Site icon Vistara News

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Self Harming

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಗ್ರಾಮದಲ್ಲಿ ನಡೆದಿದೆ. ಬೆಳಗುತ್ತಿ ಗ್ರಾಮದ ಸೋಮಸುಂದರ ರಾಜ್ ಅರಸ್ (60) ಮೃತ ರೈತ.

ಸತತ ಮಳೆ ಕೊರತೆ ಹಾಗೂ ಕೃಷಿಗೆ ಮಾಡಿದ ಸಾಲದಿಂದ ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗುತ್ತಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2 ಲಕ್ಷ, ಎಲ್‌ಎನ್‌ಟಿ ಫೈನಾನ್ಸ್‌ನಲ್ಲಿ 1 ಲಕ್ಷ, ಗ್ರಾಮೀಣ ಕೂಟ ಫೈನಾನ್ಸ್‌ನಲ್ಲಿ 1 ಲಕ್ಷ, ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ಸೇರಿದಂತೆ ಕೈ ಗಡ ಸೇರಿ 10 ಲಕ್ಷ ರೂ. ಸಾಲ ಮಾಡಿದ್ದರು. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಿಪ್ಪರ್ ಹರಿದು ಬೈಕ್ ಸವಾರ ಸಾವು

ಕೊಪ್ಪಳ: ಟಿಪ್ಪರ್ ಹರಿದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿಯಾಗಿದೆ. ಈ ವೇಳೆ ಟಿಪ್ಪರ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ (Student Death) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Exit mobile version