ಮಶಾನವಾಗಿ ಮಾರ್ಪಟ್ಟಿದ್ದನ್ನು ನೋಡಿದ್ದೇವೆ. ಇಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಕಲಹ ವ್ಯಕ್ತಿಯೊಬ್ಬನ ಜೀವವನ್ನೇ ಬಲಿ ಪಡೆದಿದೆ. ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಸಂಭ್ರಮದಿಂದ ಕೂಡಿದ್ದ ಮನೆಯಲ್ಲಿ ಈಗ ದುಃಖ ಮಡುಗಟ್ಟಿದೆ (Viral News).

ಘಟನೆ ವಿವರ

ಚಂದ್ರಪ್ರಕಾಶ್ ಮಿಶ್ರಾ (35) ಕೊಲೆಯಾದ ವ್ಯಕ್ತಿ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದೇ ಆತ ಮಾಡಿದ ದೊಡ್ಡ ತಪ್ಪು! ಹೌದು, ಚಂದ್ರಪ್ರಕಾಶ್ ಮಿಶ್ರಾ ತನ್ನ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ನೀಡಲು ಚಿಂತನೆ ನಡೆಸಿದ್ದರು. ಇದರಿಂದ ಕೋಪಗೊಂಡ ಆತನ ಪತ್ನಿ ಚಾಬಿ ಈ ವಿಚಾರವನ್ನು ತನ್ನ ಕುಟುಂಬದವರಿಗೆ ತಿಳಿಸಿದ್ದಳು. ಇದರಿಂದ ಅಸಮಾಧಾನಗೊಂಡ ಆಕೆಯ ಮನೆಯವರು ಚಂದ್ರಪ್ರಕಾಶ್ ಮಿಶ್ರಾ ಅವರನ್ನು ಚೆನ್ನಾಗಿ ಥಳಿಸಿದ್ದರು. ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಏಪ್ರಿಲ್‌ 26ಕ್ಕೆ ಚಂದ್ರಪ್ರಕಾಶ್ ಮಿಶ್ರಾ ಅವರ ತಂಗಿಯ ಮದುವೆ ನಿಗದಿಯಾಗಿದೆ. ಹೀಗಾಗಿ ಅವರು ಪ್ರೀತಿಯ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ಕೊಡಲು ಯೋಜನೆ ಹಾಕಿಕೊಂಡಿದ್ದರು. ಅದನ್ನು ಪತ್ನಿ ಚಾಬಿ ಬಳಿ ಹೇಳಿಕೊಂಡಿದ್ದರು. ಆದರೆ ಇದನ್ನು ಕೇಳಿ ಚಾಬಿ ಉರಿದು ಬಿದ್ದಳು. ಈ ವಿಚಾರವಾಗಿ ದಂಪತಿಯ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವೇ ನಡೆಯಿತುʼʼ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಅಷ್ಟಕ್ಕೇ ಸುಮ್ಮನಾಗದ ಚಾಬಿ ತನ್ನ ಸಹೋದರರನ್ನು ಕರೆದು ಚಂದ್ರಪ್ರಕಾಶ್‌ಗೆ ಪಾಠ ಕಲಿಸುವಂತೆ ಹೇಳಿದ್ದಾಳೆ. ತಂಗಿಯ ಕರೆಗೆ ಓಗೊಟ್ಟು ಬಂದ ಚಾಬಿಯ ಸಹೋದರರು ಚಂದ್ರಪ್ರಕಾಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಕೋಲುಗಳಿಂದ ಥಳಿಸಿದ್ದಾನೆ. ಕೊನೆಗೆ ಚಂದ್ರಪ್ರಕಾಶ್‌ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದರೆ ಆಸ್ಪತ್ರೆಯಲ್ಲಿ ನಿಧನರಾದರುʼʼ ಎಂದು ಅಧಿಕಾರಿಗಳು ಘಟನೆಯನ್ನು ವಿವರಿಸಿದ್ದಾರೆ.

ಸದ್ಯ ಪೊಲೀಸರು ಘಟನೆಯ ಸಂಬಂಧ ಐವರನ್ನು ಬಂಧಿಸಿದ್ದಾರೆ. ಚಾಬಿ ಮತ್ತು ಆಕೆಯ ಸಹೋದರರು ಸೇರಿ 5 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಮದುವೆ ಮನೇಲಿ ರಸಗುಲ್ಲಾಗಾಗಿ ಹೊಡೆದಾಟ; ಆರು ಮಂದಿಯ ಪರಿಸ್ಥಿತಿ ಗಂಭೀರ!

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ವಿವಾಹ ವಾರ್ಷಿಕೋತ್ಸವದ ಉಡುಗೊರೆಯನ್ನು ನೀಡದ ಕಾರಣಕ್ಕೆ ಕೋಪಗೊಂಡ ಮಹಿಳೆಯೊಬ್ಬಳು ತನ್ನ ಪತಿಗೆ ಚಾಕುವಿನಿಂದ ಇರಿದಿದ್ದಳು. ಕೂಡಲೇ ಎಚ್ಚೆತ್ತುಕೊಂಡ ಆತ ತಪ್ಪಿಸಿಕೊಂಡು ಪಾರಾಗಿದ್ದ. ಬಳಿಕ ನೆರೆಮನೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ತನ್ನ ಅಜ್ಜ ನಿಧನ ಹೊಂದಿದ್ದರಿಂದ ಪತ್ನಿಗೆ ಉಡುಗೊರೆ ನೀಡಿರಲಿಲ್ಲ. ಇದೇ ಕಾರಣಕ್ಕೆ ಆಕೆ ಹಲ್ಲೆ ನಡೆಸಿದ್ದಳು ಎಂದು ಬಳಿಕ ಆತ ದೂರು ನೀಡಿದ್ದ.

Continue Reading

ವಿದೇಶ

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

Noida Scrap Mafia: ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಕ್ರ್ಯಾಪ್ ಮೆಟಲ್ ಮಾಫಿಯಾ ತಂಡದ ಮುಖ್ಯಸ್ಥ ಮತ್ತು ಗ್ಯಾಂಗ್‌ಸ್ಟರ್‌ ರವಿ ಕಾನಾ ಹಾಗೂ ಆತನ ಗೆಳತಿ ಕಾಜಲ್ ಝಾ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಲೆ ಮರೆಸಿಕೊಂಡಿದ್ದ ಅವರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ಜನವರಿಯಲ್ಲಿ ಕಾನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ರವಿ ಕಾನಾ ಆಲಿಯಾಸ್‌ ರವೀಂದ್ರ ನಗರ್ 16 ಸದಸ್ಯರ ಗ್ಯಾಂಗ್ ಹೊಂದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲವು ಪ್ರಕರಣಗಳ ಆರೋಪಿಯಾದ ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದರು.

VISTARANEWS.COM


on

Noida Scrap Mafia
Koo

ನವದೆಹಲಿ: ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಕ್ರ್ಯಾಪ್ ಮೆಟಲ್ ಮಾಫಿಯಾ ತಂಡದ ಮುಖ್ಯಸ್ಥ ಮತ್ತು ಗ್ಯಾಂಗ್‌ಸ್ಟರ್‌ (Noida Scrap Mafia) ರವಿ ಕಾನಾ (Ravi Kana) ಹಾಗೂ ಆತನ ಗೆಳತಿ ಕಾಜಲ್ ಝಾ (Kajal Jha) ಅವರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ನೋಯ್ಡಾ ಪೊಲೀಸರು ಥೈಲ್ಯಾಂಡ್‌ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಕಾನಾಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಅವರಿಗೆ ನೀಡಿದ್ದರು. ಈ ಕಾರಣದಿಂದ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಜನವರಿಯಲ್ಲಿ ಕಾನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಜನವರಿ 2ರಂದು ಗ್ರೇಟರ್ ನೋಯ್ಡಾದಲ್ಲಿ ಪೊಲೀಸರು ರವಿ ಕಾನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಂತರ ಆತನ ವಿರುದ್ಧ ಕಠಿಣ ಉತ್ತರ ಪ್ರದೇಶ ಗ್ಯಾಂಗ್​ಸ್ಟರ್ ಮತ್ತು ಸಾಮಾಜಿಕ ವಿರೋಧಿ ಚಟುವಟಿಕೆಗಳ ತಡೆಗಟ್ಟುವಿಕೆ (Uttar Pradesh Gangsters and Anti-Social Activities (Prevention) Act) ಕಾಯ್ದೆಯಡಿ ದೂರು ದಾಖಲಿಸಲಾಗಿತ್ತು.

ರವಿ ಕಾನಾ ಆಲಿಯಾಸ್‌ ರವೀಂದ್ರ ನಗರ್ 16 ಸದಸ್ಯರ ಗ್ಯಾಂಗ್ ಹೊಂದ್ದಾನೆ. ಈ ಗ್ಯಾಂಗ್‌ ರೀಬಾರ್ ಮತ್ತು ಸ್ಕ್ರ್ಯಾಪ್ ವಸ್ತುಗಳ ಅಕ್ರಮ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿದೆ. ಸ್ಕ್ರ್ಯಾಪ್ ಡೀಲರ್ ಆಗಿದ್ದ ಕಾನಾ ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಸ್ಕ್ರ್ಯಾಪ್ ವಸ್ತುಗಳನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಮತ್ತು ಮಾರಾಟ ಮಾಡಲು ಪ್ರಾರಂಭಿಸಿದ ಬಳಿಕ ಕೋಟ್ಯಧಿಪತಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 2023ರ ಡಿಸೆಂಬರ್ 28ರಂದು ಕಾನಾ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣವೂ ದಾಖಲಾಗಿತ್ತು.

ಈ ಮೊದಲೇ ರವಿ ಮತ್ತು ಆತನ ಗುಂಪಿನ ವಿರುದ್ಧ ಸುಮಾರು 11 ಕೇಸ್‌ಗಳು ದಾಖಲಾಗಿದ್ದವು. ಇವರ ವಿರುದ್ಧ ಅಪಹರಣ, ದರೋಡೆ ಸೇರಿದಂತೆ ವಿವಿಧ ಪ್ರಕರಣಗಳಿವೆ ಎಂದು ಗ್ರೇಟರ್‌ ನೋಯ್ಡಾದ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಗ್ರೇಟರ್ ನೋಯ್ಡಾ ಮತ್ತು ನೋಯ್ಡಾದಾದ್ಯಂತ ಗ್ಯಾಂಗ್ ಬಳಸುತ್ತಿದ್ದ ಹಲವು ಸ್ಕ್ರ್ಯಾಪ್ ಗೋದಾಮುಗಳ ಮೇಲೆ ಈಗಾಗಲೇ ದಾಳಿ ನಡೆಸಿ ಬೀಗಮುದ್ರೆ ಜಡಿಯಲಾಗಿದೆ. 

ಕಾನಾ ಮತ್ತು ಆತನ ಸಹಚರರ 120 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ನೋಯ್ಡಾ ಪೊಲೀಸರು ಹೇಳಿದ್ದಾರೆ. ಕಾನಾ ತನ್ನ ಗೆಳತಿ ಕಾಜಲ್‌ ಝಾಗೆ ದಕ್ಷಿಣ ದೆಹಲಿಯ ಐಷರಾಮಿ ಏರಿಯಾ ನ್ಯೂ ಫ್ರೆಂಡ್ಸ್‌ ಕಾಲನಿಯಲ್ಲಿ ಮೂರು ಅಂತಸ್ತಿನ ಬಂಗಲೆಯನ್ನು ಉಡುಗೊರೆಯಾಗಿ ಕೊಡಿಸಿದ್ದ. ಅದರ ಬೆಲೆ ಬರೋಬ್ಬರಿ 100 ಕೋಟಿ ರೂ. ಜನವರಿಯಲ್ಲಿ ಪೊಲೀಸರು ಆ ಐಷಾರಾಮಿ ಬಂಗಲೆಯ ಮೇಲೆ ದಾಳಿ ಬೀಗ ಜಡಿದು ಸೀಲ್‌ ಹಾಕಿದ್ದರು.

ಇದನ್ನೂ ಓದಿ: Kajal Jha: ಕಾಜಲ್‌ಗೆ ಸೇರಿದ 100 ಕೋಟಿ ರೂ. ಮೌಲ್ಯದ ಬಂಗಲೆ ಮೇಲೆ ಪೊಲೀಸರ ದಾಳಿ

ಕಾಜಲ್‌ ಝಾ ಕೆಲಸ ಹುಡುಕಿಕೊಂಡು ಬಂದು ರವಿ ಕಾನಾ ಗುಂಪು ಸೇರಿದ್ದಳು. ಕೆಲವೇ ದಿನಗಳಲ್ಲಿ ಆ ಗ್ಯಾಂಗ್‌ನ ಮುಖ್ಯ ಅಂಗವಾಗಿ ಬದಲಾದ ರೀತಿಯೇ ರೋಚಕ. ರವಿಗೆ ಸೇರಿದ ಎಲ್ಲ ಬೇನಾಮಿ ಆಸ್ತಿಯ ಲೆಕ್ಕಪತ್ರಗಳನ್ನು ಕಾಜಲ್‌ ಝಾ ನೋಡಿಕೊಳ್ಳುತ್ತಿದ್ದಳು. ರವಿಯ ಗ್ಯಾಂಗ್‌ ಜತೆಗೆ ಮನಸ್ಸಿನೊಳಗೂ ಜಾಗ ಪಡೆದಿದ್ದ ಕಾಜಲ್‌ ಅಪಾರ ಪ್ರಮಾಣದ ಆಸ್ತಿಯ ಒಡತಿಯೂ ಆಗಿದ್ದಳು. 

Continue Reading

ಸಿನಿಮಾ

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Harshika Poonacha: ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

VISTARANEWS.COM


on

Harshika Poonacha bhuvan ponnanna met pralhad joshi
Koo

ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಏ.24) ಹುಬ್ಬಳ್ಳಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದೊರಕಿಸಿ ಕೊಡುವಂತೆ ಸಚಿವರೆದುರು ಮೊರೆ ಇಟ್ಟರು. ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.

ʻʻನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ಗಲಾಟೆ ಮಾಡಿದವರ ಮುಖಚರ್ಯೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆʼʼ ಎಂದು ಸಚಿವರೆದುರು ಹೇಳಿದರು.

ʻʻನಮಗೆ ಆದಂತೆ ಬೇರೆ ಯಾರಿಗೂ ಈ ಘಟನೆ ಸಂಭವಿಸಿಬಾರದು. ಹೀಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆʼʼ ಎಂದು ಹರ್ಷಿಕಾ ಪೂಣಚ್ಚ ಮಾಧ್ಯಮಗಳಿಗೆ ತಿಳಿಸಿದರು.

ಇದನ್ನೂ ಓದಿ: Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

ಏನಿದು ಘಟನೆ?

ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಪತಿ ನಟ ಭುವನ್ ಮೇಲೆ ಹಲ್ಲೆ ನಡೆದಿತ್ತು. ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದು ಚಿನ್ನದ ಸರ ಕದಿಯಲು ಆರೋಪಿಗಳು ಯತ್ನಿಸಿದ್ದರು. ಫ್ರೆಜರ್ ಟೌನ್ ಪುಲಕೇಶಿ ನಗರದಲ್ಲಿ ಘಟನೆ ನಡೆದಿತ್ತು. ಚಿನ್ನದ ಸರ ಕದಿಯಲು ಯತ್ನಿಸಿದ್ದಲ್ಲದೇ ಕನ್ನಡದಲ್ಲಿ ಮಾತನಾಡಬೇಡಿ ಎಂದು ಆರೋಪಿಗಳು ದರ್ಪ ತೋರಿದ್ದರು ಹರ್ಷಿಕಾ ಪೂಣಚ್ಚ ಹಲ್ಲೆ ನಡೆದ ವಿಡಿಯೊವನ್ನು ಚಿತ್ರೀಕರಿಸಿ, ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಕುರಿತು ಹರ್ಷಿಕ ಪೂಣಚ್ಚ ಅವರು ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಈ ಘಟನೆ ವಿರುದ್ಧ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಈ ಸುದ್ದಿ ವೈರಲ್‌ ಆಗಿತ್ತು. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲೂ ಘಟನೆಯ ಕುರಿತು ವರದಿಯಾಗಿತ್ತು.

Continue Reading
Advertisement
Lok sabha Election
ಪ್ರಮುಖ ಸುದ್ದಿ4 mins ago

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Narsingh Yadav
ಕ್ರೀಡೆ23 mins ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ38 mins ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Neha Murder Case
ಕರ್ನಾಟಕ56 mins ago

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

IPL 2024
ಕ್ರೀಡೆ58 mins ago

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

Pratap Dudhat
ದೇಶ1 hour ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Lok Sabha Election 2024 Munirathna stops Darshan from campaigning for DK Suresh
Lok Sabha Election 20241 hour ago

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Money Guide
ಮನಿ-ಗೈಡ್2 hours ago

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Karnataka Weather
ಕರ್ನಾಟಕ2 hours ago

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Lok Sabha Election 2024 Vote on April 26 and get 10 percent discount on these hotels
Lok Sabha Election 20242 hours ago

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌