Site icon Vistara News

Self Harming : ನ್ಯಾಯಾಲಯದ ಆವರಣದಲ್ಲೇ ನ್ಯಾಯವಾದಿಯ ಪತಿ ಸೂಸೈಡ್‌; ಚಲಿಸುತ್ತಿದ್ದ ರೈಲಿಗೆ ಜಿಗಿದು ವ್ಯಕ್ತಿ ಸಾವು

Lawyers husband commits suicide in court premises

ಚಿಕ್ಕೋಡಿ/ ವಿಜಯಪುರ: ಪ್ರತ್ಯೇಕ ಕಡೆಗಳಲ್ಲಿ ಆತ್ಮಹತ್ಯೆ ಪ್ರಕರಣಗಳು (self Harming) ವರದಿ ಆಗಿವೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯಾಯಾಲಯದ ಆವರಣದಲ್ಲೇ (court premises) ನ್ಯಾಯವಾದಿಯ ಪತಿ (lawyer husband) ಟಿವಿ ಕೇಬಲ್‌ ವೈರ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನ್ಯಾಯವಾದಿ ಅನಿತಾ ಕುಲಕರ್ಣಿ ಎಂಬುವರ ಪತಿ ಲಗಮಪ್ಪ ಹೊಸೂರಿ (48) ಮೃತ ದುರ್ದೈವಿ. ಲಗಮಪ್ಪ ನ್ಯಾಯಾಲಯದ ಇ- ಗ್ರಂಥಾಲಯದ ಸಂಗ್ರಹ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಷಯ ತಿಳಿಯುತ್ತುದ್ದಂತೆ ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಚಲಿಸುತ್ತಿದ್ದ ರೈಲಿಗೆ ಜಿಗಿದು ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿಗೆ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಇಬ್ರಾಹಿಮಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರಮೇಶ ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Suspicious Death : ಮಹಿಳೆಯ ಚಿನ್ನಾಭರಣ ದೋಚಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ಕೊಂದ್ರಾ ಹಂತಕರು!

ಹಣ ಪಡೆದು ಕೈಕೊಟ್ಟ ಸ್ನೇಹಿತ; ಸಾಲಗಾರರ ಕಾಟಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ

ಮೈಸೂರು: ಕೊಟ್ಟ ಸಾಲ ವಾಪಸ್ಸು ಕೊಡಲಿಲ್ಲ ಎಂದು ಮನನೊಂದ ದಂಪತಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿದ್ದಾರೆ. ವಿಶ್ವ(34), ಸುಷ್ಮಾ(28) ಆತ್ಮಹತ್ಯೆಗೆ ಶರಣಾದ ದಂಪತಿ.

ವಿಶ್ವ ಹಾಗೂ ಸುಷ್ಮಾ ದಂಪತಿ ಮೈಸೂರಿನ ಯರಗನಹಳ್ಳಿ ನಿವಾಸಿಯಾಗಿದ್ದಾರೆ. ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ವಿಶ್ವನಿಗೆ ಪಕ್ಕದಂಗಡಿಯ ಶಿವು ಎಂಬುವವನಿಗೆ ಬೇರೊಬ್ಬರಿಂದ ಸುಮಾರು 5 ಲಕ್ಷ ರೂ. ಸಾಲವನ್ನು ಕೊಡಿಸಿದ್ದ. ಆದರೆ ಶಿವು ಸಾಲವನ್ನು ಮರು ಪಾವತಿ ಮಾಡದೇ ಕ್ಯಾತೆ ತೆಗೆದು ಬೆದರಿಕೆ ಹಾಕುತ್ತಿದ್ದ. ಇತ್ತ ವಿಶ್ವನಿಗೆ ಹಣ ಕೊಟ್ಟವರು ಮನೆ ಮುಂದೆ ಬಂದು ವಾಪಸ್‌ ಕೊಡುವಂತೆ ಕೇಳಿದ್ದಾರೆ. ಇದರಿಂದ ವಿಶ್ವನಿಗೆ ದಿಕ್ಕು ತೋಚದಂತಾಗಿದೆ. ಈ ಅವಮಾನವನ್ನು ತಡೆಯಲು ಆಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾನೆ.

ಇನ್ನೂ ಚೋರನಹಳ್ಳಿ ರಾಜಣ್ಣ ಎಂಬಾತನಿಗೆ ತನ್ನ ಚಿನ್ನಾಭರಣ ಕೊಟ್ಟಿದ್ದ. ಆತನೂ ಆ ಚಿನ್ನವನ್ನು ವಾಪಸ್ಸು ಕೊಡದೆ ಸತಾಯಿಸಿದ್ದ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಪತ್ನಿಯೊಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸದ್ಯ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Murder Case : ಗ್ರಾಮ ದೇವತೆಯ ಜಾತ್ರೆ ದಿನವೇ ಹೆಂಡತಿ ಬಲಿ ಕೊಟ್ಟ ಕುಡುಕ ಗಂಡ

ಮಕ್ಕಳಾಗಿಲ್ಲ ಎಂಬ ಕೊರಗು; ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ಆನೇಕಲ್: ವಿಷ ಸೇವಿಸಿ ದಂಪತಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಆನೇಕಲ್‌ನ ರಾಜ್ಯ ಗಡಿಭಾಗ ತಮಿಳುನಾಡಿನ ಥಳಿಯಲ್ಲಿ ಘಟನೆ ನಡೆದಿದೆ. ದೀಪಾ, ವಂಶಿಧರ್ ಪಾಸ್ಲುಲೇಟಿ ಮೃತ ದಂಪತಿ.

ವಂಶಿಧರ್‌ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು. ಆದರೆ ಕಳೆದ ಒಂದು ವರ್ಷದ ಹಿಂದೆ ಕೆಲಸ ಬಿಟ್ಟು, ತಮಿಳುನಾಡಿನ ಥಳಿಯಲ್ಲಿ ಬಾಡಿಗೆ ಮನೆಯಲ್ಲಿ ದಂಪತಿ ವಾಸವಿದ್ದರು.

ದಂಪತಿಗೆ ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ದಂಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ವಿಷ ಸೇವಿಸಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡು ಮೂರು ದಿನಗಳ ಕಾಲ ನಂತರ ಅಕ್ಕಪಕ್ಕದ ಮನೆಗಳ ನಿವಾಸಿಗಳಿಗೆ ದುರ್ವಾಸನೆ ಬಂದಿದೆ. ವಂಶಿಧರ್‌ ಮನೆ ಬಾಗಿಲು ತಟ್ಟಿದ್ದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ನೆರೆಹೊರೆಯವರಿಗೆ ಅನುಮಾನಗೊಂಡಿದ್ದಾರೆ. ನಂತರ ಮನೆಯ ಬಾಗಿಲು ಹೊಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ.

ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕೊಳೆತು ಹೋಗಿದ್ದ ಮೃತದೇಹಗಳನ್ನು ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಥಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version