ಹಾಸನ/ವಿಜಯನಗರ : ರೋಗಿಯನ್ನು ಕರೆ ತರುತ್ತಿದ್ದಾಗ 108 ಆಂಬ್ಯುಲೆನ್ಸ್ ಟಯರ್ ಬ್ಲಾಸ್ಟ್ ಆಗಿದೆ. ಟಯರ್ ಸ್ಫೋಟಗೊಳ್ಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಆಂಬ್ಯುಲೆನ್ಸ್ ರಸ್ತೆಯ ಬದಿಯ ಹಳ್ಳಕ್ಕೆ ಇಳಿದಿದೆ. ಅರಕಲಗೂಡಿನಿಂದ ಹಾಸನಕ್ಕೆ ಕರೆ ತರುವಾಗ ಈ ಅವಘಡ (Road Accident) ನಡೆದಿದೆ.
ಅದೃಷ್ಟವಶಾತ್ ಆಂಬ್ಯುಲೆನ್ಸ್‌ನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿ ಸೇರಿ ಮೂರು ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಹಾಸನದ ಹೊರವಲಯದ ಶ್ರೀರಾಮನಗರ ಬಳಿ ಘಟನೆ ನಡೆದಿದೆ. ಘಟನೆ ಬಳಿಕ ಬೇರೊಂದು ಆಂಬ್ಯುಲೆನ್ಸ್‌ನಲ್ಲಿ ರೋಗಿಯನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಬದಿಗೆ ಬಿದ್ದಿದ್ದ ಆಂಬ್ಯುಲೆನ್ಸ್ ತೆರವು ಮಾಡಲಾಗಿದೆ.
ಇದನ್ನೂ ಓದಿ: 1993 Mumbai Serial Blast: ಜೈಲಿನಲ್ಲೇ ಹತ್ಯೆಯಾದ ಸರಣಿ ಬಾಂಬ್ ಬ್ಲಾಸ್ಟ್ ಅಪರಾಧಿ
ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದ ಸವಾರ ಸಾವು
ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ನಡೆದಿದೆ. ರಾಮ್ ಪುರ ಗ್ರಾಮದ ನಿಜಗುಣ (50) ಮೃತರು.
ಖಾಸಗಿ ಶಾಲೆಯ ಶಿಕ್ಷಕರಾಗಿದ್ದ ನಿಜಗುಣ ಕೊಟ್ಟೂರಿನಿಂದ ಹಗರಿಬೊಮ್ಮನಹಳ್ಳಿ ಪಟ್ಟಣ ಹೋಗುವಾಗ ರಸ್ತೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿದೆ. ಅತಿ ವೇಗವಾಗಿ ಬರುತ್ತಿದ್ದ ಕಾರಣಕ್ಕೆ ನಿಯಂತ್ರಣ ಸಿಗದೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹರಿಬೊಮ್ಮನಹಳ್ಳಿ ತಾಲೂಕಿನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ