Road Accident : ಮಲಗಿದ್ದವರ ಮೇಲೆ ಹರಿದ ಬೊಲೆರೋ; ಒಬ್ಬ ಸಾವು, ಮತ್ತೊಬ್ಬ ಗಂಭೀರ - Vistara News

ಕ್ರೈಂ

Road Accident : ಮಲಗಿದ್ದವರ ಮೇಲೆ ಹರಿದ ಬೊಲೆರೋ; ಒಬ್ಬ ಸಾವು, ಮತ್ತೊಬ್ಬ ಗಂಭೀರ

Road Accident : ಹಸುಗಳಿಗೆ ಕಾವಲಾಗಿ ಮಲಗಿದ್ದವರ ಮೇಲೆ ಬೊಲೆರೋ ವಾಹನವೊಂದು ಹರಿದಿದೆ. ಪರಿಣಾಮ ವ್ಯಕ್ತಿಯೊಬ್ಬ ಅಸುನೀಗಿದ್ದರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

Bolero ran over those who were sleeping One person dead another critical
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಮಲಗಿದ್ದವರ ಮೇಲೆ ಬೊಲೆರೋ ವಾಹನ ಹರಿದಿದೆ. ಪರಿಣಾಮ ಸ್ಥಳದಲ್ಲೇ ಒಬ್ಬ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ನೆಂಟಕುಂಟಪಲ್ಲಿ ಗ್ರಾಮದಲ್ಲಿ ಈ ಘಟನೆ (Road Accident) ನಡೆದಿದೆ. ಆರೀಫುಲ್ಲಾ ಮೃತ ದುರ್ದೈವಿ. ನರಸಿಂಹಪ್ಪ ಎಂಬುವವರ ಕಾಲು ಮುರಿದಿದೆ.

ಆರೀಫುಲ್ಲಾ ಮತ್ತು ನರಸಿಂಹಪ್ಪ ಹಸು ಕರು ಹಾಕುತ್ತದೆ ಎಂದು ರಸ್ತೆ ಬದಿಯಲ್ಲಿ ಕಾದು ಕುಳಿತಿದ್ದರು. ಈ ವೇಳೆ ಹಾಗೇ ನಿದ್ದೆಗೆ ಜಾರಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಬಂದ ಚಾಲಕ ಏಕಾಏಕಿ ಮಲಗಿದ್ದವರ ಮೇಲೆ ಹತ್ತಿಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ಆರೀಫುಲ್ಲಾ ಮೃತಪಟ್ಟರೆ, ನರಸಿಂಹಪ್ಪ ಗಾಯಗೊಂಡಿದ್ದಾರೆ. ಗಾಯಾಳು ನರಸಿಂಹಪ್ಪನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಾಲಕ ಗಂಗರಾಜು ಬುಲೆರೋ ವಾಹನ ಬಿಟ್ಟು ಪರಾರಿ ಆಗಿದ್ದಾನೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Self harming : ಪತ್ನಿ ದೂರಾದಳೆಂದು ನೊಂದು ನೇಣಿಗೆ ಶರಣಾದ ನ್ಯಾಷನಲ್ ಕಬಡ್ಡಿ ಆಟಗಾರ

ಗೋವಾಗೆ ಹೊರಟ್ಟಿದ್ದ ಬಸ್‌ ಪಲ್ಟಿ

ಕಾರವಾರ: ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ಘಟನೆ ನಡೆದಿದೆ. ಬೆಳಗಿನ ಜಾವ 3:15ಕ್ಕೆ ಸಂಭವಿಸಿದ ಅಪಘಾತದಲ್ಲಿ 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

Road Accident in Karwar

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಗಾಯಾಳುಗಳು ಅಂಕೋಲಾ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ಡಿವೈಡರ್‌ ಹತ್ತಿದ ಲಾರಿ

ನಿಯಂತ್ರಣ ತಪ್ಪಿದ ಟಿಪ್ಪರ್‌ ಲಾರಿಯೊಂದು ಡಿವೈಡರ್ ಮೇಲೆ ಹತ್ತಿದೆ. ಬೆಂಗಳೂರಿನ ಚಾಲುಕ್ಯ ಸರ್ಕಲ್‌ನಲ್ಲಿ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಈ ಘಟನೆ ನಡಿದಿದೆ. ಬನಶಂಕರಿಯಿಂದ ಹೆಬ್ಬಾಳದ ಕಡೆ ಹೊರಟಿದ್ದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿದೆ. ಏಕಾಏಕಿ ರಸ್ತೆಯಿಂದ ಡಿವೈಡರ್‌ಗೆ ಹತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಇಲ್ಲ. ಟಿಪ್ಪರ್ ಚಾಲಕ ಮನೋಹರ್‌ ಪೊಲೀಸರಿಗೆ ಮಾಹಿತಿ ನೀಡಿದ್ದು, ಲಾರಿಯನ್ನು ಮೇಲಕ್ಕೆ ಎತ್ತಿದ್ದಾರೆ.

Road Accident in Bengaluru

ತುಮಕೂರಲ್ಲಿ ವಿದ್ಯುತ್‌ ಕಂಬದಲ್ಲಿ ಸಿಲುಕಿ ಒದ್ದಾಡಿದ ಲೈನ್‌ ಮ್ಯಾನ್‌

ವಿದ್ಯುತ್ ತಂತಿ ಸರಿಪಡಿಸುವಾಗ ಲೈನ್‌ ಮ್ಯಾನ್‌ ಕಂಬದಲ್ಲಿ ಸಿಲುಕಿ ಒದ್ದಾಡಿದ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ಇಡಗೂರಿನಲ್ಲಿ ನಡೆದಿದೆ. ಇಮ್ರಾನ್ ಎಂಬಾತ ಕಂಬದಲ್ಲಿ ಸಿಲುಕಿ ಒದ್ದಾಡಿದವರು.

ವಿದ್ಯುತ್ ದುರಸ್ಥಿ ಮಾಡಲು ಇಮ್ರಾನ್‌ ವಿದ್ಯುತ್ ಕಂಬ ಏರಿದ್ದ. ಈ ವೇಳೆ ಅನಾರೋಗ್ಯದಿಂದ ಒದ್ದಾಡಿ ಪ್ರಜ್ಞೆ ತಪ್ಪಿದ್ದ. ವಿದ್ಯುತ್‌ ಕಂಬದಲ್ಲಿ ಆತನ ಒದ್ದಾಟ ಕಂಡ ಸ್ಥಳೀಯರು ಕೂಡಲೇ ಏಣಿ ಹಾಕಿ ಆತನನ್ನು ರಕ್ಷಿಸಿದ್ದಾರೆ. ತೀವ್ರ ಅಸ್ವಸ್ಥನಾಗಿದ್ದಇಮ್ರಾನ್‌ನನ್ನು ಗುಬ್ಬಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿ.ಎಸ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Viral Video: ಮಕ್ಕಳ ಎದುರೇ ತಂದೆಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಮೂವರು ಮಕ್ಕಳೊಂದಿಗೆ ಕ್ಲಬ್ ಗೆ ಬಂದಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಈ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಆರೋಪಿಗಳು ಅರ್ಷದ್ ಅವರ ತಲೆಗೆ ಅತಿ ಸಮೀಪದಿಂದ ಪಾಯಿಂಟ್ ಬ್ಲಾಂಕ್ ರೇಂಜ್‌ ನಲ್ಲಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.

VISTARANEWS.COM


on

By

Viral Video
Koo

ಮೀರತ್: ಮೂವರು ಚಿಕ್ಕ ಮಕ್ಕಳ ಎದುರೇ ತಂದೆಯನ್ನು ಗುಂಡಿಕ್ಕಿ ಹತ್ಯೆ (murder) ಮಾಡಿರುವ ಘಟನೆ ಉತ್ತರ ಪ್ರದೇಶದ (uttarpradesh) ಮೀರತ್‌ನ (Meerut) ಕ್ಲಬ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೀರತ್‌ನ ಜೈದಿ ಫಾರ್ಮ್‌ನ ನಿವಾಸಿ ಅರ್ಷದ್ (25) ಹತ್ಯೆಯಾದ ವ್ಯಕ್ತಿ. ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳು ಮತ್ತು ಮಗನೊಂದಿಗೆ ಮೀರತ್‌ನ ಕ್ಲಬ್‌ಗೆ ಬಂದಿದ್ದಾಗ ಈ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮೀರತ್‌ನ ಲೋಹಿಯಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ. ಅರ್ಷದ್ ಮಂಗಳವಾರ ರಾತ್ರಿ ಮಕ್ಕಳೊಂದಿಗೆ ಭದಾನದಲ್ಲಿರುವ ಕ್ಲಬ್‌ನ ಈಜುಕೊಳಕ್ಕೆ ತೆರಳಿದ್ದರು. ಜನರಿಂದ ತುಂಬಿದ್ದ ಕ್ಲಬ್‌ನಲ್ಲಿ ಅರ್ಷದ್ ಒಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಗಲೇ ಈ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ಅರ್ಷದ್ ತನ್ನ ಫೋನ್ ಅನ್ನು ನೋಡುತ್ತಿದ್ದಂತೆ ಒಬ್ಬ ವ್ಯಕ್ತಿ ಅವರನ್ನು ಜನರ ಗುಂಪಿನಿಂದ ಪ್ರತ್ಯೇಕಿಸಲು ಪ್ರಯತ್ನಿಸುತ್ತಾನೆ. ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ನೆಲಕ್ಕೆ ಬಿದ್ದ ಅವರತ್ತ ಮಕ್ಕಳು ಅಳುತ್ತಾ ಓಡಿ ಬಂದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ತಿಳಿಸಿದ್ದಾರೆ.

ಆರೋಪಿಗಳು ಅರ್ಷದ್ ಅವರ ತಲೆಗೆ ಅತಿ ಸಮೀಪದಿಂದ ಪಾಯಿಂಟ್ ಬ್ಲಾಂಕ್ ರೇಂಜ್‌ ನಲ್ಲಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.


ಕೆಲವು ದಿನಗಳ ಹಿಂದೆ ಹಣದ ವಿಚಾರವಾಗಿ ಬಿಲಾಲ್ ಮತ್ತು ಅರ್ಷದ್ ನಡುವೆ ತೀವ್ರ ಜಗಳವಾಗಿತ್ತು. ಇಬ್ಬರ ವಿರುದ್ಧವೂ ಹಲವು ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅರ್ಷದ್ ಕುಟುಂಬದ ದೂರಿನ ಮೇರೆಗೆ ಬಿಲಾಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕರ್ನಾಟಕ

Self Harming: ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ

Self Harming: ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿದೆ. ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

VISTARANEWS.COM


on

self harming
Koo

ಆನೇಕಲ್: ಸಹಜೀವನ ನಡೆಸುತ್ತಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಭು(38), ಲಕ್ಕಮ್ಮ(30) ಮೃತರು. ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದ. ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರು ಪರಿಚಿಯವಾಗಿತ್ತು. ಹೀಗಾಗಿ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು. ಇವರು ವಿಶ್ವನಾಥ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದರು.

ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ತೆರಳಿ ನೋಡಿದಾಗ, ಜೋಡಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಇಬ್ಬರು ಮೃತಪಟ್ಟು ಮೂರ್ನಾಲ್ಕು ದಿನ ಕಳೆದಿದ್ದರಿಂದ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

murder case infosys engineer

ಬೆಂಗಳೂರು: ಗಂಡ- ಹೆಂಡತಿ ಜಗಳ (couple fight) ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ (Murder Case) ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ (Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎಂದು ತಿಳಿದುಬಂದಿದೆ.

“ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ನೇತ್ರದಾನ ಸಹ ಮಾಡಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

Continue Reading

ದೇಶ

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Arvind Kejriwal: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಈ ನಿಟ್ಟಿನಲ್ಲಿ ಜಾಮೀನು ಅವಧಿಯನ್ನು ಏಳು ದಿನ ವಿಸ್ತರಿಸುವಂತೆ ಈ ಹಿಂದೆ ಅರವಿಂದ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದ ಕಾರಣ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ ಮರಳಬೇಕಾಯಿತು. ಇಂದು ದಿಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಕಾವೇರಿ ಭವೇಜಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ಮತ್ತೆ ವಜಾಗೊಳಿಸಿದೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ಜೂ.19ವರೆಗೆ ವಿಸ್ತರಿಸಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಈ ನಿಟ್ಟಿನಲ್ಲಿ ಜಾಮೀನು ಅವಧಿಯನ್ನು ಏಳು ದಿನ ವಿಸ್ತರಿಸುವಂತೆ ಈ ಹಿಂದೆ ಅರವಿಂದ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದ ಕಾರಣ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ ಮರಳಬೇಕಾಯಿತು. ಇಂದು ದಿಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಕಾವೇರಿ ಭವೇಜಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ತಪಾಸಣೆಯನ್ನು ನಡೆಸುವಂತೆ ಕೋರ್ಟ್‌ ಆದೇಶಿಸಿದೆ. ಇಂದು ಕೇಜ್ರಿವಾಲ್‌ ವರ್ಚುವಲ್‌ ಸೌಲಭ್ಯದ ಮೂಲಕ ಕೋರ್ಟ್‌ಗೆ ಹಾಜರಾಗಿದ್ದರು.

ಪ್ರಕರಣದ ಹಿನ್ನೆಲೆ

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು.

ಇದನ್ನೂ ಓದಿ:Election Results 2024: ಸರ್ಕಾರ ರಚನೆಯ ಕಸರತ್ತು; ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Continue Reading

ಕ್ರೈಂ

Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

Murder Case: ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ.

VISTARANEWS.COM


on

murder case infosys engineer
Koo

ಬೆಂಗಳೂರು: ಗಂಡ- ಹೆಂಡತಿ ಜಗಳ (couple fight) ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ (Murder Case) ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ (Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎಂದು ತಿಳಿದುಬಂದಿದೆ.

“ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ನೇತ್ರದಾನ ಸಹ ಮಾಡಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ರೌಡಿ ಚೈಲ್ಡ್‌ ರವಿ ಕೊಲೆ

ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಕೊಲೆಯಾಗಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.

ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ

ಮಂಗಳೂರು/ಯಾದಗಿರಿ: ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (Assault Case) ಬಿಜೆಪಿ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ದಾಳಿ ನಡೆಸಿರುವುದು ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದ್ದು, ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

Continue Reading
Advertisement
Operation London Cafe movie will be released very soon
ಕರ್ನಾಟಕ2 mins ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Lok Sabha Election 2024
ರಾಜಕೀಯ8 mins ago

Lok Sabha Election 2024: ಹಿಂದೂಗಳಿಗೆ ಬುದ್ಧಿ ಇದ್ದಿದ್ದರೆ ಬಿಜೆಪಿ ಇಷ್ಟು ಹಿನ್ನಡೆ ಕಾಣುತ್ತಿರಲಿಲ್ಲ! ವಿಡಿಯೊ ವೈರಲ್‌

HD Kumaraswamy
ಕರ್ನಾಟಕ10 mins ago

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Star Street Fashion
ಫ್ಯಾಷನ್19 mins ago

Star Street Fashion: ಬೆಂಗಳೂರಿನ ರಸ್ತೆಯಲ್ಲಿ ಕಾಂತಾರ ಬೆಡಗಿಯ ಹೈ ಸ್ಟ್ರೀಟ್‌ ಫ್ಯಾಷನ್‌!

Narendra Modi
ದೇಶ36 mins ago

Narendra Modi: ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Vitamin A
ಆರೋಗ್ಯ40 mins ago

Vitamin A: ವಿಟಮಿನ್‌ ಎ ಕೊರತೆಯಾದರೆ ಏನಾಗುತ್ತದೆ?

Pakistan Players
T20 ವಿಶ್ವಕಪ್43 mins ago

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Cabinet meeting
ದೇಶ54 mins ago

Cabinet Meeting: “ನಂಬರ್‌ ಬಗ್ಗೆ ಚಿಂತೆ ಬೇಡ…ಉತ್ತಮ ಕೆಲಸ ಮಾಡಿ”- ನಿರ್ಗಮಿತ ಸಚಿವರಿಗೆ ಮೋದಿ ಕಿವಿಮಾತು

Environment Month celebration by Toyota Kirloskar Motor
ಕರ್ನಾಟಕ1 hour ago

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

Mutual Funds
ವಾಣಿಜ್ಯ1 hour ago

Mutual Funds: ಪಿಎಸ್‌ಯು ಷೇರುಗಳಲ್ಲಿ 90,000 ಕೋಟಿ ರೂ. ನಷ್ಟ ಅನುಭವಿಸಿದ ಮ್ಯೂಚುವಲ್ ಫಂಡ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌