ಬೆಂಗಳೂರು: ವಾಟರ್ ಟ್ಯಾಂಕರ್ ವಾಹನಕ್ಕೆ ಯುವಕನೊರ್ವ (Road Accident) ಬಲಿಯಾಗಿದ್ದಾನೆ. ಕಿರಣ್ ಕುಮಾರ್ (21) ಮೃತಪಟ್ಟವನು. ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್‌ಬಿಐ ಲೇಔಟ್‌ನಲ್ಲಿ ಬೆಳಗ್ಗೆ 9.30ಕ್ಕೆ ಈ ಅಪಘಾತ ಸಂಭವಿಸಿದೆ.
ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಕಿರಣ್ ತಲೆ ಮೇಲೆ ಟ್ಯಾಂಕರ್ ಹರಿದಿದೆ. ಅಪಘಾತದಲ್ಲಿ ಕಿರಣ್ ಕುಮಾರ್ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಎಸ್ ಲೇಔಟ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಾಟರ್ ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ
ಸ್ಕೂಟರ್‌ಗೆ ಗುದ್ದಿದ ಕಾರು; ಹಾರಿ ಬಿದ್ದ ವೃದ್ಧ ಸ್ಪಾಟ್ ಡೆತ್
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ವೃದ್ಧನೊರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಡಿವೈಡರ್ ಬಳಿ ರಸ್ತೆ ದಾಟುವಾಗ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ವೃದ್ಧ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು ಗ್ರಾಮಾಂತರದ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಅಪಘಾತ ನಡೆದಿದೆ. ನಾರನಹಳ್ಳಿ ಗ್ರಾಮದ ಮಾಳಪ್ಪ (80) ಮೃತ ದುರ್ದೈವಿ. ರಾಮೇಶ್ವರ ಗೇಟ್‌ನಲ್ಲಿ ರಸ್ತೆ ದಾಟುವಾಗ ದಾಬಸ್ ಪೇಟೆ ಕಡೆಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಾಳಪ್ಪ ಸಾವನ್ನಪ್ಪಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಡಿವೈಡರ್ ಏರಿದ ಕಾರು
ಮೈಸೂರಿನಲ್ಲಿ ಚಾಲಕನ ಅಜಾಗರೂಕತೆಯಿಂದ ಕಾರೊಂದು ಡಿವೈಡರ್ ಮೇಲೇರಿದ ಘಟನೆ ನಡೆದಿದೆ. ಮೈಸೂರಿನ ಬೋಗಾದಿ ಸಿಗ್ನಲ್ ಬಳಿ ಲಾರಿಯನ್ನು ಓವರ್ ಟೇಕ್ ಮಾಡುವ ತವಕದಲ್ಲಿ ಕಾರು ಡಿವೈಡರ್ ಮೇಲೇರಿದೆ. ತಡರಾತ್ರಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ