Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು - Vistara News

ಕ್ರೈಂ

Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

Raichur News: ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ.

VISTARANEWS.COM


on

raichur news misbehave
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ರಾಯಚೂರು ನಗರ (Raichur news) ಸಮೀಪದ ಯರಮರಸ್ ಬಳಿಯ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯನೊಬ್ಬ (Principal in charge) ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ (Misbehave) ವರ್ತಿಸಿದ್ದರಿಂದ ಥಳಿತಕ್ಕೊಳಗಾದ (Beaten) ಘಟನೆ ಸೋಮವಾರ ನಡೆದಿದೆ.

ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ನೊಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಬುದ್ಧಿ ಕಲಿಸಿದ್ದಾರೆ.

ಪ್ರಭಾರಿ ಪ್ರಾಚಾರ್ಯ ಮೆಹಬೂಬ್ ಅಲಿ, ತಾನು ಮಾಡಿದ್ದು ತಪ್ಪಾಗಿದೆ. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಶಿಕ್ಷಕಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆ ಅಥವಾ ಮಹಿಳಾ ಠಾಣೆಯಲ್ಲಾಗಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

ಬೆಂಗಳೂರು: ಈ ಹಿಂದೆ ಕೂಡ ಟೆಕ್ಕಿಯೊಬ್ಬರು (Techie Missingನಿಗೂಢವಾಗಿ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಮತ್ತೊಬ್ಬ ಟೆಕ್ಕಿ ನಾಪತ್ತೆಯಾಗಿದ್ದಾರೆ. ಪತಿಯನ್ನು ಹುಡುಕಿ ಕೊಡಿ ಪ್ಲೀಸ್‌ ಅಂತ ಪತ್ನಿ ಬೇಡಿಕೊಳ್ಳುತ್ತಿದ್ದಾರೆ.

ವಿಪುಲ್ ಗುಪ್ತಾ ಎಂಬ ಟೆಕ್ಕಿ ಕಾಣೆಯಾದವರು. ಆತ ಹೊರಗೆ ಹೋಗಿದ್ದಕ್ಕೆ ಸುಳಿವು ಎಂಬಂತೆ ಒಂದು ಸಿಸಿಟಿವಿ ವಿಡಿಯೋ ಬಿಟ್ಟರೆ, ಎಲ್ಲಿ ಹೋದ ಎಂಬ ಮಾಹಿತಿ ಮಾತ್ರ ಕಿಂಚಿತ್ತು ಕುಟುಂಬಸ್ಥರಿಗಿಲ್ಲ. ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಶ್ರೀಪರ್ಣದತ್ತ ಗೋಗರೆಯುತ್ತಿದ್ದಾರೆ.

ಸೋಲೋ ರೈಡ್‌ಗೆ ಹೋಗುತ್ತಿದ್ದವನ ಸುಳಿವೇ ಇಲ್ಲ!

ಈ ಹಿಂದೆ ಅಮಿತಾಬ್ ಎಂಬ ಟೆಕ್ಕಿ ಕೂಡ ಇದೇ ರೀತಿ ನಿಗೂಢವಾಗಿ ನಾಪತ್ತೆಯಾಗಿದ್ದ . ಆದರೆ ಆತನ ಸುಳಿವು ಇಂದಿಗೂ ಸಿಕ್ಕಿಲ್ಲ. ಇನ್ನು ಕೊಡಿಗೇಹಳ್ಳಿಯ ಟಾಟಾ ನಗರ ನಿವಾಸಿಯಾಗಿರುವ ವಿಪುಲ್‌ಗೆ ಇಬ್ಬರು ಮಕ್ಕಳಿದ್ದಾರೆ. ಪತಿ -ಪತ್ನಿ ಇಬ್ಬರಿಗೂ ಪೋಷಕರಿಲ್ಲ. ಆದರೂ ದುಡಿದು ತಮ್ಮ ಸಂಸಾರ ಸಾಗಿಸುತ್ತಿದ್ದರು. ಶ್ರೀಮಂತಿಕೆ ಇಲ್ಲದಿದ್ದರೂ ಜೀವನಕ್ಕಾಗುವಷ್ಟು ಸಿರಿವಂತರೇ ಆಗಿದ್ದರು. ಅಂತಹ ಕುಟುಂಬದಲ್ಲಿ ಏಕಾಏಕಿ ಪತಿ ಕಾಣೆಯಾಗಿರುವುದು ಪತ್ನಿ ಶ್ರೀಪರ್ಣ ದತ್ತಾಳಿಗೆ ನಿಜಕ್ಕೂ ಆತಂಕ ಮೂಡಿಸಿದೆ.

ವಿಪುಲ್‌ ಕಾಣೆಯಾಗಿ ಹೆಚ್ವು ಕಮ್ಮಿ ಎಂಟು ದಿನಗಳಾಗಿದೆ. ಆಗಸ್ಟ್ 4ರಂದು ಮನೆ ಪಕ್ಕದಲ್ಲಿರುವ ಹೆಚ್ ಡಿ ಎಫ್ ಸಿ ಬ್ಯಾಂಕ್‌ನಲ್ಲಿ ಒಟ್ಟು 1,80,000 ರೂ. ಹಣ ಡ್ರಾ ಮಾಡಿದ್ದಾರೆ. ನಂತರ ನಿಂಜಾ ಬೈಕ್ ತೆಗೆದುಕೊಂಡು ಹೊರ ಹೋದವನ ಸುಳಿವೂ ಕೂಡ ಇರಲಿಲ್ಲ. ಎಲ್ಲಿಗಾದರೂ ಹೋಗುವಾಗ ಪತ್ನಿಗೆ ಹೇಳಿ ಹೋಗಿದ್ದರಂತೆ. ಆದರೆ ಈ ಬಾರಿ ಯಾರಿಗೂ ವಿಚಾರ ತಿಳಿಸದೆ ಮನೆಯಿಂದ ಹೊರ ಹೋಗಿದ್ದಾರೆ. ರಾತ್ರಿಯಾದರೂ ಬಾರದ ಹಿನ್ನೆಲೆ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಆತನ ಸ್ನೇಹಿತರಿಗೂ ಕರೆ ಮಾಡಿ ಕೇಳಿದಾಗ ಅವರ್ಯಾರಿಗೂ ವಿಪುಲ್ ಬಗ್ಗೆ ಮಾಹಿತಿಯೇ ಇರಲಿಲ್ಲ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Family Dispute : ಕೌಟುಂಬಿಕ ಕಾರಣಕ್ಕೆ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Self harming
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮಾರುತಿ, ಹಾಗೂ ದರ್ಶನ್ ಮೃತ ದುರ್ದೈವಿ.

ಶಿವಮೊಗ್ಗದ ಒಟಿ ರಸ್ತೆಯ ವಿಜಯ ಗ್ಯಾರೇಜ್ ಬಳಿ ಇರುವ ಮನೆಯಲ್ಲಿ ನಿನ್ನೆ ಸೋಮವಾರವೇ ವಿಷ ಸೇವಿಸಿದ್ದಾರೆ. ಘಟನೆಯು ತಡವಾಗಿ ಬೆಳಕಿಗೆ ಬಂದಿದೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಂಬಂಧಿಗಳು ಮನೆಗೆ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಭುವನೇಶ್ವರಿ ಜತೆಗೆ ಅವರ ತಮ್ಮ ಮಾರುತಿ ಹಾಗೂ ಪುತ್ರ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Self Harming
Self Harming

ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ.

ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ ದೂರು ನೀಡಿದ ವಿಷಯ ತಿಳಿದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ‌ ನಾನೇ ಕಾರಣ ಎಂದು ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತನ್ವೀರ್ ಮೃತ ವಿದ್ಯಾರ್ಥಿ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ತನ್ವೀರ್, ಭಾನುವಾರ ಇದ್ದಕ್ಕಿದ್ದಂತೆ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿ.ಜಿಯಲ್ಲಿನ ಕೆಲ‌ ವಿದ್ಯಾರ್ಥಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ತನ್ವೀರ್‌ನ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಪೋಷಕರು ಕಾಶ್ಮೀರದಿಂದ ಬರುತ್ತಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

Assault Case: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಚಿಕ್ಕೋಡಿಯಲ್ಲಿ ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ಗ್ರಾಮ‌ ಪಂಚಾಯಿತಿ ಸದಸ್ಯ ಗೂಂಡಾ ವರ್ತನೆ ತೋರಿದ್ದಾನೆ

VISTARANEWS.COM


on

By

Koo

ಬೆಂಗಳೂರು: ಬೆಂಗಳೂರಿನಲ್ಲಿ ಸಣ್ಣ-ಪುಟ್ಟ ವಿಚಾರಕ್ಕೂ ಜನರು ಕಿರಿಕ್‌ ಮಾಡಿಕೊಳ್ಳುತ್ತಿರುವ ಘಟನೆಗಳು (Assault Case) ಹೆಚ್ಚಾಗುತ್ತಿದೆ. ಸದ್ಯ ಬೆಂಗಳೂರಿನ ಬಂಡೆಪಾಳ್ಯದ ಅಪಾರ್ಟ್ಮೆಂಟ್ ಒಂದರ ಮುಂಭಾಗ ನಿನ್ನೆ ಸೋಮವಾರ ರಾತ್ರಿ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ನಡೆದಿದೆ.

ಗಲಾಟೆ ಮಾಡಿಕೊಂಡು ಕಿತ್ತಾಡಿಕೊಂಡಿರುವ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿರಿಕ್ ಕೈ-ಕೈ ಮಿಲಾಯಿಸಿಕೊಳ್ಳುವ ಹಂತಕಕ್ಕೆ ತಲುಪಿತ್ತು. ಈ ವೇಳೆ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಆರೋಪವು ಕೇಳಿ ಬಂದಿದೆ. ಗಲಾಟೆಯ ವಿಡಿಯೋ ಎಕ್ಸ್‌ನಲ್ಲಿ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಸದ್ಯ ಗಲಾಟೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿಶೇಷ ಚೇತನ ವ್ಯಕ್ತಿಗೆ ಇಬ್ಬರು‌ ವ್ಯಕ್ತಿಗಳಿಂದ ಹಲ್ಲೆ

ವಿಶೇಷ ಚೇತನ ವ್ಯಕ್ತಿಗೆ ಇಬ್ಬರು ವ್ಯಕ್ತಿಗಳಿಂದ ಹಲ್ಲೆ ನಡೆಸಲಾಗಿದೆ. ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ. ಬೆಂಗಳೂರಿನ ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೃತ್ಯಕ್ಕೆ ಪೊಲೀಸರಿಂದ ಎನ್ ಸಿ ಆರ್ ದಾಖಲಾಗಿದೆ. ಆದರೆ ಎಫ್ ಐ ಅರ್ ಯಾಕಿಲ್ಲ ಎಂದು ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಪ್ರಶ್ನೆ ಮಾಡಿದ್ದಾರೆ. ಹುಸೇನ್ ಎಂಬ ಖಾತೆಯಿಂದ‌ ವಿಡಿಯೋ ಪೋಸ್ಟ್ ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

ನೀರು ಕೊಡಿ ಎಂದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಗ್ರಾಪಂ ಸದಸ್ಯ

ಚಿಕ್ಕೋಡಿ: ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ಗ್ರಾಮ‌ ಪಂಚಾಯಿತಿ ಸದಸ್ಯ ಗೂಂಡಾ ವರ್ತನೆ ತೋರಿದ್ದಾನೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಹಿಡಕಲ್‌ ಗ್ರಾಮದ ಸೂರಣ್ಣವರ ತೋಟದ ವಾರ್ಡ್ ನಂ 5ರ ಸದಸ್ಯ ಯಲ್ಲಪ್ಪ ಸಣ್ಣಕ್ಕಿನವರ‌ ಎಂಬಾತ ಗೂಂಡಾ ವರ್ತನೆ ತೋರಿದವನು.

ಜನರು ಕುಡಿಯೋದಕ್ಕೆ ನೀರು ಬರುತ್ತಿಲ್ಲ, ನೀರು ಕೊಡಿ ಎಂದಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಗ್ರಾಮಸ್ಥರು ಕುಡಿಯುವ ನೀರು ಸೇರಿ ಇತರೆ ಸೌಲಭ್ಯ ಕೇಳಲು ಗ್ರಾಮ ಪಂಚಾಯಿತಿಗೆ ತೆರಳಿದ್ದರು. ಈ ವೇಳೆ ಸಮಸ್ಯೆಗೆ ಸ್ಪಂದಿಸದೇ ಯಲ್ಲಪ್ಪ ಸಣ್ಣಕ್ಕಿನವರ ಗ್ರಾಮಸ್ಥರ ಮೇಲೆ ಗೂಂಡಾವರ್ತನೆ ತೋರಿರುವುದು ಮೊಬೈಲ್‌ನಲ್ಲಿ ಸೆರೆಯಾಗಿದೆ.

ಪ್ರತಿ ಸೌಲಭ್ಯವನ್ನು ತನ್ನ ಮನೆಗೆ ಬಳಸಿಕೊಳ್ಳುತ್ತಿದ್ದು ಸಾರ್ವಜನಿಕರಿಗೆ ಸೌಲಭ್ಯ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಲ್ಲಪ್ಪನ ಸದಸ್ಯತ್ವ ರದ್ದು ಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Muda Scam: ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸ್ವೀಕರಿಸದಂತೆ ಕೋರ್ಟ್‌ಗೆ ಅರ್ಜಿ

Muda Scam: ಸಿಎಂ ವಿರುದ್ಧ ಸ್ನೇಹಮಯಿ ಕೃಷ್ಣ ನೀಡಿದ್ದ ಅರ್ಜಿಯ ವಿಚಾರಣೆ ಪರಿಗಣನೆ ಸಂಬಂಧ ಈಗಾಗಲೇ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ಹೀಗಾಗಿ ಅರ್ಜಿ ಸ್ವೀಕರಿಸದಂತೆ ಆಲಂ ಪಾಷಾ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ನಿವೇಶನ ಹಗರಣಕ್ಕೆ (Muda Scam) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಕೋರಿ ಆಲಂ ಪಾಷಾ ಎಂಬುವವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಆಲಂ ಪಾಷಾ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಎಂ ವಿರುದ್ಧ ಸ್ನೇಹಮಯಿ ಕೃಷ್ಣ ನೀಡಿದ್ದ ಅರ್ಜಿಯ ವಿಚಾರಣೆ ಪರಿಗಣನೆ ಸಂಬಂಧ ಈಗಾಗಲೇ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ಹೀಗಾಗಿ ಅರ್ಜಿ ಸ್ವೀಕರಿಸದಂತೆ ಆಲಂ ಪಾಷಾ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾದಿಂದ 14 ನಿವೇಶನಗಳನ್ನು ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ಸಿಬಿಐ ಅಥವಾ ಬೇರಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು 82ನೇ ಸಿಸಿಎಚ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಆ.8ರಂದು ಖಾಸಗಿ ದೂರು ಸಲ್ಲಿಸಿದ್ದರು.

ಸಿಎಂ ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವಜನಪಕ್ಷಪಾತ ತೋರಿ, ಮುಡಾ ವಿಚಾರದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಪತ್ನಿ ಹೆಸರಿಗೆ, ದೇವರಾಜು ಎನ್ನುವವರ ಹೆಸರಿಗೆ ಸುಳ್ಳು ದಾಖಲೆ ಸೃಷ್ಟಿ ಮಾಡಿ ನಿವೇಶನ ಪಡೆದುಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಈ ಹಿಂದೆ ರಾಜ್ಯಪಾಲರು, ಕೆಲವು ಅಧಿಕಾರಿಗಳಿಗೆ ದೂರು ಅರ್ಜಿ ನೀಡಿದ್ದೆ, ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ 15 ಪುಟಗಳ ದೂರು, 300ಕ್ಕೂ ಹೆಚ್ಚು ದಾಖಲಾತಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದೇನೆ. ಸಿದ್ದರಾಮಯ್ಯನವರನ್ನು ಮೊದಲನೇ ಆರೋಪಿ, ಅವರ ಪತ್ನಿ ಎರಡನೇ ಆರೋಪಿ, ಸಂಬಂಧಿಕ ಮಲ್ಲಿಕಾರ್ಜುನ 3ನೇ ಮತ್ತು ದೇವರಾಜ್ ಎಂಬುವವರನ್ನು 4ನೇ ಆರೋಪಿಯನ್ನಾಗಿ ಮಾಡಲು ದೂರು ನೀಡಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದರು.

ಇಂದು ಕೋರ್ಟ್‌ ತೀರ್ಮಾನ

ಮುಡಾ ಹಗರಣ (MUDA Scam) ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಲಿದೆ.

ಇದನ್ನೂ ಓದಿ | Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಕೋರ್ಟ್‌ನ ಈ ಆದೇಶವನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.

Continue Reading

ಬೆಳಗಾವಿ

Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

Borewell water : ಚಚಡಿ ಗ್ರಾಮದಲ್ಲಿ ಬೋರ್‌ವೆಲ್‌ ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಬೋರ್‌ವೆಲ್‌ ನೀರು ಕುಡಿಯುತ್ತಿದ್ದಂತೆ ವಾಂತಿ- ಭೇದಿ ಕಾಣಿಸಿಕೊಂಡಿದ್ದು, ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

borewell water More than 40 people suffer from vomiting after drinking borewell water
Koo

ಬೆಳಗಾವಿ: ಬೋರ್‌ವೆಲ್ ನೀರು ಕುಡಿದು 41 ಜನರಿಗೆ ವಾಂತಿ ಭೇದಿ (Borewell water) ಕಾಣಿಸಿಕೊಂಡಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಬೋರ್‌ವೆಲ್ ನೀರಿನಿಂದಾಗಿ 41 ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಗಂಭೀರವಾಗಿದ್ದಾರೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮೂವರನ್ನು ದಾಖಲು ಮಾಡಿದ್ದು, ಓರ್ವ ಮಹಿಳೆಗೆ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ಮೂವರು ದಾಖಲಾಗಿದ್ದು, ಇನ್ನೂಳಿದವರಿಗೆ ಚಚಡಿ ಗ್ರಾಮದ ಪಿಎಚ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಗ್ಯ ಅಧಿಕಾರಿಗಳು ಬೋರ್‌ವೆಲ್ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಬಿಡು ಬಿಟ್ಟಿದ್ದಾರೆ. ಸ್ಥಳಕ್ಕೆ ಡಿಎಚ್ಒ ಮಹೇಶ್ ಕೋಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರ ಜತೆಗೆ ತುರ್ತು ಸಭೆ ನಡೆಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸೂಚನೆ ನೀಡಲಾಗಿದೆ. ಸದ್ಯಕ್ಕೆ ಬೋರ್ ವೆಲ್ ನೀರು ಕುಡಿಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: 70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

ಸವದತ್ತಿಯ ಚಚಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀಮ್ಸ್ ಆಸ್ಪತ್ರೆಗೆ ಡಿಹೆಚ್ಒ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು. ಬೈಲಗೊಂಗಲ, ಇಂಚಲ ಸೇರಿ ಬೀಮ್ಸ್ ಆಸ್ಪತ್ರೆಯಲ್ಲಿ ಅಸ್ವಸ್ಥರು ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಈರವ್ವ ಗಾಳಿಮಠ (54) ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಳಿಕ ಮಾತನಾಡಿದ ಡಿಹೆಚ್‌ಓ ಮಹೇಶ ಕೋಣಿ, ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 41 ಜನ ಅಸ್ವಸ್ಥರಾಗಿದ್ದಾರೆ. ಬೈಲಗೊಂಗಲ, ಇಂಚಲ ಆಸ್ಪತ್ರೆಗಳಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಾಗುತ್ತಿದೆ. ಚಚಡಿ ಗ್ರಾಮದಲ್ಲಿ 15 ಬೋರ್‌ವೇಲ್, 2 ಬಾವಿ, 3 ಓವರ್ ಹೆಡ್ ಟ್ಯಾಂಕ್ ಇವೆ. ಮೋಲ್ನೋಟಕ್ಕೆ ಇದು ಬ್ಯಾಕ್ಟಿರಿಯಲ್ ಇನ್ಫೆಕ್ಷನ್‌ ಆದಂತಿದೆ. ಈಗಾಗಲೇ ಕಲುಷಿತ ನೀರು ಟೆಸ್ಟಿಂಗ್‌ಗೆ ಕಳಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಊರಿಗೆ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಊರಲ್ಲಿ ಚಿಕಿತ್ಸೆಗೆ ವೈದ್ಯರ ತಂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
Latest1 min ago

Viral Video: ಫುಟ್ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ದೈಹಿಕ ಶಿಕ್ಷಕ; ವಿಡಿಯೊ ನೋಡಿ ಜನಾಕ್ರೋಶ

Ishan Kishan
ಕ್ರೀಡೆ5 mins ago

Ishan Kishan: ಬುಚ್ಚಿ ಬಾಬು ಕ್ರಿಕೆಟ್ ಟೂರ್ನಿ; ಜಾರ್ಖಂಡ್ ತಂಡಕ್ಕೆ ಇಶಾನ್ ಕಿಶನ್ ನಾಯಕ

Self harming
ಕರ್ನಾಟಕ9 mins ago

Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Patanjali ads
ದೇಶ15 mins ago

Patanjali Ayurved Ads: ನ್ಯಾಯಾಂಗ ನಿಂದನೆ ಪ್ರಕರಣ ರದ್ದು; ಬಾಬಾ ರಾಮದೇವ್‌ಗೆ ಬಿಗ್‌ ರಿಲೀಫ್

Gold Rate Today
ಚಿನ್ನದ ದರ23 mins ago

Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ಬೆಂಗಳೂರು26 mins ago

Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

Muda Scam
ಕರ್ನಾಟಕ36 mins ago

Muda Scam: ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸ್ವೀಕರಿಸದಂತೆ ಕೋರ್ಟ್‌ಗೆ ಅರ್ಜಿ

Tungabhadra Dam
ಪ್ರಮುಖ ಸುದ್ದಿ46 mins ago

Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

Naga Chaitanya
ಸಿನಿಮಾ48 mins ago

Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ

Paris Paralympic 2024
ಕ್ರೀಡೆ58 mins ago

Paris Paralympic 2024: ಪ್ಯಾರಾಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಹಾಲಿ ಚಾಂಪಿಯನ್‌ ಪ್ರಮೋದ್ ಭಗತ್‌ಗೆ ಅಮಾನತು ಶಿಕ್ಷೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌