Site icon Vistara News

Self Harming: ಮದುವೆಗೆ ಪ್ರೇಯಸಿ ಕುಟುಂಬಸ್ಥರ ವಿರೋಧ; ನೊಂದ ಪ್ರಿಯಕರ ಆತ್ಮಹತ್ಯೆ

opposition of the girl friend family to the marriage Suicide of a offended lover

ಬಸವಕಲ್ಯಾಣ: ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಜಯ್ ಮನೋಹರ ಸೂರ್ಯವಂಶಿ (22) ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ. ಕೆಲ ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಚಾಮರಾಜನಗರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಇದನ್ನೂ ಓದಿ: Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 7 ಮಂದಿ ದಾರುಣ ಸಾವು

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version