Site icon Vistara News

Self Harming: ನಾಯಂಡಹಳ್ಳಿ ಫ್ಲೈಓವರ್‌ನಿಂದ ಜಿಗಿದು ನವವಿವಾಹಿತ ಆತ್ಮಹತ್ಯೆ

nayandahalli flyover

ಬೆಂಗಳೂರು: ಯುವಕನೊಬ್ಬ ನಾಯಂಡಹಳ್ಳಿ ಫ್ಲೈ ಓವರ್ (Nayandahalli Flyover) ) ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಈತ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೃತನನ್ನು ಯಲಹಂಕ ಮೂಲದ ನವೀನ್ ಎಂದು ಗುರುತಿಸಲಾಗಿದೆ. ನವೀನ್‌ ಬೈಕನ್ನು ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ವಿವರ ಕಲೆಹಾಕುತ್ತಿದ್ದಾರೆ.

ನವೀನ್‌ ಕರ್ನಾಕ ವಿದ್ಯುತ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆಯಷ್ಟೆ ಈತ ಮದುವೆಯಾಗಿದ್ದ. ಎರಡು ತಿಂಗಳಿನಿಂದ ಕಾಂಟ್ರಾಕ್ಟ್ ಬೇಸ್ ಮೇಲೆ ಕವಿಕದಲ್ಲಿ ಡಿ ಗ್ರೂಪ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಡ್ಯೂಟಿಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟಿದ್ದ ನವೀನ್‌ ನಾಯಂಡಹಳ್ಳಿ ಫ್ಲೈಓವರ್‌ ಮೇಲಿಂದ ಕೆಳಗೆ ಜಿಗಿದಿದ್ದಾನೆ.

ಕೊನೆಗೂ ಸಿಕ್ಕಿಬಿದ್ದ ರಾಮೇಶ್ವರಂ ಕೆಫೆ ಬಾಂಬರ್!‌

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe blast) ಬಾಂಬ್‌ ಸ್ಪೋಟಿಸಿದ ಪ್ರಕರಣದ ಪ್ರಧಾನ ಆರೋಪಿ, ಬಾಂಬ್‌ ಇಟ್ಟು ತಲೆ ಮರೆಸಿಕೊಂಡು ಓಡಾಡುತ್ತಿದ್ದ ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ – NIA) ಕೊನೆಗೂ ಬಂಧಿಸಿದೆ.

ಬಾಂಬ್‌ ಇಟ್ಟಿದ್ದ ಪಾತಕಿ ಉಗ್ರ ಮುಸಾವೀರ್ ಶಾಜೀಬ್ ಹುಸೇನ್‌ನನ್ನು ಉತ್ತರ ಭಾರತದ ರಾಜ್ಯವೊಂದರಲ್ಲಿ ಬಂಧಿಸಲಾಗಿದೆ. ಬಾಂಬ್ ಇಟ್ಟಿದ್ದ ಉಗ್ರನ ಬೆನ್ನು ಹತ್ತಿ ತಮಿಳು ನಾಡು, ಒಡಿಶಾ, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಓಡಾಡಿದ್ದ ಎನ್‌ಐಎ, ಸರಿಯಾದ ಬಲೆ ರಚಿಸಿ ಈತನನ್ನು ಹಿಡಿದಿದೆ.

ಬಾಂಬ್‌ ಇಟ್ಟ ಬಳಿಕ ಈತ ತಲೆಮರೆಸಿಕೊಂಡು ತಮಿಳು ನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ಕಡೆ ಓಡಾಡಿದ್ದ. ಇದೀಗ ಬಾಂಬರ್‌ ಮುಸಾವೀರ್ ಶಾಜೀಬ್ ಹುಸೇನ್ ಜೊತೆಗೆ ಮತ್ತೊಬ್ಬ ಉಗ್ರನನ್ನು ಸಹ ಬಂಧಿಸಲಾಗಿದೆ. ಇದಕ್ಕೂ ಮೊದಲು ಶಾಜೀನ್‌ ಹುಸೇನ್‌ಗೆ ಬೆಂಗಳೂರಿನಲ್ಲಿ ಕುಮ್ಮಕ್ಕು ನೀಡಿದ್ದ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ‌

“ಮುಸಾವೀರ್‌ ಹುಸೇನ್‌ ಶಾಜಿಬ್‌ನೇ (Mussavir Hussain Shazib) ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಿಸಿದ್ದು” ಎಂಬುದಾಗಿ ಎನ್‌ಐಎ ಪ್ರಕಟಣೆ ತಿಳಿಸಿತ್ತು. “ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನಾದ ಮುಸಾವೀರ್‌ ಹುಸೇನ್‌ ಶಾಜಿಬ್‌ ಬಾಂಬಿಟ್ಟವನು ಎಂದು ತನಿಖೆಯಿಂದ ಗೊತ್ತಾಗಿದೆ. ಅಬ್ದುಲ್‌ ಮಥೀನ್‌ ತಾಹಾ ಎಂಬವನು ಕೂಡ ಪ್ರಕರಣದಲ್ಲಿ ಪ್ರಮುಖ ಪಿತೂರಿದಾರನಾಗಿದ್ದಾನೆ. ಮುಜಾಮಿಲ್‌ ಷರೀಫ್‌ನು ಬಾಂಬ್‌ ತಯಾರಿಸಲು ಇವರಿಗೆ ಹಲವು ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜಾಮಿಲ್‌ ಷರೀಫ್‌ನನ್ನು ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ” ಎಂದು ಎನ್‌ಐಎ ಪ್ರಕಟಣೆ ತಿಳಿಸಿತ್ತು.

ಮಾರ್ಚ್‌ 1 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಮತ್ತೊಂದೆಡೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಮೊಬೈಲ್ ಅಂಗಡಿಯೊಂದಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ಎನ್‌ಐಎ ಅಧಿಕಾರಿಗಳು, ಹಿಂದು ಕಾರ್ಯಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸುದ್ಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್‌ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಸೀಜ್‌ ಮಾಡಲಾಗಿತ್ತು. 2020ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಈತನಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ.

ಮುಜಾಮಿಲ್ ಶರೀಫ್‌ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್,‌ ನಗದನ್ನು ವಶಕ್ಕೆ ಪಡೆಯಲಾಗಿದೆ. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್‌ ವಾಂಟೆಡ್‌ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್‌ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case: ಚಿಕ್ಕಬಳ್ಳಾಪುರದಲ್ಲಿ 2ನೇ ಪತ್ನಿ ಕೊಲೆಗೈದ ಪತಿ; ಮುಂಡರಗಿ ನಡುರಸ್ತೆಯಲ್ಲೇ ಮಚ್ಚಿನಿಂದ ಪತ್ನಿ ಮೇಲೆ ಹಲ್ಲೆ!

Exit mobile version