Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು? - Vistara News

ಕ್ರೈಂ

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Stabbing Case: ವಿದ್ಯಾರ್ಥಿನಿ ಮುಸ್ಲಿಂ ಸಮುದಾಯಕ್ಕೆ ಹಾಗೂ ವಿದ್ಯಾರ್ಥಿ ಹಿಂದೂ ಸಮುದಾಯಕ್ಕೆ ಸೇರಿದ್ದು ಇಬ್ಬರ ಮಧ್ಯೆ ಸಣ್ಣ ವಿಷಯಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹರಿತವಾದ ವಸ್ತುವಿನಿಂದ ಗೀರಿದ ಗಾಯ ಉಂಟಾಗಿದ್ದು ವಿದ್ಯಾರ್ಥಿ ತನಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.

VISTARANEWS.COM


on

puttur stabbing case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿಯೋರ್ವ ಬ್ಲೇಡ್‌ನಿಂದ ಗೀರಿರುವ (Stabbing Case) ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಇಬ್ಬರೂ ಭಿನ್ನ ಸಮುದಾಯಕ್ಕೆ ಸೇರಿದವರಾದ ಹಿನ್ನೆಲೆಯಲ್ಲಿ ಎರಡೂ ಕಡೆಯ ಮುಖಂಡರು ಆಸ್ಪತ್ರೆ ಮುಂಭಾಗ ಜಮಾಯಿಸಿದ ಪರಿಣಾಮ ಉದ್ವಿಗ್ನ ಸ್ಥಿತಿ (Puttur Tense) ನಿರ್ಮಾಣಗೊಂಡಿದೆ.

ಗಾಯಾಳು ವಿದ್ಯಾರ್ಥಿನಿ ಬನ್ನೂರಿನವಳಾಗಿದ್ದು, ವಿದ್ಯಾರ್ಥಿ ಕಬಕ ಸಮೀಪದವನು. ಇಬ್ಬರೂ ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದಾರೆ. ಇವರಿಬ್ಬರು ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳು. ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದು ಇತಿಹಾಸ ವಿಷಯದಲ್ಲಿ ಒಂದೇ ತರಗತಿಯ ಸಹಪಾಠಿಗಳಾಗಿದ್ದರು. ವಿದ್ಯಾರ್ಥಿನಿ ಮುಸ್ಲಿಂ ಸಮುದಾಯಕ್ಕೆ ಹಾಗೂ ವಿದ್ಯಾರ್ಥಿ ಹಿಂದೂ ಸಮುದಾಯಕ್ಕೆ ಸೇರಿದ್ದು ಇಬ್ಬರ ಮಧ್ಯೆ ಸಣ್ಣ ವಿಷಯಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹರಿತವಾದ ವಸ್ತುವಿನಿಂದ ಗೀರಿದ ಗಾಯ ಉಂಟಾಗಿದ್ದು ವಿದ್ಯಾರ್ಥಿ ತನಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.

ಬೆಳಗ್ಗೆ ಕಾಲೇಜು ಆರಂಭಕ್ಕೆ ಮೊದಲು ಪುತ್ತೂರು ಮುಖ್ಯ ಆಂಚೆ ಕಚೇರಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಈ ಘಟನೆ ನಡೆದಿದೆ. ಇಲ್ಲಿ ಇಬ್ಬರ ನಡುವೆ ಜಗಳ ಸಂಭವಿಸಿ ಅದು ತರಗತಿ ತನಕವೂ ಮುಂದುವರಿದಿದೆ ಎನ್ನಲಾಗಿದೆ. ಇನ್ನೊಂದು ಮಾಹಿತಿ ಪ್ರಕಾರ, ಪ್ರಥಮ ಅವಧಿಯ ತರಗತಿಯಲ್ಲಿ ಇಬ್ಬರ ನಡುವೆ ಜಗಳ ಸಂಭವಿಸಿದ್ದು ಈ ವೇಳೆ ವಿದ್ಯಾರ್ಥಿ ಹರಿತವಾದ ವಸ್ತುವಿನಿಂದ ತಿವಿದಿದ್ದಾನೆ ಎನ್ನಲಾಗಿದೆ. ಆದರೆ ಕೆಲ ವಿದ್ಯಾರ್ಥಿಗಳ ಪ್ರಕಾರ ಆತ ತಿವಿದಿಲ್ಲ. ಗಾಯ ಹೇಗೆ ಸಂಭವಿಸಿದೆ ಅನ್ನುವುದೇ ಆಶ್ಚರ್ಯಕರ ಸಂಗತಿ ಎನ್ನುತ್ತಾರೆ.

ಘಟನೆಯ ಮಾಹಿತಿ ಪಡೆದ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಪ್ರಕಾರ ನಗರ ಠಾಣಾ ಪೊಲೀಸರು ಕಾಲೇಜಿಗೆ ಅಗಮಿಸಿ ಸಿಸಿಟಿವಿ ವೀಡಿಯೋ ಪರಿಶೀಲಿಸಿದ್ದಾರೆ. ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕಿದ್ದಾರೆ. ಪೊಲೀಸರು ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳಿಬ್ಬರ ಸಹಪಾಠಿಗಳನ್ನು ಕರೆಯಿಸಿ ವಾಸ್ತವ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಇಬ್ಬರೂ ಭಿನ್ನ ಧರ್ಮದ ವಿದ್ಯಾರ್ಥಿಗಳು ಎಂಬ ಮಾಹಿತಿ ಹರಡುತಿದ್ದಂತೆ ಆಸ್ಪತ್ರೆಗೆ ಒಂದು ಸಮುದಾಯದ ನೂರಾರು ಮಂದಿ ಆಗಮಿಸಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಪೊಲೀಸರು ಆಸ್ಪತ್ರೆ ಮುಂಭಾಗ ಬಿಗಿ ಬಂದೋಬಸ್ತು ಮಾಡಿ, ಮುಖಂಡರನ್ನು ಸಮಾಧಾನಿಸಿದರು.

ಗಾಯವು ಗಾಜು ತಗಲಿ ಆದದ್ದು ಎಂದು ಪೊಲೀಸರಿಗೆ ತಿಳಿಸುವಂತೆ ಕಾಲೇಜಿನ ಉಪನ್ಯಾಸಕಿಯೊಬ್ಬರು ಹೇಳಿದ್ದಾರೆ ಎಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಹೇಳಿದ್ದಾಳೆ. ಈ ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲಿಸಿ ಕಾಲೇಜಿನಿಂದ ಅಮಾನತು ಮಾಡುವಂತೆ ವಿದ್ಯಾರ್ಥಿನಿ ಪರ ಹಾಜರಿದ್ದ ಹಲವಾರು ಮಂದಿ ಆಗ್ರಹಿಸಿದ್ದಾರೆ. ಬೆಳಗ್ಗೆ 9.20ಕ್ಕೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಸತ್ಯಾಸತ್ಯತೆ ಆ ಮೇಲೆ ತಿಳಿಯಲಿದೆ. ಇದು ಕಾಲೇಜಿನ ಆವರಣದೊಳಗೆ ನಡೆದ ಘಟನೆ ಅಲ್ಲ ಅನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಗೋಪಾಲ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Students Death: ಇಬ್ಬರು ಮಕ್ಕಳ ಜೀವ ಕಸಿದ ಮೊಬೈಲ್;‌ ತಂದೆ- ತಾಯಿ ಫೋನ್ ಕೊಡದಿದ್ದುದಕ್ಕೆ ಆತ್ಮಹತ್ಯೆ

Students Death: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡೂ ಪ್ರಕರಣಗಳು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ.

VISTARANEWS.COM


on

students death
Koo

ಮಂಗಳೂರು: ಮೊಬೈಲ್‌ ಬಳಕೆ ಸಾಕು ಮಾಡಿ (Smartphone Use) ಎಂದು ಪೋಷಕರು ಬುದ್ಧಿ ಹೇಳಿ ಫೋನ್‌ ಎತ್ತಿಟ್ಟದ್ದರಿಂದ ಕೋಪಗೊಂಡ ಇಬ್ಬರು ಮಕ್ಕಳು ಆತ್ಮಹತ್ಯೆ (Students Death) ಮಾಡಿಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಆತ್ಮಹತ್ಯೆ (Self Harming) ಪ್ರಕರಣಗಳು ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ನಡೆದಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ವಿದ್ಯಾರ್ಥಿ ಪ್ರಥಮೇಶ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡೂ ಪ್ರಕರಣಗಳು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ.

ಪರೀಕ್ಷೆಗಳು ಹತ್ತಿರವಾಗುತ್ತಿವೆ, ಮೊಬೈಲ್ ಅನ್ನು ಪದೇ ಪದೇ ನೋಡಿ ಮಾರ್ಕ್ ಕಡಿಮೆ ಪಡೆಯಬೇಡ, ಓದುವುದರ ಕಡೆ ಗಮನ ಕೊಡು ಎಂದು ಹೆತ್ತವರು ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿ ನಿವಾಸಿ ಪ್ರಥಮೇಶ್ (17)ಗೆ ಆಗಾಗ್ಗೆ ಹೇಳುತ್ತಿದ್ದರು. ಇದಕ್ಕೆ ಪೂರಕವಾಗಿ ಆತನಿಗೆ ಪರೀಕ್ಷೆಗಳಲ್ಲಿ ಕಡಿಮೆ ಅಂಕಗಳು ಬರುತ್ತಿದ್ದವು. ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಆತನ ಚಾಳಿ ಕಡಿಮೆ ಮಾಡಲು ಮನೆಯವರು ಬುದ್ಧಿ ಮಾತು ಹೇಳಿ ಮೊಬೈಲ್ ತೆಗೆದಿಟ್ಟಿದ್ದರು.

ಆದರೆ ಕಾಲೇಜಿಗೆಂದು ಹೋದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಪ್ರಥಮೇಶ್ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವುದನ್ನು ಯಾರೋ ಕಂಡು ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ವಿದ್ಯಾರ್ಥಿಯ ಮೃತದೇಹ ಹೊರಕ್ಕೆ ತೆಗೆದಿದ್ದಾರೆ.

ತಾಯಿ ಮೇಲಿನ ಮುನಿಸಿಗೆ ಆತ್ಮಹತ್ಯೆ

ಪದೇ ಪದೇ ಮೊಬೈಲ್‌ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿಯ ಮೇಲೆ ಮುನಿಸಿಕೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡು ಸೇಡು ತೀರಿಸಿಕೊಂಡಿದ್ದಾಳೆ. 14 ವರ್ಷದ ಈ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ. ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ರಾಜ್ಯದ ಕುಟುಂಬದ ಬಾಲಕಿ ನೀಲಮ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾರ್ಖಂಡ್‌ನ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್‌ನ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ಎಂಬವರು ತನ್ನ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಕೊಂಬೆಟ್ಟಿ ಮಾರು ಎಂಬಲ್ಲಿ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು.

ಭಾನುವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲೀಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್ ಮೊಬೈಲ್‌ನಲ್ಲಿ ಸಂಬಂಧಿಕಳೊಂದಿಗೆ ವಿಡಿಯೋ ಕರೆ ಮಾಡಿ ಮಾತನಾಡುತ್ತಿದ್ದಳು. ಇದಕ್ಕೆ ತಾಯಿ ಆಕ್ಷೇಪಿಸಿ, ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಾದ ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ತಂದೆ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Continue Reading

ಕ್ರೈಂ

Ajmer Pocso Case: 32 ವರ್ಷ ಹಿಂದಿನ ಅಜ್ಮೀರ್‌ ಪೋಕ್ಸೋ ಕೇಸ್‌ನಲ್ಲಿ 6 ಮಂದಿಗೆ ಜೀವಾವಧಿ ಶಿಕ್ಷೆ

Ajmer Pocso case: 11ರಿಂದ 20 ವರ್ಷದೊಳಗಿನ ಕಾಲೇಜು ಮತ್ತು ಶಾಲೆಗೆ ಹೋಗುವ ಹುಡುಗಿಯರಲ್ಲಿ ಗ್ಯಾಂಗ್‌ನ ಸದಸ್ಯರು ಸ್ನೇಹ ಬೆಳೆಸಿ, ದೈಹಿಕವಾಗಿ ಸಂಪರ್ಕವೇರ್ಪಟ್ಟ ಸಂದರ್ಭಗಳಲ್ಲಿ ಅವರ ಫೋಟೊ ತೆಗೆದಿದ್ದು, ನಂತರ ಅವರ ಮೇಲೆ ಅತ್ಯಾಚಾರವೆಸಗಿದ್ದರು.

VISTARANEWS.COM


on

ajmer pocso case
Koo

ನವದೆಹಲಿ: ಅಜ್ಮೀರ್ ಪೋಕ್ಸೋ ಪ್ರಕರಣ, ಭಾರಿ ಸುದ್ದಿ ಮಾಡಿದ್ದ ಲೈಂಗಿಕ ಹಗರಣದಲ್ಲಿ (Ajmer Pocso Case) 100ಕ್ಕೂ ಹೆಚ್ಚು ಹುಡುಗಿಯರ ಮೇಲೆ ಅತ್ಯಾಚಾರವೆಸಗಿ (Physical Abuse) ಬ್ಲ್ಯಾಕ್‌ಮೇಲ್ (Blackmale) ಮಾಡಿದ ಪ್ರಕರಣದಲ್ಲಿ ಪೋಕ್ಸೊ ನ್ಯಾಯಾಲಯವು (POCSO court) 6 ಮಂದಿಗೆ ಜೀವಾವಧಿ ಶಿಕ್ಷೆ (Life Sentence) ವಿಧಿಸಿದೆ.

ನ್ಯಾಯಾಲಯವು ಆರೋಪಿಗಳಿಗೆ ತಲಾ ₹ 5 ಲಕ್ಷ ದಂಡ ವಿಧಿಸಿದೆ. 1992ರಲ್ಲಿ ಬೆಳಕಿಗೆ ಬಂದ ಅಜ್ಮೀರ್ ಲೈಂಗಿಕ ಹಗರಣದ ಆರೋಪಿಗಳಾದ ನಫೀಸ್ ಚಿಶ್ತಿ, ನಸೀಮ್ ಅಲಿಯಾಸ್ ಟಾರ್ಜನ್, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ ಮತ್ತು ಸೈಯದ್ ಜಮೀರ್ ಹುಸೇನ್ ಎಂಬವರನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ವೀರೇಂದ್ರ ಸಿಂಗ್ ಹೇಳಿದ್ದಾರೆ.

11ರಿಂದ 20 ವರ್ಷದೊಳಗಿನ ಕಾಲೇಜು ಮತ್ತು ಶಾಲೆಗೆ ಹೋಗುವ ಹುಡುಗಿಯರಲ್ಲಿ ಗ್ಯಾಂಗ್‌ನ ಸದಸ್ಯರು ಸ್ನೇಹ ಬೆಳೆಸಿ, ದೈಹಿಕವಾಗಿ ಸಂಪರ್ಕವೇರ್ಪಟ್ಟ ಸಂದರ್ಭಗಳಲ್ಲಿ ಅವರ ಫೋಟೊ ತೆಗೆದಿದ್ದು, ನಂತರ ಅವರ ಮೇಲೆ ಅತ್ಯಾಚಾರವೆಸಗಿದ್ದರು. ಪ್ರಕರಣದಲ್ಲಿ ಒಟ್ಟು 18 ಆರೋಪಿಗಳಿದ್ದರು. 12 ಮಂದಿ ವಿರುದ್ಧ ಪ್ರಕರಣದ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು.

ಆರೋಪಿಗಳ ಪೈಕಿ, ನಸೀಮ್ ಅಲಿಯಾಸ್ ಟಾರ್ಜನ್ 1994 ರಲ್ಲಿ ತಲೆಮರೆಸಿಕೊಂಡಿದ್ದ. ಜಹೂರ್ ಚಿಶ್ತಿ ಸೆಕ್ಷನ್ 377 (ಅಸ್ವಾಭಾವಿಕ ಸೆಕ್ಸ್) ಅಡಿಯಲ್ಲಿ ತಪ್ಪಿತಸ್ಥ ಎಂದು ಸಾಬೀತಾಯಿತು.ಆತನ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ಸ್ಕಿಜೋಫ್ರೇನಿಯಾ ರೋಗನಿರ್ಣಯ ಮಾಡಿದ ನಂತರ ಫಾರೂಕ್ ಚಿಶ್ತಿ ವಿಚಾರಣೆ ಪ್ರತ್ಯೇಕವಾಗಿ ಮುಂದುವರೆದಿದ್ದು 2007 ರಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆರೋಪಿಗಳ ಪೈಕಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇತರ ಎಂಟು ಆರೋಪಿಗಳಿಗೆ 1998 ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ನಫೀಸ್ ಚಿಶ್ತಿ, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ, ಸೈಯದ್ ಜಮೀರ್ ಹುಸೇನ್ ಮತ್ತು ಅಲ್ಮಾಸ್ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಸಲಾಯಿತು. ಮೊದಲ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾದ ಮತ್ತು ತಲೆಮರೆಸಿಕೊಂಡಿದ್ದ ನಫೀಸ್ ಚಿಶ್ತಿ, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ, ಸೈಯದ್ ಜಮೀರ್ ಹುಸೇನ್ ಮತ್ತು ನಸೀಮ್ ಅಲಿಯಾಸ್ ಟಾರ್ಜನ್ ಸೇರಿದಂತೆ ಉಳಿದ ಐದು ಆರೋಪಿಗಳಿಗೆ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಇತರ ಆರೋಪಿಗಳು ತಮ್ಮ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಅಥವಾ ನ್ಯಾಯಾಲಯಗಳಿಂದ ಖುಲಾಸೆಗೊಳಿಸಿದ್ದಾರೆ. ಮೊದಲ ಚಾರ್ಜ್ ಶೀಟ್ ಸಮಯದಲ್ಲಿ ಅವರ ತನಿಖೆ ಬಾಕಿ ಇದ್ದ ಕಾರಣ ಉಳಿದ ಆರು ಆರೋಪಿಗಳಿಗೆ ಪ್ರತ್ಯೇಕ ವಿಚಾರಣೆ ನಡೆಸಲಾಯಿತು ಎಂದು ವಕೀಲರು ಹೇಳಿದ್ದಾರೆ. ಅಜ್ಮೀರ್‌ನ ಪ್ರಮುಖ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳನ್ನು ಫಾರ್ಮ್‌ಹೌಸ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Continue Reading

ಕರ್ನಾಟಕ

Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Murder Case: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲುವಿನ ಕೊಲೆ ಪ್ರಕರಣ ನಡೆದಿದೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

Murder Case
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲುವಿನ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನನ್ನು ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ನಡೆದಿದೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಿಕ್ಷಕ ಬಾಲಕೃಷ್ಣ ಭಟ್ (83) ಹತ್ಯೆಯಾದವರು. ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಬಾಲಕೃಷ್ಣ ಭಟ್ ಅವರ ಮನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಬಾಲಕೃಷ್ಣ ಭಟ್ ಅವರು ಕೊಲ್ಪಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅವರ ಪತ್ನಿ ಲೀಲಾ ಅವರು ಕೂಡ ಬೆಳಾಲಿನಲ್ಲಿ ಶಿಕ್ಷಕಿಯಾಗಿದ್ದು ನಿವೃತ್ತಿ ಹೊಂದಿದ್ದರು. ಕೆಲವು ವರ್ಷಗಳ ಹಿಂದೆ ಅವರು ತೀರಿಕೊಂಡಿದ್ದರು. ಇದೀಗ ಬಾಲಕೃಷ್ಣ ಭಟ್ ಕೊಲೆಯಾಗಿದೆ. ತೀರ ಹತ್ತಿರದ ರಕ್ತ ಸಂಬಂಧಿಯಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ಮಂಗಳೂರಿನಲ್ಲಿ ಫುಟ್ಬಾಲ್‌ ಆಟಕ್ಕೆ ಕಿರಿಕ್‌; ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ

ಮಂಗಳೂರು: ಫುಟ್ಬಾಲ್ ಆಟದಲ್ಲಿ ವಿದ್ಯಾರ್ಥಿಗಳ ಮಧ್ಯೆ ಕಿರಿಕ್ ಶುರುವಾಗಿದ್ದು, ಕಿಡ್ನ್ಯಾಪ್ ಮಾಡಿ ಹಲ್ಲೆ (Assault Case) ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ ಮಾಡಿದ್ದು,ವಿಡಿಯೊ ವೈರಲ್‌ ಆಗಿದೆ.

ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ನಡೆದಿದೆ. ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ದಿಯಾನ್,ಅನ್ನೈ, ತಸ್ಮಿನ್,ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮಹಾಕಾಳಿ ಪಡ್ಪು ಬಳಿ ಮನಬಂದಂತೆ ಥಳಿಸಿ, ಸಿಗರೇಟ್‌ನಿಂದ ಸುಟ್ಟು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಅರೆಬೆತ್ತಲು ಗೊಳಿಸಿ ಬಸ್ಕಿ ಹೊಡೆಸಿ ಕ್ಷಮೆ ಕೇಳುವಂತೆ ಥಳಿಸಿದ್ದಾರೆ. ಈ ವಿಡಿಯೊವೆಲ್ಲವೂ ವೈರಲ್‌ ಆಗಿದೆ. ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Dowry Death : ವರದಕ್ಷಿಣೆ ಕಿರುಕುಳ ಆರೋಪ, ಗೃಹಿಣಿ ಆತ್ಮಹತ್ಯೆಗೆ ಶರಣು

Continue Reading

EXPLAINER

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

Vistara Explainer: ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಪುರುಷ ಅಟೆಂಡರ್‌ನಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಮಂಗಳವಾರ, ಕ್ರೋಧತಪ್ತರಾದ ಪೋಷಕರು ಮತ್ತು ನಾಗರಿಕರು ಶಾಲೆಗೆ ನುಗ್ಗಿ ಶಾಲೆಯನ್ನು ಧ್ವಂಸಗೊಳಿಸಿದ್ದರು.

VISTARANEWS.COM


on

badlapur tension vistara explainer
Koo

ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಎಂಬಲ್ಲಿನ ಕಿಂಡರ್‌ ಗಾರ್ಟನ್‌ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ (Physical Abuse) ಕೃತ್ಯ ನಡೆದ ನಂತರ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಶಾಲೆಯ ಶೌಚಾಲಯದಲ್ಲಿ ಕಾಮುಕ ಅಟೆಂಡರನೊಬ್ಬ ಈ ಮಕ್ಕಳ ಮೇಲೆ ಅಮಾನುಷ ಕೃತ್ಯ ಎಸಗಿದ್ದಾನೆ. ಇದರ ಬಳಿಕ ಉದ್ವಿಗ್ನ ಪರಿಸ್ಥಿತಿ (Badlapur tension) ಉಂಟಾಗಿದ್ದು, ಹಲವೆಡೆ ಗಲಭೆ ತಲೆದೋರಿದೆ. ಈ ಕುರಿತ ವಿವರ (Vistara Explainer) ಇಲ್ಲಿದೆ.

ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಎಸಗಿದ ಆರೋಪದ ಮೇಲೆ ಬಂಧಿತ ಆರೋಪಿಯ ವಿರುದ್ಧ ಅತ್ಯಾಚಾರ ಆರೋಪ ದಾಖಲಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಪೊಲೀಸರಿಗೆ ಆದೇಶಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿ ಪ್ರಕರಣವನ್ನು ಫಾಸ್ಟ್‌ ಟ್ರ್ಯಾಕ್‌ನಲ್ಲಿ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ. “ನಾನು ಥಾಣೆ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ತ್ವರಿತವಾಗಿ ತನಿಖೆ ಮಾಡಿ ಆರೋಪಿ ಮೇಲೆ ಅತ್ಯಾಚಾರ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಆರೋಪ ದಾಖಲಿಸುವಂತೆ ಸೂಚಿಸಿದ್ದೇನೆ” ಎಂದು ಅವರು ಹೇಳಿದರು.

ಬದ್ಲಾಪುರದಲ್ಲಿ ಏನಾಯ್ತು?

ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಪುರುಷ ಅಟೆಂಡರ್‌ನಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಮಂಗಳವಾರ, ಕ್ರೋಧತಪ್ತರಾದ ಪೋಷಕರು ಮತ್ತು ನಾಗರಿಕರು ಶಾಲೆಗೆ ನುಗ್ಗಿ ಶಾಲೆಯನ್ನು ಧ್ವಂಸಗೊಳಿಸಿದ್ದರು. ಬೆಳಗ್ಗೆ 8.30ರಿಂದ ಬದ್ಲಾಪುರ ರೈಲು ನಿಲ್ದಾಣದಲ್ಲಿ ರೈಲ್‌ ರೋಕೋ ನಡೆಸಿ ರೈಲುಗಳನ್ನು ತಡೆದರು. ಪ್ರತಿಭಟನೆಯ ವೇಳೆ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.

ಕಾಮುಕನ ಕೈಗೆ ಸಿಕ್ಕಿದ ಸಂತ್ರಸ್ತರು ಮೂರು ಮತ್ತು ನಾಲ್ಕು ವರ್ಷ ವಯಸ್ಸಿನವರು. ಈತ ಶಾಲೆಯ ಶೌಚಾಲಯದಲ್ಲಿ ದೌರ್ಜನ್ಯ ಎಸಗಿದ್ದಾನೆ. ಕೃತ್ಯಕ್ಕೆ ಸಂಬಂಧಿಸಿ ಪ್ರಾಂಶುಪಾಲರು, ತರಗತಿ ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನನ್ನು ಶಾಲೆಯ ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಆರೋಪಿ 23 ವರ್ಷದ ಪುರುಷ ಸ್ವಚ್ಛತಾ ಸಿಬ್ಬಂದಿ. ಬಾಲಕಿಯರು ಶೌಚಾಲಯ ಬಳಸಲು ಹೋದಾಗ ಹಲ್ಲೆ ನಡೆದಿದೆ. ಬಾಲಕಿಯರ ಶೌಚಾಲಯಕ್ಕೆ ಶಾಲೆಯಿಂದ ಮಹಿಳಾ ಸಿಬ್ಬಂದಿಯನ್ನು ನೇಮಿಸಿಲ್ಲ. ಆರೋಪಿ ಅಕ್ಷಯ್ ಶಿಂಧೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿತ್ತು. ಹಲ್ಲೆಗೊಳಗಾದ ಬಾಲಕಿ ತನ್ನ ಖಾಸಗಿ ಅಂಗದಲ್ಲಿ ನೋವಿನ ಕುರಿತು ದೂರು ನೀಡಿದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಶೌಚಾಲಯಕ್ಕೆ ತೆರಳಿದ್ದ ವೇಳೆ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೋಷಕರಿಗೆ ಆಕೆ ತಿಳಿಸಿದ್ದಾಳೆ. ಪೋಷಕರು ಹುಡುಗಿಯ ಸ್ನೇಹಿತೆಯ ಪೋಷಕರನ್ನು ಸಂಪರ್ಕಿಸಿದ್ದು, ಅವರೂ ತಮ್ಮ ಮಗಳಿಗೆ ಶಾಲೆಗೆ ಹೋಗಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ನಂತರ ಪೋಷಕರು ಬಾಲಕಿಯರನ್ನು ಸ್ಥಳೀಯ ವೈದ್ಯರ ಬಳಿ ಪರೀಕ್ಷಿಸಿದಾಗ, ಇಬ್ಬರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು ಬೆಳಕಿಗೆ ಬಂದಿದೆ.

ಸಿಎಂಒ ಕ್ರಮದ ಭರವಸೆ

ಶಾಲೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ಪ್ರಕರಣವನ್ನು ಅತ್ಯಂತ ತುರ್ತು ಮತ್ತು ದಕ್ಷತೆಯಿಂದ ನಿಭಾಯಿಸುವಂತೆ ಖಚಿತಪಡಿಸಿಕೊಳ್ಳಲು ಅವರು ಥಾಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಬೆಂಬಲಿಸಲು ಮತ್ತು ರಕ್ಷಿಸಲು ವಿನ್ಯಾಸಗೊಳಿಸಲಾದ ಸಖಿ ಸಾವಿತ್ರಿ ಸಮಿತಿಗಳನ್ನು ಶಾಲೆಗಳಲ್ಲಿ ಸ್ಥಾಪಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಪರಿಶೀಲನೆಗೆ ಕರೆ ನೀಡಿದ್ದಾರೆ.

ಶಾಲಾ ಸುರಕ್ಷತೆಯನ್ನು ಸುಧಾರಿಸುವ ಮತ್ತು ಭವಿಷ್ಯದ ದುರುಪಯೋಗವನ್ನು ತಡೆಗಟ್ಟುವ ಉದ್ದೇಶದಿಂದ, ಪ್ರತಿ ಶಾಲೆಯಲ್ಲೂ ದೂರು ಪೆಟ್ಟಿಗೆಗಳನ್ನು ಅಳವಡಿಸುವುದು, ವಿದ್ಯಾರ್ಥಿಗಳೊಂದಿಗೆ ಆಗಾಗ ಸಂವಹನ ನಡೆಸುವ, ಶಾಲಾ ಸಿಬ್ಬಂದಿಗಳ ಪರಿಶೀಲನೆ ಹೆಚ್ಚಿಸುವ ಮತ್ತಿತರ ಕ್ರಮಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: Stabbing Case: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿ, ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಅಸುನೀಗಿದ

Continue Reading
Advertisement
Brahmashri Narayanguru Jayanti
ಕರ್ನಾಟಕ2 hours ago

Brahmashri Narayanaguru Jayanti: ಸಮ ಸಮಾಜದ ನಿರ್ಮಾಣ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

puttur stabbing case
ಕ್ರೈಂ2 hours ago

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Cincinnati Open
ಕ್ರೀಡೆ3 hours ago

ATP Cincinnati Open: ಚೊಚ್ಚಲ ಪ್ರಶಸ್ತಿ ಗೆದ್ದ ಜಾನಿಕ್‌ ಸಿನ್ನರ್‌, ಅರಿನಾ ಸಬಲೆಂಕಾ

students death
ಕ್ರೈಂ3 hours ago

Students Death: ಇಬ್ಬರು ಮಕ್ಕಳ ಜೀವ ಕಸಿದ ಮೊಬೈಲ್;‌ ತಂದೆ- ತಾಯಿ ಫೋನ್ ಕೊಡದಿದ್ದುದಕ್ಕೆ ಆತ್ಮಹತ್ಯೆ

Agritech India 2024
ಬೆಂಗಳೂರು3 hours ago

Agritech India 2024: ಬೆಂಗಳೂರಿನಲ್ಲಿ ʼಅಗ್ರಿಟೆಕ್ ಇಂಡಿಯಾ 2024ʼಕ್ಕೆ ಆ. 22ರಂದು ಚಾಲನೆ

ajmer pocso case
ಕ್ರೈಂ3 hours ago

Ajmer Pocso Case: 32 ವರ್ಷ ಹಿಂದಿನ ಅಜ್ಮೀರ್‌ ಪೋಕ್ಸೋ ಕೇಸ್‌ನಲ್ಲಿ 6 ಮಂದಿಗೆ ಜೀವಾವಧಿ ಶಿಕ್ಷೆ

Imran Khan
ವಿದೇಶ3 hours ago

Imran Khan: ಆಕ್ಸ್‌ಫರ್ಡ್ ವಿವಿ ಕುಲಪತಿಯಾಗಲು ಅರ್ಜಿ ಸಲ್ಲಿಸಿದ ಪಾಕ್‌ ಮಾಜಿ ಪ್ರಧಾನಿ!

Reliance Jio
ಕರ್ನಾಟಕ3 hours ago

Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

Kannada New Movie
ಕರ್ನಾಟಕ4 hours ago

Kannada New Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರ

EV charging
ಕರ್ನಾಟಕ4 hours ago

EV Charging: ಕರ್ನಾಟಕವೇ ಕಿಂಗ್;‌ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌