Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ! - Vistara News

ಕ್ರೈಂ

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Rameshwaram Cafe Blast: ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ ಹಾಗೂ ಅಬ್ದುಲ್‌ ಮತೀನ್‌ ತಾಹಾ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ತಲೆಮರೆಸಿಕೊಂಡು ಓಡಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕರ್ನಾಟಕ,‌ ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ ಪ್ರದೇಶಗಳಲ್ಲಿ ಜಾಲಾಡಿದ್ದ ಎನ್‌ಐಎ, ಸ್ಥಳೀಯ ಪೊಲೀಸರ ನೆರವನ್ನು ಪಡೆದುಕೊಂಡಿತ್ತು. ಇವರ ಫೋಟೊಗಳನ್ನು ಹಂಚಿಕೊಂಡು ಎಲ್ಲ ಕಡೆ ಶೋಧ ಕಾರ್ಯ ನಡೆಸಲಾಗಿತ್ತು. ಕೊನೆಗೆ ಕೋಲ್ಕತ್ತದಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದರು ಎಂಬ ಮಾಹಿತಿ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿದೆ. ಅವರಿಂದ ಮಾಹಿತಿ ಪಡೆದ ಎನ್‌ಐಎ ಅಧಿಕಾರಿಗಳು ಬೆಳಗಿನ ದಾಳಿ ನಡೆಸಿ ಬಂಧಿಸಿದ್ದಾರೆ.

VISTARANEWS.COM


on

NIA Raid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe Blast) ಬಾಂಬ್‌ ಸ್ಪೋಟಿಸಿದ (Blast in Bengaluru) ಪ್ರಕರಣ ಸಂಬಂಧ ಪ್ರಧಾನ ಆರೋಪಿ, ಬಾಂಬ್‌ ಇಟ್ಟು ತಲೆ ಮರೆಸಿಕೊಂಡು ಓಡಾಡುತ್ತಿದ್ದ ಪಾತಕಿ ಹಾಗೂ ಇದರ ಹಿಂದಿನ ಮಾಸ್ಟರ್‌ ಮೈಂಡ್‌ ಬಂಧನವಾಗಿದೆ. ಇವರು ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಕೊನೆಗೆ ಖಚಿತ ಮಾಹಿತಿ ಮೇರೆಗೆ ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ಒಬ್ಬ ಉಗ್ರನ ಹುಡುಕಾಟದಲ್ಲಿದ್ದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ – NIA) ತಂಡಕ್ಕೆ ಇಬ್ಬರು ಸೆರೆಸಿಕ್ಕಂತೆ ಆಗಿದೆ.

ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ (mussavir shazeeb hussain) ಹಾಗೂ ಬಾಂಬ್‌ ಇಡುವ ಪ್ಲ್ಯಾನ್‌ ರೂಪಿಸಿದ್ದ ಪ್ರಧಾನ ಸೂತ್ರಧಾರಿ ಅಬ್ದುಲ್‌ ಮತೀನ್‌ ತಾಹಾನನ್ನು (Abdul Mateen Taha) ರಾಷ್ಟ್ರೀಯ ತನಿಖಾ ದಳ (ಎನ್‌ಐಎ – NIA) ಬಂಧಿಸಿದೆ.

Rameshwaram Cafe Blast Fake IDs created and captured bombers hiding in Kolkata

ಈ ಇಬ್ಬರು ಬೆಂಗಳೂರಿನಲ್ಲಿ ಸ್ಫೋಟದ ಬಳಿಕ ಬೇರೆ ಬೇರೆ ಮಾರ್ಗವಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಕಡೆ ಹೋಗಿ ತಲೆಮರೆಸಿಕೊಂಡಿದ್ದರು. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮನೆಯೊಂದರಲ್ಲಿ ಇವರು ವಾಸವಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಅಲ್ಲಿನ ಸ್ಥಳೀಯ ಪೊಲೀಸರು ನೀಡಿದ್ದಾರೆ. ಈ ಮಾಹಿತಿಯನ್ವಯ ಎನ್‌ಐಎ ತಂಡ ದಾಳಿ ನಡೆಸಿದ್ದು, ಬಾಂಬರ್ ಸಹಿತ ಸ್ಫೋಟದ ಮಾಸ್ಟರ್‌ ಮೈಂಡ್‌ ಅನ್ನು ಸಹ ಬಂಧಿಸಿದೆ.

ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದರು!

ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ ಹಾಗೂ ಅಬ್ದುಲ್‌ ಮತೀನ್‌ ತಾಹಾ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ತಲೆಮರೆಸಿಕೊಂಡು ಓಡಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕರ್ನಾಟಕ,‌ ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ ಪ್ರದೇಶಗಳಲ್ಲಿ ಜಾಲಾಡಿದ್ದ ಎನ್‌ಐಎ, ಸ್ಥಳೀಯ ಪೊಲೀಸರ ನೆರವನ್ನು ಪಡೆದುಕೊಂಡಿತ್ತು. ಇವರ ಫೋಟೊಗಳನ್ನು ಹಂಚಿಕೊಂಡು ಎಲ್ಲ ಕಡೆ ಶೋಧ ಕಾರ್ಯ ನಡೆಸಲಾಗಿತ್ತು. ಕೊನೆಗೆ ಕೋಲ್ಕತ್ತದಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದರು ಎಂಬ ಮಾಹಿತಿ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿದೆ. ಅವರಿಂದ ಮಾಹಿತಿ ಪಡೆದ ಎನ್‌ಐಎ ಅಧಿಕಾರಿಗಳು ಬೆಳಗಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಹೇಗಿತ್ತು ಎನ್‌ಐಎ ಕಾರ್ಯಾಚರಣೆ?

ಬಾಂಬ್‌ ಇಟ್ಟಿದ್ದ ಪಾತಕಿ ಉಗ್ರ ಮುಸಾವೀರ್ ಶಾಜೀಬ್ ಹುಸೇನ್‌ನನ್ನು ಈಗ ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ಬಾಂಬ್ ಇಟ್ಟಿದ್ದ ಉಗ್ರನ ಬೆನ್ನು ಹತ್ತಿ ತಮಿಳುನಾಡು, ಒಡಿಶಾ, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಓಡಾಡಿದ್ದ ಎನ್‌ಐಎ, ಅವರ ಇರುವಿಕೆಯ ಸ್ಥಳಗಳನ್ನು ಪತ್ತೆ ಹಚ್ಚಿ ಹೋಗುವುದರೊಳಗೆ ಅವರು ಅಲ್ಲಿಂದ ಎಸ್ಕೇಪ್‌ ಆಗಿ ಬಿಡುತ್ತಿದ್ದರು. ಆದರೆ, ಇದಕ್ಕೂ ಮೊದಲೇ ಬಂಧಿಸಲಾಗಿದ್ದ ಶಾಜೀನ್‌ ಹುಸೇನ್‌ನಿಂದ ಕೆಲವೊಂದಿಷ್ಟು ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಅದು ಸಹ ಕಾರ್ಯಾಚರಣೆಗೆ ಸಹಾಯಕ್ಕೆ ಬಂದಿದೆ ಎನ್ನಲಾಗಿದೆ.

ಚುರುಕಾಗಿ ಪತ್ತೆ ಹಚ್ಚಿದ್ದ NIA

“ಮುಸಾವೀರ್‌ ಹುಸೇನ್‌ ಶಾಜಿಬ್‌ನೇ (Mussavir Hussain Shazib) ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಿಸಿದ್ದು” ಎಂಬುದಾಗಿ ಎನ್‌ಐಎ ಪ್ರಕಟಣೆ ತಿಳಿಸಿತ್ತು. “ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನಾದ ಮುಸಾವೀರ್‌ ಹುಸೇನ್‌ ಶಾಜಿಬ್‌ ಬಾಂಬಿಟ್ಟವನು ಎಂದು ತನಿಖೆಯಿಂದ ಗೊತ್ತಾಗಿದೆ. ಅಬ್ದುಲ್‌ ಮಥೀನ್‌ ತಾಹಾ ಎಂಬುವವನು ಕೂಡ ಪ್ರಕರಣದಲ್ಲಿ ಪ್ರಮುಖ ಪಿತೂರಿದಾರನಾಗಿದ್ದಾನೆ. ಮುಜಾಮಿಲ್‌ ಷರೀಫ್‌ನು ಬಾಂಬ್‌ ತಯಾರಿಸಲು ಇವರಿಗೆ ಹಲವು ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜಾಮಿಲ್‌ ಷರೀಫ್‌ನನ್ನು ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ” ಎಂದು ಎನ್‌ಐಎ ಪ್ರಕಟಣೆ ತಿಳಿಸಿತ್ತು.

ಮಾರ್ಚ್‌ 1ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಮತ್ತೊಂದೆಡೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಮೊಬೈಲ್ ಅಂಗಡಿಯೊಂದಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ಎನ್‌ಐಎ ಅಧಿಕಾರಿಗಳು, ಹಿಂದು ಕಾರ್ಯಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬಿಟ್ಟವನಿಗೆ ವಿದೇಶದಿಂದ ಹಣ, ಸ್ಫೋಟಕ ಮಾಹಿತಿ ಬಯಲು!

ಸುದ್ಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್‌ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಸೀಜ್‌ ಮಾಡಲಾಗಿತ್ತು. 2020ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಈತನಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿತ್ತು.

ಮುಜಾಮಿಲ್ ಶರೀಫ್‌ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್,‌ ನಗದನ್ನು ವಶಕ್ಕೆ ಪಡೆಯಲಾಗಿತ್ತು. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್‌ ವಾಂಟೆಡ್‌ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್‌ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

VISTARANEWS.COM


on

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದ ವೇಳೆ ಭಾರಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರವಿಶಂಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ್ದರು. ಎಚ್‌ಎಎಲ್‌ ನಿಂದ ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಮೋದಿ ತೆರಳಿದ್ದರು. ಇದೇ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೋದಿ ತೆರಳುವ ಮಾರ್ಗದಿಂದ 50 ಮೀಟರ್‌ ದೂರದಲ್ಲಿ ಈ ಜಿಲೆಟಿನ್‌ ಕಡ್ಡಿಗಳು ಸಿಕ್ಕಿವೆ. ಮೋದಿ ಆಗಮನದ ವೇಳೆ ಭಾರಿ ಅವಘಡಕ್ಕೆ ಸಂಚು ರೂಪಿಸಲಾಗಿತ್ತೇ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಪ್ರಧಾನಮಂತ್ರಿ ಪ್ರಯಾಣಿಸುವ ಮಾರ್ಗದಲ್ಲಿ ಸ್ಫೋಟಿಸಲು ಇಡಲಾಗಿತ್ತೇ? ಘಟನೆ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೋರಮಂಗಲ ಠಾಣೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ವಿವಿಧ ಪ್ರದೇಶಗಳಲ್ಲಿ ಸ್ಫೋಟದ ಬೆದರಿಕೆ ನೀಡಿದ್ದಾರೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕರೆ ಬಂದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. HAL ಪ್ರದೇಶದಲ್ಲಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading

ಕ್ರೈಂ

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರಬೀಳ್ತಿದ್ದಂತೆ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದ್ರೀಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಮಿಸ್‌‌ ಆಗಿ ಆಪ್ತನ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟೌಟ್‌‌ ಮಾಡಿದ್ದಾರೆ.

Continue Reading

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading
Advertisement
Latest16 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest16 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ17 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest17 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest19 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest21 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌