ಚಿಕ್ಕಬಳ್ಳಾಪುರ: ಮಲಗಿದ್ದವರ ಮೇಲೆ ಬೊಲೆರೋ ವಾಹನ ಹರಿದಿದೆ. ಪರಿಣಾಮ ಸ್ಥಳದಲ್ಲೇ ಒಬ್ಬ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ನೆಂಟಕುಂಟಪಲ್ಲಿ ಗ್ರಾಮದಲ್ಲಿ ಈ ಘಟನೆ (Road Accident) ನಡೆದಿದೆ. ಆರೀಫುಲ್ಲಾ ಮೃತ ದುರ್ದೈವಿ. ನರಸಿಂಹಪ್ಪ ಎಂಬುವವರ ಕಾಲು ಮುರಿದಿದೆ.
ಆರೀಫುಲ್ಲಾ ಮತ್ತು ನರಸಿಂಹಪ್ಪ ಹಸು ಕರು ಹಾಕುತ್ತದೆ ಎಂದು ರಸ್ತೆ ಬದಿಯಲ್ಲಿ ಕಾದು ಕುಳಿತಿದ್ದರು. ಈ ವೇಳೆ ಹಾಗೇ ನಿದ್ದೆಗೆ ಜಾರಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಬಂದ ಚಾಲಕ ಏಕಾಏಕಿ ಮಲಗಿದ್ದವರ ಮೇಲೆ ಹತ್ತಿಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ಆರೀಫುಲ್ಲಾ ಮೃತಪಟ್ಟರೆ, ನರಸಿಂಹಪ್ಪ ಗಾಯಗೊಂಡಿದ್ದಾರೆ. ಗಾಯಾಳು ನರಸಿಂಹಪ್ಪನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಚಾಲಕ ಗಂಗರಾಜು ಬುಲೆರೋ ವಾಹನ ಬಿಟ್ಟು ಪರಾರಿ ಆಗಿದ್ದಾನೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ: Self harming : ಪತ್ನಿ ದೂರಾದಳೆಂದು ನೊಂದು ನೇಣಿಗೆ ಶರಣಾದ ನ್ಯಾಷನಲ್ ಕಬಡ್ಡಿ ಆಟಗಾರ
ಗೋವಾಗೆ ಹೊರಟ್ಟಿದ್ದ ಬಸ್ ಪಲ್ಟಿ
ಕಾರವಾರ: ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ಘಟನೆ ನಡೆದಿದೆ. ಬೆಳಗಿನ ಜಾವ 3:15ಕ್ಕೆ ಸಂಭವಿಸಿದ ಅಪಘಾತದಲ್ಲಿ 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಗಾಯಾಳುಗಳು ಅಂಕೋಲಾ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಲಾರಿ
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ಡಿವೈಡರ್ ಮೇಲೆ ಹತ್ತಿದೆ. ಬೆಂಗಳೂರಿನ ಚಾಲುಕ್ಯ ಸರ್ಕಲ್‌ನಲ್ಲಿ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಈ ಘಟನೆ ನಡಿದಿದೆ. ಬನಶಂಕರಿಯಿಂದ ಹೆಬ್ಬಾಳದ ಕಡೆ ಹೊರಟಿದ್ದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿದೆ. ಏಕಾಏಕಿ ರಸ್ತೆಯಿಂದ ಡಿವೈಡರ್‌ಗೆ ಹತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಇಲ್ಲ. ಟಿಪ್ಪರ್ ಚಾಲಕ ಮನೋಹರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಲಾರಿಯನ್ನು ಮೇಲಕ್ಕೆ ಎತ್ತಿದ್ದಾರೆ.
ತುಮಕೂರಲ್ಲಿ ವಿದ್ಯುತ್ ಕಂಬದಲ್ಲಿ ಸಿಲುಕಿ ಒದ್ದಾಡಿದ ಲೈನ್ ಮ್ಯಾನ್
ವಿದ್ಯುತ್ ತಂತಿ ಸರಿಪಡಿಸುವಾಗ ಲೈನ್ ಮ್ಯಾನ್ ಕಂಬದಲ್ಲಿ ಸಿಲುಕಿ ಒದ್ದಾಡಿದ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ಇಡಗೂರಿನಲ್ಲಿ ನಡೆದಿದೆ. ಇಮ್ರಾನ್ ಎಂಬಾತ ಕಂಬದಲ್ಲಿ ಸಿಲುಕಿ ಒದ್ದಾಡಿದವರು.
ವಿದ್ಯುತ್ ದುರಸ್ಥಿ ಮಾಡಲು ಇಮ್ರಾನ್ ವಿದ್ಯುತ್ ಕಂಬ ಏರಿದ್ದ. ಈ ವೇಳೆ ಅನಾರೋಗ್ಯದಿಂದ ಒದ್ದಾಡಿ ಪ್ರಜ್ಞೆ ತಪ್ಪಿದ್ದ. ವಿದ್ಯುತ್ ಕಂಬದಲ್ಲಿ ಆತನ ಒದ್ದಾಟ ಕಂಡ ಸ್ಥಳೀಯರು ಕೂಡಲೇ ಏಣಿ ಹಾಕಿ ಆತನನ್ನು ರಕ್ಷಿಸಿದ್ದಾರೆ. ತೀವ್ರ ಅಸ್ವಸ್ಥನಾಗಿದ್ದಇಮ್ರಾನ್‌ನನ್ನು ಗುಬ್ಬಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ