ಚಿಕ್ಕಬಳ್ಳಾಪುರ: ಪ್ರತ್ಯೇಕ ಕಡೆಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ (Road Accident) ಸಾವು-ನೋವು ಸಂಭವಿಸಿದೆ. ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಊಲವಾಡಿ ಗ್ರಾಮದ ಮನೋಜ್ ಕುಮಾರ್ (24) ಮೃತ ದುರ್ದೈವಿ.
ಚಿಕ್ಕಬಳ್ಳಾಪುರದ ಚಿಂತಾಮಣಿ – ಶ್ರೀನಿವಾಸಪುರ ರಸ್ತೆಯ ಹಂದಿಜೋಗಿಗಡ್ಡೆ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮತ್ತೊಬ್ಬ ಸವಾರ ನರಸಿಂಹಮೂರ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಮಿನಿ ಬಸ್‌ಗೆ ಟ್ಯಾಂಕರ್ ಡಿಕ್ಕಿ
ಖಾಸಗಿ ಶಾಲಾ ಬಸ್‌ಗೆ ಟ್ಯಾಂಕರ್ ವಾಹನವು ಡಿಕ್ಕಿ ಹೊಡೆದಿದೆ. ಪರಿಣಾಮ ಶಾಲಾ ಮಕ್ಕಳಿಂದ ಬಸ್ ಉರುಳಿ ಬಿದ್ದಿದೆ. ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ಸಿಇಟಿ ಖಾಸಗಿ ಶಾಲೆಗೆ ಸೇರಿ ಮಿನಿ ಬಸ್ ಇದಾಗಿದೆ. ಮೈಸೂರಿನ ಸಾಲಿಗ್ರಾಮ- ಭೇರ್ಯ ಹೆದ್ದಾರಿಯಲ್ಲಿ ಬರುವ ಕುರುಬಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.
ಟ್ಯಾಂಕರ್ ವಾಹನವು ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿತ್ತು. ಕುರುಬಹಳ್ಳಿ ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳಿದ್ದ ಮಿನಿ ಬಸ್ ಮಿರ್ಲೆ ಗ್ರಾಮಕ್ಕೆ ಹೋಗುತ್ತಿತ್ತು. ಕುರುಬಹಳ್ಳಿ ಗೇಟ್ ಬಳಿ ಏಕಾಏಕಿ ಶಾಲಾ ಮಕ್ಕಳಿರುವ ಮಿನಿ ಬಸ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಯಲ್ಲಿ ಮಿನಿ ಬಸ್ ಉರುಳಿ ಬಿದ್ದಿದೆ.
ಶಾಲ್ ಬಸ್‌ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್‌ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಯಗೊಂಡ ಮಕ್ಕಳನ್ನು ರವಾನಿಸಲಾಗಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್; ಶ್ರೀರಂಗಪಟ್ಟಣಕ್ಕೆ ಹೊರಟಿದ್ದ ಮಹಿಳೆ ಮೃತ್ಯು
ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಹಿಟ್ ಆ್ಯಂಡ್ ರನ್‌ಗೆ (Hit and Run Case) ಮಹಿಳೆಯೊಬ್ಬರು (Woman death) ಬಲಿಯಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು 62 ವರ್ಷದ ಆಶಾರಾಣಿ ಎಂಬವರು ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾರೆ.
ಆಶಾರಾಣಿ ಅವರು ಬೆಂಗಳೂರಿನ (Bangalore News)ಮಹಾಲಕ್ಷ್ಮಿ ಲೇಔಟ್‌ನ ನಿವಾಸಿಯಾಗಿದ್ದು, ಅವರು ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಯಾವುದೋ ವಾಹನ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.
ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ. ಇದೀಗ ಪೊಲೀಸರು ಆ ಭಾಗದಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಹಿಟ್ ಆ್ಯಂಡ್ ರನ್ ಮಾಡಿ ಹೋದ ವಾಹನವನ್ನು ಪತ್ತೆ ಹಚ್ಚಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಕೆಲವು ಸಮಯದಿಂದ ಹಿಟ್ ಆ್ಯಂಡ್ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ರಾತ್ರಿಯ ಹೊತ್ತು ಮತ್ತು ಮುಂಜಾನೆ ವಾಹನಗಳು ಅತಿವೇಗವಾಗಿ ಮತ್ತು ವಿವೇಚನೆ ಇಲ್ಲದೆ ಸಾಗಿ ಜೀವವನ್ನು ಬಲಿ ಪಡೆಯುತ್ತಿವೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ