Site icon Vistara News

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

Stray Dogs Attack

ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರು ( retired teacher) ಬುಧವಾರ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ (Stray Dogs Attack) ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (bengaluru) ನಡೆದಿದೆ.

ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ವಾಯುಸೇನೆ ಸಿಬ್ಬಂದಿಯ ಅತ್ತೆ, 75 ವರ್ಷದ ರಾಜ್ದುಲಾರಿ ಸಿನ್ಹಾ ಅವರ ಮೇಲೆ ಸುಮಾರು ಏಳೆಂಟು ಬೀದಿ ನಾಯಿಗಳು ಹಠಾತ್ ದಾಳಿ ನಡೆಸಿದ್ದು, ತಲೆ ಹಿಂಬದಿ, ಮುಖ, ಕೈ, ಕತ್ತಿನ ಭಾಗವನ್ನು ಶ್ವಾನಗಳು ಕಚ್ಚಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯ ಅಳಿಯ ಏರ್ ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ ಮತ್ತು ಮಗಳನ್ನು ನೋಡಲು ಮಹಿಳೆ ಬಿಹಾರದಿಂದ ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು.

ಈ ಹಿಂದೆಯೂ ಇದೇ ಕ್ಯಾಂಪಸ್ ನಲ್ಲಿ ನಾಲ್ಕೈದು ಜನರ ಮೇಲೆ ನಾಯಿಗಳು ದಾಳಿ ನಡೆಸಿತ್ತು.

ಈ ಕುರಿತು ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


ಘಟನೆಯ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದು, ಇದು ಬುಧವಾರ ಬೆಳಗ್ಗೆ ನಡೆದ ಒಂದು ದುರಂತ ದೃಶ್ಯವಾಗಿದೆ.ವಿದ್ಯಾರಣ್ಯಪುರದ ಜಾಲಹಳ್ಳಿಯ ಏರ್‌ಫೋರ್ಸ್ ಆಟದ ಮೈದಾನದಲ್ಲಿ ಹಲವು ಬೀದಿನಾಯಿಗಳು ಮಹಿಳೆಯ ಮೇಲೆ ದಾಳಿ ಮಾಡಿವೆ. ನಾನು ಅಸಹಾಯಕ ಪ್ರತ್ಯಕ್ಷದರ್ಶಿಯಾಗಿದ್ದೆ. ಅವರ ದೊಡ್ಡ ಗೋಡೆಯಿಂದಾಗಿ ನಾನು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ನಾನು ಕೂಗಿ ಕೆಲವು ಜನರನ್ನು ಕರೆದಿದ್ದೇನೆ ಮತ್ತು ಅವರು ಅವಳನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಸಾವು

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಘಟನೆಯಿಂದ ಶಾಲಾ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಶಾಲಾ ಆವರಣದಲ್ಲಿ ಸೇರಿದ್ದರಿಂದ ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಎಂ.ಬಿ. ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಉಂಟಾಯಿತು.

ಇನ್ಸ್ ಪೆಕ್ಟರ್ ಮನವೊಲಿಕೆಗೆ ಬಗ್ಗದ ಗ್ರಾಮಸ್ಥರು ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸುವವರೆಗೂ ಶವಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.

Exit mobile version