ಕೊಡಗು/ಚಾಮರಾಜನಗರ: ಇತ್ತೀಚೆಗೆ ರಸ್ತೆ ಅಪಘಾತ ಪ್ರಕರಣಗಳು (Road Accident) ಹೆಚ್ಚಾಗುತ್ತಿದ್ದು, -ಸಾವು -ನೋವಿಗೆ ಕಾರಣವಾಗಿದೆ. ಕೊಡಗಿನ ಸುಂಟಿಕೊಪ್ಪ ಸಮೀಪದ 7ನೇ ಮೈಲಿ ಬಳಿ ಎರಡು ಬೈಕ್‌ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿದೆ. ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರಿನ ಹುಣಸೂರು ಮೂಲದ ಮಂಗಳೂರು ಮಾಳ ನಿವಾಸಿ ಸಂತೋಷ್ ಮೃತ ದುರ್ದೈವಿ.
ಸಂತೋಷ್ ಹುಣಸೂರಿನಿಂದ ಮಡಿಕೇರಿಗೆ ಬರುತ್ತಿದ್ದರು. ಮತ್ತೊಬ್ಬ ಸವಾರ ಚೇತನ್ ಬೋಯಿಕೇರಿಯಿಂದ ಕುಶಾಲನಗರ ಕಡೆ ತೆರಳುತ್ತಿದ್ದರು. ಇಬ್ಬರು ವೇಗವಾಗಿ ಬರುತ್ತಿದ್ದಾಗ, ನಿಯಂತ್ರಣ ತಪ್ಪಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸಂತೋಷ್ ಸ್ಥಳದಲ್ಲೇ ಮೃತಪಟ್ಟರೆ, ಚೇತನ್ ಸ್ಥಿತಿ ಗಂಭಿರವಾಗಿದೆ. ಸ್ಥಳೀಯರು ಚೇತನ್‌ನನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಅಪಘಾತದಲ್ಲಿ ಎರಡು ಬೈಕ್‌ಗಳು ಸಂಪೂರ್ಣ ಜಖಂಗೊಂಡಿವೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Operation Elephant : ತೋರಣಮಾವು ಗ್ರಾಮಕ್ಕೆ ಬೀಟಮ್ಮ ಗ್ಯಾಂಗ್ ಅಟ್ಯಾಕ್; ಅರಣ್ಯಾಧಿಕಾರಿಗಳಿಂದ ಹೈ ಅಲರ್ಟ್
ಚಾಮರಾಜನಗರದಲ್ಲೂ ಬೈಕ್‌ಗಳ ನಡುವೆ ಡಿಕ್ಕಿ, ಸವಾರ ಸಾವು
ಚಾಮರಾಜನಗರದ ಹೊರವಲಯದ ಮರಿಯಾಲ ಗೇಟ್ ಬಳಿ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಚಾಮರಾಜನಗರ ಉಪ್ಪಾರ ಬಡಾವಣೆಯ ಜಯಸೂರ್ಯ (20) ಮೃತ ದುರ್ದೈವಿ. ಯುವಕರಿಬ್ಬರು ಚಾಮರಾಜನಗರದ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮತ್ತಿಬ್ಬರಿಗೂ ತೀವ್ರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಜೀವನದಲ್ಲಿ ಜಿಗುಪ್ಸೆಗೆ ನೇಣಿಗೆ ಶರಣಾದ
ಜೀವನದಲ್ಲಿ ಜಿಗುಪ್ಸೆ ಎಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಬೀಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೀಡಗಾನಹಳ್ಳಿ ಗ್ರಾಮದ ರಾಜೇಂದ್ರ (25) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ