Site icon Vistara News

Road Accident : ರೈಲು ಬಡಿದು ವ್ಯಕ್ತಿ ಸಾವು;ನಿಂತಿದ್ದ ಬಸ್‌ಗೆ ಗುದ್ದಿ ಛಿದ್ರಗೊಂಡ ಹೊಸ ಕಾರು

Road Accident

ಬೆಂಗಳೂರು ಗ್ರಾಮಾಂತರ/ರಾಯಚೂರು/ಉಡುಪಿ: ಪ್ರತ್ಯೇಕ ಕಡೆಗಳಲ್ಲಿ ಅಪಘಾತ (Road Accident) ಸಂಭವಿಸಿದ್ದು, ಸಾವು-ನೋವಿಗೆ ಕಾರಣವಾಗಿದೆ. ದೊಡ್ಡಬಳ್ಳಾಪುರದಲ್ಲಿ ರೈಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟರೆ, ರಾಯಚೂರಿನಲ್ಲಿ ಟಿಪ್ಪರ್‌ ವಾಹನವು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕಾಲು ಮುರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಮುತ್ಸಂದ್ರ ಬಳಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಹೊರವಲಯದ ಮುತ್ಸಂದ್ರ ರೈಲ್ವೆ ಹಳಿ ಮೇಲೆ ಮಾರಪ್ಪ (45) ಎಂಬುವವರ ಮೃತ ದೇಹ ಪತ್ತೆಯಾಗಿದೆ.

ಮಾರಪ್ಪ ನಗರದ ಬಸವ ಭವನ ಬಳಿ ಮೀನಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ರೈಲು ಡಿಕ್ಕಿ ಹೊಡೆದು ಸಾವನ್ನಪಿರುವ ಶಂಕೆ ವ್ಯಕ್ತವಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ರೈಲ್ವೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Yelahanka Railway : ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು; ನರಳಾಡಿ ಪ್ರಾಣಬಿಟ್ಟ ಕಂದ

ಲಾರಿಗೆ ಟಿಪ್ಪರ್‌ ಡಿಕ್ಕಿ; ಚಾಲಕ ಗಂಭೀರ

ಟಿಪ್ಪರ್ ವಾಹನವೊಂದು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಚಾಲಕನ ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ರಾಯಚೂರಿನ ಹೊರವಲಯದ ಪವರ್ ಗ್ರಿಡ್ ಬಳಿ ಅಪಘಾತ ಸಂಭವಿಸಿದೆ.

ಲಾರಿ ಚಾಲಕ ರಾಜಾವಲಿ ಸಾಬ್ ಎಂಬಾತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮರಳಿನ ಟಿಪ್ಪರ್ ವಾಹನವು ರಾಯಚೂರಿನ ಜಂಬಣ್ಣ ಎಂಬುವವರಿಗೆ ಸೇರಿದ್ದಾಗಿದೆ.

ರಾಯಚೂರಿಗೆ ಮರಳು ಸಾಗಿಸುತ್ತಿದ್ದಾಗ ಎದುರಿಗೆ ಬಂದ ಲಾರಿಗೆ ಟಿಪ್ಪರ್‌ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಿಂತಿದ್ದ ಬಸ್‌ಗೆ ಗುದ್ದಿದ ಹೊಸ ಕಾರು ನಜ್ಜುಗುಜ್ಜು

ಶೋರೂಂಗೆ ಹೋಗುತ್ತಿದ್ದ ಹೊಸ ಫಾರ್ಚೂನರ್ ಕಾರೊಂದು ನಜ್ಜುಗುಜ್ಜಾಗಿದೆ. ನಿಲ್ಲಿಸಿದ್ದ ಬಸ್‌ಗೆ ವೇಗವಾಗಿ ಬಂದ ಹೊಸ ಫಾರ್ಚೂನರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪೀಸ್‌ ಪೀಸ್‌ ಆಗಿದೆ. ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕುಂದಾಪುರ ಶೋ ರೂಂನಿಂದ ಮಂಗಳೂರು ಶೋ ರೂಂಗೆ ಹೊಸ ಕಾರನ್ನು ಕೊಂಡೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಲೇ ಈ ಅಪಘಾತ ಆಗಿದೆ. ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version