ಬೆಂಗಳೂರು: ರಾಜಧಾನಿಯ ಚಿನ್ನಾಭರಣದ (Jewelry) ಅಂಗಡಿಗೆ ನುಗ್ಗಿದ ಕಳ್ಳರು ಮಾಲೀಕರಿಗೆ ಗನ್ (gun point) ತೋರಿಸಿ ಕೇವಲ 30 ಸೆಕೆಂಡುಗಳಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು (Robbery Case) ಪರಾರಿಯಾಗಿರುವ ಘಟನೆ ಬೆಂಗಳೂರಿನ (Bangalore Crime) ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ.
ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.
ಒಬ್ಬ ಕಳ್ಳ ಗನ್ ಹಿಡಿದು ಮಾಲೀಕರಿಗೆ ಬೆದರಿಕೆ ಹಾಕಿದ್ದು, ಮತ್ತೊಬ್ಬ ಚಿನ್ನಭಾರಣಗಳನ್ನು ಚೀಲಕ್ಕೆ ತುಂಬಿಕೊಂಡಿದ್ದ. ಇನ್ನೊಬ್ಬ ಕಳ್ಳ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ. ಕೆಲವೇ ಸೆಕೆಂಡಿನಲ್ಲಿ ಚಿನ್ನಾಭರಣಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. 750 ಗ್ರಾಂಗಿಂತ ಹೆಚ್ಚು ಚಿನ್ನ ಕದ್ದು ಅಲ್ಲಿಂದ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಎಸ್ಕೇಪ್ ಆಗಿದ್ದಾರೆ. ಈ ದರೋಡೆಕೋರರ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹುಬ್ಬಳ್ಳಿ ಏರ್‌ಪೋರ್ಟ್ ನಿರ್ದೇಶಕರಿಗೆ ಜೀವ ಬೆದರಿಕೆ, ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್ ಐಡಿಯಿಂದ ಸಂದೇಶ
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್ ಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.
ಈ ಬಗ್ಗೆ ಟರ್ಮಿನಲ್ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್ ಕುಮಾರ್ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್ʼಗೆ ಸಿಕ್ಕಿದ್ದು ಹೇಗೆ?