Self Harming : ಕೈ ಹಾಗೂ ಕತ್ತು ಕೊಯ್ದುಕೊಂಡು ನೇಣಿಗೆ ಶರಣಾದ ಯುವಕ - Vistara News

ಕರ್ನಾಟಕ

Self Harming : ಕೈ ಹಾಗೂ ಕತ್ತು ಕೊಯ್ದುಕೊಂಡು ನೇಣಿಗೆ ಶರಣಾದ ಯುವಕ

Self Harming : ಆನೇಕಲ್‌ನಲ್ಲಿ ಅನುಮಾನಾಸ್ಪದವಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೈ ಹಾಗೂ ಕತ್ತುಕೊಯ್ದು ಕೊಂಡು ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ. ಮಂಡ್ಯದಲ್ಲಿ ಕೌಟುಂಬಿಕ ಕಲಹಕ್ಕೆ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.

VISTARANEWS.COM


on

Anekal Boy Death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್/ಮಂಡ್ಯ: ಕೈ ಹಾಗೂ ಕತ್ತುಕೊಯ್ದು ಕೊಂಡು ನೇಣು ಬಿಗಿದಿರುವ ಸ್ಥಿತಿಯಲ್ಲಿ ಯುವಕನ ಮೃತದೇಹವು (Self Harming) ಪತ್ತೆಯಾಗಿದೆ. ಇದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಘಟನೆ ನಡೆದಿದೆ. ವಿನಯ್ ಕುಮಾರ್ (24) ಮೃತ ದುರ್ದೈವಿ.

ವಿನಯ್‌ ಸರ್ಜಾಪುರ ಸಮೀಪದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮೊದಲಿಗೆ ಕತ್ತರಿಯಲ್ಲಿ ಕೈ ಮತ್ತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತದನಂತರ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಭಾನುವಾರ (ಜ.21) ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಮೊಬೈಲ್ ಸಿಮ್ ತೆಗೆದು ಬಿಸಾಡಿದ್ದಾನೆ. ಮೊಬೈಲ್ ಪೂರ್ತಿ ರೀಸ್ಟಾರ್ಟ್ ಮಾಡಿದ್ದಾನೆ. ಯಾವುದೋ ಬಲವಾದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ. ವಿನಯ್‌ಗೆ ಹೆದರಿಸಿ ಯಾರಾದರೂ ಬ್ಲ್ಯಾಕ್‌ ಮೇಲ್ ಮಾಡಿದ್ದರಾ? ಇದರಿಂದ ಭಯಪಟ್ಟು ಆತ್ಮಹತ್ಯೆಗೆ ಶರಣಾದ್ನಾ ಎಂಬ ಪ್ರಶ್ನೆ ಉದ್ಭವಿಸಿದೆ.

ಸದ್ಯ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಜತೆಗೆ ಯುವಕನ ಮೊಬೈಲ್ ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Medical Negligence : ಗರ್ಭಕೋಶ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆ ಸೇರಿದಳು; ವೈದ್ಯರ ನಿರ್ಲಕ್ಷ್ಯಕ್ಕೆ ಸ್ಮಶಾನದ ಪಾಲಾದಳು

ಗಂಡನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡಳು

ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಮಂಡ್ಯದ ನೆಹರುನಗರ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಪದ್ಮ.ವಿ (36) ಮೃತ ದುರ್ದೈವಿ.

ಪದ್ಮ ರಾಮನಗರ ತಾಲೂಕಿನ ಅಂಕನಹಳ್ಳಿ ಗ್ರಾಮದವಳು. ಮಂಡ್ಯದ ಸಿದ್ದರಾಜು ಎಂಬಾತನನ್ನು ಪ್ರೀತಿಸಿ ಪದ್ಮ ಮದುವೆ ಆಗಿದ್ದಳು. ಸಿದ್ದರಾಜು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ. 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಜೀವನ ನಡೆಸುತ್ತಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಇತ್ತೀಚೆಗೆ ಸಿದ್ದರಾಜು ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಇದರಿಂದ ನೊಂದ ಪದ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Cheating case : ಮಠಕ್ಕೆ ಭಕ್ತರು ಸಾಕಷ್ಟು ಧನ ಸಹಾಯ ಮಾಡಿದ್ದರು. ಅಂತೆಯ 40 ಲಕ್ಷ ರೂಪಾಯಿ ಮಠದಲ್ಲಿತ್ತು. ಅದನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವುದು ಸ್ವಾಮೀಜಿಯ ದುರಾಲೋಚನೆಯಾಗಿತ್ತು ಎಂಬುದು ಪೊಲೀಸರು ಪತ್ತೆ ಹಚ್ಚಿದ ಹಲವಾರು ಸಾಕ್ಷಿಗಳಿಂದ ಗೊತ್ತಾಗಿದೆ. ಹಣದ ಥೈಲಿಯನ್ನು ಬಾಚಿಕೊಳ್ಳುವುದಕ್ಕೆ ಸಜ್ಜಾಗಿದ್ದ ಸ್ವಾಮೀಜಿ ಪೊಲೀಸರ ಕೈಕೋಳಕ್ಕೆ ಕೈ ನೀಡುವ ಪರಿಸ್ಥಿತಿ ಎದುರಾಗಿದೆ.

VISTARANEWS.COM


on

Cheating Case
Koo

ರಾಯಚೂರು: ಭಕ್ತರಿಗೆ ಸೇರಿದ್ದ 40 ಲಕ್ಷ ರೂಪಾಯಿ ಹಣವನ್ನು ಸ್ವಂತಕ್ಕೆ ಮಾಡಿಕೊಳ್ಳುವುದಕ್ಕೆ ಸಂಚು ರೂಪಿಸಿ ದರೋಡೆ ಕತೆಯನ್ನು ಸೃ ಷ್ಟಿಸಿದ ಸ್ವಾಮೀಜಿಯ ಕಳ್ಳಾಟ (Cheating case) ಬಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಪ್ರಾಥಮಿಕ ಹಂತದಲ್ಲಿಯೇ ಸ್ವಾಮೀಜಿಯ ಕತೆ ಬಹಿರಂಗಗೊಂಡಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರೋ ವಿಜಯಮಹಾಂತೇಶ್ವರ ಶಾಖಾ ಮಠ ನುಗ್ಗಿದ ದರೋಡೆಕೋರರು ತಮ್ಮನ್ನು ಬೆದರಿಸಿ 40 ಲಕ್ಷ ರೂಪಾಯಿ ಹಣ ದರೋಡೆ ಮಾಡಿದ್ದಾರೆ ಎಂದು ಇಲ್ಲಿನ ವಿಜಯಮಹಾಂತೇಶ್ವರ ಶಾಖಾ ಮಠದ ಸಿದ್ದಲಿಂಗ ಸ್ವಾಮೀಜಿ ದೂರು ನೀಡಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂಚಲನ ಮೂಡಿತ್ತು. ಮಠಕ್ಕೆ ನುಗ್ಗಿ ಹಣವನ್ನು ದರೋಡೆ ಮಾಡಿದವರನ್ನು ಬಂಧಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ದೂರು ನೀಡಿದ ಸ್ವಾಮೀಜಿಯ ಕೆಲವೊಂದು ನಡೆ ಬಗ್ಗೆ ಅನುಮಾನಗೊಂಡಿದ್ದ ಪೊಲೀಸರು ಎಫ್​ಐಆರ್​ ದಾಖಲಿಸಿ ಒಂದೇ ದಿನದಲ್ಲಿ ದರೋಡೆ ಕೇಸನ್ನು ಭೇದಿಸಿದ್ದಾರೆ.

ಇದನ್ನೂ ಓದಿ: ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಮಠಕ್ಕೆ ಭಕ್ತರು ಸಾಕಷ್ಟು ಧನ ಸಹಾಯ ಮಾಡಿದ್ದರು. ಅಂತೆಯ 40 ಲಕ್ಷ ರೂಪಾಯಿ ಮಠದಲ್ಲಿತ್ತು. ಅದನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವುದು ಸ್ವಾಮೀಜಿಯ ದುರಾಲೋಚನೆಯಾಗಿತ್ತು ಎಂಬುದು ಪೊಲೀಸರು ಪತ್ತೆ ಹಚ್ಚಿದ ಹಲವಾರು ಸಾಕ್ಷಿಗಳಿಂದ ಗೊತ್ತಾಗಿದೆ. ಹಣದ ಥೈಲಿಯನ್ನು ಬಾಚಿಕೊಳ್ಳುವುದಕ್ಕೆ ಸಜ್ಜಾಗಿದ್ದ ಸ್ವಾಮೀಜಿ ಪೊಲೀಸರ ಕೈಕೋಳಕ್ಕೆ ಕೈ ನೀಡುವ ಪರಿಸ್ಥಿತಿ ಎದುರಾಗಿದೆ.

ಪೊಲೀಸರು ಮಠ ಸೇರಿದಂತೆ ಸುತ್ತಮುತ್ತಲಿನ ಹಲವಾರು ಸಿಸಿ ಟಿವಿ ಕ್ಯಾಮೆರಾಗಳನ್ನು ವೀಕ್ಷಿಸಿದ್ದರು. ಆದರೆ ಗನ್​ ಇಟ್ಟು ಹಣ ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ ಸಮಯ ಸೇರಿದಂತೆ ಹತ್ತಿರದ ವೇಳೆಯಲ್ಲಿ ಯಾರೂ ಆ ಕಡೆಗೆ ಬಂದಿರಲಿಲ್ಲ ಹಾಗೂ ಹೋಗಿರಲಿಲ್ಲ ಎಂಬುದು ಖಾತರಿಯಾಗಿತ್ತು. ಅಂತೆಯೇ ತನಿಖೆ ಮುಂದುವರಿಸಿದಾಗ ಮಠದ ಸುತ್ತಲಿನ ಸಿಸಿ ಟಿವಿ ಕ್ಯಾಮೆರಾಗಳು ಆಫ್​ ಆಗಿರುವುದು ಗೊತ್ತಾಗಿದೆ. ಬಳಿಕ ಬೆರಳಚ್ಚು ಪರಿಣತರು ಬಂದು ಪರಿಶೀಲನೆ ನಡೆಸಿದಾಗ ಅಲ್ಲಿ ಸ್ವಾಮೀಜಿಯ ಬೆರಳಚ್ಚು ಮೂಡಿತ್ತು.

ಕ್ಯಾಮೆರಾಗಳನ್ನು ಆನ್​ – ಆಫ್​ ಮಾಡುವ ಸ್ವಿಚ್ ಮೇಲೆ ಸ್ವಾಮೀಜಿಯ ಬೆರಳಚ್ಚು ಕೊನೇ ಬಾರಿ ಮೂಡಿತ್ತು. ಹೀಗಾಗಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಆಫ್ ಮಾಡಿರುವುದು ಬೆಳಕಿಗೆ ಬಂದಿದೆ. ತನಿಖೆ ವೇಳೆ ಮಠದಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂಬುದಕ್ಕೆ ಸಾಕ್ಷಿ ಒದಗಿಸಿತ್ತು. ಹೀಗಾಗಿ ಅದು ಸ್ವಾಮೀಜಿಯ ಕಟ್ಟು ಕಥೆ ಎಂಬುದು ಗೊತ್ತಾಗಿದೆ.

ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.
ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

Continue Reading

ಉತ್ತರ ಕನ್ನಡ

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Weather News: ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ. ಶನಿವಾರವಂತೂ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Weather News
Koo

ಕಾರವಾರ/ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ (Rain News) ಮುಂದುವರಿದಿದ್ದು, ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಸೇರಿ ಕರಾವಳಿಯಾದ್ಯಂತ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಯ (Weather News) ಕುರಿತು ಹವಾಮಾನ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ರಜೆ ಘೋಷಣೆ ಮಾಡಿದ್ದಾರೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಕಟ್ಟಡಗಳು ಕುಸಿದಿವೆ.

karnataka Weather Forecast

ಉಡುಪಿ ಜಿಲ್ಲೆಯಲ್ಲೂ ರಜೆ

ಮಳೆಯ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕುಗಳು ಸೇರಿ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ವಿಭಾಗಕ್ಕೆ ರಜೆ ಘೋಷಿಸಲಾಗಿದೆ. ಆದರೆ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ ,ಎಂಜಿನಿಯರಿಂಗ್, ಐಟಿಐ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Dengue Fever: ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue Fever
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿವೆ. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಗ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಬಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಗುಡಿಬಂಡೆ ಪಟ್ಟಣದ‌ ನಿವಾಸಿ ವೇಣು(50) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರರಿಂದ ವೇಣು ಅವರು ಮೃತಪಟ್ಟಿರುವುದಾಗಿ ಸಂಬಂಧಿಕರು ಹೇಳಿದ್ದಾರೆ.

ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

Continue Reading

ಕರ್ನಾಟಕ

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Namma Metro: ಬೆಂಗಳೂರಿನ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ.

VISTARANEWS.COM


on

Namma Metro
Koo

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ (Namma Metro) ಬಿಎಂಆರ್‌ಸಿಎಲ್‌ ಗುಡ್ ನ್ಯೂಸ್ ನೀಡಿದೆ. ನಾಳೆಯಿಂದ (ಜುಲೈ 6) ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ ಕಾರ್ಯಾಚರಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ಹೆಚ್ಚುವರಿ ಮೆಟ್ರೋ ಸೇವೆ ಆರಂಭವಾಗಲಿದೆ. ಈ ಮೂಲಕ ನೇರಳೆ ಮಾರ್ಗದಲ್ಲಿ ಪ್ರತೀ 3.5 ನಿಮಿಷಕ್ಕೊಂದು ರೈಲು ಸೇವೆ ಇರಲಿದೆ, ಇನ್ನುಳಿದಂತೆ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಂ.ಆ‌ರ್.ಸಿ.ಎಲ್, ಜುಲೈ 6ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು. ಈ 15 ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್‌ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ.

ಅದರಂತೆ, ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8:48, 8:58, 9:08, 9:18, 9:29, 9:39, 9:50, 10:00, 10:11, 10:21, 10:39, 10:50, 11:00, 11:22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ತಿಳಿಸಿದೆ.

ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್‌ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರುತ್ತದೆ.

ಇದನ್ನೂ ಓದಿ | Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಬೇಕು ಎಂದು ಬಿಎಂಆರ್‌ಸಿಎಲ್‌ ಕೋರಿದೆ.

Continue Reading
Advertisement
Cheating Case
ಪ್ರಮುಖ ಸುದ್ದಿ8 mins ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Snake
ವೈರಲ್ ನ್ಯೂಸ್14 mins ago

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

Mohammed Siraj
ಪ್ರಮುಖ ಸುದ್ದಿ40 mins ago

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Akshata Murty
ವಿದೇಶ45 mins ago

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Hardik Pandya
ಪ್ರಮುಖ ಸುದ್ದಿ1 hour ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ2 hours ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ2 hours ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ3 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ3 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ3 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ8 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ9 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ10 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ12 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು13 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು13 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ18 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌