ಶಿವಮೊಗ್ಗ: ಬೆಳ್ಳಂ ಬೆಳಗ್ಗೆ ಶಿವಮೊಗ್ಗದಲ್ಲಿ (Shivamogga news) ರೌಡಿ ಶೀಟರ್ (rowdy sheeter) ಕಾಲಿಗೆ ಗುಂಡೇಟು ಹಾರಿಸಿ (shoot out) ಗಾಯಗೊಳಿಸಿ ಬಂಧಿಸಲಾಗಿದೆ. ಬಂಧಿಸಲು ಹೋದಾಗ ಈತ ಪೊಲೀಸ್ (Police) ಸಿಬ್ಬಂದಿ ಕಾಲಿಗೆ ಚಾಕುವಿನಿಂದ ಚುಚ್ಚಿ (Stabbing) ಗಾಯಗೊಳಿಸಿದ್ದ.
ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ರಜಾಕ್ ಎಂಬಾತ ಬಂಧಿತ ರೌಡಿ. ರಜಾಕ್ ಮೇಲೆ ಕೊಲೆ ಯತ್ನ ಸೇರಿ ಐದಾರು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಈತನ ಬಂಧನಕ್ಕೆ ತೆರಳಲಾಗಿತ್ತು.
ಈ ಸಂದರ್ಭದಲ್ಲಿ ಆರೋಪಿ ರಜಾಕ್ ಪೊಲೀಸ್ ಸಿಬ್ಬಂದಿ ಅರ್ಜುನ್ ಎಂಬವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಈ ಸಂದರ್ಭದಲ್ಲಿ ಸಿಬ್ಬಂದಿಯನ್ನು ಪಾರು ಮಾಡಲು ಹಾಗೂ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಲಕ್ಷ್ಮಿಪತಿ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಆರೋಪಿ ರಜಾಕ್ ಹಾಗೂ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್ ಆಗಿದ್ದ ದುಷ್ಟ ಅರೆಸ್ಟ್
ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿ (Indecent Behaviour) ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿರ ಮುಂದೆ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೆಹಮಾನ್ (48) ಆರೋಪಿ. ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ, ಅಸಭ್ಯವಾಗಿ ವರ್ತಿಸಿದ್ದ. ಆ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಗಮನಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೋಲಿ ಹುಡುಗರಿಂದ ವ್ಹೀಲಿಂಗ್, ಆಕ್ಷೇಪಿಸಿದ್ದಕ್ಕೆ ರೋಡ್ ರೇಜ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ (Ragging Case) ಮಿತಿಮೀರಿದೆ. ಮೀಸೆ ಚಿಗುರದ ಯುವಕರು ಓಡಿಸೋಕ್ಕೆ ಬೈಕ್ ಸಿಕ್ಕರೆ ಸಾಕು ರಸ್ತೆಯಲ್ಲಿ ವ್ಹೀಲಿಂಗ್ (bike wheeling) ಮಾಡುತ್ತಾ, ಹೆಣ್ಮಕ್ಕಳಿಗೆ ರ‍್ಯಾಗಿಂಗ್ ಮಾಡುವುದು ಹೆಚ್ಚಾಗುತ್ತಿದೆ. ಸದ್ಯ ಇಂತಹದ್ದೆ ಘಟನೆಯೊಂದು ನಾಗರಭಾವಿ ಔಟರ್ ರಿಂಗ್ ರೋಡ್ ಬಳಿ ನಡೆದಿದೆ.
ಕುಟುಂಬದವರ ಜತೆ ಹೋಗುತ್ತಿದ್ದ ಮಹಿಳೆಯ ಹಿಂದೆ ಬಿದ್ದ ಕೆಲ ಪೋಲಿ ಹುಡುಗರು, ವ್ಹೀಲಿಂಗ್ ಮಾಡಿ ಭಯ ಪಡಿಸಿದ್ದಲ್ಲದೇ ರ‍್ಯಾಗಿಂಗ್ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ 11.40ರ ಸುಮಾರಿಗೆ ಘಟನೆ ನಡೆದಿದೆ. ನೀತು ಬಳೆಗಾರ್ ಎಂಬಾಕೆ ಪೊಲೀಸರಿಗೆ ದೂರು ನೀಡಿದ್ದಾರೆ.
ನೀತು ಕುಟುಂಬಸ್ಥರ ಜತೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪುಂಡರಿಬ್ಬರು ನಂಬರ್ ಪ್ಲೇಟ್ ಇಲ್ಲದ ಇರುವ ಡ್ಯೂಕ್ ಬೈಕ್‌ನಲ್ಲಿ ಬಂದು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಇದನ್ನೂ ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯನ್ನು ನಿಂದಿಸಿದ್ದಾರೆ. ಹೀಗಾಗಿ ನೀತು ಫೋಟೋ ಸಮೇತ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಜತೆಗೆ ಸೋಶಿಯಲ್ ಮೀಡಿಯಾದಲ್ಲಿ ಟ್ಯಾಗ್ ಮಾಡಿ ಬೆಂಗಳೂರಿನಲ್ಲಿ ಸಾಮಾನ್ಯ ಜನರಿಗೆ ಸೇಫ್ಟಿ ಇಲ್ಲ. ದಯಮಾಡಿ ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: Viral Video: ಹಾವನ್ನು ಹಿಡಿದು ಕಚ್ಚಿ ಕಚ್ಚಿ ತಿಂದ! ಜೈಲಿನಿಂದ ರಿಲೀಸ್ ಆಗ್ತಿದ್ದಂತೆ ದರೋಡೆಕೋರನ ವಿಕೃತಿ