Site icon Vistara News

Road Accident: ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರು ಸಾವು

road accident chitradurga news

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ (Car Accident) ಡಿಕ್ಕಿಯಾದ ಪರಿಣಾಮ (Road accident) ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದ (Chitradurga news) ತಳಕು ಹೈವೆ ಬ್ರೀಡ್ಜ್ ಸಮೀಪದಲ್ಲಿ ಅಪಘಾತ ಸಂಭವಿಸಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ, ಬಳ್ಳಾರಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ. ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಯಿಯ ಅಕ್ರಮ ಸಂಬಂಧಕ್ಕೆ ಬಲಿಯಾದ ಬಾಲಕಿ

ಬೆಂಗಳೂರು: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣದಲ್ಲಿ (Murder Case) ಬಾಲಕಿಯ ಗುರುತನ್ನು ರೈಲ್ವೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಜುಲೈ 3ರಂದು ರೈಲು ನಿಲ್ದಾಣದ ಟ್ಯಾಕ್ಸಿ ಪಾರ್ಕಿಂಗ್‌ ಸ್ಥಳದಲ್ಲಿ‌ ಶವವಾಗಿ ಪತ್ತೆಯಾಗಿದ್ದ ಬಾಲಕಿಯ ಹೆಸರು ಮರಿಯಮ್ (5) ಕೊಲೆಯಾದವಳು ಎಂದು ತಿಳಿದುಬಂದಿದೆ. ಮತ್ತೊಂದೆಡೆ ಬಾಲಕಿಯ ಕೊಲೆಯ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸದ್ಯ ಬಾಲಕಿಯ ಪೋಷಕರು ಯಾರು ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಕೊಲೆಯಾದ ಮರಿಯಮ್ ತಾಯಿ ಹೀನಾ, ರಾಜು ಎಂಬಾತನ ಜತೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಗಂಡ ಶಿವು ಎಂಬಾತನನ್ನು ಬಿಟ್ಟು ರಾಜು ಜತೆ ಹೀನಾ ಭಿಕ್ಷಾಟನೆ ಮಾಡುತ್ತಿದ್ದಳು. ಇವರಿಬ್ಬರ ಜೊತೆಯೇ ಕೊಲೆಯಾದ ಮರಿಯಮ್ ಇರುತ್ತಿದ್ದಳು.

ಮಗಳು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂದು ಹೀನಾ, ಪ್ರೇಮಿಯ ಜತೆ ಸೇರಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮರಿಯಮ್ ಮೃತದೇಹ ದೊರೆತ ದಿನದಿಂದಲೂ ಹೀನಾ, ರಾಜು ನಾಪತ್ತೆಯಾಗಿದ್ದಾರೆ. ಹೀಗಾಗಿ ಪೊಲೀಸರಿಗೆ ಅವರ ಮೇಲೆ ಸಾಕಷ್ಟು ಅನುಮಾನ ಮೂಡಿದೆ. ಸದ್ಯ ಕೊಲೆಯಾದ ಮರಿಯಮ್ ತಾಯಿ ಹೀನಾ, ಪ್ರಿಯತಮ ರಾಜುಗಾಗಿ ರೈಲ್ವೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೀನಾ ಹಾಗೂ ರಾಜು ಬಗ್ಗೆ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ರೈಲ್ವೆ ಪೊಲೀಸರು ಪ್ರಕಟಣೆ ನೀಡಿದ್ದಾರೆ.

ಇದನ್ನೂ ಓದಿ | Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

Exit mobile version