Site icon Vistara News

Sandalwood theft : ಶ್ರೀಗಂಧ ಕದಿಯಲು ಬಂದವನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

sandalwood theft

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version