ಬೆಳಗಾವಿ: ಸರ್ಕಾರಿ ಬಸ್‌ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ (Road Accident) ಪರಿಣಾಮ ಲಾರಿ ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸವದಿ ದರ್ಗಾ ಸಮೀಪ ಅಪಘಾತ ಸಂಭವಿಸಿದೆ.
ಜಮಖಂಡಿ- ಅಥಣಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಸತ್ತಿ ಮಾರ್ಗದಲ್ಲಿ ಬರುವಾಗ ವೇಗವಾಗಿ ಬಂದ ಲಾರಿ-ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಲಾರಿಯಲ್ಲಿ ಸಿಲುಕಿಕೊಂಡು ಹೊರಬರಲು ಆಗದೆ ನರಳಾಡುತ್ತಿದ್ದ ಲಾರಿ ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಜಮಖಂಡಿ ಘಟಕಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಜಮಖಂಡಿಯಿಂದ ಅಥಣಿ ಪಟ್ಟಣಕ್ಕೆ ಬರುವಾಗ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಬಸ್ ಹಾಗೂ ಲಾರಿಯ ಮುಂಭಾಗದ ಗಾಜು ಪುಡಿ ಪುಡಿಯಾಗಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಾಗಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Drowned In River : ಈಜಲು ಹೋದ 10ನೇ ತರಗತಿ ವಿದ್ಯಾರ್ಥಿನಿಯರು ಜಲಸಮಾಧಿ!
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್
ದಾವಣಗೆರೆ ತಾಲೂಕಿನ ಹದಡಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಹದಡಿ-ಕನಕಗೊಂಡನಹಳ್ಳಿ ಮಾರ್ಗದ ಕಡೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದೆ. ಬಸ್‌ನಲ್ಲಿ 45 ಜನರಿದ್ದು, 8 ಮಂದಿಗೆ ಸಣ್ಣಪುಟ್ಟ ಗಾಯವಾಗಿವೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಕಂಡಕ್ಟರ್ ದುರ್ಮರಣ
ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಆಯತಪ್ಪಿ ಕೆಳಗೆ ಬಿದ್ದ ಕಂಡಕ್ಟರ್ (Road Accident) ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಈರಯ್ಯ (23) ಮೃತ ದುರ್ದೈವಿ.
ಕಂಡಕ್ಟರ್ ಈರಯ್ಯ ಫುಟ್‌ಬೋರ್ಡ್ ಮೇಲೆ ನಿಂತಿದ್ದರು. ವೇಗವಾಗಿ ಚಾಲಕ ಬಸ್ ತಿರುವು ಪಡೆಯುವಾಗ ಫುಟ್‌ಬೋರ್ಡ್‌ನಲ್ಲಿ ನಿಂತಿ ಈರಯ್ಯ ಕೈ ಜಾರಿತ್ತು. ಕೈಯಲ್ಲಿ ಟಿಕೆಟ್, ಹಣ ಹಿಡಿದುಕೊಂಡಿದ್ದ ಈರಯ್ಯ ನಿಯಂತ್ರಣ ತಪ್ಪಿ ಬಸ್‌ನಿಂದ ನೇರ ಹೊರಗೆ ಹಾರಿ ರಸ್ತೆಗೆ ಮುಗ್ಗರಿಸಿ ಬಿದ್ದಿದ್ದ.
ಈರಯ್ಯ ಕೆಳಗೆ ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ. ತಕ್ಷಣವೇ ಅಲ್ಲಿದ್ದ ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರ ಸಹಾಯದೊಂದಿಗೆ ಕೂಡಲೆ ಆಸ್ಪತ್ರೆಗೆ ಆಟೋದಲ್ಲೇ ಸಾಗಿಸಿದ್ದಾರೆ. ಆದರೆ ಕೆಳಗೆ ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಈರಯ್ಯ ಮೃತಪಟ್ಟಿದ್ದಾರೆ.
ಬಾಗಲಕೋಟೆ ಮೂಲದವರಾದ ಈರಯ್ಯ ಸುರತ್ಕಲ್‌ನ ತಡಂಬೈಲ್‌ನಲ್ಲಿ ವಾಸವಾಗಿದ್ದ. ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ಬಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಕದ್ರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಕಂಡಕ್ಟರ್ ರಸ್ತೆಗೆಸೆಯಲ್ಪಟ್ಟ ವಿಡಿಯೋ ಕಾರೊಂದರ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.