ಉತ್ತರಪ್ರದೇಶ: ನಡುರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಹಲ್ಲೆಗೆ(Road rage) ಯತ್ನಿಸಿರುವ ಘಟನೆಯೊಂದು ಉತ್ತರಪ್ರದೇಶದ ನೋಯ್ಡಾ(Noida)ದಲ್ಲಿ ನಡೆದಿದೆ. BMW ಕಾರಿನಲ್ಲಿ ದಂಪತಿ ಇದ್ದ ಇದ್ದ ಕಾರನ್ನು ಚೇಸ್ ಮಾಡಿದ್ದ ಪುಂಡರು ಅಡ್ಡಗಟ್ಟಿ ಪುಂಡಾಟ ಮೆರೆದಿದ್ದಾರೆ. ಘಟನೆ ಸಂಪೂರ್ಣ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಮೇ 2ರಂದು ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(Viral video) ಆಗುತ್ತಿದು, ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ.
ಘಟನೆ ವಿವರ:
ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರನ್ನು ಏವರ್ ಟೇಕ್ ಮಾಡಿದ BMW ಕಾರೊಂದು ಏಕಾಏಕಿ ಅಡ್ಡಗಟ್ಟಿತ್ತು. ಅದರಿಂದ ಕೆಲವು ಯುವಕರು ಕೆಳಗಿಳಿದು ಏಕಾಏಕಿ ಕಾರಿನತ್ತ ಬಾಟಲ್‌ಗಳನ್ನು ಎಸೆಯಲು ಶುರುಮಾಡಿದ್ದರು. ಇದರಿಂದ ಭೀತಿಗೊಂಡ ಸಂತ್ರಸ್ತ ಕುಟುಂಬ ಕಾರನ್ನು ಹಿಂದಕ್ಕೆ ತೆಗೆದುಕೊಂಡು ಟರ್ನ್ ಮಾಡಿ ವೇಗವಾಗಿ ಕಾರು ಚಲಾಯಿಸಿ ಪಾರಾಗಿದ್ದಾರೆ. ಈ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
अपराध रोकने में Noida Police Failed :
— Tricity Today (@tricitytoday) May 6, 2024
कार सवार महिला को 2 किलोमीटर दौड़कर बरसाए ईंट-पत्थर, गुंडे बोले- जान से मार देंगे @noidapolice @Uppolice @dgpup #greaternoida pic.twitter.com/n1a7X0Ucy2
ಪೊಲೀಸರು ಹೇಳೋದೇನು?
ಪೊಲೀಸರ ಮಾಹಿತಿ ಪ್ರಕಾರ ಈ ಘಟನೆ IFSವಿಲ್ಲಾದ ಎದುರು ಇರುವ ನಾಲೆಡ್ಜ್ ಪಾರ್ಕ್ ಪೊಲೀಸ್ ಸ್ಟೇಷನ್ ಸಮೀಪ ನಡೆದಿದೆ. ತನ್ನ ಕುಟುಂಬದೊಂದಿಗೆ ಮಹಿಳೆ ಚಲಾಯಿಸುತ್ತಿದ್ದ ಕಾರನ್ನು ಚೇಸ್ ಮಾಡಿಕೊಂಡು ಬಂದಿದ್ದ ಕಿಡಿಗೇಡಿಗಳು ಏಕಾಏಕಿ ಕಾರನ್ನು ಅಡ್ಡಗಟ್ಟಿ ಬಿಯರ್ ಬಾಟಲಿಗಳಿಂದ ದಾಳಿ ನಡೆಸಿದ್ದರು. ಸಂತ್ರಸ್ತರು ಈ ಘಟನೆ ಬಗ್ಗೆ ಕೇಸ್ ದಾಖಲಿಸಲು ನಿರಾಕರಿಸಿದ್ದು, ವೈರಲ್ ಆಗಿರುವ ವಿಡಿಯೋದ ಆರೋದ ಆಧಾರದಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಹೆಚ್ಚುವರಿ ಡೆಪ್ಯೂಟಿ ಪೊಲೀಸ್ ಕಮಿಷನರ್ ಅಶೋಕ್ ಕುಮಾರ್ ಶರ್ಮಾ ಹೇಳಿದ್ದಾರೆ.
ತಿಂಗಳ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಪ್ರಕರಣ ದಾಖಲಾಗಿತ್ತು. ಸರ್ಜಾಪುರ ರಸ್ತೆಯಲ್ಲಿ ಮಾರ್ಚ್ 29ರ ರಾತ್ರಿ 10:40ರ ಸುಮಾರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ ಬೈಕ್ ಸವಾರನೊಬ್ಬ ಕಿರಿಕ್ ಮಾಡಿದ್ದ. ಓವರ್‌ಟೇಕ್ (overtake) ಮಾಡುವ ವಿಚಾರಕ್ಕೆ ಗಲಾಟೆಯಾಗಿ ಕಿರಿಕ್ ಮಾಡಿದ್ದಾನೆ ಎನ್ನಲಾಗಿದೆ. ಓವರ್‌ಟೇಕ್ ವಿಚಾರದಲ್ಲಿ ತಗಾದೆ ಸೃಷ್ಟಿಯಾಗಿದ್ದು, ಯುವಕ ಕಾರಿನ ಹಿಂಬದಿಯಿಂದ ಸುಮಾರು 2 ಕಿಲೋಮೀಟರ್‌ನಷ್ಟು ಅಟ್ಟಿಸಿಕೊಂಡು ಬಂದಿದ್ದಾನೆ. ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿದಾಗ ಅದಕ್ಕೆ ಅಡ್ಡ ಬಂದು ನಿಲ್ಲಿಸಿ ಧಮಕಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಕಾರಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದು, ಮಹಿಳೆ ಭಯದಿಂದ ಚೀರಿಕೊಂಡಿದ್ದಾರೆ. ನಂತರ ದಂಪತಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ದಂಪತಿ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.
ಇದನ್ನೂ ಓದಿ:Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್ ಶಾ
ಅದಕ್ಕೂ ಮುನ್ನ ರಾತ್ರಿ ಸಮಯದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯರನ್ನು ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬಂದು ಪುಂಡರು ಕಿರುಕುಳ ನೀಡಿದ್ದರು. ದಾರಿಯುದ್ದಕ್ಕೂ ಚೇಸ್ ಮಾಡಿದ್ದಲ್ಲದೇ ಬೈಕ್ ಮೂಲಕ ಕಾರನ್ನು ಸುತ್ತುವರಿದು ಟಾರ್ಚರ್ ನೀಡಿದ್ದರು. ಕಿಡಿಗೇಡಿಗಳು ಮಡಿವಾಳ, ಸೆಂಟ್ ಜಾನ್ಸ್ ಅಲ್ಲಿಂದ ಕೋರಮಂಗಲವರೆಗೂ ಹಿಂಬಾಲಿಸಿಕೊಂಡು ಬಂದಿದ್ದಾರೆ. ಇದರಿಂದ ಆತಂಕಗೊಂಡ ಮಹಿಳೆಯರು ಸಹಾಯಕ್ಕಾಗಿ ಕೂಡಲೇ 112ಗೆ ಸಹಾಯವಾಣಿಗೆ ಕರೆ ಮಾಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ಯುವತಿಯರು ಇದ್ದ ಜಾಗಕ್ಕೆ ಬಂದಿದ್ದಾರೆ. ಪೊಲೀಸರನ್ನು ಕಂಡೊಡನೆ ಪುಂಡರು ಎಸ್ಕೇಪ್ ಆಗಿದ್ದರು.