ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್ ಕುಮಾರ್ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.
ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.
ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.
ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.
ಸಾಫ್ಟ್‌ವೇರ್ ಎಂಜಿನಿಯರ್ ಪತ್ನಿಯ ಅನುಮಾನಾಸ್ಪದ ಸಾವು
ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್ ಎಂಜಿನಿಯರ್ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.
ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ
ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.
ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.
ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.
ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ