Site icon Vistara News

Rowdy Sheeters: ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಮಚ್ಚು ಲಾಂಗ್, ಬೀದಿಯಲ್ಲೇ ಅಟ್ಟಾಡಿಸಿದರು!

rowdy sheeters attack bangalore

ಬೆಂಗಳೂರು: ರಾಜಧಾನಿ ನಗರದಲ್ಲಿ ಬೀದಿ ರೌಡಿಗಳಿಗೆ (Rowdy sheeters) ಯಾವ ಕಾನೂನಿನ ಕಟ್ಟುಪಾಡೂ ಇಲ್ಲದಾಗಿದೆ ಎಂಬುದಕ್ಕೆ ಇನ್ನೊಂದು ನಿದರ್ಶನ ಲಭ್ಯವಾಗಿದೆ. ನಗರದಲ್ಲಿ ಮತ್ತೆ ಮಚ್ಚು ಲಾಂಗುಗಳು ಝಳಪಿಸಿವೆ. ನಡು ರಸ್ತೆಯಲ್ಲೇ ರೌಡಿಗಳ ಗುಂಪು ಇನ್ನೊಬ್ಬ ರೌಡಿಯನ್ನು ಕೊಲೆ ಮಾಡಲೆಂದು ಅಟ್ಯಾಕ್ (Assault Case) ಮಾಡಿದೆ.

ತಿಪ್ಪಸಂದ್ರದದ ಬಳಿ ಯುವಕರ ಗುಂಪಿನಿಂದ ಅಟ್ಯಾಕ್ ನಡೆದಿದ್ದು, ದಾಳಿ ಮಾಡುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಯ್ಯಪ್ಪನಹಳ್ಳಿ ರೌಡಿಶೀಟರ್ ಶಿವ & ಟೀಂನಿಂದ ಅಟ್ಯಾಕ್ ನಡೆದಿದ್ದು, ಜೀವನ್ ಭೀಮಾನಗರ ರೌಡಿಶೀಟರ್ ಜೋಶ್ವಾ ಮೇಲೆ ಡೆಡ್ಲಿ ಅಟ್ಯಾಕ್ ಎಸಗಲಾಗಿದೆ.

ಆದರೆ ಜೋಶ್ವಾ ಇವರ ಕೈಗೆ ಸಿಗದಂತೆ ಪರಾರಿಯಾಗಿದ್ದಾನೆ. ಹಳೇ ದ್ವೇಷ ಹಿನ್ನೆಲೆಯಲ್ಲಿ ಬೈಯ್ಯಪ್ಪನಹಳ್ಳಿ ರೌಡಿಶೀಟರ್ ಶಿವ ಟೀಂನಿಂದ ಪ್ಲಾನ್‌ ಮಾಡಿ ಅಟ್ಯಾಕ್ ಮಾಡಲಾಗಿದೆ. ಅಟ್ಯಾಕ್ ಆಗುತ್ತಿದ್ದಂತೆ ಯಾರ ಕೈಗೂ ಸಿಗದೇ ತಿಪ್ಪಸಂದ್ರ ಮಾರ್ಕೆಟ್‌ಗೆ ನುಗ್ಗಿ ಜೋಶ್ವಾ ಎಸ್ಕೇಪ್ ಆಗಿದ್ದಾನೆ. ಸದ್ಯ ಘಟನೆ ಸಂಬಂಧ ಜೀವನ್ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಮೋದಿ ಹೊಗಳಿ ಹಾಡು ಬರೆದದ್ದಕ್ಕೆ ಹಲ್ಲೆ

ಮೈಸೂರು: ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಯುವಕ ದೂರು ನೀಡಿದ್ದಾನೆ.

‌Assault Case

ಮೈಸೂರಿನ ಲಕ್ಷ್ಮೀನಾರಾಯಣ್ ಹಲ್ಲೆಗೊಳಗಾದ ಯುವಕ. ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ವಿಡಿಯೊ ಮೂಲಕ ಲಕ್ಷ್ಮೀನಾರಾಯಣ್ ಮಾಹಿತಿ ನೀಡಿದ್ದಾನೆ.

ಘಟನೆ ಬಗ್ಗೆ ಗಾಯಾಳು ಲಕ್ಷ್ಮೀನಾರಾಯಣ್ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Exit mobile version