Site icon Vistara News

Road Accident : ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

Road Accident

ಚಿಕ್ಕಮಗಳೂರು/ಬೆಳಗಾವಿ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ನಾಲಿಗೆ ಕಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ (Road Accident) ಘಟನೆ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ನಾಲಿಗೆ ಕಳೆದುಕೊಂಡವಳು. ಲಾವಣ್ಯ ಹಾಸನದ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಳು. ಶಿವರಾಜ್-ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

ಇಬ್ಬರು ಬೈಕ್‌ನಲ್ಲಿ ಬರುವಾಗ ಕ್ಯಾಂಟರ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಶಿವರಾಜ್‌ ಸ್ಥಳದಲ್ಲೆ ಮೃತಪಟ್ಟರೆ, ಇತ್ತ ಹಿಂಬದಿ ಕುಳಿತಿದ್ದ ಲಾವಣ್ಯ ಡಿಕ್ಕಿ ರಭಸಕ್ಕೆ ನಾಲಿಗೆಯೇ ಕಟ್‌ ಆಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಗಾಯಾಳು ಲಾವಣ್ಯಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರೈತ ಮಂಜುನಾಥ್ ದಾಸನಕೊಪ್ಪ ಮೃತ ದುರ್ದೈವಿ.

ಗ್ರಾಮದಲ್ಲ ಭಾರಿ ಮಳೆ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದ ರೈತ ಮಂಜುನಾಥ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

ಈಶಾ ಫೌಂಡೇಶ್‌ಗೆ ಬಂದು ಕಲ್ಲು ಕ್ವಾರಿಯಲ್ಲಿ‌ ಬಿದ್ದ ಕಾರು

ಚಿಕ್ಕಬಳ್ಳಾಪುರದ ಈಶಾ ಫೌಂಡೇಶ್‌ನಲ್ಲಿ ಲೇಸರ್ ಲೈಟ್ ನೋಡಲು ಬಂದ ಯುವಕ ಕಾರು ಕಲ್ಲು ಕ್ವಾರಿಯಲ್ಲಿ‌ ಬಿದ್ದ ಘಟನೆ ನಡೆದಿದೆ. ರಾಯಚೂರಿನಿಂದ‌ ಯುವಕರು ಶಿಫ್ಟ್‌ ಕಾರಿನಲ್ಲಿ ಬಂದಿದ್ದರು. ಈ ವೇಳೆ ಟಿಟಿ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಕಲ್ಲು ಕ್ವಾರಿಗೆ ಕಾರು ಹಾರಿದೆ

ಕಾರು ಫುಲ್‌ ಜಖಂಗೊಂಡಿದ್ದು, ಅದೃಷ್ಟವಶಾತ್‌ ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರನ್ನು‌ ಜೆಸಿಬಿ ಮೂಲಕ ರಕ್ಷಣೆ ನಡೆಸಲಾಗಿದೆ. ಘಟನೆಯಲ್ಲಿ ಗಾಯಾಳುಗಳನ್ನು ಚಿಕ್ಕಬಳ್ಳಾಪುರ‌ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರವನಹಳ್ಳಿ ಗ್ರಾಮದ ಈಶಾ ಸದ್ಗುರು ಧ್ಯಾನ ಕೇಂದ್ರದಲ್ಲಿ ಘಟನೆ ನಡೆದಿದೆ.

ಸರ್ಕಾರಿ ಬಸ್ ಹರಿದು ಕುರಿಗಾಹಿ ಸೇರಿ 15ಕ್ಕೂ ಹೆಚ್ಚು ಕುರಿಗಳು ಸಾವು

ಚಿತ್ರದುರ್ಗದಲ್ಲಿ ಸರ್ಕಾರಿ ಬಸ್ ಹರಿದು ಕುರಿಗಾಹಿ ಸೇರಿ 15ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಮತ್ತೊಬ್ಬ ಕುರಿಗಾಹಿಗೆ ಸಣ್ಣ ಪುಟ್ಟ ಗಾಯವಾಗಿದೆ. ಚಿತ್ರದುರ್ಗ ಹೊರವಲಯದ ಈರಜ್ಜನ ಹಟ್ಟಿ ಗೇಟ್ ಬಳಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ 6.30ರ ಸುಮಾರಿಗೆ ಕುರಿ ಹಾದು ಹೋಗುವಾಗ ಘಟನೆ ನಡೆದಿದೆ. ಚಾಲಕನ ಅತಿ ವೇಗ ಚಾಲನೆಯೇ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಗಾಯಗೊಂಡ ಕುರಿಗಾಹಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ತು ಬಿದ್ದ ಕುರಿಗಳನ್ನು ತೆರವು ಮಾಡಲಾಗಿದೆ. ಕುರಿಗಾಹಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version